ಆಳಂದ: ಪಟ್ಟಣದ ಜೀವನ ಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.91ರಷ್ಟು ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತಿದ್ದ 88 ವಿದ್ಯಾರ್ಥಿಗಳಲ್ಲಿ 81 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು. 20 ವಿದ್ಯಾರ್ಥಿಗಳು ಡಿಸ್ಟಿಂಕ್ಷನನಲ್ಲಿ, 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಶಾಲೆಯ ಕು. ಪ್ರಿಯಾಂಕಾ ವಾಮನರಾವ 97.12% ಪಡೆಯುವುದರ ಮೂಲಕ ತಾಲೂಕಿಗೆ ತೃತೀಯ …
Read More »‘ಬೆಳೆ ಸಮೀಕ್ಷೆಗೆ ಮೊಬೈಲ್ ಆಯಪ್ ಬಳಸಿ’
ಬೆಳಗಾವಿ: ‘ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆಯಪ್ ಮೂಲಕ ದಾಖಲಿಸುವ ವಿನೂತನ ಯೋಜನೆಯನ್ನು ಸರ್ಕಾರದಿಂದ ಪ್ರಾರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ. ‘ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖ್ಯಿಕ ಇಲಾಖೆ ಜಂಟಿ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದೆ. ಸಂಗ್ರಹವಾದ ಬೆಳೆಗಳ ಮಾಹಿತಿಯನ್ನು ತಾಲ್ಲೂಕು ಆಡಳಿತದಿಂದ ಪರಿಶೀಲಿಸಲಾಗುವುದು’. ‘ರೈತರು ಸ್ಮಾರ್ಟ್ ಮೊಬೈಲ್ ಫೋನ್ನಲ್ಲಿ ಬೆಳೆ ಸಮೀಕ್ಷೆ ಆಯಪ್ ಅನ್ನು …
Read More »ಬೌರಿಂಗ್ ಆಸ್ಪತ್ರೆ ಎದುರು ಮೃತರ ಸಂಬಂಧಿಕರಿಂದ ಹೈಡ್ರಾಮಾ
ಬೆಂಗಳೂರು, ಆ.12- ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದ ನಂತರ ಶಿವಾಜಿನಗರ ಮತ್ತು ಸುತ್ತಮುತ್ತಲ ಪ್ರದೇಶಗಳು ಸ್ತಬ್ಧಗೊಂಡಿವೆ. ಶಿವಾಜಿನಗರದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಲಾಗಿದ್ದು, ಇಡೀ ಪ್ರದೇಶ ಬಿಕೋ ಎನ್ನುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.ಗಲಭೆ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳ ಮೇಲೆ ನಿಗಾ ಇಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ …
Read More »ಡಿ.ಜೆ. ಹಳ್ಳಿ ಗಲಭೆ ಖಂಡನೀಯ, ಸರ್ಕಾರ ಕಾನೂನಿನ ಕ್ರಮ ಕೈಗೊಳ್ಳಲಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ಡಿ.ಜೆ. ಹಳ್ಳಿ ಘಟನೆಯನ್ನು ನಾನು ಖಂಡಿಸುತ್ತೇನೆ. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳುಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಬುಧವಾರ ಬೆಳಗ್ಗೆ ಸದಾಶಿವನಗರದ ನಿವಾಸದ ಬಳಿ ಬೆಂಗಳೂರಿನ ಡಿ.ಜೆ. ಹಳ್ಳಿ ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಇದು ಸಮಾಜಘಾತುಕ ಕೃತ್ಯ. ಶಾಸಕರ ಆಸ್ತಿಯಾಗಲಿ, ಸಾಮಾನ್ಯ ಜನರ ಆಸ್ತಿಯೇ ಆಗಿರಲಿ, ಪೊಲೀಸ್ ಠಾಣೆಯಾಗಿರಲಿ ಯಾವುದನ್ನು ಹಾನಿ ಮಾಡುವುದು ಸರಿಯಲ್ಲ. ಇದನ್ನು ನಾವ್ಯಾರೂ ಒಪ್ಪಲು ಸಾಧ್ಯವಿಲ್ಲ ಎಂದರು. …
Read More »ಡಿಜೆ ಹಳ್ಳಿ ಘಟನೆ| ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು: ಸುರೇಶ ಅಂಗಡಿ
ಬೆಳಗಾವಿ: ‘ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಗಲಾಟೆ ಮಾಡಿ, ಸಮಾಜದಲ್ಲಿ ಶಾಂತಿ ಕದಡಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಒತ್ತಾಯಿಸಿದರು. ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಲಾಟೆಗೆ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ಈ ಹಿಂದೆ ಇಲ್ಲಿನ ಬಿಮ್ಸ್ ಆಸ್ಪತ್ರೆ ಎದುರು ನಿಂತಿದ್ದ ಆಂಬುಲೆನ್ಸ್ಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿತ್ತು. ಇಂತಹ ಘಟನೆಗಳು ಅತ್ಯಂತ ಖಂಡನೀಯ. ಇವೆಲ್ಲವೂ ದೇಶದ್ರೋಹಿಗಳು ಮಾಡುವ …
Read More »ಮತ್ತೆ 46 ಜನರಿಗೆ ಸೋಂಕು
ಗದಗ: ಜಿಲ್ಲೆಯಲ್ಲಿ ಹೊಸದಾಗಿ 46 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,399ಕ್ಕೆ ಏರಿದೆ. ಈ ವರೆಗೆ 1321 ಜನರು ಗುಣಮುಖರಾಗಿದ್ದು, 1027 ಪ್ರಕರಣಗಳು ಸಕ್ರಿಯವಾಗಿವೆ. ಗದಗ-28, ಮುಂಡರಗಿ-4, ನರಗುಂದ-6, ರೋಣ-6, ಶಿರಹಟ್ಟಿ-1, ಹೊರಜಿಲ್ಲೆಯ ಒಬ್ಬರಿಗೆ ಕೋವಿಡ್ ದೃಢಪಟ್ಟಿದೆ. ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಜೆ.ಟಿ. ಕಾಲೇಜು ರಸ್ತೆ, ನರಸಾಪುರ, ವಿವೇಕಾನಂದ ನಗರ,ಬೆಟಗೇರಿ, ಕಳಸಾಪುರ ರಸ್ತೆಯ ಬಾಪೂಜಿ ನಗರ, ಹುಡ್ಕೊ ಕಾಲೋನಿ, ಮದೀನಾ ಮಸೀದಿ ಹತ್ತಿರ, ಎಸ್.ಎಂ. ಕೃಷ್ಣಾ ನಗರ, …
Read More »ಪ್ರಧಾನಿ ನರೇಂದ್ರ ಮೋದಿ ಸರ್ಕಾರವೂ ಅಡಳಿತದಲ್ಲಿ ವಿಫಲ: ಅನಂತ್ ಕುಮಾರ್ ಹೆಗಡೆ
ಕುಮಟಾ: ಸಾರ್ವಜನಿಕ ಸ್ವಾಮ್ಯದ ಕಂಪೆನಿಗಳ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರಕಾರ ವಿಫಲವಾಗಿದೆ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ನೀಡಿರುವ ಹೇಳಿಕೆ ದೇಶದಾದ್ಯಂತ ಕೋಲಾಹಲ ಸೃಷ್ಟಿಸಿದೆ. ಪ್ರಧಾನಿ ಮೋದಿ ವಿರುದ್ಧವೇ ನೀಡಿದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ದೇಶದ ಬೃಹತ್ ಟೆಲಿಕಾಂ ಸಂಸ್ಥೆಯಾದ ಬಿಎಸ್ಎನ್ಎಲ್ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಸಂಸ್ಥೆಯ ಉದ್ಯೋಗಿಗಳು ಸಂಸ್ಥೆಯನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತಿಲ್ಲ. ಬಿಎಸ್ಎನ್ಎಲ್ ಉದ್ಯೋಗಿಗಳು ದೇಶದ್ರೋಹಿಗಳು. ಅವರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಬಿಎಸ್ಎನ್ಎಲ್ …
Read More »ರಾಯಚೂರಿನಲ್ಲಿ ಊಟ, ನೀರಿಗಾಗಿ ಹೊರಬರುತ್ತಿರುವ ಕೊರೊನಾ ಸೋಂಕಿತರು
ರಾಯಚೂರು: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಾದ ರಿಮ್ಸ್ ಹಾಗೂ ಓಪೆಕ್ ನಲ್ಲಿನ ಸಮಸ್ಯೆಗಳು ಬಗೆಹರಿಯುವ ಲಕ್ಷಣಗಳೇ ಕಾಣುತ್ತಿಲ್ಲ. ಸ್ವಚ್ಛತೆ ಕೊರತೆ, ಊಟ, ನೀರಿನ ಸೌಲಭ್ಯ ಸರಿಯಾಗಿ ಇಲ್ಲದಿರುವುದು, ಮುಖ್ಯವಾಗಿ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ ಅನ್ನೋ ಸೋಂಕಿತರ ಆರೋಪ ಈಗಲೂ ಮುಂದುವರೆದಿದೆ.ಊಟ, ತಿಂಡಿ, ನೀರಿಗಾಗಿ ರೋಗಿಗಳ ಜೊತೆಗೆ ಇರುವವರು ಹಾಗೂ ರೋಗಿಗಳು ಸಹ ಹೊರಗೆ ಬಂದು ಹೋಟೆಲ್ಗಳಲ್ಲಿ ತೆಗೆದುಕೊಂಡು ಆಸ್ಪತ್ರೆಗೆ ವಾಪಸ್ ಮರಳುತ್ತಿದ್ದಾರೆ. ಟೀ ಕೊಡುತ್ತಿಲ್ಲ, ಕುಡಿಯುವ ನೀರಿನ ಸೌಲಭ್ಯವಿಲ್ಲ, ಹೊರಗಡೆಯಿಂದಲೇ ನೀರು …
Read More »ಪಿಯು ವಿದ್ಯಾರ್ಥಿಗಳಿಗೆ ಆನ್ಲೈನ್ ಪಾಠ
ರಾಮನಗರ: ಕೋವಿಡ್-19 ಲಾಕ್ಡೌನ್ ಕಾರಣಕ್ಕೆ ಕಲಿಕೆಯಿಂದ ವಿಮುಖರಾಗಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯು ಆನ್ಲೈನ್ ಪಾಠ ಆರಂಭಿಸಿದೆ. ಈ ಮೂಲಕ ಮನೆಯಲ್ಲೇ ಕಲಿಕೆ ಮುಂದುವರಿಸುವ ಅವಕಾಶ ನೀಡಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ವಿವಿಧ ವಿಷಯಗಳ ನುರಿತ ಉಪನ್ಯಾಸಕರಿಂದ ಪಠ್ಯದ ವಿವಿಧ ಅಧ್ಯಾಯಗಳನ್ನು ವಿಡಿಯೊ ರೂಪದಲ್ಲಿ ಸಂಗ್ರಹಿಸಿ ಯೂಟ್ಯೂಬ್ಗೆ ಅಪ್ಲೋಡ್ ಮಾಡಲಾಗುತ್ತಿದೆ. ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮಗಳೆಡರಲ್ಲೂ ಈ ಪಾಠಗಳು ಲಭ್ಯವಿದೆ. ಕಳೆದ ಜುಲೈನಿಂದಲೇ ಈ …
Read More »ಬೀದಿ ದೀಪಗಳನ್ನು ಶಾಸಕ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಅರವಿಂದ್ ಕಾರ್ಚಿ ಅವರು ಉದ್ಘಾಟಿಸಿದರು.
ಬೆಳಗಾವಿ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಬೀದಿ ದೀಪಗಳನ್ನು ಶಾಸಕ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಅರವಿಂದ್ ಕಾರ್ಚಿ ಅವರು ಉದ್ಘಾಟಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದ ಮೇರೆಗೆ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಾದ ಧರನಟ್ಟಿ, ಭರಮ್ಯಾನಟ್ಟಿ ಮತ್ತು ಕರುವಿನಕುಂಪ್ಪಿ ಗ್ರಾಮಗಳಲ್ಲಿ ಬಹು ವೆಚ್ಚದಲ್ಲಿ ನಿರ್ಮಿಸಲಾದ ಬೀದಿ ದೀಪ ಗಳಿಗೆ ಕಾರ್ಚಿ ಅವರು ಚಾಲನೆ ನೀಡಿದ್ದಾರೆ.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಹಾಲಿ ಹಾಗೂ …
Read More »