ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ನಿವಾರ್ ಸೈಕ್ಲೋನ್ ಇನ್ನೆರಡು ದಿನಗಳಲ್ಲಿಯೇ ಅಪ್ಪಳಿಸಲಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಸೈಕ್ಲೋನ್ ಪರಿಣಾಮ ನವೆಂಬರ್ 25 ರಿಂದ 27ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ.ಬಂಗಾಲ ಉಪಸಾಗರ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನ.25 ರಂದು ತಮಿಳುನಾಡು ಹಾಗೂ ಪಾಂಡಿಚೇರಿ ಕರಾವಳಿಯಲ್ಲಿ ದಾಟಿ ಕಾರೈಕಲ್, ಮಾಮಲಪುರಂ ಹತ್ತಿರ ಸೈಕ್ಲೋನ್ ಕ್ರಾಸ್ ಆಗುತ್ತೆ. ಇದರ ಪ್ರಭಾವದಿಂದಾಗಿ ಕರಾವಳಿಯ ಕೆಲ …
Read More »ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ
ಲಕ್ನೋ: ಲವ್ ಜಿಹಾದ್ ಕುರಿತು ಹೆಚ್ಚು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತಂದಿದ್ದು, ಒಂದು ವೇಳೆ ಆರೋಪ ಸಾಬೀತಾದಲ್ಲಿ 5 ವರ್ಷದ ವರೆಗೆ ಜೈಲು ಶಿಕ್ಷೆ ವಿಧಿಸುವಂತೆ ಕಾನೂನು ರೂಪಿಸಲಾಗಿದೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೆಲ ದಿನಗಳ ಹಿಂದಷ್ಟೇ ಕೇಂದ್ರ ಕಾನೂನು ಸಚಿವಾಲಯದ ಬಳಿ ಈ ಕುರಿತು ಯುಪಿ ಸರ್ಕಾರ ಚರ್ಚಿಸಿತ್ತು. ಇದೀಗ ಸುಗ್ರೀವಾಜ್ಞೆ …
Read More »ಶಬರಿಮಲೆ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿಯನ್ನು ಆರಂಭಿಸಿದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತಾದಿಗಳಿಗೆ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದರೂ ದರ್ಶನಕ್ಕೆ ಅವಕಾಶ ನೀಡುತ್ತಿಲ್ಲ ಎಂಬ ಕುರಿತು ಸುದ್ದಿಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಯಾತ್ರಾರ್ಥಿಗಳಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ. ಕೇರಳದ ಶಬರಿಮಲೆಗೆ ತೆರಳುವ ಭಕ್ತರಿಗೆ ಅನುಕೂಲವಾಗುವಂತೆ ಹೆಲ್ಪ್ ಲೈನ್ ಆರಂಭಿಸಿ ಸರ್ಕಾರ ಆದೇಶ ಹೊರಡಿಸಿದೆ. 2020-21ನೇ ಸಾಲಿನ ಮಂಡಲ-ಮಕರವಿಳಕ್ಕು ಕಾರ್ಯಕ್ರಮಕ್ಕೆ ತೆರಳುವ ಭಕ್ತರ ಸಮಸ್ಯೆ ಆಲಿಸಲು ಹಾಗೂ ಆರೋಗ್ಯ ಸಲಹೆಗಳಿಗಾಗಿ ಈ ಸಹಾಯವಾಣಿಯನ್ನು ಆರಂಭಿಸಿದೆ. ಕೊರೊನಾ ಹಿನ್ನಲೆ ಶಬರಿಮಲೆ …
Read More »ಕೊಬ್ಬರಿ ಹೋರಿ ಹಿಡಿಯಲು ಹೋಗಿ ಗೋರಿ ಸೇರಿದ ಯುವಕ….
ಹಾವೇರಿ: ಕೊಬ್ಬರಿ ಹೋರಿ ಓಡಿಸೋ ಹಬ್ಬದಲ್ಲಿ ಹಿಡಿಯಲು ಹೋಗಿದ್ದ ಯುವಕನಿಗೆ ಹೋರಿ ಗುದ್ದಿ ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು 24 ವರ್ಷದ ಚಂದ್ರು ಈರಕ್ಕನವರ ಎಂದು ಗುರುತಿಸಲಾಗಿದೆ. ಮೃತ ಚಂದ್ರು, ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದ ನಿವಾಸಿಯವನಾಗಿದ್ದು, ಕೊಬ್ಬರಿ ಹೋರಿ ಹಬ್ಬಕ್ಕಾಗಿಯೇ ಕೆರಿಮತ್ತಿಹಳ್ಳಿಗೆ ಬಂದಿದ್ದ. ಪೊಲೀಸ್ ಇಲಾಖೆಯ ಅನುಮತಿ ನಿರಾಕರಣೆ ನಡುವೆಯೂ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ಇಂದು ಕೊಬ್ಬರಿ ಹೋರಿ ಓಡಿಸೋ …
Read More »ಒಬ್ಬನನ್ನು ಕಾಪಾಡಲು ಹೋಗಿ ನಾಲ್ವರು ನೀರುಪಾಲು
ಮಂಗಳೂರು: ನದಿ ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮೂಡುಬಿದ್ರೆ ತಾಲೂಕಿನ ಪಾಲಡ್ಕ ಗ್ರಾಮದ ಶಾಂಭವಿ ನದಿಯಲ್ಲಿ ನಡೆದಿದೆ.ಮೃತರನ್ನು ಮೂಡುಶೆಡ್ಡೆಯ ನಿಖಿಲ್ (18), ಹರ್ಷಿತಾ (20), ವೇಣೂರಿನ ಸುಭಾಶ್ (19), ಬಜ್ಪೆಯ ರವಿ(30) ಎಂದು ಗುರುತಿಸಲಾಗಿದೆ. ಇದರಲ್ಲಿ ಮೊದಲಿಗೆ ಓರ್ವ ಮುಳುಗಿದ್ದು, ಅವನನ್ನು ಕಾಪಾಡಲು ಯುವತಿ ಸೇರಿ ಮೂವರು ನೀರಿಗೆ ಇಳಿದಿದ್ದಾರೆ. ನಾಲ್ವರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
Read More »ಕಾರಿನಲ್ಲಿ ಬಂದ ಜನ 3 ಲೀಟರ್ ಹಾಲು ಕದ್ದೊಯ್ದಿದ್ದಾರೆ.
ಚಿಕ್ಕಮಗಳೂರು: ಹಣ, ಚಿನ್ನ ಕದಿಯುವವರನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕಾರಿನಲ್ಲಿ ಬಂದ ಜನ 3 ಲೀಟರ್ ಹಾಲು ಕದ್ದೊಯ್ದಿದ್ದಾರೆ.ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಪ್ರವಾಸಿ ವಾಹನದಲ್ಲಿ ಕೆಲವರು ಬೆಳಗಿನ ಜಾವ ಅಂಗಡಿ ಮುಂದೆ ಟ್ರೇನಲ್ಲಿದ್ದ ಹಾಲಿನ ಪ್ಯಾಕೇಟ್ಗಳಲ್ಲಿ ಮೂರು ಲೀಟರ್ ಹಾಲನ್ನ ಕದ್ದೋಯ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಿಂದ ಮಂಗಳೂರು, ಧರ್ಮಸ್ಥಳಕ್ಕೆ ಹೋಗಬೇಕೆಂದರೆ ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರದ ಮೂಲಕವೇ ಹೋಗಬೇಕು. ಆದರೆ ಅಂಗಡಿ ಮುಂದಿನ ಹಾಲಿನ ಟ್ರೇನಲ್ಲಿದ್ದ ಹಾಲನ್ನು …
Read More »ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಮಂಡನೆ: ಸಚಿವ ಪ್ರಭು ಚೌಹಾಣ್
ಬೆಂಗಳೂರು, – ಪಶು ಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು. ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ ಸಚಿವ ಪ್ರಭು ಚೌಹಾಣ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು , ಡಿ.7ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಿದ್ದು, ಅದಕ್ಕೆ ಬೇಕಾದ ಪೂರ್ವ ತಯಾರಿ …
Read More »ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಅವರನ್ನು ಜೈಲಿನ ಆಸ್ಪತ್ರೆಗೆ ಸ್ಥಳಾಂತರಿಸಿ ಆಕ್ಸಿಜನ್ ಬೆಡ್ ನೀಡಲಾಗಿದೆ. ಬಿಪಿ, ಶುಗರ್, ಹೃದಯಸಂಬಂಧಿ ಖಾಯಿಲೆಗಳಿಂದ ರೋಷನ್ ಬೇಗ್ ಬಳಲುತ್ತಿದ್ದರು. 3 ದಿನಗಳ ಹಿಂದೆ ಅವರನ್ನು ಸಿಬಿಐ ಬಂಧಿಸಿ ವಿಚಾರಣೆಗೊಳಪಡಿಸಿತ್ತು. ನಂತರ ನ್ಯಾಯಾಲಯ 14 ದಿನಗಳ ನ್ಯಾಯಂಗ ವಶಕ್ಕೆ ಒಪ್ಪಿಸಿದೆ. ಈ ಮಧ್ಯೆ ರೋಷನ್ ಬೇಗ್ ಅವರನ್ನು ಇನ್ನಷ್ಟು ವಿಚಾರಣೆಗೊಳಪಡಿಸಬೇಕಿರುವುದರಿಂದ …
Read More »ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ
ನವದೆಹಲಿ: ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಇಂದು ವಿಧಿವಶರಾಗಿದ್ದಾರೆ. ಅಹ್ಮದ್ ಪಟೇಲ್ ಅವರಿಗೆ ಕೆಲ ವಾರಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿತ್ತು. ಗುರುಗ್ರಾಮದ ಮೆಡಂತಾ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮುನ್ನ ಫರಿದಾಬಾದ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ಹೀಗಾಗಿ ಮೆಡಂತಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ತಮಗೆ ಕೊರೊನಾ ಸೋಂಕು ತಗುಲಿದ ಕುರಿತು ಅಕ್ಟೋಬರ್ …
Read More »ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ
ಬೆಂಗಳೂರು, ನ.24- ರಾಜ್ಯದ ಜನಸಂಖ್ಯೆಯಲ್ಲಿ ಎರಡನೆ ಸ್ಥಾನದಲ್ಲಿರುವ ಒಕ್ಕಲಿಗ ಸಮುದಾಯ ಎಲ್ಲ ಕ್ಷೇತ್ರಗಳಲ್ಲೂ ಹಿಂದುಳಿದಿದ್ದು, ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಹಲವಾರು ಮುಖಂಡರು ಮನವಿ ಮಾಡಿದ್ದಾರೆ. ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬ ಒತ್ತಾಯದ ಸಮಿತಿಯ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಭೇಟಿ ಮಾಡಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿತು. ನಿಯೋಗದಲ್ಲಿ ತಲಕಾಡು ಚಿಕ್ಕರಂಗೇ ಗೌಡ, ರಾಜ್ಯ ಬಿಜೆಪಿ ವಕ್ತಾರ ಎ.ಎಚ್.ಆನಂದ್, …
Read More »