Breaking News

ರಮೇಶ ಜಾರಕಿಹೊಳಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರಾಜ್ಯ ರೈತ ಸಂಘದ ಕಾರ್ಯಕರ್ತರು

ಗೋಕಾಕ:  ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕೆಂದು ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನೆ ನಡೆಯುತ್ತಿದ್ದ  ಬಸವೇಶ್ವರ ವೃತ್ತದಿಂದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಗೆ ತೆರಳಿ ಮನವಿ ನೀಡಲು ಮುಂದಾದ  ರೈತರನ್ನು ಪೊಲೀಸರು ಅಲ್ಲಿಯೇ ಘೇರಾವ್ ಹಾಕಿ ತಡೆದರು. ಮುಂಜಾಗೃತಾ ಕ್ರಮವಾಗಿ ಸಚಿವರ ಮನೆಯ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಮಾಡಿದ್ದಾರೆ. ರೈತ ವಿರೋಧಿ …

Read More »

ತೆರಿಗೆ ವಂಚಿಸಬೇಡಿ, ಅಡ್ಡದಾರಿ ಹಿಡಿಬೇಡಿ : ಪ್ರಧಾನಿ ಮೋದಿ ಕಿವಿ ಮಾತು

ನವದೆಹಲಿ, ಆ.13-ತೆರಿಗೆ ಪಾವತಿಯಿಂದ ದೇಶದ ಅಭಿವೃದ್ದಿಗೆ ಸಹಕಾರಿಯಾಗುತ್ತದೆ ಎಂದು ಹೇಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಜನರು ತೆರಿಗೆ ವಂಚಿಸಬಾರದು ಮತ್ತು ತೆರಿಗೆ ಪಾವತಿಯಿಂದ ತಪ್ಪಿಸಿಕೊಳ್ಳಲು ಅಡ್ಡದಾರಿ ಹಿಡಿಯಬಾರದು ಎಂದು ಸಲಹೆ ಮಾಡಿದ್ದಾರೆ. ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗುತ್ತಿದ್ದು , ಇದರಲ್ಲಿ ಲಂಚ , ರುಷುವತ್ತುಗಳಿಗೆ ಯಾವುದೇ ಕಾರಣಕ್ಕೂ ಆಸ್ಪದ ನೀಡುವುದಿಲ್ಲ.ತೆರಿಗೆ ಪಾವತಿದಾರರನ್ನು ಸಮಸ್ಯೆಗಳಿಗೆ ಸಿಲುಕಿಸುವ ಪದ್ಧತಿಯನ್ನು ಹೋಗಲಾಡಿಸಿ ಇದರಲ್ಲಿರುವ ಎಲ್ಲಾ ತೊಡಕುಗಳನ್ನು ನಿವಾರಿಸಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು …

Read More »

KRS ಭರ್ತಿಗೆ ಇನ್ನೊಂದು ಅಡಿ ಬಾಕಿ-ಮೆಟ್ಟೂರು ಜಲಾಶಯಕ್ಕೆ 33.55 ಟಿಎಂಸಿ ನೀರು

ಮಂಡ್ಯ/ಚಾಮರಾಜನಗರ: ಮಂಡ್ಯ ಜಿಲ್ಲೆಯಲ್ಲಿರುವ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‍ಎಸ್ ಡ್ಯಾಂ ಭರ್ತಿಗೆ ಇನ್ನೊಂದು ಅಡಿ ಬಾಕಿ ಇದೆ. ನಾಳೆ ವೇಳೆಗೆ ಜಲಾಶಯ ಬಹುತೇಕ ಭರ್ತಿ ಆಗಲಿದೆಜಲಾಶಯದ ಗರಿಷ್ಠ ಸಾಮರ್ಥ್ಯ 124.80 ಅಡಿಗಳಿದ್ದು, ಸದ್ಯ 123.45 ಅಡಿ ಭರ್ತಿಯಾಗಿದೆ. ಜಲಾಶಯಕ್ಕೆ 18,027 ಕ್ಯೂಸೆಕ್ ಒಳ ಹರಿವು, 18,027 ಕ್ಯೂಸೆಕ್ ಒಳ ಹರಿವು ಇದೆ. ಒಂದೇ ವಾರದಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಹರಿದ 33.55 ಟಿಎಂಸಿ ನೀರು ಹರಿದಿದ್ದು, ತಲೆದೋರಲಿದ್ದ ಕಾವೇರಿ ಸದ್ಯಕ್ಕೆ ದೂರವಾಗಿದೆ. …

Read More »

ದೇಶದಲ್ಲಿ ಕೊರೊನಾ ಸ್ಫೋಟ- ಒಂದೇ ದಿನ 66,999 ಮಂದಿಗೆ ತಗುಲಿದ ಮಹಾಮಾರಿ

ನವದೆಹಲಿ: ದೇಶದಲ್ಲಿ ಕೊರೊನಾ ರುದ್ರ ನರ್ತನ ಮುಂದುವರಿದಿದ್ದು, ಒಂದೇ ದಿನ 66,999 ಮಂದಿಗೆ ಸೋಂಕು ತಗುಲಿದ್ದು, 942 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,96.638ಕ್ಕೆ ಏರಿಕೆಯಾಗಿದ್ದು, ಸದ್ಯ 6,53,622 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 16,95,982 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 47,033 ಸಾವುಗಳು ದಾಖಲಾಗಿವೆ. ಬುಧವಾರ ಒಂದೇ ದಿನ 8,30,391 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಆಗಸ್ಟ್ 12, 2020ರವೆರೆಗೆ 2,68,45,688 ಜನರು ಕೊರೊನಾ …

Read More »

ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಕುಟುಂಬಕ್ಕೆ ಸರ್ಕಾರದಿಂದ ಪೊಲೀಸ್ ಭದ್ರತೆ

ಬೆಂಗಳೂರು: ಸಿಲಿಕಾನ್ ಸಿಟಿಯ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮತ್ತು ಕುಟುಂಬಕ್ಕೆ ಸರ್ಕಾರ ಪೊಲೀಸ್ ಭದ್ರತೆಯನ್ನು ಒದಗಿಸಿದೆ.ಶಾಸಕರ ಕುಟುಂಬ ಸದ್ಯ ಖಾಸಗಿ ಹೊಟೇಲ್ ನಲ್ಲಿ ವಾಸವಾಗಿದೆ. ಜೀವಕ್ಕೆ ಅಪಾಯ ಇರುವ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆ ನೀಡಿದ್ದಾರೆ. ಅಲ್ಲದೆ ಸದ್ಯಕ್ಕೆ ತಮ್ಮ ನಿವಾಸಕ್ಕೆ ಹೋಗೋದು ಬೇಡ ಅಂತ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಸ್ವಲ್ಪ ದಿನ ಹೊಟೇಲ್ ನಲ್ಲಿ ಉಳಿಯಲು ಶಾಸಕ ಅಖಂಡ ನಿರ್ಧಾರ ಮಾಡಿದ್ದು, …

Read More »

ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರು ಕೊರೊನಾ ಟೆಸ್ಟ್‍ಗೆ ಒಳಾಗಿದ್ದಾರೆ.

ಮುಂಬೈ: ಕ್ರಿಕೆಟ್‍ನಿಂದ ಸಲ್ಪ ಸಮಯ ದೂರ ಉಳಿದಿದ್ದ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರು ಕೊರೊನಾ ಟೆಸ್ಟ್‍ಗೆ ಒಳಾಗಿದ್ದಾರೆ. ಕೊರೊನಾ ವೈರಸ್ ಕಾರಣದಿಂದ ಮುಂದಕ್ಕೆ ಹೋಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 13ನೇ ಆವೃತ್ತಿಯನ್ನು ಸೆಪ್ಟೆಂಬರ್ 19ರಿಂದ ಪ್ರಾರಂಭ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತೀರ್ಮಾನ ಮಾಡಿದೆ. ಭಾರತದಲ್ಲಿ ಸೋಂಕು ಹಿಡಿತಕ್ಕೆ ಬಾರದ ಕಾರಣ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲಾಗಿದೆ. ಈ ನಡುವೆ ಫ್ರಾಂಚೈಸಿಗಳು ತಮ್ಮ ತಂಡದ …

Read More »

ಬೆಂಗ್ಳೂರಲ್ಲಿ ನಡೆದ ಧಾರ್ಮಿಕ ಮತಾಂಧತೆಯನ್ನು ಖಂಡಿಸುತ್ತೇನೆ: ಪ್ರಕಾಶ್ ರಾಜ್

ಬೆಂಗಳೂರು: ಸಿಲಿಕಾನ್ ಸಿಟಿಯ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯಲ್ಲಿ ನಡೆದ ಘಟನೆಯನ್ನು ಖಂಡಿಸುವುದಾಗಿ ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ. ಬೆಂಗಳೂರು ಗಲಭೆಯ ಸಂಬಂಧ ಟ್ವೀಟ್ ಮಡಿರುವ ಅವರು, ಬೆಂಗಳೂರಿನಲ್ಲಿ ನಡೆದ ಗಲಭೆ ಅನಾಗರಿಕವಾದದ್ದಾಗಿದೆ. ಈ ಧಾರ್ಮಿಕ ಮತಾಂಧತೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕಾನೂನನ್ನು ಕೈಗೆ ತೆಗದುಕೊಂಡ ಪ್ರಚೋದರಕರು ಹಾಗೂ ಗೂಂಡಾಗಳಿಗೆ ಕಠಿಣ ಶಿಕ್ಷೆಯಾಗಬೇಕು. ಈ ಸಮಾಜ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಗರಂ ಆಗಿದ್ದಾರೆ. ನಡೆದಿದ್ದೇನು? ಕಾಂಗ್ರೆಸ್ ಶಾಸಕ ಅಖಂಡ …

Read More »

2 ತಿಂಗಳ ಕಂದಮ್ಮನನ್ನು 45 ಸಾವಿರ ರೂ. ಗೆ ಮಾರಾಟ……

ಹೈದರಾಬಾದ್: ಪತಿ ಪತ್ನಿ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತೆ ಆರ್ಥಿಕ ಸಂಕಷ್ಟದಿಂದಾಗಿ ಮಹಿಳೆಯೊಬ್ಬರು ತನ್ನ 2 ತಿಂಗಳ ಕಂದಮ್ಮನನ್ನು 45 ಸಾವಿರ ರೂ. ಗೆ ಮಾರಾಟ ಮಾಡಿರುವ ಅಮಾನವೀಯ ಘಟನೆ ಹೈದರಾಬಾದ್‍ನ ಸುಭಾನ್‍ಪುರ್ ಪ್ರದೇಶದಲ್ಲಿ ನಡೆದಿದೆ. ಮಹಿಳೆಯನ್ನು ಝೋಯಾ ಖಾನ್ ಎಂದು ಗುರುತಿಸಲಾಗಿದೆ.  ಆಗಸ್ಟ್ 11 ರಂದು ಅಬ್ದುಲ್ ಮುಜಾಹೇದ್ ಎಂಬ ವ್ಯಕ್ತಿ ಹಬೀಬ್ ನಗರ ಪೊಲೀಸ್ ಠಾಣೆಗೆ ಬಂದು ತನ್ನ ಪತ್ನಿ ಮಗುವನ್ನು ಮಾರಿರುವುದಾಗಿ ದೂರು ನೀಡಿದ್ದ. ಅಲ್ಲದೆ …

Read More »

ಡಿ.ಜೆ.ಹಳ್ಳಿ ಗಲಭೆ : ಪರಾರಿಯಾಗಿರುವ ಪುಂಡರ ಬಂಧನಕ್ಕೆ 3 ಟೀಮ್ ರಚನೆ

ಬೆಂಗಳೂರು, ಆ.13- ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಮೊನ್ನೆ ರಾತ್ರಿ ಬೆಂಕಿ ಹಚ್ಚಿ ದಾಂಧಲೆ ಮಾಡಿ ಪರಾರಿಯಾಗಿರುವ ಗಲಭೆಕೋರರ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಈಗಾಗಲೇ ಪರಾರಿಯಾಗಿರುವ ಗಲಭೆಕೋರರ ಬಂಧನಕ್ಕೆ ಬಲೆ ಬೀಸಿವೆ.ಗಲಭೆ ಸಂದರ್ಭದಲ್ಲಿ ತೆಗೆದ ವಿಡಿಯೋ ಆಧರಿಸಿ ಆರೋಪಿಗಳನ್ನು ಗುರುತಿಸಿ ಅವರ ಬಂಧನಕ್ಕೆ ಈ ತಂಡಗಳು ಮುಂದಾಗಿವೆ.ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಈ ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿವೆ. ಈವರೆಗೂ ಸಂಘಟನೆಯ ಮುಖಂಡರು …

Read More »

ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್‍ಗೂ ಕೊರೊನಾ..!

ನವದೆಹಲಿ, ಆ.13- ಕೇಂದ್ರ ಆಯುಷ್ (ಆಯುರ್ವೇದ, ಯೋಗ, ಯುನಾನಿ ಮತ್ತು ಸಿದ್ಧ) ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ಯಸ್ಸೋ ನಾಯಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೇಂದ್ರ ಸಚಿವರು ಈಗ ಐಸೋಲೇಷನ್‍ನಲ್ಲಿ ಇದ್ದು, ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಮಂತ್ರಿಮಂಡಲದ ಐದನೇ ಸಚಿವರಿಗೆ ಕೋವಿಡ್-19 ತಗುಲಿದಂತಾಗಿದೆ.ಈ ಕುರಿತು ಟ್ವೀಟ್ ಮಾಡಿರುವ ಸಚಿವರು ನನಗೆ ಕೊರೊನಾ ಸೋಂಕು ದೃಢಪಟಿದೆ. …

Read More »