ನವದೆಹಲಿ: ಚುನಾವಣೆಗಳಲ್ಲಿ ಇವಿಎಂ ಬಳಕೆ ಕೈಬಿಟ್ಟು, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಇವಿಎಂ ವಿರುದ್ಧ ವಕೀಲ ಸಿ.ಆರ್. ಜಯ ಸುಕಿನ್ ಎಂಬವವರು ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿಯು ಉಪ ಚುನಾವಣೆ ಸೇರಿದಂತೆ ಬಿಹಾರ ವಿಧಾನಸಭಾ ಚುನಾವಣೆ ಎಲ್ಲೆಡೆಯೂ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಇದೀಗ ಎಲೆಕ್ಟ್ರಾನಿಕ್ ಮತ ಯಂತ್ರ (ಇವಿಎಂ) ಸರಿಯಾಗಿಲ್ಲ ಎಂಬ ಗಲಾಟೆ ಶುರುವಾಗಿದೆ. ಇದು ಪ್ರತಿ ಚುನಾವಣೆಯಲ್ಲಿ ನಡೆಯುತ್ತಿರುವ ವಿಷಯವೇ. ಆದರೆ …
Read More »ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈಗ ಇರುವ ಮೀಸಲಾತಿ ಪ್ರಮಾಣ, ಹೆಚ್ಚಿಸುವ ಅಗತ್ಯತೆ: ಶ್ರೀರಾಮುಲು
ಬೆಂಗಳೂರು,: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈಗ ಇರುವ ಮೀಸಲಾತಿ ಪ್ರಮಾಣ, ಹೆಚ್ಚಿಸುವ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ನಾಲ್ಕು ಸದಸ್ಯರನ್ನು ಒಳಗೊಂಡ ಸಚಿವ ಸಂಪುಟ ಉಪ ಸಮಿತಿ ರಚಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಬಿ. ಶ್ರೀರಾಮುಲು ಅಧ್ಯಕ್ಷರಾಗಿದ್ದು, ಸದಸ್ಯರಾಗಿ ಸಚಿವರಾದ ಗೋವಿಂದ ಎಂ. ಕಾರಜೋಳ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಜೆ. ಮಾಧುಸ್ವಾಮಿ …
Read More »ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಲೈಸೆನ್ಸ್ ರದ್ದು: ಎಂ.ಜಿ.ಹಿರೇಮಠ ಎಚ್ಚರಿಕೆ
ಬೆಳಗಾವಿ: ದಂಡ ವಿಧಿಸಿದ ಬಳಿಕವೂ ನಿಯಮಾವಳಿ ಮೀರಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಲೈಸೆನ್ಸ್ ರದ್ದು ಮಾಡುವುದರ ಜತೆಗೆ ಅಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಕೋಟ್ಪಾ ಕಾಯ್ದೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು …
Read More »ಅರೆಸ್ಟ್ ಮಾಡಲು ಬಂದ ಪೊಲೀಸರ ಮೇಲೆ ಹಾಡಹಗಲೇ ನಡುಬೀದಿಯಲ್ಲೇ ಇರಾನಿ ಗ್ಯಾಂಗ್ನ ಕಳ್ಳರ ಹಲ್ಲೆ
ಧಾರವಾಡ: ಕಳ್ಳರು ತಪ್ಪಿಸಿಕೊಂಡು ಹೋಗುವಾಗ ಪೊಲೀಸರು ಅವರನ್ನು ಹೊಡೆಯುವುದು ಸಾಮಾನ್ಯ. ಆದರೆ ತಮ್ಮನ್ನು ಅರೆಸ್ಟ್ ಮಾಡಲು ಬಂದ ಪೊಲೀಸರ ಮೇಲೆ ಹಾಡಹಗಲೇ ನಡುಬೀದಿಯಲ್ಲೇ ಇರಾನಿ ಗ್ಯಾಂಗ್ನ ಕಳ್ಳರು ಹಲ್ಲೆ ಮಾಡಿ, ರಾಜಾರೋಷವಾಗಿ ತಪ್ಪಿಸಿಕೊಂಡು ಹೋಗಿರುವ ಘಟನೆ ವಿದ್ಯಾಕಾಶಿ ಧಾರವಾಡದಲ್ಲಿ ನಡೆದಿದೆ. ಇದು ಪೊಲೀಸರು ಮತ್ತು ಕಳ್ಳರ ಮಧ್ಯೆ ನಡೆದ ಫೈಟಿಂಗ್ ಅಂದರೆ ನೀವು ನಂಬಲೇಬೇಕು. ಬೆಂಗಳೂರಿನ ಪೊಲೀಸರಿಗೆ ಸಂಗಮ್ ವೃತ್ತದಲ್ಲಿ ನಡುಬೀದಿಯಲ್ಲಿ ಹೊಡೆದು ಧಾರವಾಡದ ಇರಾನಿ ಗ್ಯಾಂಗ್ನ ನಟೋರಿಯಸ್ ಕಳ್ಳರು …
Read More »ಪ್ರಕೃತಿದತ್ತವಾದ ಬೆಟ್ಟವನ್ನ ಒಡೆದು ಲೇಔಟ್ ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ
ರಾಯಚೂರು: ನಗರದಲ್ಲಿ ಪ್ರಕೃತಿದತ್ತವಾದ ಬೆಟ್ಟವನ್ನ ಒಡೆದು ಲೇಔಟ್ ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಪರಿಸರ ಪ್ರೇಮಿಗಳು ಆಕ್ರೋಶಗೊಂಡಿದ್ದಾರೆ. ದೊಡ್ಡ ದೊಡ್ಡ ಬಂಡೆಗಳ ಸ್ಫೋಟದಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಗ್ರೀನ್ ಝೋನ್ ನಲ್ಲಿರುವ ಬೆಟ್ಟವನ್ನು ಹಗಲು ರಾತ್ರಿ ನಿರಂತರ ನೆಲಸಮ ಮಾಡಲಾಗುತ್ತಿದೆ ಅಂತ ನಿವಾಸಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ನಗರದ ಮಧ್ಯದಲ್ಲೇ ಇರುವ ಇಲ್ಲಿನ ವಿದ್ಯಾನಗರ, ಸಾವಿತ್ರಿ ಕಾಲೋನಿ, ಲಕ್ಷ್ಮಿಪುರಂ ಲೇಔಟ್ಗೆ ಹೊಂದಿಕೊಂಡಿರುವ ಬೆಟ್ಟವನ್ನ ನಿರಂತರವಾಗಿ ಸ್ಫೋಟಿಸಲಾಗುತ್ತಿದೆ. ರಾಯಚೂರು ನಗರದ …
Read More »3 ಕೋಟಿಗೂ ಅಧಿಕ ದೇಣಿಗೆ ಕೇವಲ 10 ದಿನದಲ್ಲಿ ಶಿರಡಿ ಸಾಯಿಬಾಬಾಗೆ
ಮುಂಬೈ: ಕೊರೊನಾ ವೈರಸ್ ಭೀತಿಯಿಂದ ಮುಚ್ಚಿದ್ದ ಶಿರಡಿ ಸಾಯಿಬಾಬಾ ಮಂದಿರ ಮತ್ತೆ ಓಪನ್ ಆಗಿದೆ. ಸದ್ಯ ಸಾಯಿಬಾಬಾ ದರ್ಶನಕ್ಕೆ ಭಕ್ತಸಾಗರವೇ ಹರಿದುಬರುತ್ತಿದ್ದು, ಮಂಗಳವಾರದವರೆಗೆ ಸುಮಾರು 1 ಲಕ್ಷಕ್ಕೂ ಹೆಚ್ಚು ಭಕ್ತರು ಸಾಕ್ಷಿಯಾದರು. ವಿಶ್ವದಾದ್ಯಂತ ಭಕ್ತರು 3.09 ಕೋಟಿ ರೂ., 2,85,629 ರೂ. ಮೌಲ್ಯದ 64 ಗ್ರಾಂ ಚಿನ್ನದ ಜೊತೆಗೆ 93,000 ರೂ. ಮೌಲ್ಯದ 2.8 ಕೆ.ಜಿ ಬೆಳ್ಳಿಯನ್ನು ದಾನ ಮಾಡಿದ್ದಾರೆ. ಆನ್ಲೈನ್ ಮೂಲಕ ದೇವರ ದರ್ಶನಕ್ಕೆ ಬುಕ್ ಮಾಡಲಾಗುತ್ತಿದೆ. ನವೆಂಬರ್ …
Read More »ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಕೂಡಲೇ ಅಲ್ಲಿಗೆ ಹೋರಾಟ ಪೊಲೀಸರ ತಂಡ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ನವದೆಹಲಿ : ಗುರುವಾರ ಬೆಳಿಗ್ಗೆ ದಕ್ಷಿಣ ದೆಹಲಿಯ ಪೊಲೀಸ್ ಠಾಣೆಗೆ ಅನಾಮಧೇಯ ಕರೆಯೊಂದು ಬಂದಿದ್ದು ಅದರಲ್ಲಿ ಮಾತನಾಡಿದ ವ್ಯಕ್ತಿ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ್ದಾನೆ. ಬೆದರಿಕೆ ಕರೆ ಬಂದ ಕೂಡಲೇ ಎಚ್ಚೆತ್ತ ಪೆÇಲೀಸ್ ಇಲಾಖೆ ಕರೆ ಬಂದ ಮೂಲಗಳನ್ನು ಪತ್ತೆ ಹಚ್ಚಲು ಶುರುಮಾಡಿದ್ದಾರೆ ಅಷ್ಟೂತ್ತಿಗೆ ಬೆದರಿಕೆ ಕರೆ ಬಂದಿದ್ದು ದೆಹಲಿಯ ದಕ್ಷಿಣಪುರಿ ಪ್ರದೇಶದಿಂದ ಎಂಬುದು ತಿಳಿದುಬಂದಿದೆ ಕೂಡಲೇ ಅಲ್ಲಿಗೆ ಹೋರಾಟ ಪೊಲೀಸರ ತಂಡ …
Read More »ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಶುಭಾಶಯ
ಬೆಂಗಳೂರು : ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ. ಪ್ರತಿಯೊಬ್ಬ ಭಾರತೀಯನ ಹಕ್ಕು, ಘನತೆಯನ್ನು ನಮ್ಮ ಸಂವಿಧಾನ ರಕ್ಷಿಸುತ್ತಿದೆ. ನಮ್ಮ ಶ್ರೇಷ್ಠ ಸಂವಿಧಾನದ ಸದಾಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಸಂವಿಧಾನ ಕರಡು ಸಮಿತಿ ಅಧ್ಯಕ್ಷ ಡಾ ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಗೆ ಕೊಡುಗೆ ನೀಡಿದ ಎಲ್ಲ ಮಹನೀಯರಿಗೆ ವಂದಿಸುತ್ತಾ, ಎಲ್ಲರಿಗೂ ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು ಎಂದು …
Read More »ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ 62 ವರ್ಷದ ವೃದ್ಧ
ಬೆಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ 62 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನವೆಂಬರ್ 24ರಂದು ಬೆಂಗಳೂರಿನ ದೇವನಹಳ್ಳಿ ಪ್ರದೇಶದಲ್ಲಿ ನಡೆದಿದೆ. ವ್ಯಕ್ತಿ ತನ್ನ ಮಗಳ ಮನೆಯಲ್ಲಿ ಬಾಲಕಿಯ ಮೇಲೆ ಈ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ. ದೇವಾಲಯವೊಂದರ ಅರ್ಚಕನಾಗಿರುವ ಈತ ದೇವನಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಪಕ್ಕ ಗಂಡನ ಜೊತೆ ವಾಸವಾಗಿರುವ ತನ್ನ ಮಗಳ ಮನೆಗೆ ತೆರಳಿದ್ದನು. ಮಗಳ ಪತಿಯೂ ಚೌಡೇಶ್ವರಿ ದೇಗುಲದ ಅರ್ಚಕನಾಗಿದ್ದಾನೆ. ಹೀಗಾಗಿ …
Read More »ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ
ಚೆನ್ನೈ: ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಸೇಲಂನ ಲಿನೆಮೇಡನಲ್ಲಿ ನಡೆದಿದೆ. ಸಾಲ ತೀರಿಸಲು ಹಣವಿಲ್ಲದೆ ಇರುವಾಗ ತಂದೆಯೇ ತನ್ನ 6 ತಿಂಗಳ ಮಗುವನ್ನು ಒಂದು ಲಕ್ಷರೂಪಾಯಿಗೆ ಮಾರಿದ್ದಾನೆ. ಆರೋಪಿ ತಂದೆಯನ್ನು ಸೌಕತ್ ಆಲಿ ಎಂದು ಗುರುತಿಸಲಾಗಿದೆ. ಈತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸೌಕತ್ನ ಗೆಳೆಯ ಸೆಡ್ಡು ಹಾಗೂ ಮಗುವನ್ನು ಖರೀದಿಸಿದ ಸುಂದರಮ್ ಮಗು ಮಾರಾಟದಲ್ಲಿ ಶಾಮಿಲಾಗಿದ್ದಾರೆ. ಮಗುವನ್ನು …
Read More »