Breaking News

ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮತದಾನದಿಂದ ಕಾಂಗ್ರೆಸ್-ಜೆಡಿಎಸ್ ದೂರ ಉಳಿಯುವುದಾಗಿ ಹೇಳಿದೆ :ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಫೆ.17- ವಿಧಾನಸಭೆಯಿಂದ ವಿಧಾನಪರಿಷತ್‍ನ ಒಂದು ಸ್ಥಾನದ ಉಪ ಚುನಾವಣೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ಭಾಗವಹಿಸದಿರಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮತದಾನದಿಂದ ದೂರ ಉಳಿಯುವುದಾಗಿ ಹೇಳಿದೆ. ಅಲ್ಲದೆ, ಕಾಂಗ್ರೆಸ್-ಜೆಡಿಎಸ್ ಬೆಂಬಲದ ನಿರೀಕ್ಷೆಯಲ್ಲಿ ಸ್ಪರ್ಧೆಗಿಳಿದಿದ್ದ ಪಕ್ಷೇತರ ಅಭ್ಯರ್ಥಿ ಬಿ.ಆರ್.ಅನಿಲ್‍ಕುಮಾರ್ ಈಗಾಗಲೇ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ …

Read More »

ಬಂದ್ ನಡುವೆ ‘ಎಣ್ಣೆ ಡ್ಯಾನ್ಸ್’- ನಾನೇ ಮಂತ್ರಿ ಎಂದ ಕುಡುಕ …………

ಬೆಂಗಳೂರು : ಇಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಟೌನ್ ಹಾಲ್ ಬಳಿ ಹಾಕಿದ್ದ ಬ್ಯಾರಿಕೇಡ್ ಸರಿಸಿ ಒಳಗೆ ನುಗ್ಗಿದ ಕುಡುಕನೋರ್ವ ಭರ್ಜರಿ ಸ್ಟೆಪ್ಸ್ ಹಾಕಿದ್ದಾನೆ. ನಗರದ ಮೆಜೆಸ್ಟಿಕ್, ರೈಲ್ವೇ ನಿಲ್ದಾಣ ಸೇರಿದಂತೆ ಬಹುತೇಕ ಕಡೆ ಬಿಗಿ ಭದ್ರತೆಗಾಗಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಅದರಂತೆ ನಗರದ ಟೌನ್ ಹಾಲ್ ನಲ್ಲಿಯೂ ಮುಂಜಾಗ್ರತಾ ಕ್ರಮವಾಗಿ ಎರಡೂ ಕೆಎಸ್‍ಆರ್ ಪಿ ತುಕಡಿ ಹಾಗೂ 100 ಜನರ ಪೊಲೀಸ್ ಬ್ಯಾರಿಕೇಡ್ ಸರ್ಪಗಾವಲನ್ನು ಹಾಕಲಾಗಿತ್ತು. ಇದರ ನಡುವೆ ಬ್ಯಾರಿಕೇಡ್ …

Read More »

ಸತೀಶ ಜಾರಕಿಹೊಳಿ  ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಮಾಜಿ ಸಚಿವ, ಶಾಸಕ  ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿ:  ಸತೀಶ ಜಾರಕಿಹೊಳಿ  ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಮಾಜಿ ಸಚಿವ, ಶಾಸಕ  ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಬೇರೊಂದು ಪಕ್ಷದಲ್ಲಿ ಇದ್ದುಕೊಂಡು ಅವರು ಸಿಎಂ ಆಗುತ್ತಾರೆ, ಇವರು ಸಿಎಂ ಆಗ್ತಾರೆ ಅಂತಾ ಹೇಳುವುದು ಸರಿಯಲ್ಲ.   ಬಿಜೆಪಿ ಹೈಕಮಾಂಡ್ ರಮೇಶ ಅವರಿಗೆ ಕಡಿವಾಣ ಹಾಕಲಿ ಎಂದಿದ್ದಾರೆ. ರಮೇಶ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿದ  ವಿಚಾರವಾಗಿ …

Read More »

ದೆಹಲಿ ಫಲಿತಾಂಶ ಪಕ್ಷದ ಮೇಲೆ ಪರಿಣಾಮ ಬೀರಿಲ್ಲ: ಗೋವಿಂದ ಕಾರಜೋಳ

ಬಾಗಲಕೋಟೆ: ಮೀಸಲಾತಿ ವ್ಯವಸ್ಥೆ ಸಮಾಜದಲ್ಲಿ ತುಳಿತಕ್ಕೆ ಒಳಗಾದವರು, ಅಸ್ಪೃಶ್ಯತೆಯಿಂದ ಬಳಲುವವರನ್ನು ಮೇಲೆತ್ತಲು ತೆಗೆದುಕೊಂಡ ವ್ಯವಸ್ಥೆ ಆಗಿದೆ ಅಂತ ಬಾಗಲಕೋಟೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಮೀಸಲಾತಿ ಬಗ್ಗೆ ಕೋರ್ಟ್ ತೀರ್ಪು ವಿಚಾರವಾಗಿ ಬಾಗಲಕೋಟೆಯಲ್ಲಿ ಪ್ರತಿಕ್ರಿಯೆ ನೀಡಿದ ಡಿಸಿಎಂ, 2012ರಲ್ಲಿ ಉತ್ತರಾಖಂಡ್‍ನಲ್ಲಿ ತೆಗೆದುಕೊಂಡ ನಿರ್ಧಾರ ಕೋರ್ಟಿಗೆ ಹೋಯ್ತು. ಅಂದಿನ ಕಾಂಗ್ರೆಸ್ ಸರ್ಕಾರ ಮಾಡಿದ ತಪ್ಪಿನಿಂದ ಇಂದು ಜಡ್ಜ್ ಮೆಂಟ್ ಬಂದಿದೆ ಎಂದು ತಿಳಿಸಿದ್ರು. ಬಿಜೆಪಿ ಸರ್ಕಾರವಿರುವ ರಾಜ್ಯದಲ್ಲಿ ಮೀಸಲಾತಿಗೆ ಧಕ್ಕೆ ತರದಂತೆ ಕಾಪಾಡಿಕೊಂಡು …

Read More »

ಗರದ ಆರ್ ಟಿಒ ಸರ್ಕಲ್ ಬಳಿ ಇರುವ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ

ಬೆಳಗಾವಿ: ನಗರದ ಆರ್ ಟಿಒ ಸರ್ಕಲ್ ಬಳಿ ಇರುವ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ನವೀಕರಣಗೊಳಿಸಲಾಗುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು. ಕಚೇರಿ ಕಾಮಗಾರಿಯನ್ನು ಆದಷ್ಟು ಬೇಗನೆ ಮುಗಿಸಿ ಪಕ್ಷದ ಮುಖಂಡರಿಗೆ, ಪದಾಧಿಕಾರಿಗಳಿಗೆ ಮತ್ತು ಕಾರ್ಯಕರ್ತರಿಗೆ ಅನುಕೂಲವಾಗುವಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಗುತ್ತಿಗೆದಾರರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಇಂಜಿನೀಯರ್ ಚಂದು ಮುನ್ನವಳ್ಳಿಮಠ, ಮಹೇಶ …

Read More »

ಸಮಾಜದ ಸ್ವಾಸ್ಥ್ಯ ಕಾಪಾಡಲು ಪತ್ರಕರ್ತರ, ಪೊಲೀಸರ ಪಾತ್ರ ಅಗತ್ಯ: ಎಎಸ್‍ಪಿ ಕುಮಾರಚಂದ್ರ

ಉಡುಪಿ: ಪತ್ರಕರ್ತರು ಪೊಲೀಸರ ಮಾದರಿಯಲ್ಲೇ ಸಮಾಜದ ಸ್ವಾಸ್ಥ್ಯ ಕಾಪಾಡುವವರು. ಪೊಲೀಸರಂತೆ ಮಾಧ್ಯಮದ ಸದಸ್ಯರು ಕುಟುಂಬದಿಂದ, ಖಾಸಗಿ ಜೀವನದ ಸಂಭ್ರಮದಿಂದ ದೂರ ಉಳಿದು ಬಿಟ್ಟಿದ್ದಾರೆ. ನಿಜಕ್ಕೂ ಈ ಎರಡು ಕ್ಷೇತ್ರ ಬಹಳ ಚಾಲೆಂಜಿಂಗ್ ಮತ್ತು ತ್ಯಾಗದ್ದು ಎಂದು ಉಡುಪಿ ಅಡಿಷನಲ್ ಎಸ್‍ಪಿ ಕುಮಾರಚಂದ್ರ ಹೇಳಿದರು. ಉಡುಪಿಯ ಕಟಪಾಡಿಯಲ್ಲಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡೋತ್ಸವದ ಬಹುಮಾನ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕುಮಾರಚಂದ್ರ ಮಾತನಾಡಿದರು. ಸಾರ್ವಜನಿಕರು ಮತ್ತು ಸರ್ಕಾರಿ …

Read More »

ಬಜೆಟ್‍ನಲ್ಲಿ ಘೋಷಣೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಘೋಷಿಸದಿದ್ದರಿವೆ ವಿಷ ಕುಡಿದು ಆತ್ಮಹತ್ಯೆ”

ಬೆಂಗಳೂರು, ಫೆ.13- ಡಾ.ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸಿನಂತೆ ಕನ್ನಡಿಗರಿಗೆ ಶೇ.85ರಷ್ಟು ಉದ್ಯೋಗ ನೀಡುವ ಮೀಸಲಾತಿ ಕಾಯ್ದೆಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕನ್ನಡಪರ ಸಂಘಟನೆಗಳ ಮುಖಂಡರು ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಡಾಲರ್ಸ್ ಕಾಲೋನಿಯಲ್ಲಿ ಭೇಟಿ ಮಾಡಿದ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಮುಂಬರುವ ಬಜೆಟ್‍ನಲ್ಲಿ ಕನ್ನಡಿಗರಿಗೆ ಶೇ.85ರಷ್ಟು ಉದ್ಯೋಗ ನೀಡುವ ಮೀಸಲಾತಿ ಕಾಯ್ದೆಯನ್ನು ಜಾರಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಲು ಹಿಂದೆ-ಮುಂದೆ ನೋಡುವುದಿಲ್ಲ …

Read More »

ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಭಾನುವಾರ ಶಾಸಕಾಂಗ ಸಭೆ ಕರೆದಿದೆ: bsy

ಬೆಂಗಳೂರು,ಫೆ.13- ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಬಿಜೆಪಿ ಭಾನುವಾರ ಶಾಸಕಾಂಗ ಸಭೆ ಕರೆದಿದೆ. ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ವಹಿಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಗಿದೆ. ಕೆಲವು ಶಾಸಕರು ಕೈಕೊಡಬಹುದೆಂಬ ಭೀತಿಯೂ ಒಳಗೊಳಗೆ ಕಾಡುತ್ತಿದೆ. ಹೀಗಾಗಿ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಶಾಸಕಾಂಗ ಸಭೆ …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಸರ್ಕಾರ ಬದಲಾಯಿಸಿದೆ.ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಬದಲಾಯಿಸಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಇಂದು ಮದ್ಯಾಹ್ನದ ಹೊತ್ತಿಗೆ ಸರ್ಕಾರ ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.

Read More »

ಜನ ಸಂದಣಿಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿ

ಯಾವಾಗಲೂ ಜನ ಸಂದಣಿಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲೋದಕ್ಕೆ ಬಿಡುತ್ತಿರಲಿಲ್ಲ ಜನ ಓಡೋಡಿ ಬರುತ್ತಿದ್ದರು. ಆದರೆ ಇಂದು ಬಸ್‍ಗಳ ಸಂಚಾರವಿದ್ದರೂ ಪ್ರಯಾಣಿಕರು ಮಾತ್ರ ಬೆರಳೆಣಿಕೆಯಷ್ಟು ಮಾತ್ರ ಕಾಣಸಿಗುತ್ತಿದ್ದಾರೆ. ಹೌದು. ಇಂದು ಸರೋಜಿನ ಮಹಿಷಿ ವರದಿಯನ್ನ ಜಾರಿಗೆ ತರುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ನಾವು ಅರ್ಧ ಗಂಟೆಯಿಂದ ಕಾದರೂ ಜನ ಬರುತ್ತಿಲ್ಲ ಬಂದ್ ಅಂತ …

Read More »