Breaking News

ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ.

ಚಿಕ್ಕೋಡಿ: ಬೆಳೆಗಳೆಲ್ಲವೂ ಭರಪೂರ ಬಂದಿದ್ದು, ಇನ್ನೇನು ಕಟಾವು ಮಾಡಬೇಕೆಂದು ಕೆಲ ರೈತರು ಯೋಚಿಸಿದರೆ, ಕೆಲ ರೈತರು ಫಸಲಿಗೆ ಬಂದ ಬೆಳೆಗಳನ್ನು ಕಟಾವು‌ ಮಾಡಿ ರಾಶಿ ಮಾಡಲು ಮುಂದಾದ ಸಂದರ್ಭದಲ್ಲೇ ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳೆಯ ಜೊತೆಗೆ ಗಾಳಿಯೂ ಸಹಿತ ಜೋರಾಗಿ ಬೀಸುತ್ತಿರುವ ಪರಿಣಾಮ ಗೋವಿನ ಜೋಳ ಹಾಗೂ ಕಬ್ಬಿನ ಬೆಳೆ ನೆಲಸಮವಾಗಿವೆ. ಈ ಬಾರಿ ಮಳೆ …

Read More »

ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವಂತೆಕೂಡಲ ಸಂಗಮ ಧರ್ಮಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ ಆಗ್ರಹ

ಧಾರವಾಡ: ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವಂತೆ ಬಾಗಲಕೋಟೆಯ ಕೂಡಲ ಸಂಗಮ ಧರ್ಮಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಾಗಡಿ ತಾಲೂಕಿನ ಅತ್ಯಾಚಾರ ಪ್ರಕರಣ ನಡೆದ ವಿಚಾರವಾಗಿ ಧಾರವಾಡದಲ್ಲಿ ಮಾತನಾಡುವ ವೇಳೆ ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿದ ಅವರು, ಪೊಲೀಸರು ಬಂಧಿಸೋದು, ಜಾಮೀನು ಕೊಡವುದು ಆಗಬಾರದು. ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವ ಕಾನೂನು ಬರಬೇಕು ಎಂದರು ಈ ರೀತಿ ಮಾಡಿದರೆ ಮಾತ್ರ ಭಾರತದಲ್ಲಿ ಅತ್ಯಾಚಾರ ಕಡಿಮೆ ಆಗುತ್ತವೆ ಎಂದ ಅವರು, ಹೆಣ್ಣು …

Read More »

ಜಗನ್‌ಮೋಹನ್ರೆಡ್ಡಿ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅನರ್ಹರೆಂದು ಪರಿಗಣಿಸಬೇಕೆಂದು ಪಿಐಎಲ್‌

ಹೊಸದಿಲ್ಲಿ :  ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಕೋರಿ  ಜಿ.ಎಸ್. ಮಣಿ ಹಾಗೂ ಪ್ರದೀಪ್ ಕುಮಾರ್ ಯಾದವ್ ಎಂಬ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ಹಾಲಿ ನ್ಯಾಯಾಧೀಶರಾದ ಜಸ್ಟಿಸ್ ಎನ್.ವಿ. ರಮಣ ವಿರುದ್ಧ ಸಿಎಂ ಹಗರಣದ ಆರೋಪ ಹೊರಿಸಿರುವ  ಹಿನ್ನೆಲೆಯಲ್ಲಿ ಅರ್ಜಿ ಅಲ್ಲಿಸಿದ್ದಾರೆ. ಜಗನ್ ರೆಡ್ಡಿ ಸ್ವಯಂ ಅಕ್ರಮ ಹಣ ವರ್ಗಾವಣೆ ಹಾಗೂ ಭ್ರಷ್ಟಾಚಾರ ಸೇರಿ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಹಾಲಿ ನ್ಯಾಯಾಧೀಶರ …

Read More »

ರಾಜ್ಯಾದ್ಯಂತ   ಭಾರೀ ಮಳೆಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್:B.S.Y.

ಬೆಂಗಳೂರು:  ರಾಜ್ಯಾದ್ಯಂತ   ಭಾರೀ ಮಳೆಯಾಗುತ್ತಿರುವ ಹಿನ್ನೆಲೆ  ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್ ಮೂಲಕ ಮಾಹಿತಿ ಪಡೆದುಕೊಳ್ಳುವುದಾಗಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು,  ಈಗಾಗಲೇ ಅಗತ್ಯ ಕ್ರಮಕೈಗೊಳ್ಳಲು  ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಣ ಕೂಡ ಬಿಡುಗಡೆ ಮಾಡಲಾಗಿದೆ. ಪ್ರವಾಹ ಪರಿಸ್ಥಿತಿ  ಸ್ಥಳಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೂ ಸೂಚನೆ ನೀಡಿದ್ದೇನೆ. ಅದರಂತೆ ಸಚಿವರು ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲಿದ್ದಾರೆ ಎಂದರು.

Read More »

ಹುಕ್ಕೇರಿ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟಿ ಅವರ  ಅಳಿಯನ  ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಮಂಗಳವಾರ ರಾತ್ರಿ  ಗಲಾಟೆ

ಬೆಳಗಾವಿ:   ಹುಕ್ಕೇರಿ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟಿ ಅವರ  ಅಳಿಯನ  ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಮಂಗಳವಾರ ರಾತ್ರಿ  ಗಲಾಟೆ ನಡೆದ್ದು,  ಸದ್ಯ ಪ್ರಕರಣ ಸಂಬಂಧ ದೂರು ಪ್ರತಿ ದೂರು ದಾಖಲಾಗಿದೆ.  ಸಿಪಿಐ ಗುರುರಾಜ್ ವ್ಯಕ್ತಿಯೊಬ್ಬರಿಗೆ ರಿವಾಲ್ವಾನ್ ತೋರಿಸಿ ಬೆದರಿಕೆ ಹಾಕಿರುವ  ಆರೋಪವೂ  ಕೇಳಿ ಬಂದಿದೆ. ಘಟನೆ ಹಿನ್ನೆಲೆ? ಮಂಗಳವಾರ ರಾತ್ರಿ ಹುಕ್ಕೇರಿ ಸಿಪಿಐ  ಗುರುರಾಜ್ ಕಲ್ಯಾಣಶೆಟ್ಟಿ ತಮ್ಮ ಮಗನ  ಜನುಮ ದಿನದ ಹಿನ್ನೆಲೆಯಲ್ಲಿ ಕುಟುಂಬಸ್ಥರೊಂದಿಗೆ ಜಾಂಬೋಟಿ ಬಳಿ  ರೆಸಾರ್ಟ್ …

Read More »

ಮೂರನೇ ಮದುವೆಯಾದ WWE ಸೂಪರ್ ಸ್ಟಾರ್ ಜಾನ್ ಸಿನಾ

ಫ್ಲೋರಿಡಾ: ಡಬ್ಯ್ಲುಡಬ್ಯ್ಲುಇ ಸೂಪರ್ ಸ್ಟಾರ್ ಜಾನ್ ಸಿನಾ ಅವರು ಮೂರನೇ ಬಾರಿಗೆ ವಿವಾಹವಾಗಿದ್ದು, ತಮ್ಮ ಗೆಳತಿ ಶೇ ಶರಿಯತ್‍ಜಾಡೆ ಅವರನ್ನು ವರಿಸಿದ್ದಾರೆ.ಜಾನ್ ಸಿನಾ ಮದುವೆಯಾಗಿರುವುದನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೆ ಫ್ಲೋರಿಡಾದ ಸುದ್ದಿ ಮಾಧ್ಯಮಗಳು ಜಾನ್ ಸಿನಾ ಮತ್ತು ಶೇ ಶರಿಯತ್‍ಜಾಡೆ ಅವರು ಬುಧವಾರ ನಡೆದ ಸರಳ ಮತ್ತು ಶಾಂತ ರೀತಿಯ ಮದುವೆ ಕಾರ್ಯಕ್ರಮದಲ್ಲಿ ವಿವಾಹವಾಗಿದ್ದಾರೆ ಎಂದು ವರದಿ ಮಾಡಿವೆ. ಸಿನಾ ತನಗಿಂತ 12 ವರ್ಷ ಚಿಕ್ಕವರಾದ ಶೇ ಶರಿಯತ್‍ಜಾಡೆ …

Read More »

ರಾಗಿಣಿಗೆ ಬೆನ್ನು ನೋವು- ಜೈಲಿನ ಆಸ್ಪತ್ರೆಯಲ್ಲಿ ರಾತ್ರಿ ಪೂರ್ತಿ ಚಿಕಿತ್ಸೆ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ರಾಗಿಣಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆಯಂತೆ. ಹೀಗಾಗಿ ರಾತ್ರಿ ಪೂರ್ತಿ ಗೋಳಾಡಿದ್ದು, ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ರಾಗಿಣಿ, ರಾತ್ರಿಯಿಂದ ಹೆಚ್ಚು ಬೆನ್ನು ನೋವು ಎಂದು ಜೈಲಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಅಲ್ಲದೆ ತುರ್ತಾಗಿ ನನ್ನನ್ನು ಆಸ್ಪತ್ರೆಗೆ ಸೇರಿಸಿ, ಆಗುತ್ತಿಲ್ಲ ಎಂದು ಗೋಳಾಡಿದ್ದಾರೆ. ನಂತರ ಜೈಲಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ರಾತ್ರಿ ಪೂರ್ತಿ ಚಿಕಿತ್ಸೆ ಪಡೆದಿದ್ದಾರೆ. ಈ …

Read More »

500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡಿ ವೆಡ್ಡಿಂಗ್ ಡೇ ಆಚರಿಸಿಕೊಂಡ ದಂಪತಿ

ಭುವನೇಶ್ವರ್: ಸಾಮಾನ್ಯವಾಗಿ ವಿವಾಹ ಮಹೋತ್ಸವವನ್ನು ತಮ್ಮ ಹತ್ತಿರದ ಸಂಬಂಧಿಗಳಿಗೆ ಪಾರ್ಟಿಗಳನ್ನು ಆಯೋಜಿಸುವ ಮೂಲಕ ಸೆಲೆಬ್ರೆಟ್ ಮಾಡುತ್ತಾರೆ. ಆದರೆ ಇಲ್ಲೊಬ್ಬ ದಂಪತಿ ಮಾತ್ರ ವಿವಾಹವಾದ ದಿನವನ್ನು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡುವ ಮೂಲಕ ಅತ್ಯಂತ ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಹೌದು. ಒಡಿಶಾ ಮೂಲದ ಯುರೇಕಾ ಅಪ್ತಾ ಹಾಗೂ ಜೋವಾನ್ನಾ ವಾಂಗ್ ದಂಪತಿ ಇಂತಹ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೆಪ್ಟೆಂಬರ್ 25ರಂದು ದಂಪತಿ ಭುವನೇಶ್ವರದಲ್ಲಿ ವಿವಾಹವಾಗಿದ್ದಾರೆ. ಇದೇ …

Read More »

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‍ಡಿಕೆ, ಆರ್ ಆರ್ ನಗರ ಚುನಾವಣೆ ಮೂಲಕ ಜೆಡಿಎಸ್ ಪಕ್ಷದ ಸಮಾಧಿ ಅಂತ ನಮ್ಮ ಪಕ್ಷದ ಮುಖಂಡರ ಮನೆಯಲ್ಲಿ ಡಿಕೆಶಿ ಹೇಳಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ ಜೆಡಿಎಸ್ ಪಕ್ಷವನ್ನು ಸಮಾಧಿ ಮಾಡಿದ್ದಾಗಿದೆ. ಈಗ ಡಿಕೆಶಿ ಯವರು ಅವರಿಗೆ ಕೈ ಜೋಡಿಸ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಆರ್ ಆರ್ ನಗರದಲ್ಲಿ ನನ್ನ …

Read More »

ಬಾಲಿವುಡ್ ನಟ ವಿವೇಕ್  ಓಬೇರಾಯ್ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ

ಮುಂಬೈ:  ಡ್ರಗ್ಸ್ ಪ್ರಕರಣ ಸಂಬಂಧ  ಬಾಲಿವುಡ್ ನಟ ವಿವೇಕ್  ಓಬೇರಾಯ್ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಯಾಂಡಲ್ ವುಡೇ ಡ್ರಗ್ಸ್ ಪ್ರಕರಣದಲ್ಲಿ ಎ-6 ಆರೋಪಿಯಾಗಿರುವ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಆತನನ್ನು  ವಿಚಾರಣೆಗೆ ಒಳಪಡಿಸಲು  ಪೊಲೀಸರು ಹುಡುಕಾಟ ನಡೆಸಿದ್ದರೆ.  ಆದಿತ್ಯ ಆಳ್ವಾ, ನಟ ವಿವೇಕ ಅವರ ಸಂಬಂಧಿಯಾಗಿದ್ದು, ಅವರ  ಮನೆಯಲ್ಲಿ ಇರುವ ಶಂಕೆ ವ್ಯಕ್ತವಾದ ಹಿನ್ನೆಲೆ ದಾಳಿ ನಡೆಸಿದ್ದಾರೆ. ಇದೇ ಕಾರಣದಿಂದ ಬೆಂಗಳೂರಿನ ಸಿಸಿಬಿ ಪೊಲೀಸರು ಸರ್ಚ್ …

Read More »