Breaking News

ಅಥಣಿ ಹೆಸ್ಕಾಂನಲ್ಲಿ ಭಾರಿ ಭ್ರಷ್ಟಾಚಾರ!

ಅಥಣಿ: ಪಟ್ಟಣ ಮತ್ತು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಹಾಗೂ ನಿರ್ಮಾಣಗೊಂಡ ನೂತನ ಬಡಾವಣೆಗಳಿಗೆ ವಿದ್ಯುತ್‌ ಸಂಪರ್ಕ ನೀಡುವಾಗ ಸಾಕಷ್ಟು ಅವ್ಯವಹಾರ ನಡೆದ ಬಗ್ಗೆ ಸಾರ್ವಜನಿಕರಿಂದ ಚಿಕ್ಕೋಡಿಯ ಹೆಸ್ಕಾಂ ಜಾಗೃತದಳ ಪೊಲೀಸ್‌ ಠಾಣೆಗೆ ದೂರು ಹೋಗಿದ್ದವು. ಆ ದೂರುಗಳನ್ನಾಧರಿಸಿ ಹೆಸ್ಕಾಂ ಜಾಗೃತದಳ ಪರಿಶೀಲನೆ ನಡೆಸಿ, ಮೇಲ್ನೋಟಕ್ಕೆ ಅವ್ಯವಹಾರ ಕಂಡು ಬಂದಿದ್ದರಿಂದ ಕೆಲವು ಅಂಶಗಳ ಮಾಹಿತಿ ಕೋರಿ ನೋಟಿಸ್‌ ನೀಡಿದೆ. ಯಾವುದೇ ಪೂರ್ವಾನುಮತಿ ಇಲ್ಲದೆ ನೇರವಾಗಿ ಬಡಾವಣೆಗಳಿಗೆ ವಿದ್ಯುತ್‌ ಸಂಪರ್ಕ …

Read More »

14 ದಿನ ಲಾಕ್ ಡೌನ್ ಹಿನ್ನೆಲೆ..ಗೋಕಾಕನಲ್ಲಿ‌ ಮಧ್ಯಾಹ್ನವೇ ಅಂಗಡಿ-ಮುಂಗಟ್ಟು ಬಂದ್

ಸರಕಾರದ ಕೊರಾನಾ ಹೊಸ ಮಾರ್ಗಸೂಚಿ ಬೆನ್ನಲ್ಲೆ ಗೋಕಾಕದಲ್ಲಿ ಅಂಗಡಿ ಮುಗ್ಗಟುಗಳನ್ನು ಬಂದ್ ಮಾಡಿಸಲು ಮುಂದಾದ ಪೋಲಿಸ್ ಮತ್ತು ನಗರಸಭೆ ಅಧಿಕಾರಿಗಳು. ಹೌದು ಕೊರಾನಾ2ಅಲೆಯು ತನ್ನ ಅಟ್ಟಹಾಸವನ್ನು ದಿನದಿನಕ್ಕೂ ಸಾವು ಪಡೆಯಯತ್ತಿರುವುದು ಒಂದು ಕಡೆಯಾದರೆ ಇನ್ನೊಂದು ಕಡೆ ಸಾರ್ವಜನಿಕರು ಕೊರಾನಾ ಬಗ್ಗೆ ನಿರ್ಲಕ್ಷ ವಹಿಸುತ್ತಿರುವುದು ಇನ್ನೊಂದು ಕಡೆ, ಹೇಗಾದರೂ ಮಾಡಿ ಕೊರಾನಾದಿಂದ ಸರಕಾರ ಸಾರ್ವಜನಿಕರನ್ನು ರಕ್ಷಿಸಲು ಹೊಸ ಮಾರ್ಗಸೂಚಿ ಸಂಜೆಯಿಂದ ಅನ್ವಯವಾಗಲೆಂದು ಬಿಡುಗಡೆ ಮಾಡಿತ್ತು, ಆದರೆ ಗೋಕಾಕ ನಗರದಲ್ಲಿ ಇವತ್ತು ಸಂಜೆ …

Read More »

ʼಲಾಕ್‌ ಡೌನ್ʼ ಭೀತಿಯಿಂದ ಬೆಂಗಳೂರು ತೊರೆಯುತ್ತಿರುವ ಜನ

ರಾಜ್ಯದಲ್ಲಿ ಕೊರೊನಾ ವೈರಸ್​ ತಾಂಡವವಾಡ್ತಿದೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಡ್ಲಿ ವೈರಸ್​ ಕಾಟ ಮಿತಿಮೀರಿದೆ. ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್​ಡೌನ್​ ಹೇರಿದ್ದು ರಾಜ್ಯ ರಾಜಧಾನಿಯ ಬಹುತೇಕ ಮಂದಿ ಕಳೆದ ವರ್ಷದಂತೆಯೇ ಈ ವರ್ಷವೂ ಸಹ ತವರೂರಿಗೆ ವಾಪಸ್ಸಾಗ್ತಾ ಇದ್ದಾರೆ. ಕೊರೊನಾ ಬಂದರೆ ವೈದ್ಯಕೀಯ ಸೌಲಭ್ಯ ಸಿಗದೇ ಹೋದರೆ ಎನ್ನುವ ಭಯ, ಲಾಕ್​ಡೌನ್​ನಿಂದಾಗಿ ಹೊಟ್ಟೆಪಾಡು ಹೇಗೆ ಎಂಬ ಆತಂಕ ಈ ಎಲ್ಲಾ ಕಾರಣಗಳಿಂದಾಗಿ ಬೆಂಗಳೂರಿನ ಬಹುತೇಕ ಮಂದಿ ಊರು ಖಾಲಿ …

Read More »

ಕಳ್ಳರು ರಾತ್ರೋರಾತ್ರಿ ಎಟಿಎಂ ಮಷಿನ್​ಅನ್ನೇ ಕದ್ದು, ಸಿಸಿಟಿವಿಯನ್ನು ಧ್ವಂಸಗೊಳಿಸಿ ಪರಾರಿ

ಬೀದರ್: ಕಳ್ಳರು ರಾತ್ರೋರಾತ್ರಿ ಎಟಿಎಂ ಮಷಿನ್​ಅನ್ನೇ ಕದ್ದು, ಸಿಸಿಟಿವಿಯನ್ನು ಧ್ವಂಸಗೊಳಿಸಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಔರಾದ್ ಪಟ್ಟಣದ ಉಪ್ಪೇ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಪೆಟ್ರೋಲ್​​ ಬಂಕ್​ ಎದುರಿನ ಇಂಡಿ ಕ್ಯಾಶ್​ ಎಟಿಎಂ ಮಷಿನ್​ ಕಳೆದ ರಾತ್ರಿ ಕಳ್ಳತನವಾಗಿದೆ. ಕಳ್ಳರು ಯಂತ್ರವನ್ನೇ ಕದ್ದೊಯ್ದಿದ್ದಾರೆ.ಕಳ್ಳರು ಇದಕ್ಕೂ ಮೊದಲು ಸಿಸಿಟಿವಿಗಳನ್ನು ಧ್ವಂಸಗೊಳಿಸಿದ್ದಾರೆ. ದೃಶ್ಯಗಳನ್ನು ನೋಡಿದ್ರೆ ಹಗ್ಗದ ಒಂದು ಬದಿ ವಾಹನಕ್ಕೆ ಕಟ್ಟಿ ಮತ್ತೊಂದು ಬದಿ ಎಟಿಎಂ ಮಷಿನ್​ಗೆ ಕಟ್ಟಿ ಕದ್ದೊಯ್ದಿರುವ ಶಂಕೆ ಮೂಡುತ್ತಿದೆ.ಸುದ್ದಿ …

Read More »

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ

ಚಿಕ್ಕಬಳ್ಳಾಪುರ: ಮೂರು ತಿಂಗಳ ಗರ್ಭಿಣಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕಾಶಾಪುರ ಗ್ರಾಮದಲ್ಲಿ ನಡೆದಿದೆ. ಪವಿತ್ರ (22) ಮೃತ ಮಹಿಳೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ದುಗ್ಗಿನಾಯ್ಕನಪಲ್ಲಿ ನಿವಾಸಿ ಪವಿತ್ರಾಳನ್ನ ಇದೇ ಬಾಗೇಪಲ್ಲಿ ತಾಲೂಕಿನ ಕಾಶಪುರ ಗ್ರಾಮದ ಮಧು ಕಳೆದ 5 ತಿಂಗಳ ಹಿಂದೆ ಮದುವೆ ಮಾಡಿಕೊಂಡಿದ್ದ. ಮದುವೆಯಾದ ನಂತರ ಪವಿತ್ರಳ ಗಂಡ ಮಧು ಹಾಗೂ ಆಕೆಯ ಅತ್ತೆ ವರದಕ್ಷಿಣೆಗಾಗಿ ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಹಿಯಾಳಿಸಿ …

Read More »

ಸಚಿವನಾದ ನನಗೇ ಹೀಗಾದ್ರೆ ಜನಸಾಮಾನ್ಯರ ಪಾಡೇನು..? :ಎಂಟಿಬಿ ನಾಗರಾಜ್ ಪ್ರಶ್ನೆ

ನಿನ್ನೆ ನಡೆದ ಸಂಪುಟ ಸಭೆಯಯಲ್ಲಿ ಸಚಿವ ಎಂಟಿಬಿ ನಾಗರಾಜ್​ ಆರೋಗ್ಯ ಸಚಿವ ಸುಧಾಕರ್ ಕಾರ್ಯ ವೈಫಲ್ಯತೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. ಬೆಡ್ ಕೊಡಿಸಿ,ಆಸ್ಪತ್ರೆ ಸಿಗ್ತಿಲ್ಲ ಅಂತ ನನ್ನ ಕ್ಷೇತ್ರದಲ್ಲಿ ದಿನವೂ ಹಲವು ಕರೆಗಳು ಬರ್ತಿವೆ. ನಮ್ಮ ಸಂಬಂಧಿಕರಿಗೆ ಹಾಸಿಗೆ ಸಿಗದೇ ಪರದಾಡಿದ್ರು. ನಾನೇ ಖುದ್ದು ಆರೋಗ್ಯ ಸಚಿವರಿಗೆ ಮೂರು ಭಾರಿ ಕರೆ ಮಾಡಿದೆ. ಒಂದೇ ಒಂದು ಬೆಡ್ ಅಡ್ಜಸ್ಟ್ ಮಾಡೋಕೆ ಆಗಲಿಲ್ಲ. ಸಚಿವನಾದ ನನಗೇ ಹೀಗಾದ್ರೆ ಜನಸಾಮಾನ್ಯರ ಪಾಡೇನು..? …

Read More »

ಹೆಚ್ಚುವರಿ ಬಸ್​ ಬಿಟ್ಟ ಹಿನ್ನೆಲೆ: ಮೆಜೆಸ್ಟಿಕ್ ಬಳಿ ಭಾರೀ ಟ್ರಾಫಿಕ್ ಜಾಮ್

ಬೆಂಗಳೂರು: ನಿನ್ನೆ ಸಿಎಂ ಕ್ಲೋಸ್​​​ಡೌನ್​ ಅನೌನ್ಸ್​ ಮಾಡ್ತಿದ್ದಂತೆ ಬೆಂಗಳೂರಿನಲ್ಲಿ ಜೀವನ ಕಟ್ಟಿಕೊಂಡಿದ್ದ ಕೆಲವರು ಊರು ಬಿಡೋದಕ್ಕೆ ಶುರುಮಾಡಿದ್ದಾರೆ. ಇಂದು ರಾತ್ರಿಯಿಂದ ರಾಜ್ಯದಲ್ಲಿ ಕ್ಲೋಸ್​ಡೌನ್ ಜಾರಿಯಾಗಲಿದೆ. ಹೀಗಾಗಿ ಜನರು ಕುಟುಂಬಸಮೇತ, ಗಂಟು ಮೂಟೆ ಕಟ್ಟಿಕೊಂಡು ತಮ್ಮೂರಿನತ್ತ ತೆರಳುತ್ತಿದ್ದಾರೆ. ಹೀಗಾಗಿ ಮೂರು ಸಾರಿಗೆ ನಿಗಮಗಳಿಂದ 12 ಸಾವಿರಕ್ಕೂ ಅಧಿಕ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿ ಕೆಎಸ್​​ಆರ್​ಟಿಸಿ ಬಸ್​ಗಳನ್ನ ಬಿಟ್ಟ ಹಿನ್ನೆಲೆ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳಗ್ಗೆ 5.30ರಿಂದ, ಮೆಜೆಸ್ಟಿಕ್ ಕೆಎಸ್​​ಆರ್​​ಟಿಸಿ ನಿಲ್ದಾಣದಿಂದ …

Read More »

ಚಿತ್ರರಂಗಗಳ ಮೇಲೆ ಪರಿಣಾಮ ಬೀರುತ್ತಿರುವ ಲಾಕ್ ಡೌನ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಗೋಷಿಸಿರುವ ಹಿನ್ನಲೆಯಲ್ಲಿ ಅನೇಕ ವಿಭಾಗಗಳಿಗೆ ತೊಂದರೆ ಆಗಿದ್ದು, ಸಿನೆಮಾ ಚಿತ್ರೀಕರಣದ ಮೇಲೆ ಸರ್ಕಾರ ನಿರ್ಬಂಧ ವಿಧಿಸಿದೆ ಎಂದು ವರದಿಯಾಗಿದೆ . ಇದರಿಂದ ಸಹಜವಾಗಿಯೇ ಧಾರವಾಹಿ ಮತ್ತು ಸಿನೆಮಾ ಚಿತ್ರೀಕರಣ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ . ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಕೆಲವೆ ಕೆಲವು ಚಟುವಟಿಕೆಗಳಿಗೆ ಮಾತ್ರ ಸರ್ಕಾರ ಅನುಮತಿ ನೀಡಿದೆ . ಇದರಲ್ಲಿ ಸಿನೆಮಾ ಶೂಟಿಂಗ್ ಸೇರಿಲ್ಲ . ಇದರಿಂದ ಸಹಜವಾಗಿಯೇ …

Read More »

14 ದಿನಗಳ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ರಾಜ್ಯ ಸರ್ಕಾರ ಇದೀಗ ಚಿತ್ರೀಕರಣವನ್ನು ಸಹ ಬಂದ್ ಮಾಡುವಂತೆ ಆದೇಶ

ಕೊರೊನಾ ಎರಡನೇ ತಡೆಯಲು ರಾಜ್ಯ ಸರ್ಕಾರವು 14 ದಿನಗಳ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ಮಾಡಿದೆ. ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ, ಬಹುಪಾಲು ವ್ಯಾಪಾರ ವಹಿವಾಟುಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ರಾಜ್ಯದಾದ್ಯಂತ ಚಿತ್ರಮಂದಿರಗಳನ್ನು ಈಗಾಗಲೇ ಬಂದ್ ಮಾಡಿರುವ ರಾಜ್ಯ ಸರ್ಕಾರ ಇದೀಗ ಚಿತ್ರೀಕರಣವನ್ನು ಸಹ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ. ಕೊರೊನಾ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ಹಲವು ಮಾರ್ಗಸೂಚಿಗಳನ್ನು ಹೊರಡಿಸಿರುವ ರಾಜ್ಯ ಸರ್ಕಾರ ಚಿತ್ರೀಕರಣದ ಮೇಲೆಯೂ ನಿರ್ಬಂಧ ಹೇರಿದೆ. ಸಿನಿಮಾ, ಧಾರಾವಾಹಿ, …

Read More »

ಆಸ್ಪತ್ರೆಗೆ ದಾಖಲಾದ 2-3 ದಿನಕ್ಕೆ ಜನ ಸಾಯುತ್ತಿದ್ದಾರೆ,ನಟ ಜಗ್ಗೇಶ್ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಟ್ವೀಟ್ ಮೂಲಕ ಪ್ರಶ್ನೆ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಂದ ದಿನಕ್ಕೆ ನೂರಾರು ಜನ ಸಾಯುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಹಿರಿಯ ನಟ ಜಗ್ಗೇಶ್ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಟ್ವೀಟ್ ಮೂಲಕ ಪ್ರಶ್ನೆ ಮಾಡಿ, ಆಸ್ಪತ್ರೆಗಳಲ್ಲಿ ಪಾರದರ್ಶಕತೆ ಇರಲಿ ಎಂದು ಹೇಳಿದ್ದಾರೆ. ಆಸ್ಪತ್ರೆಗೆ ದಾಖಲಾದ ಸೋಂಕಿತರು 2 ರಿಂದ 3 ದಿನಕ್ಕೆ ಸಾಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಏನಾಗುತ್ತಿದೆ ಎಂಬುದು ಸತ್ತವರ ಕುಟುಂಬದವರಿಗೆ ತಿಳಿಯುತ್ತಿಲ್ಲ ಎಂದು ಆಸ್ಪತ್ರೆಗಳ ಬಗ್ಗೆ ಅಸಮಧಾನ ಹೊರ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್ …

Read More »