ಬೆಂಗಳೂರು: ನಮ್ಮನ್ನ ಡ್ರಗ್ಸ್ ವಿಚಾರವಾಗಿ ಕರೆದಿಲ್ಲ ಅಂತಾ ನಿರ್ಮಾಪಕ ಸೌಂದರ್ಯ ಜಗದೀಶ್ ಪತ್ನಿ ರೇಖಾ ಹೇಳಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ಸ್ ಲಿಂಕ್ ಕೇಸ್ಗೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಸೌಂದರ್ಯ ಜಗದೀಶ್ ದಂಪತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು ಎನ್ನಲಾಗಿತ್ತು. ಅದರಂತೆ ಇಂದು ಸಿಸಿಬಿ ಅಧಿಕಾರಿಗಳ ವಿಚಾರಣೆಗೆ ಸೌಂದರ್ಯ ದಂಪತಿ ವಿಚಾರಣೆಗೆ ಹಾಜರಾಗಿ ವಾಪಸ್ ಆಗಿದ್ದಾರೆ. ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿರುವ ಸೌಂದರ್ಯ ಜದಗೀಶ್ ದಂಪತಿ.. ನಮ್ಮನ್ನ ಡ್ರಗ್ಸ್ ವಿಚಾರವಾಗಿ ಕರೆದಿಲ್ಲ. …
Read More »ಕಾಂಗ್ರೆಸ್ ಬಿಟ್ಟು ಬಿ ಜೆ ಪಿ ಗೆ ಸೇರಿದ ಮಾಜಿ ಸಚಿವರು
ಹುಬ್ಬಳ್ಳಿ : ಮಾಜಿ ಸಚಿವರಾದ ವಿನಯ ಕುಲಕರ್ಣಿ, ಎಂ.ಬಿ. ಪಾಟೀಲ್ ಅವರು ಬಿಜೆಪಿ ಸೇರುವ ಬಗ್ಗೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಬಿಜೆಪಿಗೆ ಯಾವುದೇ ರಾಜಕೀಯ ಅಸ್ಪೃಶ್ಯತೆ ಇಲ್ಲ, ಪಕ್ಷಕ್ಕೆ ಹೊರೆಯಾಗದಿದ್ದರೆ ಹಾಗೂ ಸಿದ್ಧಾಂತ ಒಪ್ಪಿದರೆ ಯಾರನ್ನಾದರೂ ಸೇರಿಸಿಕೊಳ್ಳುತ್ತೇವೆ ಎಂದರು. 3 ವರ್ಷ ಬಿಎಸ್‌ವೈ ರಾಜ್ಯದ ಸಿಎಂ, ಬದಲಾವಣೆ ಮಾತೇ ಇಲ್ಲ: ಗುಡುಗಿದ ಬಿಜೆಪಿ ಸಾರಥಿ! … ಸುದ್ದಿಗೋಷ್ಠಿಯಲ್ಲಿ ಮಾತನಾಡಿ, …
Read More »ತುಳು ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ
ಮಂಗಳೂರು: ಬುಧವಾರ ಹಾಡಹಗಲೇ ರೌಡಿಶೀಟರ್, ಉದ್ಯಮಿ, ತುಳು ಸಿನಿಮಾ ನಟ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ಬಳಿಯ ಬಸ್ತಿಪಡ್ಪುವಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಹಾಡಹಾಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್‌ರನ್ನು ಹತ್ಯೆ ಗೈಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಸುರೇಂದ್ರ ಬಂಟ್ವಾಳ್ ಹಣಕಾಸು ವ್ಯವಹಾರ ಮಾಡುತ್ತಿದ್ದರು. ಹಣಕಾಸಿನ ವಿಚಾರಕ್ಕೆ ಜೊತೆಗಿದ್ದ ವ್ಯಕ್ತಿಗಳು ಬಂಟ್ವಾಳ್ ರನ್ನು ಹತ್ಯೆ ಮಾಡಿರಬಹುದು …
Read More »ಕೊಳವೆಬಾವಿ ಅನುಮತಿ ಇಲ್ಲದೆ ತಗದರೆ ಶಿಕ್ಷೆ
ಬೆಂಗಳೂರು: ಕರ್ನಾಟಕ ಅಂತರ್ಜಲ ಪ್ರಾಧಿಕಾರವು ಬಾವಿ ಅಥವಾ ಕೊಳವೆಬಾವಿ ತೆರೆಯುವುದನ್ನು ನಿರ್ಬಂಧಿಸಲು ರಾಜ್ಯದ 15 ಜಿಲ್ಲೆಗಳ 45 ತಾಲೂಕುಗಳಿಗೆ ಸಂಬಂಧಪಟ್ಟಂತೆ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಅಂತರ್ಜಲ (ಅಭಿವೃದ್ಧಿ ನಿರ್ವಹಣೆ ಮತ್ತು ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012ರ ಅನುಸಾರ ಅಂತರ್ಜಲ ಅತಿ ಬಳಕೆ ತಾಲೂಕುಗಳೆಂದು 45 ತಾಲೂಕುಗಳನ್ನು ಗುರುತಿಸಿದ್ದು, ಅಲ್ಲಿಗೆ ಸೀಮಿತವಾಗಿ ಅಧಿನಿಯಮ ಅನ್ವಯವಾಗಲಿದೆ. ಇಂಥ ಕಡೆಗಳಲ್ಲಿ ಬಾವಿ ಅಥವಾ ಕೊಳಬೆಬಾವಿ ಕೊರೆಯಲು ಜಿಲ್ಲಾ ಮಟ್ಟದ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ …
Read More »ಲಂಡನ್ ಮೂಲದ ಯುವತಿ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದಾಳೆ
ಹುಬ್ಬಳ್ಳಿ : ಮ್ಯಾಟ್ರಿಮೋನಿ ಮೂಲಕ ಪರಿಚಯವಾದ ಲಂಡನ್ ಮೂಲದ ಯುವತಿ ಮದುವೆಯಾಗುವುದಾಗಿ ನಂಬಿಸಿ ಹುಬ್ಬಳ್ಳಿಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದಾಳೆ. ಹುಬ್ಬಳ್ಳಿಯ ನವನಗರದ ನಿವಾಸಿ ಗುತ್ತಿಗೆದಾರ ಪ್ರಮೋದ್ ಕುಲಕರ್ಣಿ ಮೋಸ ಹೋಗಿದ್ದು ಈಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಧು ಹುಡುಕಾಟದಲ್ಲಿದ್ದ ಪ್ರಮೋದ್‌ಗೆ ‘ಸಂಗಮ’ ಹೆಸರಿನ ಮ್ಯಾಟ್ರಿಮೋನಿಯಲ್ಲಿ ಲಂಡನ್ ಮೂಲದ ಯುವತಿ ಅನ್ನಾ ಮೊಹಮ್ಮದ್ ಪರಿಚಯವಾಗಿದ್ದಾಳೆ. ಮೊದ ಮೊದಲು ವಾಟ್ಸಪ್‌ನಲ್ಲಿ ಮೆಸೇಜ್ ಮಾಡುತ್ತಿದ್ದ ಯುವತಿ ಬಳಿಕ ಪ್ರತಿನಿತ್ಯ ಚಾಟ್ …
Read More »ಸಿಡಿಲು ಅಬ್ಬರದ ಮಳೆಯಲ್ಲಿ ರೈತರ ಹಿತಾಸಕ್ತಿ ಗೋಸ್ಕರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕೃಷಿಂಗ ಪ್ರಾರಂಭ…
ಗೋಕಾಕ – ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಇಂದಿನಿಂದ ಪ್ರಾರಂಭ ವಾಗಿದೆ ಇಂದು ಕಾರ್ಖಾನೆ ಸಿಬ್ಬಂದಿಗಳು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವ ದಲ್ಲಿ ಈ ಕಾರ್ಖಾನೆ ಇಂದಿನಿಂದ ಪ್ರಾರಂಭ ವಾಗಿದೆ. ಒಂದು ಕಡೆ ಸಿಡಿಲು ಅಬ್ಬರಾದ ಮಳೆ,ನಮ್ಮ ಉತ್ತರ ಕರ್ನಾಟಕದ ತುಂಬಾ ಎಲ್ಲ ಕಡೆ ಮಳೆ ಪ್ರಾರಂಭ ವಾಗಿದೆ. ಆದರೂ ರೈತರ ಹಿತಾಸಕ್ತಿ ಗೋಸ್ಕರ ಶ್ರೀ ಸಂತೋಷ್ ಜಾರಕಿಹೊಳಿ ಅವರು ಇಂಥ ಮಳೆಯಲ್ಲಿ ಕೂಡ ತಮ್ಮ ಕಾರ್ಖಾನೆ ಯಲ್ಲಿ …
Read More »ಉತ್ತರ ಕರ್ನಾಟಕ ನೆರೆ ಪ್ರದೇಶದಲ್ಲಿ ಸಿಎಂ ಬಿಎಸ್ ವೈ ವೈಮಾನಿಕ ಸಮೀಕ್ಷೆ
ಕಲಬುರಗಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ನೆರೆ, ಪ್ರವಾಹ ಪೀಡಿತ ಪ್ರದೇಶಗಳಾದಂತ ಕಲಬುರ್ಗಿ, ವಿಜಯಪುರ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ. ಹಾನಿಯ ಬಗ್ಗೆ ಮಾಹಿತಿ ಪಡೆದು, ಹೆಚ್ಚಿನ …
Read More »ಮನೆಗಳಿಗೆ ಮಳೆಯ ನೀರು ನುಗ್ಗಿದ್ದು, ಜನರು ನೀರನ್ನು ಹೊರ ಹಾಕಲು ಹರಸಾಹಸ ಪಡ್ತಿದ್ದಾರೆ.
ಗದಗ: ಜಿಲ್ಲೆಯಲ್ಲಿ ರಾತ್ರಿಯಿಡೀ ಹಲವೆಡೆ ಭಾರಿ ಮಳೆಯಾಗಿದೆ. ಈ ಪರಿಣಾಮ ತಗ್ಗು ಪ್ರದೇಶದ ಮನೆಗಳಿಗೆ ಮಳೆಯ ನೀರು ನುಗ್ಗಿದ್ದು, ಜನರು ನೀರನ್ನು ಹೊರ ಹಾಕಲು ಹರಸಾಹಸ ಪಡ್ತಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಆದ್ರಹಳ್ಳಿ ಗ್ರಾಮದಲ್ಲಿ ಸುಮಾರು 25 ಮನೆಗಳಿಗೆ ಮಳೆ ನೀರು ನುಗ್ಗಿದೆ. ರಾತ್ರಿ ನೀರು ಹೊರಹಾಕಲು ಗ್ರಾಮಸ್ಥರು ಹರಸಾಹಸ ಪಟ್ಟಿದ್ದಾರೆ. ಮನೆಯಲ್ಲಿದ್ದ ದವಸ ಧಾನ್ಯಗಳು, ವಸ್ತುಗಳೆಲ್ಲ ಹಾನಿಯಾಗಿವೆ. ಇನ್ನು ಮುಂಡರಗಿ ಪಟ್ಟಣದಲ್ಲಿ ರಸ್ತೆಗಳು ಕೆರೆಯಂತಾಗಿವೆ. ಅನ್ನದಾನೀಶ್ವರ ಕಾಲೇಜು …
Read More »ಕೊರೊನಾ ಮಹಾಮಾರಿಯ ವಿರುದ್ಧದ ಸಮರದಲ್ಲಿ ಪ್ರಾಣ ತೆತ್ತ ಕೊರೊನಾ ಪೊಲೀಸ್ ವಾರಿಯರ್ಸ್ ಅನ್ನು ಸಹ ಸ್ಮರಿಸಲಾಗಿದೆ.
ಚಿಕ್ಕಮಗಳೂರು: ಇಂದು ರಾಜ್ಯಾದ್ಯಂತ ಪೊಲೀಸ್ ಸಂಸ್ಮರಣಾ ದಿನವನ್ನು ಆಚರಿಸಲಾಗುತ್ತಿದೆ. ಕರ್ತವ್ಯದ ವೇಳೆ ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ಗೌರವ ಸೂಚಿಸಲಾಗುತ್ತಿದೆ. ಅದರಲ್ಲೂ ಕೊರೊನಾ ಮಹಾಮಾರಿಯ ವಿರುದ್ಧದ ಸಮರದಲ್ಲಿ ಪ್ರಾಣ ತೆತ್ತ ಕೊರೊನಾ ಪೊಲೀಸ್ ವಾರಿಯರ್ಸ್ ಅನ್ನು ಸಹ ಸ್ಮರಿಸಲಾಗಿದೆ. ಅಂತೆಯೇ, ನಗರದ DAR ಮೈದಾನದಲ್ಲಿ ನಡೆದ ಪೋಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪುಷ್ಪ ಸಮರ್ಪಣೆ ವೇಳೆ.. ಮಹಿಳಾ ಪೇದೆಯಾಗಿದ್ದ ಮೃತ ಮಗಳನ್ನ ನೆನೆದು ಆಕೆಯ ತಾಯಿ ಕಣ್ಣೀರಿಟ್ಟ ಮನಮಿಡಿಯುವ ದೃಶ್ಯ ಕಂಡುಬಂತು. ಹುತಾತ್ಮ …
Read More »ಅಪಘಾತ ಸಂಭವಿಸಿದೆ. ಬಸ್ ಚಾಲಕ-ಕ್ಲೀನರ್ ಸೇರಿದಂತೆ 5 ಮಂದಿ ಅಸುನೀಗಿದ್ದು, 35ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.
ಮುಂಬೈ: ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯ ಕಾಮ್ಚೌಂದರ್ ಗ್ರಾಮದ ಬಳಿ ಪ್ರಯಾಣಿಕರಿಂದ ತುಂಬಿದ್ದ ಬಸ್ಸು ಆಳವಾದ ಕಣಿವೆಯೊಳಕ್ಕೆ ಬಿದ್ದು ಅಪಘಾತ ಸಂಭವಿಸಿದೆ. ಬಸ್ ಚಾಲಕ-ಕ್ಲೀನರ್ ಸೇರಿದಂತೆ 5 ಮಂದಿ ಅಸುನೀಗಿದ್ದು, 35ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಮಲ್ಕಾಪುರದಿಂದ ಸೂರತ್ನತ್ತ ಬಸ್ ಪ್ರಯಾಣಿಸುತ್ತಿತ್ತು. The injured have been taken to a hospital. Rescue operation underway: Mahendra Pandit, SP Nandurbar. #Maharashtra pic.twitter.com/I0QYnrMisd – ANI (@ANI)
Read More »