Breaking News

ಜಿಲ್ಲಾ ಹೆಸರು ಮರುನಾಮಕರಣಕ್ಕೆ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ ಕೇಂದ್ರ

ಬೆಂಗಳೂರು : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಬೇಕು ಎಂಬ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರದ ನಿರಾಕರಿಸಿದೆ. ಉನ್ನತ ಮೂಲಗಳ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಜಿಲ್ಲೆಯ ಮರುನಾಮಕರಣ ಮಾಡಲು ಕೋರಿ ರಾಜ್ಯ ಸರ್ಕಾರ ಎರಡು ತಿಂಗಳ ಹಿಂದೆಯೇ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಳ್ಳಿಹಾಕಿದೆ. ಆದ್ರೆ, ಯಾವ ಕಾರಣದಿಂದ ನಿರಾಕರಿಸಲಾಗಿದೆ ಎಂಬುದನ್ನು ತಿಳಿಸಿಲ್ಲ. ಆದರೆ, ಮೂಲಗಳು …

Read More »

ಸಿಐಡಿ ಮುಂದೆ ವಿಚಾರಣೆಗೆ ಹಾಜರಾದ ಹಿರಿಯ ಪೊಲೀಸ್ ಅಧಿಕಾರಿಗಳು

ಬೆಳಗಾವಿ : ಚಳಿಗಾಲ ಅಧಿವೇಶನ ವೇಳೆ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‌ವಿರುದ್ಧ ಅವಹೇಳನಕಾರಿ ಪದ‌ ಬಳಕೆ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಬಂಧನ ಮಾಡಿದ್ದ ಬೆಳಗಾವಿ ಡಿಸಿಪಿ ಮತ್ತು ಎಸಿಪಿ ಅವರು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ವಿಧಾನ ಪರಿಷತ್​ನಲ್ಲಿ ಅಶ್ಲೀಲ ‌ಪದ ಬಳಕೆ ಮಾಡಿರುವ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‌‌ಅವರು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ …

Read More »

ರಾಯಚೂರಿನಲ್ಲಿ ಭೀಕರ ಅಪಘಾತ

ರಾಯಚೂರು: ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಕುಳಿತಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ರಾಯಚೂರಿನಲ್ಲಿ ನಡೆಯಿತು. ನಗರದ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ರೈಲ್ವೆ ಸ್ಟೇಷನ್‌ಗೆ ರಸ್ತೆ ಸಂಪರ್ಕ ಕಲ್ಪಿಸುವ ಸ್ಟೇಷನ್​ ರಸ್ತೆಯಲ್ಲಿನ ಶ್ರೀರಾಮಮಂದಿರ ಬಳಿ ಈ ಅವಘಡ ಸಂಭವಿಸಿದೆ. ಉತ್ತರ ಪ್ರದೇಶ ನಿವಾಸಿ ಸುರೇಶ್​(35) ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಇವರ ಮಗ ಬಾಲಕ ಶುಭಂ ಅವರ ಕಾಲು ಮುರಿದಿದೆ. ರಸ್ತೆಯಲ್ಲಿ …

Read More »

ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಖತರ್ನಾಕ ಕಳ್ಳಿಯರ ಗ್ಯಾಂಗ್ ಅರೆಸ್ಟ್..!!!

ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಖತರ್ನಾಕ ಕಳ್ಳಿಯರ ಗ್ಯಾಂಗ್ ಅರೆಸ್ಟ್..!!! 12 ಲಕ್ಷ 70 ಸಾವಿರ ಮೌಲ್ಯದ 143 ಗ್ರಾಂ ಚಿನ್ನ ಜಪ್ತಿ…. ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್’ನ ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿ ಮಾರ್ಕೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ನಗರದ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಚಿನ್ನದ ಒಡವೆಗಳನ್ನು ಕದಿಯುತ್ತಿದ್ದ ನಗರದ ವಡ್ಡರವಾಡಿ ನಿವಾಸಿ ಅನೀತಾ ಚೌಗಲೆ (58) ನಿಶಾ ಲೊಂಡೆ (25) ಮತ್ತು ಗಿಡ್ಡಿ …

Read More »

ಅಂತರಿಕ್ಷ ಪಯಣ ಮುಗಿಸಿ ಭೂಮಿಗೆ ವಾಪಸ ಆದ ಸುನಿತಾ ಮತ್ತು ಬುಚ್

ಅಂತರಿಕ್ಷ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಲೋರ್ ಕೊನೆಗೂ ತಮ್ಮ ಸುಧೀರ್ಘ ಅಂತರಿಕ್ಷ ಪಯಣ ಮುಗಿಸಿ ಭೂಮಿಗೆ ಮರಳಿದ್ದಾರೆ.  ಕೇವಲ 9 ದಿನಗಳ ಬಾಹ್ಯಾಕಾಶ ಪಯಣಕ್ಕಾಗಿ ಹೊರಟಿದ್ದ ಸುನಿತಾ ಮತ್ತು ಬುಚ್ ತಾಂತ್ರಿಕ ತೊಂದರೆಯಿಂದಾಗಿ 9 ತಿಂಗಳ ಕಾಲ ಅಂತರಿಕ್ಷದಲ್ಲೇ ಉಳಿಯುವಂತಾಗಿತ್ತು. ಕೃಶ ಶರೀರವಾಗಿರುವ ಬುಚ್ ಮತ್ತು ಸುನೀತಾ ಭೂಮಿಗೆ ಬಂದೊಡನೆ ಎಲ್ಲರತ್ತಾ ಕೈಬೀಸಿ ನಗುಬೀರಿದರು. ಇನ್ನು ಮುಂದಿನ 45 ದಿನ ಅವರಿಗೆ ಆರೈಕೆ ನೀಡಲಾಗುತ್ತಿದ್ದು ಬೆಚ್ಚಗಿನ ಉಡುಗೆ …

Read More »

ರೈಲ್ವೇ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಬೆಂಗಳೂರು : ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಯಶವಂತಪುರ ರೈಲ್ವೇ ನಿಲ್ದಾಣದ ಸಮೀಪ ನಡೆದಿದೆ. ನಿಲ್ದಾಣದ ಪ್ಲಾಟ್‌ಫಾರ್ಮ್ 1ರ ಬಳಿಯ ಕಾಂಪೌಂಡ್​ ಪಕ್ಕದಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯ ಮುಖಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿ ಹತ್ಯೆಗೈದು, ಬಳಿಕ ಬೆಂಕಿ ಇಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಬೆಳಗ್ಗೆ ಮೃತದೇಹವನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ …

Read More »

ಕೊನಾರ್ಕ್ ಉತ್ಸವ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಣೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಒಡಿಶಾದ ಪ್ರಸಿದ್ಧ ಕೊನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ‌ ಕೈಗೊಳ್ಳಲಾಗಿದೆ. ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಸಚಿವರು, ”2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ …

Read More »

ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು: ಡಿಸಿಎಂ ಡಿ ಕೆ ಶಿ

ನವದೆಹಲಿ/ಬೆಂಗಳೂರು : ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ?. ಇದಕ್ಕೂ ಸಿದ್ದರಾಮಯ್ಯ ಹಾಗೂ ಶಿವಕುಮಾರ್​​ಗೂ ಏನು ಸಂಬಂಧ?. ಕುಮಾರಸ್ವಾಮಿ ಅವರು ಏಕೆ ಗಾಬರಿಯಾಗಬೇಕು? ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ಗೆ ನಾನೇ ಟಾರ್ಗೆಟ್, ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ, ನಾನು ಹಾಗೂ …

Read More »

ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ; ಕುಮಾರಸ್ವಾಮಿ ವಿರುದ್ಧ ಆತುರದ ಕ್ರಮ ಕೈಗೊಳ್ಳದಂತೆ ವಿಧಿಸಿದ್ದ ಆದೇಶ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು : ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ಅವರಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಅವರ ಪುತ್ರ ನಿಖಿಲ್‌ ಮತ್ತು ಶಾಸಕ ಸುರೇಶ್‌ ಬಾಬು ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸಂಜಯನಗರ ಠಾಣಾ ಪೊಲೀಸರಿಗೆ ಸೂಚಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶ ಮಾರ್ಚ್ 28ರವರೆಗೆ ಹೈಕೋರ್ಟ್‌ ವಿಸ್ತರಿಸಿ ಆದೇಶಿಸಿದೆ. ಚಂದ್ರಶೇಖರ್‌ ನೀಡಿರುವ ದೂರು ಆಧರಿಸಿ ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿರುವ ಆರೋಪ ಸಂಬಂಧ ಸಂಜಯನಗರ ಠಾಣಾ …

Read More »

ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ:C.M.

ಬೆಂಗಳೂರು: ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಸಂಬಂಧ ಪ್ರತಿಪಕ್ಷಗಳ ಆಕ್ಷೇಪಕ್ಕೆ ಸಮಗ್ರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ಉತ್ತರಿಸಿದರು. ವಂದನಾನಿರ್ಣಯದ ಮೇಲೆ ವಿರೋಧಪಕ್ಷದ ನಾಯಕರು ಸೇರಿದಂತೆ 16 ಜನ ಸದಸ್ಯರು ಸುಮಾರು 9ಗಂಟೆ 56 ನಿಮಿಷಗಳ ಕಾಲ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ. ಸದಸ್ಯರ ಟೀಕೆಗಳು, ಸಲಹೆ ಸೂಚನೆಗಳನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳಿಗೆ ಸರಿದಾರಿ ತೋರಲು ಟೀಕೆಗಳು ಇರಬೇಕು. ಇತ್ತೀಚೆಗೆ ಹೆಚ್ಚು ವಿದ್ಯಾವಂತರು, ವಿಚಾರವಂತರು ಕೆಳಮನೆ ಹಾಗೂ ಮೇಲ್ಮನೆಗೂ ಬರುತ್ತಿರುವುದರಿಂದ, …

Read More »