ಕೊಡಗು: ಮಂಜಿನನಗರಿ ಮಡಿಕೇರಿ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ. ಇಲ್ಲಿನ ಸೌಂದರ್ಯ ಸವಿಯಲು ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ತನ್ನದೇ ವಿಶಿಷ್ಠ ಸಂಪ್ರದಾಯಗಳಿಂದ ಎಲ್ಲರ ಗಮನ ಸೆಳೆಯುವ ಜಿಲ್ಲೆಯಲ್ಲಿ ಎತ್ತ ನೋಡಿದರೂ ಕಾನನಗಳ ಹೊದ್ದು ಗಗನ ಚುಂಬಿಸುವ ಬೆಟ್ಟ ಗುಡ್ಡಗಳು, ಬೆಟ್ಟಗಳಿಗೆ ಮುತ್ತಿಕ್ಕುವ ಮೋಡಗಳ ಕಾಣಸಿಗುತ್ತವೆ. ಇಂತಹ ಸುಂದರ ತಾಣದಲ್ಲಿ ಪ್ರವಾಸಿಗರಿಗೂ ಸುತ್ತಾಡುವುದು ಎಂದರೆ ತುಂಬಾನೇ ಮಜಾ. ಆದರೆ ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಎದುರಾದ ಭೀಕರ ಭೂಕುಸಿತ ಇಡೀ ಜಿಲ್ಲೆಯನ್ನು ತತ್ತರಿಸುವಂತೆ …
Read More »ನಾನು ಕಾರ್ಮಿಕರ ಪರವಾಗಿ ನಿಲ್ಲುತ್ತೇನೆ. ಅವರ ಎಲ್ಲಾ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ: ಡಿ.ಕೆ.ಸುರೇಶ್
ರಾಮನಗರ(ಡಿಸೆಂಬರ್.24): ಟೊಯೋಟಾ ಕಿರ್ಲೋಸ್ಕರ್ ಕಂಪನಿ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಒಕ್ಕೂಟದ ಜಗಳ ಕಳೆದ ಸುಮಾರು ದಿನಗಳಿಂದ ನಡೆಯುತ್ತಿದೆ. ಇದೇ ವಿಚಾರವಾಗಿ ಸಂಸದ ಡಿ.ಕೆ.ಸುರೇಶ್ ಆಡಳಿತ ಮಂಡಳಿಯ ಜೊತೆಗೆ ಸಂಧಾನ ಸಭೆ ನಡೆಸಿದರು. ಆದರೆ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ಮೂಡದೇ ಸಭೆ ವಿಫಲವಾಯ್ತು. ಡಿ.ಕೆ.ಸುರೇಶ್ ಕೂಡ ಟೊಯೋಟಾ ವಿರುದ್ಧ ಕಿಡಿಕಾರಿದ್ದಾರೆ. ಕಾರ್ಮಿಕರು ಸಹ ಹೋರಾಟ ಮುಂದುವರೆಸಿದ್ದಾರೆ. ರಾಮನಗರ ಜಿಲ್ಲೆ ಬಿಡದಿ ಕೈಗಾರಿಕ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಹಾಗೂ …
Read More »ಸದ್ದಿಲ್ಲದೇ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಆಟ ಶುರು ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರು ಅವಿರೋಧ ವಾಗಿ ಆಯ್ಕೆ
ಬೆಳಗಾವಿ-ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸದ್ದಿಲ್ಲದೇ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಟ ಶುರು ಮಾಡಿದ್ದಾರೆ. ಗ್ರಾಮ ಮಟ್ಟದಿಂದಲೇ ಸಂಘಟನೆ ಕಟ್ಟುತ್ತಿರುವ ರಮೇಶ್ ಜಾರಕಿಹೊಳಿ ಅವರು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಕೈಯಾಡಿಸಿದ್ದು ಈಗ ಗುಟ್ಟಾಗಿ ಉಳಿದಿಲ್ಲ. ಯಾಕಂದ್ರೆ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೂ ಅಪಾರ ಅಭಿಮಾನಿಗಳನ್ನು ಹೊಂದಿದ್ದು.ಸಾಹುಕಾರ್ ರಮೇಶ್ ಗ್ರಾಮ ಪಂಚಾಯತ್ ಚುನಾವಣೆಯಲ್ಲಿಯೂ ಈ ಕ್ಷೇತ್ರದಲ್ಲಿ ಬೀಜ ಬೀತ್ತಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ …
Read More »ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೆ ಮತ್ತೆ ಎಡವಟ್ಟು ,ಮಲಗಿದ ಹೊತ್ತಲ್ಲಿ ನೈಟ್ ಕರ್ಫ್ಯೂ ದೊಡ್ಡ ಜೋಕ್ ಅಂತಿದ್ದಾರೆ ಜನ
: ಬೆಂಗಳೂರು: ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೆ ಮತ್ತೆ ಎಡವಟ್ಟು, ಎಡಬಿಡಂಗಿ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ಮಧ್ಯಾಹ್ನವಷ್ಟೇ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ಹೇರುವುದಾಗಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಕ್ರಿಸ್‍ಮಸ್ ಮಿಡ್ ನೈಟ್ ಪ್ರಾರ್ಥನೆ, ಹೊಸ ವರ್ಷಕ್ಕೆ ನಿರ್ಬಂಧ ಹೇರುವ ಸಲುವಾಗಿ ಈ ನಿರ್ಧಾರ ಅಂತಲೂ ಘೋಷಣೆ ಮಾಡಿದ್ದರು. ಆದ್ರೆ, ಸಂಜೆ ಹೊತ್ತಿಗೆ ಸರ್ಕಾರದ ನಿರ್ಧಾರವೇ ಬದಲಿ ಹೋಗಿದೆ. ಕೇವಲ …
Read More »ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕರೋನಾನ ಇಲ್ಲ ಗೂಬೆನಾ ಎಂಬ ಅನುಮಾನ: ಹೆಚ್.ಸಿ.ಮಹದೇವಪ್ ವ್ಯಂಗ್ಯ
ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ ಕಾಟಾಚಾರದ ನೈಟ್ ಕರ್ಫ್ಯೂಗೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ ವ್ಯಂಗ್ಯವಾಡಿದ್ದಾರೆ. ರಾಜ್ಯ ಸರ್ಕಾರದ ತರ್ಕರಹಿತವಾದ ಕರ್ಫ್ಯೂ ಆದೇಶವನ್ನು ಕಂಡ ನಂತರ ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕರೋನಾನ ಇಲ್ಲ ಗೂಬೆನಾ ಎಂಬ ಅನುಮಾನ ನನ್ನ ಕಾಡತೊಡಗಿದ್ದು ಈ ಮಾತು ಹಾಸ್ಯವಾಗಿ ಕಂಡರೂ ನನ್ನಲ್ಲಿ ದಿಗಿಲು ಹುಟ್ಟಿಸಿದೆ ಟ್ವೀಟ್ ಮೂಲಕ ಹೆಚ್.ಸಿ.ಮಹದೇವಪ್ಪ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. 9 ತಿಂಗಳ ಹಿಂದೆ ಕೊರೊನಾ ತಡೆಗಾಗಿ ಸರ್ಕಾರ ಮಾಡಿಕೊಂಡ ಯಡವಟ್ಟುಗಳು …
Read More »ಕೊಪ್ಪಳ ಗವಿಮಠದ ಜಾತ್ರೆ ಸದ್ಯ ಜಾತ್ರೆಗೆ ಜಿಲ್ಲಾಡಳಿತ ಬ್ರೇಕ್……..
ಕೊಪ್ಪಳ: ದಕ್ಷಿಣ ಭಾರತದ ಮಹಾಕುಂಭಮೇಳ ಎಂದೇ ಪ್ರಖ್ಯಾತಿ ಪಡೆದಿರುವ ಕೊಪ್ಪಳ ಗವಿಮಠದ ಜಾತ್ರೆ ನಡೆಯುತ್ತಾ? ಇಲ್ಲವಾ? ಅನ್ನೋ ಅನುಮಾನ ಭಕ್ತರಲ್ಲಿ ಮೂಡಿದೆ. ಸದ್ಯ ಜಾತ್ರೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಪ್ರತಿ ವರ್ಷ ಈ ಜಾತ್ರೆಯಲ್ಲಿ ಸುಮಾರು ಐದು ಲಕ್ಷಕ್ಕೂ ಅಧಿಕ ಜನ ಸೇರುತ್ತಾರೆ. ಲಕ್ಷಾಂತರ ಜನರು ಸೇರುವ ಜಾತ್ರೆಗೆ ನಾವು ಅನುಮತಿ ನೀಡಲ್ಲ. ಸರ್ಕಾರದ ನಿರ್ದೇಶನದಂತೆ ಕೋವಿಡ್ ನಿಯಮಗಳ ಪ್ರಕಾರ ಜಾತ್ರೆಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಜಿಲ್ಲೆಯ ಯಾವುದೇ ಜಾತ್ರೆಗೆ …
Read More »ರಾಜ್ಯಾದ್ಯಂತ ಡಿ.24 ರಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಕಟೀಲು ಯಕ್ಷಗಾನ ಮೇಳ ಕಾಲಮಿತಿ ಯಕ್ಷಗಾನವನ್ನು ಪ್ರದರ್ಶಿಸಲಿದೆ.
ಮಂಗಳೂರು: ರಾಜ್ಯಾದ್ಯಂತ ಡಿ.24 ರಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಕಟೀಲು ಯಕ್ಷಗಾನ ಮೇಳ ಕಾಲಮಿತಿ ಯಕ್ಷಗಾನವನ್ನು ಪ್ರದರ್ಶಿಸಲಿದೆ. ಕಟೀಲು ದೇವಸ್ಥಾನದ ಎಲ್ಲಾ ಆರು ಯಕ್ಷಗಾನ ಮೇಳಗಳು ಡಿಸೆಂಬರ್ 24ರ ಗುರುವಾರದಿಂದ ಸಂಜೆ 4 ಗಂಟೆಗೆ ಚೌಕಿ ಪೂಜೆ ನಡೆದು ಬಳಿಕ ಯಕ್ಷಗಾನ ಪ್ರಸಂಗ ಆರಂಭಿಸಲಿದೆ. ರಾತ್ರಿ 9:45 ಕ್ಕೆ ಮಂಗಳ ಹಾಡುವುದರ ಮೂಲಕ ಯಕ್ಷಗಾನ ಕೊನೆಗೊಳ್ಳಲಿದೆ. ಎಲ್ಲ ಕಲಾವಿದರು ಮಧ್ಯಾಹ್ನ 2:30ಕ್ಕೆ ಚೌಕಿಯಲ್ಲಿ ಹಾಜರಿರಲು ಸೂಚಿಸಲಾಗಿದೆ. ನಾಳೆಯಿಂದ ಕರ್ಫ್ಯೂ ಮುಗಿಯುವ …
Read More »ಕೋಟಿ ಕೋಟಿ ಖರ್ಚು ಮಾಡಿ ಮನೆಗಳನ್ನು ನಿರ್ಮಾಣ ಮಾಡಿದರು ಕೂಡ ಸಾರ್ವಜನಿಕರಿಗೆ ಸರಿಯಾಗಿ ಉಪಯೋಗವಾಗುತ್ತಿಲ್ಲ.
ಕೋಟಿ ಕೋಟಿ ಖರ್ಚು ಮಾಡಿ ಮನೆಗಳನ್ನು ನಿರ್ಮಾಣ ಮಾಡಿದರು ಕೂಡ ಸಾರ್ವಜನಿಕರಿಗೆ ಸರಿಯಾಗಿ ಉಪಯೋಗವಾಗುತ್ತಿಲ್ಲ. ದಾ ಸಾಲಾಪುರ್ ಗ್ರಾಮ ಪಂಚಾಯತಿಯಲ್ಲಿ ವಸತಿ ಯೋಜನೆಯಲ್ಲಿ ಮನೆಗಳನ್ನು ನಿರ್ಮಾಣ ಮಾಡಿದರು ಕೂಡ ಮಾಡದಂತಾಗಿದೆ. ದಾ ಸಾಲಾಪುರ ಗ್ರಾಮ ಪಂಚಾಯಿತಿಯಿಂದ 2006 ರಲ್ಲಿ ನವಗ್ರಾಮ ಯೋಜನೆ ಅಡಿಯಲ್ಲಿ 60 ಮನೆಗಳನ್ನು ನಿರ್ಮಾಣ ಮಾಡಿ ಕೈಬಿಟ್ಟಿದ್ದಾರೆ ಹಾಗೂ ಅಲ್ಲಿಂದ ಇಲ್ಲಿಯವರೆಗೆ ಸಾರ್ವಜನಿಕರಿಗೆ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ ರಸ್ತೆಯ ವ್ಯವಸ್ಥೆ ಹಾಗೂ ಮನೆಗಳಿಗೆ ವಿದ್ಯುತ್ ದೀಪ …
Read More »ಕಣ್ಣುಮುಚ್ಚಿ ಕುಳಿತ ಸಾಲಾಪುರ ಗ್ರಾಮ ಪಂಚಾಯತಿ ಅಧಿಕಾರಿಗಳು.
ಕಳೆದ ಒಂದು ವರ್ಷದಿಂದ ದಾ ಸಾಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ 3 ನೇ ವಾರ್ಡಿನಲ್ಲಿ ರಸ್ತೆಯ ಮೇಲೆ ಚರಂಡಿಯ ನೀರು ಮೊಣಕಾಲು ತನಕ ನಿಂತು ಗಬ್ಬುನಾರುತ್ತಿದೆ. ಇದರಿಂದ ಸೊಳ್ಳೆಗಳು ಹಾಗೂ ಕೀಟನಾಶಕಗಳು ಉತ್ಪತ್ತಿಯಾಗಿ ಸಾರ್ವಜನಿಕರಿಗೆ ಹಲವಾರು ರೋಗಗಳು ಬರುವ ಸಾಧ್ಯತೆ ಇದೆ. ಈ ಹಿಂದೆ ಸಾರ್ವಜನಿಕರು ಗ್ರಾಮ ಪಂಚಾಯತಿಗೆ ರಸ್ತೆಯ ಮೇಲೆ ನಿಂತ ನೀರನ್ನು ಸರಿಯಾಗಿ ಚರಂಡಿ ಮಾಡಿ ಎಂದು ಗ್ರಾಮ ಪಂಚಾಯತಿ ಯವರಿಗೆ ಹೇಳಿದರೂ ಕೂಡ …
Read More »ರಾಮದುರ್ಗ ತಾಲೂಕು ದಾ ಸಾಲಾಪುರ 3ನೇ ವಾರ್ಡಿನ ಚುನಾವಣೆ ಗ್ರಾಮಸ್ಥರಿಂದ ಬಹಿಷ್ಕಾರ.
ರಾಮದುರ್ಗ ತಾಲೂಕು ದಾ ಸಾಲಾಪುರ 3ನೇ ವಾರ್ಡಿನ ಚುನಾವಣೆ ಗ್ರಾಮಸ್ಥರಿಂದ ಬಹಿಷ್ಕಾರ. ದಾ ಸಾಲಾಪುರ್ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ 3 ನೇ ವಾರ್ಡಿನಲ್ಲಿ ಚರಂಡಿಯ ನೀರು ರಸ್ತೆಯ ಮೇಲೆ ಮೊಣಕಾಲು ತನಕ ನೀರು ನಿಂತಿದೆ. ಒಂದು ವರ್ಷ ಕಳೆದರೂ ಚರಂಡಿ ಮಾಡದ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಅಲ್ಲಿದ್ದಂತಹ ಗ್ರಾಮಸ್ಥರು ಪಂಚಾಯತಿಗೆ ಚರಂಡಿ ನಿರ್ಮಾಣ ಮಾಡಿ ಎಂದು ಕೇಳಿದರೂ ಕೂಡಾ ಅಲ್ಲಿದ್ದಂತಹ ಸಿಬ್ಬಂದಿಗಳು ಗ್ರಾಮಸ್ಥರಿಗೆ ನೀವೇ ಮಾಡಿಸಿಕೊಳ್ಳಿ ಎಂದು ಉಡಾಪಿ ಮಾತುಗಳನ್ನಾಡುತ್ತಾನೆ. …
Read More »
Laxmi News 24×7