ಬೆಂಗಳೂರು: ಮಗನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕುತ್ತಾ ಮಗನ ಎದುರೇ ತಾಯಿ ಸೆಲ್ಫಿ ವೀಡಿಯೋ ಮಾಡುತ್ತಾ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಚಂದ್ರಲೇಔಟ್ ಆರುಂಧತಿ ನಗರದ 11 ನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ನಡೆದಿದೆ. ಫಾತೀಮಾ (30) ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ತಾಯಿ ರಫೀಕಾ ಬೇಗಂ, ಅಣ್ಣ ಜಾಫರ್, ಅತ್ತಿಗೆ ಸಮೀನಾ, ಅಕ್ಕ ಆಯೇಷಾ ಬಾನು, ಆಕೆ ಪುತ್ರ ಸೈಯದ್ ಕಲೀಲ್ ವಿರುದ್ಧ ಹಣ ದುರ್ಬಳಕೆ ಆರೋಪ ಕೇಳಿ ಬಂದಿದೆ. …
Read More »ನಿಖಿಲ್ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆಎಲ್ಲರೂ ಸೇರಿ ನಮ್ಮನ್ನು ಸೋಲಿಸಬೇಕೆಂದು ನಿರ್ಧರಿಸಿಯೇ ಸೋಲಿಸಿದರು.: H.D.K.
ಮಂಡ್ಯ: ಜಿಲ್ಲೆ ಮದ್ದೂರು ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಗನ ಸೋಲನ್ನು ನೆನೆದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ಭಾವುಕರಾದ್ದಾರೆ. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ಬೇಸರವಿಲ್ಲ. ರಾಜಕಾರಣಕ್ಕೆ ಬಂದಾಗಿನಿಂದ ಮಂಡ್ಯ ಜನರ ಜೊತೆ ನನ್ನ ಒಡನಾಟವಿದೆ. ಜಿಲ್ಲೆಯ ಜನರು ತುಂಬಾ ಮುಗ್ದರು. ಆದರೆ ಎಲ್ಲರೂ ಸೇರಿಕೊಂಡು ಮುಗಿಸಿ ಬಿಟ್ಟರು ಭಾವಕರಾದರು. ನಿಖಿಲ್ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆ. ಆದರೆ, ಎಲ್ಲರೂ ಸೇರಿ ನಿಖಿಲ್’ನನ್ನು ಚುನಾವಣೆಯಲ್ಲಿ ನಿಲ್ಲಿಸಿದರು. ಎಲ್ಲರೂ …
Read More »ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ.:H.D.K.
ಬೆಂಗಳೂರು: ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ. ಬಿಜೆಪಿ ಚುನಾವಣೆಯ ವಿಧಾನವೇ ಬೇರೆ ಇದೆ. ಅಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವುದು ಕಷ್ಟ ಎನ್ನುವ ಮೂಲಕ ಯುದ್ಧಕ್ಕೂ ಮೊದಲು ಶಸ್ತ್ರ ತ್ಯಾಗ ಮಾಡಿದಂತಾಗಿದೆ. ನಗರದಲ್ಲಿ ಮಾಧ್ಯಮದವರ ಪ್ರಶ್ನೆ ಪ್ರತಿಕ್ರಿಯಿಸಿ, ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ. ನಿಲ್ಲಿಸಿದರು ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಮುಂದೆ ಗೆಲ್ಲುವುದು ಕಷ್ಠ. ಆದ ಕಾರಣ ಅಭ್ಯರ್ಥಿಗಳನ್ನು ನಿಲ್ಲಿಸುವ ಯೋಚನೆ ಮಾಡಿಲ್ಲ ಎಂದಿದ್ದಾರೆ. ನಮ್ಮ ಅಭಿಪ್ರಾಯದೊಂದಿಗೆ ಪಕ್ಷದ …
Read More »ಶೀಘ್ರದಲ್ಲೇ ಮೀನು ಕ್ವಾರಂಟೈನ್ ಘಟಕ: ಸಿಎಂ ಬಿಎಸ್‌ವೈ
ಬೆಂಗಳೂರು,ನ.21- ಮೀನುಗಾರಿಕೆ ಕ್ಷೇತ್ರದಲ್ಲಿ ವ್ಯಾವಹಾರಿಕ ಶಿಸ್ತು ಹಾಗೂ ರಫ್ತು ವಹಿವಾಟು ಉತ್ತೇಜಿಸುವ ಉದ್ದೇಶದಿಂದ ಶೀಘ್ರದಲ್ಲಿಯೇ ಬೆಂಗಳೂರು ಸಮೀಪದ ಹೆಸರುಘಟ್ಟ ಮೀನುಮರಿ ಉತ್ಪಾದನಾ ಕೇಂದ್ರದಲ್ಲಿ ಒಂದು ಮಾದರಿ, ಸುಸಜ್ಜಿತ ಕ್ವಾರಂಟೇನ್ ಘಟಕವನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಉದ್ಘಾಟಿಸಿಮಾತನಾಡಿದ ಅವರು, ರಾಜ್ಯದಲ್ಲಿ ಅಲಂಕಾರಿಕ ಮೀನು ಉತ್ಪಾದನೆ ಹಾಗೂ ಮಾರಾಟ ಚಟುವಟಿಕೆಯು ಇತ್ತೀಚೆಗೆ ಪ್ರವರ್ಧಮಾನಕ್ಕೆ ಬರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. …
Read More »ಮಹಿಳಾ ಕಂಡಕ್ಟರ್‍ಗಳಿಗೆ ಸ್ವರಕ್ಷಣಾ ತರಬೇತಿ ನೀಡಲು ಬಿಎಂಟಿಸಿ ಮುಂದಾಗಿದೆ.
ಬೆಂಗಳೂರು: ಮಹಿಳಾ ಕಂಡಕ್ಟರ್‍ಗಳಿಗೆ ಸ್ವರಕ್ಷಣಾ ತರಬೇತಿ ನೀಡಲು ಬಿಎಂಟಿಸಿ ಮುಂದಾಗಿದೆ. ಇನ್ನು ಮುಂದೆ ಮಾರ್ಷಲ್ ಆಟ್ರ್ಸ್, ಕರಾಟೆಯನ್ನು ಲೇಡಿ ಕಂಡಕ್ಟರ್‍ಗಳು ಕಲಿಯಲಿದ್ದಾರೆ. ಬಿಎಂಟಿಸಿ ಲೇಡಿ ಕಂಡಕ್ಟರ್ ತಂಟೆಗೆ ಬರೋ ಮುನ್ನ ಹುಷಾರ್ ಆಗಿರಬೇಕು. ಬಸ್‍ಗಳಲ್ಲಿ ಬೇಕಾ ಬಿಟ್ಟಿಯಾಗಿ ವರ್ತಿಸುವ ಮುನ್ನ ಎಚ್ಚರಿಕೆ ವಹಿಸುವುದು ಒಳ್ಳೆಯದು. ಯಾಕೆಂದರೆ ಮಾರ್ಷಲ್ ಆಟ್ರ್ಸ್, ಕರಾಟೆ, ಸಮರ ಕಲೆಗಳಲ್ಲಿ ಬಿಎಂಟಿಸಿಯ ಲೇಡಿ ಕಂಡಕ್ಟರ್ ಎಕ್ಸ್ ಪರ್ಟ್ಸ್ ಆಗಲಿದ್ದಾರೆ. ಮಹಿಳಾ ಕಂಡಕ್ಟರ್ ಗಳಿಗೆ ಸ್ವರಕ್ಷಣೆ ತರಬೇತಿ ನೀಡಲು …
Read More »ಈ ಬಾರಿ ಆನ್‍ಲೈನ್‍ನಲ್ಲಿ ಚಿತ್ರಸಂತೆ
ಬೆಂಗಳೂರು, ನ.21- ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅನೇಕ ನಿರ್ಬಂಧ ಗಳಿರುವುದರಿಂದ 18ನೇ ಚಿತ್ರಸಂತೆಯನ್ನು ಆನ್‍ಲೈನ್ ಮೂಲಕ ನಡೆಸಲಾಗುವುದು ಎಂದು ಕರ್ನಾಟಕ ಚಿತ್ರಕಲಾ ಪರಿಷತ್‍ನ ಅಧ್ಯಕ್ಷ ಬಿ.ಎಲ್.ಶಂಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 3ರಂದು ಆನ್‍ಲೈನ್ ಮೂಲಕ ಚಿತ್ರಸಂತೆ ಉದ್ಘಾಟಿಸಲಾಗುವುದು. ಚಿತ್ರಕಲಾ ಪರಿಷತ್ ಸ್ಥಾಪನೆಯಾಗಿ 60 ವರ್ಷವಾಗಿರುವ ಹಿನ್ನೆಲೆಯಲ್ಲಿ ವಜ್ರಮಹೋತ್ಸವದ ವರ್ಷಾಚರಣೆಯ ಅಂಗವಾಗಿ ಕಲೆಗೆ ಸಂಬಂಸಿದಂತೆ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುವುದು ಎಂದರು. 18ನೇ ಚಿತ್ರಸಂತೆಯನ್ನು ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, …
Read More »ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಧಾರವಾಡ ಉಪನಗರ ಠಾಣೆಗೆ ಬೆಳಗ್ಗೆ 11 ಗಂಟೆಗೆ ಆಗಮಿಸಿದ್ದ ವಿಜಯ್ ಕುಲಕರ್ಣಿ, ಸಂಜೆ 7 ಗಂಟೆಗೆ ವಿಚಾರಣೆ ಎದುರಿಸಿ ಠಾಣೆಯಿಂದ ಹೊರ ಬಂದರು. ಈ ವೇಳೆ ಮಾಧ್ಯಮದವರು ಪ್ರಶ್ನೆ ಕೇಳಲು ಮುಂದಾದಾಗ ಕೊಲೆ ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ಹೇಳಿ …
Read More »ಸಿಎಂ ಭೇಟಿಗಾಗಿ 80 ಕಿ.ಮೀ. ಪಾದಯಾತ್ರೆ: ರೈತರ ನಿರ್ಧಾರ
ಚಾಮರಾಜನಗರ: ಜಿಲ್ಲೆಯ ನೂರಾರು ರೈತರು ನವೆಂಬರ್ 24ರಂದು ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಜಿಲ್ಲೆಯ ಏಕೈಕ ಸಕ್ಕರೆ ಕಾರ್ಖಾನೆಯಾದ ಕೊಳ್ಳೇಗಾಲ ತಾಲೂಕು ಕುಂತೂರಿನಲ್ಲಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುವುದು ಇದರ ಉದ್ದೇಶವಾಗಿದೆ. ನವೆಂಬರ್ 25 ಹಾಗೂ 26ರಂದು ಮುಖ್ಯಮಂತ್ರಿ ಯಡಿಯೂರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ …
Read More »ಉಗ್ರ ಚಟುವಟಿಕೆಗಳ ಹಿಂದೆ ಗುಪ್ಕಾರ್ ಗ್ಯಾಂಗ್ ಕುಮ್ಮಕ್ಕಿದೆ: ಪ್ರಹ್ಲಾದ್ ಜೋಶಿ
ಧಾರವಾಡ: ಕಾಶ್ಮೀರದಲ್ಲಿ ಉಗ್ರರ ಪಡೆಯನ್ನು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ. ಇಂತಹ ದೇಶದ್ರೋಹಿ ಉಗ್ರ ಚಟುವಟಿಕೆಗಳ ಹಿಂದೆ ಗುಪ್ಕಾರ್ ಗ್ಯಾಂಗ್ ಕುಮ್ಮಕ್ಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗ್ಯಾಂಗ್ ಜೊತೆಗಿರುವ ಪಕ್ಷಗಳ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ. ಗುಪ್ಕಾರ್ ಜೊತೆಗಿನ ಸಂಬಂಧದ ಬಗ್ಗೆ ಕಾಂಗ್ರೆಸ್ ಸ್ಪಷ್ಟಪಡಿಸಬೇಕು. ಏ ರಿಸ್ತಾ ಕ್ಯಾ ಕೆಹತಾ ಹೈ ಎಂದು ಕಾಂಗ್ರೆಸ್ ಹೇಳಬೇಕು. ತಾಯಿಗೆ ಹುಷಾರಿಲ್ಲ ಎಂದು …
Read More »ಹಾವೇರಿರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ‘ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ
ಹಾವೇರಿ: ನಗರದ ರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ‘ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಹಾವೇರಿ ರೈಲ್ವೆ ನಿಲ್ದಾಣಕ್ಕೆ ನೂತನವಾಗಿ `ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ ಮಾಡಿರುವುದು ಜಿಲ್ಲೆಯ ಜನತೆಗೆ ಸಂತಸ ತಂದಿದೆ. ಇದು ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷರ ಗುಂಡಿಗೆ ಬಲಿಯಾದ ಹುತಾತ್ಮ ಮಹದೇವಪ್ಪ ಮೈಲಾರ ಅವರು ಈ ನೆಲದ ಹೆಮ್ಮೆ. ಇಂತಹ …
Read More »