ಬೆಳಗಾವಿ: ಜಿಲ್ಲೆಯಾದ್ಯಂತ, ಕಳೆದ ನಾಲ್ಕು ದಿನಗಳಿಂದ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು ದಾಟುವ ಆತುರ ಮಾಡಬೇಡಿ ಎಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ. ಗೋಕಾಕ್ ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ನದಿ ಹಳ್ಳ ತುಂಬಿ ಹರಿಯುತ್ತಿವೆ. ನದಿ ಸಮೀಪದ ಗ್ರಾಮಸ್ಥರು ಜಾನುವಾರುಗಳನ್ನು ನದಿ, ಹಳ್ಳದ ತೀರದ ಕಡೆ ಬಿಡಬೇಡಿ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು …
Read More »ಜೇಮ್ಸ್ ಚಿತ್ರ ತಂಡದಿಂದ ಸಿಹಿ ಸುದ್ದಿ ಹೊರ ಬಿದ್ದಿದ್ದು, ಹೀರೋಯಿನ್ ಆಯ್ಕೆ ಮಾಡಲಾಗಿದೆ.
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಜೇಮ್ಸ್ ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು, ಪುನೀತ್ ರಾಜ್‍ಕುಮಾರ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಚಿತ್ರ ತಂಡದಿಂದ ಸಿಹಿ ಸುದ್ದಿ ಹೊರ ಬಿದ್ದಿದ್ದು, ಹೀರೋಯಿನ್ ಆಯ್ಕೆ ಮಾಡಲಾಗಿದೆ. ಅನ್‍ಲಾಕ್ ಬಳಿಕ ಬಹುತೇಕ ಚಿತ್ರಗಳ ಶೂಟಿಂಗ್ ಚುರುಕುಗೊಂಡಿದ್ದು, ಯುವರತ್ನ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಮೊನ್ನೆಯಷ್ಟೇ ಪೂರ್ಣಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಅಪ್ಪು ಜೇಮ್ಸ್ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಲಾಕ್‍ಡೌನ್ ವೇಳೆ ಫುಲ್ …
Read More »ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆನಾಸೀರ್ ಬಾಗವಾನ್ ಪೆನಲ್ ಭರ್ಜರಿ ಜಯಗಳಿಸಿದೆ.
ಬೆಳಗಾವಿ: ಎಂ.ಕೆ.ಹುಬ್ಬಳ್ಳಿ ಗ್ರಾಮದ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಾಸೀರ್ ಬಾಗವಾನ್ ಪೆನಲ್ ಭರ್ಜರಿ ಜಯಗಳಿಸಿದೆ. ನಿನ್ನೆ ಸಂಜೆ 7 ಗಂಟೆಗೆ ಮತ ಎಣಿಕೆ ಆರಂಭವಾಗಿ, ಮದ್ಯರಾತ್ರಿ 2 ಗಂಟೆಗೆ ಮುಕ್ತಾಯವಾಯಿತು. ನಾಸೀರ ಬಾಗವಾನ್ ಗುಂಪಿನ ಎಲ್ಲಾ ಅಭ್ಯರ್ಥಿಗಳು ಗೆಲವು ಸಾಧಿಸಿದ್ದು, ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ಅವರ ಪುತ್ರ ಪ್ರಕಾಶಗೌಡ ಪಾಟೀಲ ಅವರ ತಂಡ ಸೋಲು ಅನುಭವಿಸಿದೆ. ಆರಂಭದಲ್ಲಿ ನಾಸೀರ್ ಬಾಗವಾನ್ ಬೆಂಬಲಿತ …
Read More »ಅಮರನಾಥ್ ಜಾರಕಿಹೊಳಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ: ರಮೇಶ್ ಜಾರಕಿಹೊಳಿ
ಬೆಳಗಾವಿ: ಪಕ್ಷದ ನಾಯಕರು, ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದರಿದ್ದೇವೆ. ಸಂತೋಷ ಜಾರಕಿಹೊಳಿ ಅವರಿಗೆ ರಾಜಕಾರಣ ಸಂಬಂಧವಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ. ಗೋಕಾಕ್ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತೋಷ ಜಾರಕಿಹೊಳಿಗೂ ರಾಜಕಾರಣಕ್ಕೂ ಸಂಬಂಧವಿಲ್ಲ. ಅಮರನಾಥ್ ಅವರು ಮಾತ್ರ ರಾಜಕೀಯದಲ್ಲಿ ಇರಲಿದ್ದಾರ. ಈಗಾಗಲೇ ಅಮರನಾಥ್ ಜಾರಕಿಹೊಳಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ. ಪಕ್ಷಕ್ಕಾಗಿ ಸಾಮಾನ್ಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತೆನೆ ಎಂದು ಸ್ಪಷ್ಟ ಪಡಿಸಿದ್ದಾರೆ. ಲೋಕಸಭಾ ಟಿಕೆಟ್ ಅಭ್ಯರ್ಥಿಯ ಬಗ್ಗೆ …
Read More »ಕಳೆದ 24 ಗಂಟೆಯಲ್ಲಿ 67,708 ಜನರಲ್ಲಿ ಕೊರೊನಾ ಸೋಂಕು
ನವದೆಹಲಿ: ದೇಶದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 67,708 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 73,07,098 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 680 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,11,266ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 8,12,390 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 63,83,442 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ …
Read More »ಮಂಗಳಾರತಿಯಲ್ಲಿದ್ದ ಹಣವನ್ನು ಖತರ್ನಾಕ್ ಭಕ್ತೆಯೊಬ್ಬಳು ಎಗರಿಸಿದ ಘಟನೆ
ಮಡಿಕೇರಿ: ದೇವರಿಗೆ ವಿನಮ್ರವಾಗಿ ಕೈ ಮುಗಿದು, ಸುತ್ತು ಬಂದ ಬಳಿಕ ಮಂಗಳಾರತಿಯಲ್ಲಿದ್ದ ಹಣವನ್ನು ಖತರ್ನಾಕ್ ಭಕ್ತೆಯೊಬ್ಬಳು ಎಗರಿಸಿದ ಘಟನೆ ಮಡಿಕೇರಿಯ ವಿಜಯ ವಿನಾಯಕ ದೇವಸ್ಥಾನದಲ್ಲಿ ನಡೆದಿದೆ. ಅಕ್ಟೋಬರ್ 12 ರಂದು ನಡೆದಿರುವ ಮಹಿಳೆಯ ಖತರ್ನಾಕ್ ಕೆಲಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುಧವಾರ ಸಂಜೆ ಸಿಸಿಟಿವಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಈ ವೀಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲೇನಿದೆ? ಮಹಿಳೆ ಮೊದಲು ದೇವರಿಗೆ ಕೈಮುಗಿದು ಅತ್ತ-ಇತ್ತ ನೋಡುತ್ತಾಳೆ. ನಂತರ …
Read More »ಕೈ-ಕಮಲ-ದಳ ಸಾಥ್: ಕಾಫಿನಾಡಿನ ಎನ್.ಆರ್.ಪುರ ಬಂದ್
ಚಿಕ್ಕಮಗಳೂರು: ಶತಮಾನಗಳ ಬದುಕೇ ಬೀದಿಗೆ ಬೀಳುತ್ತೆ ಅಂದಾಗ ಹೋರಾಟ ಅನಿವಾರ್ಯ. ಅಂತಹ ಹೋರಾಟಕ್ಕೆ ಜಿಲ್ಲೆಯ ಎನ್.ಆರ್.ಪುರ ತಾಲೂಕು ಮುಂದಾಗಿದೆ. ಬದುಕಿಗಿಂತ ರಾಜಕೀಯ-ರಾಜಕಾರಣ ದೊಡ್ಡದ್ದಲ್ಲ. ಹಾಗಾಗಿ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮರಣ ಶಾಸನವಾಗಿರೋ ಭದ್ರಾ ಹುಲಿ ಯೋಜನೆಯ ಬಫರ್ ಜ್ಹೋನ್, ಪರಿಸರ ಸೂಕ್ಷ್ಮ ವಲಯದ ವಿರುದ್ಧ ಎನ್.ಆರ್.ಪುರ ತಾಲೂಕಿನ ಜನ ಪಕ್ಷಾತೀತವಾಗಿ ಹೋರಾಟಕ್ಕಿಳಿದಿದ್ದಾರೆ. ಇಂದು ಬೆಳಗ್ಗೆ ಏಳು ಗಂಟೆಯಿಂದ ಇಡೀ ದಿನ ಎನ್.ಆರ್.ಪುರ ತಾಲೂಕು ಸಂಪೂರ್ಣ ಸ್ತಬ್ಧಗೊಂಡಿದೆ. ಮೈಸೂರಿನ ಅರಸರಾದ ನರಸಿಂಹರಾಜ …
Read More »ಜೆಸಿಬಿಯನ್ನು ಮಣ್ಣು ಅಗೆಯಲು ಬಳಸುತ್ತಾರೆಇದೇ ಜೆಸಿಬಿಯಲ್ಲಿ ತನ್ಬೆನ್ನು ಉಜ್ಜಿಕೊಳ್ಳುವ ಮೂಲಕ ವ್ಯಕ್ತಿಯೊಬ್ಬರು ಭಾರೀ ಸುದ್ದಿ
ಸಾಮಾನ್ಯವಾಗಿ ಜೆಸಿಬಿಯನ್ನು ಮಣ್ಣು ಅಗೆಯಲು ಬಳಸುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಇದೇ ಜೆಸಿಬಿಯಲ್ಲಿ ತನ್ನ ಬೆನ್ನು ಉಜ್ಜಿಕೊಳ್ಳುವ ಮೂಲಕ ವ್ಯಕ್ತಿಯೊಬ್ಬರು ಭಾರೀ ಸುದ್ದಿಯಾಗಿದ್ದಾರೆ. ಹೌದು. ಈ ವಿಚಾರ ನಿಮಗೆ ಅಚ್ಚರಿ ಎನಿಸಿದರೂ ಸತ್ಯ. ಯಾಕಂದ್ರೆ ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಕೂಡ ವೈರಲ್ ಆಗುತ್ತಿದೆ. 41 ಸೆಕೆಂಡಿನ ವೀಡಿಯೋವನನ್ನು ಅಬ್ದುಲ್ ನಝಾರ್ ಎಂಬವರು ತಮ್ಮ ಫೇಸ್‍ಬುಕ್ ಖಾತೆಯಿಂದ ಶೇರ್ ಮಾಡಿಕೊಂಡಿದ್ದಾರೆ. ಈ ವೀಡಿಯೋ …
Read More »ಬೇಲ್ ಪಡೆಯಲ್ಲ, ಸ್ಟೇಷನ್‍ಗೆ ಹೋಗಲ್ಲ – ಕುಸುಮಾ ವಿರುದ್ಧದ ಎಫ್ಐಆರ್‌ಗೆ ಡಿಕೆಶಿ ಕಿಡಿ
ಬೆಂಗಳೂರು: ನಮ್ಮ ಅಭ್ಯರ್ಥಿ ಹೆಣ್ಣು ಮಗಳ ಮೇಲೆ ಹಾಗೂ ಸಿದ್ದರಾಮಯ್ಯ ಎಸ್ಕಾರ್ಟ್ ಡ್ರೈವರ್ ಮೇಲೆ ಎಫ್‍ಐಆರ್ ಆಗಿದೆ. ಈ ಎಫ್ಐಆರ್‌ಗೆ ನಾವು ಬೇಲ್ ಪಡೆಯಲ್ಲ, ಸ್ಟೇಷನ್‍ಗೂ ಹೋಗಲ್ಲ. ಇದಕ್ಕೆ ನಾವು ಹೆದರೋ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಕೆಶಿ, ಪ್ರಜಾಪ್ರಭುತ್ವದಲ್ಲಿ ಇಷ್ಟು ನೀಚವಾದ ರಾಜಕಾರಣ ನಾನು ಯಾವತ್ತೂ ನೋಡಿಲ್ಲ. ಕಾಂಗ್ರೆಸ್ ಪಕ್ಷದ ವಿದ್ಯಾವಂತ ಹೆಣ್ಣುಮಗಳು ಕಾನೂನು ಅರಿವಿರುವ …
Read More »ಮಹಾಮಳೆಗೆ ಉತ್ತರ ಕರ್ನಾಟಕ ನಲುಗಿದ್ದು, ಜನರು ಜೀವ ಉಳಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ.
ಬೆಂಗಳೂರು: ಮಹಾಮಳೆಗೆ ಉತ್ತರ ಕರ್ನಾಟಕ ನಲುಗಿದ್ದು, ಜನರು ಜೀವ ಉಳಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ. ಜಲಾಸುರನ ದಾಳಿಗೆ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್, ರಾಯಚೂರು ಜಿಲ್ಲೆಗಳು ತತ್ತರಿಸಿದ್ದು, ಗಾಯದ ಮೇಲೆ ಬರೆ ಎಳೆದಂತೆ ಕೊಯ್ನಾ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ಕೊಯ್ನಾದಿಂದ ಅತಿ ಹೆಚ್ಚು ನೀರು ಹೊರ ಬಂದಲ್ಲಿ ಬೆಳಗಾವಿ, ಚಿಕ್ಕೋಡಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಕಲಬುರಗಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. …
Read More »