ಬೆಳಗಾವಿ- ಖಾನಾಪೂರ ತಾಲ್ಲೂಕಿನ ಕಣಕುಂಬಿ ಅರಣ್ಯ ಪ್ರದೇಶದಲ್ಲಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದೆ. ಚಿಕಲೆ ಗ್ರಾಮದ 60 ವರ್ಷದ ಶಂಕರ ಗವಸ್ ಎಂಬ ರೈತ ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿ ಮಾಡಿ ಗಾಯಪಡಿಸಿದ್ದು ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಎಂದು ಅರಣ್ಯ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.
Read More »S.S.L.C. ಪರೀಕ್ಷೆಯ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೆ ಸಿಎಂ ಕೃತಜ್ಞತೆ
ಬೆಂಗಳೂರು, ಆ.11 : ಸವಾಲುಗಳ ನಡುವೆ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಎಲ್ಲರಿಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಕೊರೋನಾ ಸವಾಲುಗಳ ನಡುವೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗಬಾರದು ಎಂದು ರಾಜ್ಯ ಸರ್ಕಾರ ಟೊಂಕಕಟ್ಟಿ ನಿಂತು, ಈ ವರ್ಷದ ಜೂನ್ 25 ರಿಂದ ಜುಲೈ 3 ರವರೆಗೆ, ಅತ್ಯಂತ ಯಶಸ್ವಿಯಾಗಿ ನಡೆಸಿದ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಫಲಿತಾಂಶ ನಿನ್ನೆ ಪ್ರಕಟವಾಗಿದೆ. ಶೇಕಡಾ 71.80 ರಷ್ಟು ಮಕ್ಕಳು …
Read More »ಸ್ವಾತಂತ್ರ್ಯೋತ್ಸವಕ್ಕೆ ಪರೇಡ್, ಸೆಲ್ಯೂಟ್ ಇರುವುದಿಲ್ಲ: ಬಸವರಾಜ ಬೊಮ್ಮಾಯಿ
ಉಡುಪಿ: ಆಗಸ್ಟ್ 15ರ ಸ್ವಾತಂತ್ರ್ಯೋತ್ಸವಕ್ಕೆ ಕೇಂದ್ರದಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಕೊರೊನಾ ನಡುವೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದಂದು ಕಮಾಂಡರ್ಸ್ ಇರುತ್ತಾರೆ. ಆದರೆ ಪರೇಡ್ ಇರುವುದಿಲ್ಲ. ತಂಡ ತಂಡಗಳು ಬಂದು ಸೆಲ್ಯೂಟ್ ಮಾಡ ಇರುವುದಿಲ್ಲ. ಕೇಂದ್ರದ ನಿಯಮಾವಳಿ ಪ್ರಕಾರ ಹಬ್ಬ ಆಚರಣೆ ನಡೆಸಬೇಕು. ಎಲ್ಲರೆದುರಲ್ಲೇ ಧ್ವಜಾರೋಹಣ ಮಾಡಲಾಗುತ್ತದೆ. ಆದರೆ ಮೈದಾನಗಳಿಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ ಎಂದರು. …
Read More »ಶ್ರೀಕೃಷ್ಣನ ಊರು ಉಡುಪಿಯಲ್ಲಿ ಈ ಬಾರಿ ಅಷ್ಟಮಿ ಆಚರಣೆ ನಡೆದಿಲ್ಲ.
ಉಡುಪಿ: ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆ ನಡೆಯುತ್ತಿದೆ. ಕಡೆಗೋಲು ಶ್ರೀಕೃಷ್ಣನ ಊರು ಉಡುಪಿಯಲ್ಲಿ ಈ ಬಾರಿ ಅಷ್ಟಮಿ ಆಚರಣೆ ನಡೆದಿಲ್ಲ. ಉಡುಪಿ ಮಠದಲ್ಲಿ ಸೌರಮಾನ ಪದ್ಧತಿ ಆಚರಣೆ ಮಾಡುವುದರಿಂದ, ಮುಂದಿನ ತಿಂಗಳು ಶ್ರೀಕೃಷ್ಣಜನ್ಮಾಷ್ಟಮಿ ನಡೆಯಲಿದೆ. ದೇಶದಲ್ಲಿ ಆಚರಣೆ ಇರುವುದರಿಂದ ಉಡುಪಿ ಕಡೆಗೋಲು ಕೃಷ್ಣನಿಗೆ, ವಿಶೇಷ ಅಲಂಕಾರ ಮಾಡಲಾಗಿದೆ. ಗೋಪಾಲಕೃಷ್ಣ ನಾಗಿ ಕಡೆಗೋಲು ಕೃಷ್ಣ ದರ್ಶನ ಕೊಟ್ಟಿದ್ದಾನೆ.ಚಾಂದ್ರಮಾನ ಪದ್ಧತಿಯಲ್ಲಿ ಹಬ್ಬಗಳನ್ನು ಆಚರಿಸುವ ಸಮುದಾಯಗಳು ಉಡುಪಿಯಲ್ಲಿದೆ. ಅವರೆಲ್ಲಾ ಅಷ್ಟಮಿ ಆಚರಣೆಯನ್ನು ಮಾಡಿದ್ದಾರೆ. ಈ …
Read More »ನನ್ನ ಹೆಸರನ್ನು ಬಳಸಿಕೊಂಡು ಯಾರು ಕೂಡ ಅಭಿಮಾನಿಗಳ ಬಳ, ಸಂಘ ಸಂಸ್ಥೆಗಳನ್ನು, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದು ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರು: ನನ್ನ ಹೆಸರನ್ನು ಬಳಸಿಕೊಂಡು ಯಾರು ಕೂಡ ಅಭಿಮಾನಿಗಳ ಬಳ, ಸಂಘ ಸಂಸ್ಥೆಗಳನ್ನು, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದು ಸ್ಪಷ್ಟ ಪಡಿಸಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ ಎಂ.ಎಸ್. ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘಟನೆ ಹೊರತು ಪಡಿಸಿ, ಈ ಕ್ಷಣದಿಂದಲೇ ಉಳಿದ ಸಂಘಟನೆಗಳನ್ನು ವಿಸರ್ಜಿಸುವಂತೆ ಸೂಚನೆ ನೀಡಿದ್ದಾರೆ. ಯಾರಾದರು ತಮ್ಮ ಹಾಗೂ ಸಹೋದರ ಡಿ.ಕೆ. ಸುರೇಶ ಅವರ ಹೆಸರಲ್ಲಿ ಸಂಘಟನೆಗಳನ್ನು ನಡೆಸಿದರೆ …
Read More »ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್
ಗೋಕಾಕ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ನಗರಸಭೆ ಕಮಿಷನರ್ ಶಿವನಂದ ಹಿರೇಮಠ್ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಅಂಗಡಿ, ಮುಗ್ಗಟ್ಟು ಹಾಗೂ ವ್ಯಾಪಾರಸ್ತರೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ನಾಳೆಯಿಂದ ಆ. 15(ರವಿವಾರ)ದವರೆಗೂ ಲಾಕ್ ಡೌನ್ ಮಾಡಲು ತೀರ್ಮಾನಿಸಲಾಗಿದೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಸಾವಿನ ಸಂಖ್ಯೆ ಹೆಚ್ಚುತಲಿದೆ. ಹೀಗಾಗಿ ಬಟ್ಟೆ ಅಂಗಡಿ, …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಚಿಕ್ಕೋಡಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದುಕೊಂಡು ನಮ್ಮ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡ ಅವಳ ಮುಂದಿನ ವಿದ್ಯಾಭ್ಯಾಸದ ಸಮಗ್ರ ಖರ್ಚು ವೆಚ್ಚವನ್ನು ಸಂಸ್ಥೆ ಭರಿಸಲಿದೆ ಎಂದು ಸಿಎಲ್ಇ ಸಂಸ್ಥೆ ಕಾರ್ಯದರ್ಶಿ ಜಗದೀಶ ಕವಟಗಿಮಠ ತಿಳಿಸಿದರು. ಇಲ್ಲಿನ ಸಿಎಲ್ಇ ಸಂಸ್ಥೆಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ರ್ಯಾಂಕ ಪಡೆದ ಎಂ.ಕೆ.ಕವಟಗಿಮಠ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡ …
Read More »ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅಧಿಕಾರ
ಬೆಳಗಾವಿ : ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಡಿಸಿಪಿ ಯಶೋಧಾ ವಂಟಗೋಡಿ ಲೋಕಾಯುಕ್ತ ಎಸ್ಪಿಯಾಗಿ ವರ್ಗಾವಣೆಯಾದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಚಂದ್ರಶೇಖರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಅವರು ಅಧಿಕಾರ ಸ್ವೀಕರಿಸಿಕೊಂಡರು.
Read More »ಜನರಿಂದ ಹಗಲು ದರೋಡೆಗೆ ನಿಂತಿದೆವಾಯುವ್ಯ ಸಾರಿಗೆ ಇಲಾಖೆ
ಹಾವೇರಿ: ವಾಯುವ್ಯ ಸಾರಿಗೆ ಇಲಾಖೆಯಲ್ಲಿ ಆಗಾಗ ಒಂದಿಲ್ಲೊಂದು ಅವಾಂತರಗಳು ನಡೆಯುವಂತೆ, ಈಗ ಟಿಕೆಟ್ ದರದ ಮತ್ತೊಂದು ಅವಾಂತರ ಬೆಳಕಿಗೆ ಬಂದಿದೆ. ಒಂದು ಊರಿನಿಂದ ಮತ್ತೊಂದು ಊರಿಗೆ ಹೋದ್ರೆ ಒಂದು ದರವಿದ್ದರೇ, ಹೋದ ಊರಿನಿಂದ ಮರಳಿ ಬಂದರೆ ಹೆಚ್ಚಿನ ದರವನ್ನು ಪ್ರಯಾಣಿಕರಿಂದ ವಸೂಲಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆ. 10 ರಂದು ಪ್ರಯಾಣಿಕನೋರ್ವ ಮಧ್ಯಾಹ್ನ 2.22 ಗಂಟೆಗೆ ಕಾಗಿನೆಲ್ಲಿಯಿಂದ ಹತ್ತಿರದ ಮುತ್ತೂರಿಗೆ ತೆರಳುವ ಸಮಯದಲ್ಲಿ ಹಾವೇರಿ ಘಟಕಕ್ಕೆ ಸೇರಿದ …
Read More »ರೈತ ಕಷ್ಟಪಟ್ಟು ಬೆಳೆದಿದ್ದ ಬಾಳೆಗೊನೆ ಕಳ್ಳತನವಾಗಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ.
ಬೆಂಗಳೂರು: ಕೊರೊನಾ ಮಧ್ಯೆ ರೈತ ಕಷ್ಟಪಟ್ಟು ಬೆಳೆದಿದ್ದ ಬಾಳೆಗೊನೆ ಕಳ್ಳತನವಾಗಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಭಟ್ಟರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಕಷ್ಟಪಟ್ಟು ಬೆಳೆದಿದ್ದ ಬೆಳೆ ಕಳ್ಳನ ಪಾಲಾಗಿದೆ. ಕಳ್ಳರ ಕರಾಮತ್ತು ತೋಟದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಮದ ರಾಮಕೃಷ್ಣಪ್ಪ ತೋಟದಲ್ಲಿ ಕಳ್ಳತನವಾಗಿದ್ದು, ಸುಮಾರು 25 ಬಾಳೆಗೊನೆ ಕಳ್ಳತನವಾಗಿದೆ. ಈ ಹಿಂದೆಯೂ ಸಹ ಸಾಕಷ್ಟು ಬಾರಿ ತೋಟದಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿತ್ತು. ಇದರಿಂದ ಬೇಸತ್ತ ರೈತ …
Read More »