Breaking News

20 ಅಡಿ ಎತ್ತರದಿಂದ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ, ಎಲ್ಲಿ?

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಚಲಿಸುತ್ತಿದ್ದ ಕಾರು ಕೆಳಗೆ ಬಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹಾರೂಗೇರಿಯಿಂದ ಬೆಳಗಾವಿಗೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಮುಖ್ಯವಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನದಿಗಳ ಪ್ರಕೋಪ ಹೆಚ್ಚಿದ್ದು ಅನೇಕ ಸಣ್ಣ ಸೇತುವೆಗಳು ಮುಳುಗಡೆಯಾಗಿದೆ. ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಇದೇ ವೇಳೆ ಕಾವೇರಿ ಅಣೆಕಟ್ಟೆಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಸುಪ್ರಸಿದ್ಧ ರಂಗನತಿಟ್ಟು ಪಕ್ಷಧಾಮಕ್ಕೆ ಸಹಾ ನೀರು ನುಗ್ಗಿ …

Read More »

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 9 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.

ಕೊಡಗಿನಲ್ಲಿ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದ್ದು, ನಾಲ್ಕೈದು ದಿನ ಸುರಿದ ಮಳೆಗೆ ಕೊಡಗಿನ ಜನರು ಕಂಗಾಲಾಗಿದ್ದಾರೆ. ಹೀಗಾಗಿ, ಇಂದು ಬೆಳಗ್ಗೆಯಿಂದ ಆ. 11ರ ಬೆಳಗ್ಗೆಯವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಡಗಿನಲ್ಲಿ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿಪಾತ್ರದ ಭಾಗದಲ್ಲಿ ಮತ್ತು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾಗಮಂಡಲದ ಬ್ರಹ್ಮಗಿರಿಯಲ್ಲಿ ಗುಡ್ಡವೇ ಕುಸಿದು, ತಲಕಾವೇರಿ ಅರ್ಚಕರ ಮನೆ, ಕುಟುಂಬ, ಹಸುಗಳು ಜಲಸಮಾಧಿಯಾಗಿವೆ. ಎಸ್​ಡಿಆರ್​ಎಫ್​ ತಂಡಗಳು ಈಗಾಗಲೇ ಕೊಡಗಿನಲ್ಲಿ …

Read More »

ರಾಜ್ಯದಲ್ಲಿ 48 ಗಂಟೆಗಳಲ್ಲಿ ಭಾರಿ ಮಳೆ !

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ಕರ್ನಾಟಕದಲ್ಲಿ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆಗಸ್ಟ್ 7 ರಂದು ಕರವಾಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯಕ್ಕೆ ಮುಂಗಾರು ಪ್ರವೇಶ, ಮೊದಲ ದಿನವೇ 4 …

Read More »

ಧಾರವಾಡ ಜಿಲ್ಲೆ: ವರುಣ ನರ್ತನ 8 ವರ್ಷದ ಬಾಲಕಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ

ಧಾರವಾಡ: ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಶೀತ ಗಾಳಿಯೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದೆ. ‌ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ ಕೆರೆ ತುಂಬಿ ಹರಿದು 3ನೇ ತರಗತಿಯ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ ಕೋಡಿ ಬಿದ್ದಿದ್ದ ಗಂಜಿಗಟ್ಟಿ ಕೆರೆ ನೀರಿನಲ್ಲಿ ಕೊಚ್ಚಿ ಹೋಗಿರುವ ಬಾಲಕಿಯ ಮೃತದೇಹದ ಪತ್ತೆಗೆ ಎನ್‌ಡಿ‌ಆರ್‌ಎಫ್ ತಂಡ ತೀವ್ರ ಹುಡುಕಾಟ ನಡೆಸುತ್ತಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿ ನ ಗಂಜಿಗಟ್ಟಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಎಂಟು …

Read More »

ತುರ್ತು ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಬದ್ಧ : ಜೊಲ್ಲೆ

: ಚಿಕ್ಕೋಡಿ: ಕೊಂಕಣ ಭಾಗದಲ್ಲಿ ಅತಿಯಾದ ಮಳೆಯಿಂದ ಉಂಟಾಗುವ ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಶೀಘ್ರ ಕೊಲ್ಲಾಪುರ ಜಿಲ್ಲೆಯ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಹಾರಾಷ್ಟ್ರದ ಜಲಾಶಯಗಳಿಂದ ಬೀಡುವ ನೀರಿನ ಪ್ರಮಾಣದ ಕುರಿತು ಮಾಹಿತಿ ಪಡೆಯಲಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಶುಕ್ರವಾರ ಸದಲಗಾ ಪಟ್ಟಣದ ದೂಧಗಂಗಾ ನದಿಯ ಸಂಭವನೀಯ ಪ್ರವಾಹ ಅವಲೋಕಿಸಿ ಮಾತನಾಡಿ, ಉಕ್ಕಿ ಹರಿಯುತ್ತಿರುವ ದೂಧಗಂಗಾ ನದಿ ನೀರಿನಿಂದ ಜನಸಾಮಾನ್ಯರಿಗೆ ಯಾವುದೇ ರೀತಿಯ …

Read More »

ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ.

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಘಟ್ಟ ಪ್ರದೇಶ, ಚಿಕ್ಕಮಗಳೂರು ಭಾಗಳಿಂದ ಹರಿದು ಬರುತ್ತಿರುವ ನೀರಿನಿಂದಾಗಿ ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ. ಚಾರ್ಮಾಡಿಯ ಅಂತರ, ಕೊಳಂಬೆ, ಅರಣೆಪಾದೆ, ಪರ್ಲಾಣಿ, ಹೊಸಮನೆ, ಕುಕ್ಕಾವು, ಕಕ್ಕೆನಾಜೆಯಲ್ಲಿ ಮೃತ್ಯುಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸೇತುವೆಗಳು ಮತ್ತು ಕಿಂಡಿ ಅಣೆಕಟ್ಟುಗಳಲ್ಲಿ ಬೃಹತ್ ಮರದ ದಿಮ್ಮಿಗಳು, ಕಸ ಬಂದು ಸಿಲುಕುತ್ತಿದೆ. ಇದರಿಂದಾಗಿ ಸೇತುವೆಯ ಅಂಚಿನ ಮಣ್ಣು ರಸ್ತೆ ಸಮೇತ ಕೊಚ್ಚಿಕೊಂಡು ಹೋಗಿದೆ. …

Read More »

ಬೆಳಗಾವಿ : ನೂರಾರು ಎಕರೆ ಪ್ರದೇಶದಲ್ಲಿನ ಕಬ್ಬು ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ.

ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿನ ಅಣೆಕಟ್ಟುಗಳಿಂದ ಹೆಚ್ಚು ನೀರು ಬಿಡುಗಡೆಯ ಕಾರಣ ಜಿಲ್ಲೆಯಲ್ಲಿ ಕೃಷ್ಣ ನದಿ ಮತ್ತು ಅದರ ಉಪನದಿಗಳು ಜಿಲ್ಲೆಯಲ್ಲಿ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಕೃಷ್ಣಾನದಿಗೆ ಒಳಹರಿವಿನ ಪ್ರಮಾಣ 1,62,139 ಕ್ಯೂಸೆಕ್‌ಗಳಿಗೆ ಏರಿಕೆಯಾಗಿದೆ. ಇದರಿಂದ ಅನೇಕ ಜಿಲ್ಲೆಯ ಅನೇಕ ಸೇತುವೆಗಳು ರಸ್ತೆಗಳು ನೀರಿನಲ್ಲಿ ಮುಳುಗಿದೆ. ನೂರಾರು ಎಕರೆ ಪ್ರದೇಶದಲ್ಲಿನ ಕಬ್ಬು ಭತ್ತದ ಬೆಳೆ ನಿರಿನಲ್ಲಿ ಮುಳುಗಿದೆ. ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿನ ಅಣೆಕಟ್ಟುಗಳಿಂದ ಹೆಚ್ಚು …

Read More »

ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ ಮಳೆ ದಾಖಲು : 24 ಗಂಟೆಯಲ್ಲಿ ಘಟಪ್ರಭೆಗೆ ಹರಿದು ಬಂತು 4 ಟಿಎಂಸಿ ನೀರು..!

ಬೆಂಗಳೂರು/ಉಡುಪಿ/ಬೆಳಗಾವಿ : ರಾಜ್ಯದಲ್ಲಿ ಮಳೆರಾಯನ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಘಟ್ಟಪ್ರದೇಶಗಳಲ್ಲಿ ಈಗಲೂ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆ ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ 208.5 ಮಿಮೀ ನಷ್ಟು ಮಳೆ ದಾಖಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಇದು ರಾಜ್ಯದಲ್ಲೇ ಅತ್ಯಂತ ಹೆಚ್ಚು ಮಳೆಯಾದ ಪ್ರದೇಶವಾಗಿದೆ. …

Read More »

8 ಐಪಿಎಸ್ ಅಧಿಕಾರಿಗಳ ಟ್ರಾನ್ಸ್ ಫರ್; ಡಿವೈಎಸ್‌ಪಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಡಿವೈಎಸ್‌ಪಿ (ಸಿವಿಲ್) ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ಎಸ್‌.ಪಿ. (ಸಿವಿಲ್, ನಾನ್ ಐಪಿಎಸ್) ವೃಂದಕ್ಕೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಎಸ್‌.ಟಿ.ಸಿದ್ದಲಿಂಗಪ್ಪ ಅವರನ್ನು ರಾಜ್ಯ ಗುಪ್ತವಾರ್ತೆ ಪೊಲೀಸ್ ಅಧೀಕ್ಷಕರಾಗಿ, ಮುಹಮ್ಮದ್ ಹುಸೇನ್ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಬಸಪ್ಪ ಎಸ್.ಅಂಗಡಿ ಅವರನ್ನು ಬೆಂಗಳೂರು ನಗರ ಅಪರಾಧ-2ರ ಉಪ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ.   ಬಿ.ಎಲ್.ವೇಣುಗೋಪಾಲ್ ಅವರನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಗುರುನಾಥ್ ಬಿ.ಮತ್ತೂರು ಅವರನ್ನು ಬಳ್ಳಾರಿ ಭ್ರಷ್ಟಾಚಾರ …

Read More »