Breaking News

ಸಿಪಿಐ ಕಲ್ಯಾಣಶೆಟ್ಟಿ ಸಹಜ ತಾಳ್ಮೆ-ದೊಡ್ಡತನ ಕಾಯ್ದುಕೊಳ್ಳದೇ ಸಾರ್ವಜನಿಕರಿಗೆ ಹಲ್ಲೆನಡೆಸಿ ತಡರಾತ್ರಿ

ಬೆಳಗಾವಿ: ಹುಕ್ಕೇರಿ ಸಿಪಿಐ ಕಲ್ಯಾಣಶೆಟ್ಟಿ ಸಹಜ ತಾಳ್ಮೆ-ದೊಡ್ಡತನ ಕಾಯ್ದುಕೊಳ್ಳದೇ ಸಾರ್ವಜನಿಕರಿಗೆ ಹಲ್ಲೆನಡೆಸಿ ತಡರಾತ್ರಿ ಗನ್ ತೋರಿಸಿ ಬೆದರಿಸಿದ ಬಗ್ಗೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮೊದಲ ಆರೋಪಿಯಾಗಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವರು ಕೊಟ್ಟ ದೂರು ಮತ್ತು ದಾಖಲಾದ FIR ಅಂಶಗಳ ಅನ್ವಯ ಖಾನಾಪುರ ತಾಲೂಕಿನ ಕಸಮಳ್ಳಿ ಗ್ರಾಮದಿಂದ ಬರುತ್ತಿದ್ದ ಬೆಳಗಾವಿ ಶಹಾಪುರದ ಇನ್ನೋವಾ ಕಾರು ರಸ್ತೆ ತಗ್ಗಿನ ಬಳಿ ಮುಂದಿನ ಸ್ವಿಫ್ಟ್ ಗೆ ತಾಗಿದ್ದೇ ಈ ಅವಾಂತರಕ್ಕೆ ಕಾರಣ ಎನ್ನಲಾಗಿದೆ. …

Read More »

ಈಗಲೂ ಪರಿಸ್ಥಿತಿ ಸಂಪೂರ್ಣ ಚೇತಕರಿಸಿಕೊಂಡಿಲ್ಲ’ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ಬೆಳಗಾವಿ: ‘ಕೊರೊನಾ ಹಾಗೂ ಲಾಕ್‌ಡೌನ್‌ ಕಾರಣದಿಂದ ಬಸ್‌ಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರಿಂದ ಸಾರಿಗೆ ಇಲಾಖೆಯು ₹ 3ಸಾವಿರ ಕೋಟಿಗೂ ಅಧಿಕ ನಷ್ಟ ಅನುಭವಿಸಿದೆ. ಈಗಲೂ ಪರಿಸ್ಥಿತಿ ಸಂಪೂರ್ಣ ಚೇತಕರಿಸಿಕೊಂಡಿಲ್ಲ’ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇಲಾಖೆಯಲ್ಲಿ 1.30 ಲಕಷ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಬರುತ್ತಿರುವ ಆದಾಯ ಬಸ್‌ಗಳ ಡಿಸೇಲ್‌ಗೆ‌ ಮಾತ್ರವೇ ಸಾಕಾಗುತ್ತಿದೆ. ಆದಾಯ ಇಲ್ಲವೆಂದು ಬಸ್‌ಗಳ ಕಾರ್ಯಾಚರಣೆ …

Read More »

‘ಖಾತೆ ಬದಲಾವಣೆ ಆದಾಕ್ಷಣ ಸಚಿವ ಬಿ.ಶ್ರೀರಾಮುಲು ಅಸಮರ್ಥರು ಎಂದರ್ಥವಲ್ಲ.

ಬೆಳಗಾವಿ: ‘ಖಾತೆ ಬದಲಾವಣೆ ಆದಾಕ್ಷಣ ಸಚಿವ ಬಿ.ಶ್ರೀರಾಮುಲು ಅಸಮರ್ಥರು ಎಂದರ್ಥವಲ್ಲ. ಒಳ್ಳೆಯ ಕೆಲಸ ಆಗಬೇಕೆಂದು ಈ ತೀರ್ಮಾನ ಮಾಡಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು, ‘ವರಿಷ್ಠರ ಸಲಹೆ ಪಡೆದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಪುಟದ ಕೆಲವು ಸಹೋದ್ಯೋಗಿಗಳ ಖಾತೆ ಬದಲಿಸಿದ್ದಾರೆ. ಖಾತೆಗಳನ್ನು ಅದಲು-ಬದಲು ಮಾಡುವ ಅಧಿಕಾರ ಅವರಿಗಿದೆ. ಈ ಬಗ್ಗೆ ಕಾಂಗ್ರೆಸ್‌ನವರೇಕೆ ತಲೆಕೆಡಿಸಿಕೊಳ್ಳಬೇಕು?’ ಎಂದು ಕೇಳಿದರು. …

Read More »

ನಗರದಲ್ಲಿ ಬುಧವಾರ ಒಂದು ತಾಸು ಜೋರು ಮಳೆ ಬಿದ್ದಿತು.

ಬೆಳಗಾವಿ: ನಗರದಲ್ಲಿ ಬುಧವಾರ ಒಂದು ತಾಸು ಜೋರು ಮಳೆ ಬಿದ್ದಿತು. ನಂತರ ಆಗಾಗ ತುಂತುರು ಮಳೆಯಾಯಿತು. ಸವದತ್ತಿ, ಹಿರೇಬಾಗೇವಾಡಿ, ಕಿತ್ತೂರು, ಅಥಣಿ, ಚಿಕ್ಕೋಡಿ, ಎಂ.ಕೆ. ಹುಬ್ಬಳ್ಳಿ, ಹುಕ್ಕೇರಿ ಹಾಗೂ ಬೈಲಹೊಂಗಲ ಭಾಗದಲ್ಲಿ ಸಾಧಾರಣ ಮಳೆ ಸುರಿಯಿತು.   ನಾಲ್ಕೈದು ದಿನಗಳಿಂದ ಆಗಾಗ ಮಳೆ ಬೀಳುತ್ತಿರುವುದರಿಂದ ಜಿಲ್ಲೆಯ ವಿವಿಧೆಡೆ 8,500 ಹೆಕ್ಟೇರ್ ಸೋಯಾಬೀನ್, ಹತ್ತಿ, ಮೆಕ್ಕೆಜೋಳ, ಕಬ್ಬು ಬೆಳೆಗಳಿಗೆ ಹಾಗೂ 300ಕ್ಕೂ ಹೆಚ್ಚಿನ ಮನೆಗಳಿಗೆ ಹಾನಿಯಾಗಿದೆ. ಸವದತ್ತಿ ತಾಲ್ಲೂಕಿನ ಇನಾಮಹೊಂಗಲ ಬಳಿಯ ಧಾರವಾಡ …

Read More »

ಜಿಲ್ಲೆಯಲ್ಲಿ ಚಲನಚಿತ್ರ ಮಂದಿರಗಳು ಅ. 15ರಿಂದ ಪುನರಾರಂಭಗೊಳ್ಳುತ್ತಿಲ್ಲ.

ಬೆಳಗಾವಿ: ಕೋವಿಡ್-19 ಕಾರಣದಿಂದ ಹೇರಲಾಗಿದ್ದ ನಿರ್ಬಂಧದಿಂದ ವಿನಾಯಿತಿ ನೀಡಿದ್ದರೂ ಜಿಲ್ಲೆಯಲ್ಲಿ ಚಲನಚಿತ್ರ ಮಂದಿರಗಳು ಅ. 15ರಿಂದ ಪುನರಾರಂಭಗೊಳ್ಳುತ್ತಿಲ್ಲ. ಏಳು ತಿಂಗಳುಗಳಿಂದ ಚಲನಚಿತ್ರ ಮಂದಿರ ಮತ್ತು ಮಲ್ಟಿಪ್ಲೆಕ್ಟ್‌ಗಳನ್ನು ಬಂದ್ ಮಾಡಲಾಗಿದೆ. ನಗರದಲ್ಲಿ 6 ಏಕ ಪರದೆ ಚಲನಚಿತ್ರ ಮಂದಿರಗಳು ಹಾಗೂ 2 ಮಲ್ಟಿಪ್ಲೆಕ್ಸ್‌ಗಳಿವೆ. ಜಿಲ್ಲೆಯ ಚಲನಚಿತ್ರ ಮಂದಿರಗಳ ಸಂಖ್ಯೆ 30ಕ್ಕೂ ಜಾಸ್ತಿ ಇದೆ. ಇಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಪುನರಾರಂಭಿಸಲು ಮಾಲೀಕರು ಸದ್ಯಕ್ಕೆ ಉತ್ಸಾಹ ತೋರುತ್ತಿಲ್ಲ. ‘ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವುದು ಕಷ್ಟಕರವಾಗಿರುವುದು, …

Read More »

ಕೃಷಿ ಪ್ರೋತ್ಸಾಹ ಯೋಜನೆಯಡಿ ಸಹಾಯ ಧನವನ್ನೂ ಒದಗಿಸುತ್ತಿದೆ.

ಕಾರ್ಕಳ: ಆರ್ಥಿಕ ಸಂಕಷ್ಟದ ಜತೆಗೆ ಉದ್ಯೋಗ ಸಮಸ್ಯೆಗೆ ಸಿಲುಕಿರುವ ಕೃಷಿಕರಿಗೆ ಕೇಂದ್ರ ಸರಕಾರ ರಾಷ್ಟ್ರೀಯ ಬಿದಿರು ಮಿಷನ್‌ ಯೋಜನೆಯಡಿ ಬಿದಿರು ಬೆಳೆಗೆ ಪ್ರೋತ್ಸಾಹ ನೀಡುತ್ತಿದ್ದು, ಕೃಷಿ ಪ್ರೋತ್ಸಾಹ ಯೋಜನೆಯಡಿ ಸಹಾಯ ಧನವನ್ನೂ ಒದಗಿಸುತ್ತಿದೆ. ರಾಷ್ಟ್ರೀಯ ಬಿದಿರು ಮಿಷನ್‌ ಯೋಜನೆ ಯಡಿ 2010-21ನೇ ಸಾಲಿನಲ್ಲಿ ಕೇಂದ್ರ ಮತ್ತು ರಾಜ್ಯದ 60:40 ಅನುಪಾತದಲ್ಲಿ 2091.64 ರೂ. ಮೊತ್ತದ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುಮೋದನೆ ನೀಡಲಾಗಿದೆ. ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಿಭಾಗಗಳಿಗೆ …

Read More »

75 ರೂಪಾಯಿಗೆ ಸಿಗಲಿದೆಯಾ ಕೊರೊನಾ ಲಸಿಕೆ?

ರಷ್ಯಾ ಹೊರತುಪಡಿಸಿದರೆ ಜಗತ್ತಿನ ಬೇರೆ ಯಾವ ದೇಶದಲ್ಲೂ ಕೊರೊನಾಗೆ ಸೂಕ್ತ ಲಸಿಕೆ ಸಿಕ್ಕಿಲ್ಲ. ಭಾರತದಲ್ಲೂ 3 ಪ್ರಮುಖ ಕಂಪನಿಗಳು ಕೊರೊನಾ ಲಸಿಕೆಗೆ ಸಂಶೋಧನೆ ನಡೆಸುತ್ತಿವೆ. ಆದ್ರೆ ಭಾರತದಲ್ಲಿ ಲಸಿಕೆಗೆ ಸಾಮಾನ್ಯ ಜನರು ಎಷ್ಟು ಹಣ ತೆರಬೇಕಾಗುತ್ತೆ, ಲಸಿಕೆ ದುಬಾರಿಯಾಗುತ್ತಾ, ಇಲ್ಲ ಅಗ್ಗವಾಗುತ್ತಾ, ಸರ್ಕಾರವೇ ಖರೀದಿಸಿ ಉಚಿತ ಲಸಿಕೆ ನೀಡುತ್ತಾ ಎನ್ನುವ ಕುತೂಹಲ ಇದ್ದು, ಇದಕ್ಕೆಲ್ಲಾ ಉತ್ತರ ಇಲ್ಲಿದೆ. ಕೊರೊನಾ ಮಹಾಮಾರಿಗೆ ವ್ಯಾಕ್ಸಿನ್ ಇನ್ನೂ ಕನ್ಫರ್ಮ್ ಆಗಿಲ್ಲ. ಸೆರಮ್ ಇನ್ಸ್​ಟಿಟ್ಯೂಟ್ ಆಫ್ …

Read More »

ಉತ್ತರ ಕನ್ನಡ ಹಾಗೂ ದಕ್ಷಿಣ ಜಿಲ್ಲೆಗೆ ‘ರೆಡ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು  : ರಾಜ್ಯದಲ್ಲಿ ಮುಂಗಾರಿನ ಆರ್ಭಟ ಉತ್ತರ ಒಳನಾಡಿನ ಜೊತೆಗೆ ಕರಾವಳಿ ಭಾಗಕ್ಕೂ ಆವರಿಸಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಜಿಲ್ಲೆಗೆ ‘ರೆಡ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಗುಡುಗು ಸಹಿತ ಅತ್ಯಂತ ಹೆಚ್ಚು ಮಳೆ ಸುರಿಯುವುದರಿಂದ ಅ.15ರಂದು ಕರಾವಳಿ ಜಿಲ್ಲೆಗಳು ಹಾಗೂ ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’. ಅತಿ ಹೆಚ್ಚು ಮಳೆ ಸುರಿಯುವ ಸಂಭವ ಇರುವುದರಿಂದ ಧಾರವಾಡ, ಗದಗ, ಕಲಬುರ್ಗಿ ಸೇರಿದಂತೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, …

Read More »

ಕೊವಿಡ್-19: ಕರ್ನಾಟಕದಲ್ಲಿ ಮತ್ತೆ ಹೆಚ್ಚಿದ ಸೋಂಕಿತರು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಇಂದು ಸಾಯಂಕಾಲ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕರ್ನಾಕದಲ್ಲಿ ಇಂದು ಕೊರೊನಾ ಸೋಂಕಿನಿಂದ 75 ಜನ ಮರಣವನ್ನಪ್ಪಿದ್ದಾರೆ ಮತ್ತು ಹೊಸದಾಗಿ 9,265 ಜನರಲ್ಲಿ ಸೋಂಕು ದೃಢಪಟ್ಟಿದೆ . ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,35,371 ಕ್ಕೇರಿದ್ದು ಇದುವರೆಗೆ ಬಲಿಯಾದವರ ಸಂಖ್ಯೆ 10,198 ತಲುಪಿದೆ. ಸೋಂಕಿತರ ಪೈಕಿ 6,11,167 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ 1,13,987 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ …

Read More »

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ. ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. …

Read More »