Breaking News

ಟೂಲ್‌ಕಿಟ್‌ ಹಗರಣ ಬಯಲಾಗುತ್ತಿದ್ದಂತೆಯೇ ಹೆಚ್ಚಾಯ್ತು ‘ಮೋದಿಗೋಬ್ಯಾಕ್‌’ ಟ್ರೆಂಡ್‌- ಸಂಕಷ್ಟದಲ್ಲಿ ನಟಿ

ಚೆನ್ನೈ: ಭಾರತದ ವಿರುದ್ಧ ಮಹಾ ಷಡ್ಯಂತ್ರ ರಚಿಸಿರುವ ‘ಟೂಲ್‌ಕಿಟ್‌’ ಹಗರಣ ಬಯಲಾಗುತ್ತಿದ್ದಂತೆಯೇ, ಇತ್ತ ಮೋದಿಗೋಬ್ಯಾಕ್‌ ಟ್ರೆಂಡ್‌ ಮತ್ತೆ ಶುರುವಾಗಿದೆ. ರೈತರ ಪ್ರತಿಭಟನೆಯನ್ನು ನೆಪ ಮಾಡಿಕೊಂಡು ಭಾರತದ ವಿರುದ್ಧ ಮಹಾ ಸಮರ ಸಾರಿರುವ ಕೆಲವು ಕಿಡಿಗೇಡಿಗಳ ಕೃತ್ಯ ಒಂದೊಂದಾಗಿ ಹೊರಕ್ಕೆ ಬರುತ್ತಿದ್ದಂತೆಯೇ ಇತ್ತ ಮೋದಿಗೋಬ್ಯಾಕ್‌ ಎಂದು ಹಲವರು ಟ್ವೀಟ್‌ ಶುರು ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡಿಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಈ ಹ್ಯಾಷ್‌ಟ್ಯಾಗ್‌ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, …

Read More »

ವರ್ತೂರು ಪ್ರಕಾಶ್ ಕಾಂಗ್ರೆಸ್ ಸೇರಲು ಸಿದ್ಧತೆ

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದು, ಈಗಾಗಲೇ ಮುಖಂಡರ ಜೊತೆ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಏನು ಹೇಳಿದರೂ ಮಾಡಲು ಸಿದ್ಧ. ಸಿದ್ದರಾಮಯ್ಯ ಹೋಗುವ ದಾರಿಯಲ್ಲಿ ನಾನು ಹೋಗುತ್ತೇನೆ. ಅವರು ಮಿಸಲಾತಿ ಹೋರಾಟಕ್ಕೆ ಹೋಗಿಲ್ಲ, ನಾನೂ ಕೂಡ ಹೋಗಿಲ್ಲ. ಸಿದ್ದರಾಮಯ್ಯ ಕೋಲಾರದಿಂದಲೇ ಅಹಿಂದ ಸಮಾವೇಶ ಆರಂಭಿಸಲಿ. ನಾನೇ 2 ಲಕ್ಷ ಜನರನ್ನು ಸೇರಿಸುತ್ತೇನೆ. ನಾನು …

Read More »

ಸರ್ಕಾರದ ವೈಫಲ್ಯ ಖಂಡಿಸಿ 18 ಕ್ಕೆ ಬೆಳಿಗ್ಗೆ 11 ಗಂಟೆಗೆ ಕಿತ್ತೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ

ಕಿತ್ತೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ, ತೈಲ, ಗ್ಯಾಸ್ ಬೆಲೆ ಹೆಚ್ಚಿಸಿರುವ ಸರ್ಕಾರದ ವೈಫಲ್ಯ ಖಂಡಿಸಿ ಫೆ. 18 ಕ್ಕೆ ಬೆಳಿಗ್ಗೆ 11 ಗಂಟೆಗೆ ಕಿತ್ತೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನವಲಗಟ್ಟಿ ತಿಳಿಸಿದ್ದಾರೆ. ಪಟ್ಟಣದ ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಲ್ಲಿಯ ಚನ್ನಮ್ಮಾಜಿಯ ವೃತ್ತದಿಂದ ತಹಶೀಲ್ದಾರ …

Read More »

ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಇಲ್ಲಿಗೆ ಸಮೀಪದ ರಾಜಾಪೂರ ಗ್ರಾಮದಲ್ಲಿ 8.17 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ …

Read More »

ರಮೇಶ ಜಾರಕಿಹೊಳಿ ಇನ್ನೂ ಬಿಜೆಪಿಯಲ್ಲಿ ಸೆಟ್ಲ್ ಆದಂತಿಲ್ಲ. ಎರಡೂ ದೋಣಿಯಲ್ಲಿ ಕಾಲಿಟ್ಟಿರುವಂತಿದೆ: ಹೆಬ್ಬಾಳಕರ್

ಬೆಳಗಾವಿ – ಸಿದ್ದರಾಮಯ್ಯ ಇಂದಿಗೂ ನಮ್ಮ ನಾಯಕರು, ದಿನಕ್ಕೆರಡು ಬಾರಿ ಅವರೊಂದಿಗೆ ಮಾತನಾಡುತ್ತೇನೆ ಎನ್ನುವ ಸಚಿವ ರಮೇಶ ಜಾರಕಿಹೊಳಿ ಇನ್ನೂ ಬಿಜೆಪಿಯಲ್ಲಿ ಸೆಟ್ಲ್ ಆದಂತಿಲ್ಲ. ಎರಡೂ ದೋಣಿಯಲ್ಲಿ ಕಾಲಿಟ್ಟಿರುವಂತಿದೆ ಎಂದು ಕೆಪಿಸಿಸಿ ವಕ್ತಾರರೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಟಾಂಗ್ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಮೇಶ ಜಾರಕಿಹೊಳಿ, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಉನ್ನತ ನಾಯಕರು ಇಂದಿಗೂ ತಮ್ಮ ಸಂಪರ್ಕದಲ್ಲಿದ್ದಾರೆ. ಸಿದ್ದರಾಮಯ್ಯ ಜೊತೆ ದಿನಕ್ಕೆರಡು ಬಾರಿ ಮಾತನಾಡುತ್ತೇನೆ …

Read More »

ಹಾವು-ಚೇಳುಗಳು ಯಡಿಯೂರಪ್ಪನವರ ಕುಟುಂಬದಲ್ಲೇ ಇದ್ದಾರೆ’: ಯತ್ನಾಳ್ ತಿರುಗೇಟು

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹರಿಹಾಯ್ದಿದ್ದಾರೆ. ಹಾವು-ಚೇಳುಗಳನ್ನು ಎದುರಿಸಿ ನಮ್ಮ ತಂದೆ ಬಂದಿದ್ದಾರೆ ಎಂದು ಸಿಎಂ ಪುತ್ರ ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಸಿಎಂ ಕುರ್ಚಿಗೆ ಹೈಕಮಾಂಡ್ ನಿಂದ ಕುತ್ತು ಬಂದಾಗಲೆಲ್ಲಾ ರಾಜಕೀಯ ಸ್ಥಿರತೆಗೆ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಬಳಸಿಕೊಳ್ಳುತ್ತಾರೆ. ಅವರ ಉದ್ದೇಶ ಪಂಚಮಸಾಲಿ ಲಿಂಗಾಯತರಿಗೆ ಅವಕಾಶ ನೀಡುವುದಲ್ಲ, …

Read More »

ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಯಡಿಯೂರಪ್ಪ ಕುಟುಂಬದ ಸರ್ಕಾರ: ಎಚ್ ಡಿಕೆ

ಶಿವಮೊಗ್ಗ: ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಜೆಟ್ ನ ಕಾರ್ಯಕ್ರಮಗಳನ್ನು ವಿಭಜಿಸಿ ಶಿವಮೊಗ್ಗದ ನಗರದ ಅಭಿವೃದ್ದಿಗೆ ನೀಡಲಾಗಿತ್ತು. ನಾನು ಶಿವಮೊಗ್ಗದ ಕೆಲ ಪ್ರದೇಶಗಳನ್ನ ನೋಡಿದ್ದೇನೆ. ಅವುಗಳ ಅಭಿವೃದ್ಧಿ ಆಗಿಲ್ಲ. ಎರಡು ವರ್ಷದ ಬಜೆಟ್ ಹಣ ಎಲ್ಲಿ ಹೋಯಿತು. ರಾಜ್ಯದ ಜನರು ಕಟ್ಟುವ ತೆರಿಗೆ ಹಣ ದುರ್ಬಳಿಕೆ ಆಗುತ್ತಿದೆ ಎಂದರು. ರಾಜ್ಯದ ರಾಜಕಾರಣದಲ್ಲಿ ದೊಡ್ಡಮಟ್ಟದಲ್ಲಿ …

Read More »

ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ. ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚಾರ ಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಿಸಿ ಆದೇಶಿಸಲಾಗಿದೆ. ಕೃಷಿ ಇಲಾಖೆಯ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದರು. ಅಲ್ಲದೇ ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು …

Read More »

ನಿಧಿ ಸಮರ್ಪಣಾ ಅಭಿಯಾನ ವೇಳೆ ಕಾರ್ಯಕರ್ತನ ಹತ್ಯೆ ಖಂಡಿಸಿ ವಿಎಚ್‍ಪಿ, ಬಜರಂಗದಳ ಪ್ರತಿಭಟನೆ

ದೆಹಲಿಯಲ್ಲಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ವೇಳೆ ಬಜರಂಗದಳ ಕಾರ್ಯಕರ್ತನ ಮೇಲೆ 10-15 ಯುವಕರ ತಂಡವೊಂದು ಹಲ್ಲೆ ನಡೆಸಿ ಹತ್ಯೆ ಮಾಡಿದ್ದು, ಕೂಡಲೇ ಯುವಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು. ದೆಹಲಿಯಲ್ಲಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ತೆರಳಿದ್ದ ವೇಳೆ …

Read More »

ಅಂದೊಂದಿತ್ತು ಕಾಲ’ ಚಿತ್ರೀಕರಣಕ್ಕೆ ಪುನೀತ್‌ ಕ್ಲ್ಯಾಪ್‌

ಬೆಂಗಳೂರು: ‘ನಮ್ಮ ಬಸವ’ ಚಿತ್ರದಲ್ಲಿ ‘ಅಂದೊಂದಿತ್ತು ಕಾಲ’ಕ್ಕೆ ಹೆಜ್ಜೆ ಹಾಕಿದ್ದ ನಟ ಪುನೀತ್‌ ರಾಜ್‌ಕುಮಾರ್‌ ಸೋಮವಾರ, ಅಣ್ಣ ರಾಘವೇಂದ್ರ ರಾಜ್‌ಕುಮಾರ್‌ ಅವರ ಹಿರಿಯ ಪುತ್ರ ನಟ ವಿನಯ್‌ ರಾಜ್‌ಕುಮಾರ್‌ ಅವರ ಹೊಸ ಚಿತ್ರ ‘ಅಂದೊಂದಿತ್ತು ಕಾಲ’ಕ್ಕೆ ಕ್ಲ್ಯಾಪ್‌ ಮಾಡುವ ಮುಖಾಂತರ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ನಾಗರಬಾವಿಯ ವಿನಾಯಕ ವೆಂಕಟೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಿತು. ರಾಘವೇಂದ್ರ ರಾಜ್‌ಕುಮಾರ್‌, ನಿರ್ದೇಶಕ ಪ್ರೇಮ್‌ ಸೇರಿದಂತೆ ಗಣ್ಯರು ಹಾಜರಿದ್ದರು. ಅದಿತಿ ಪ್ರಭುದೇವ ಹಾಗೂ …

Read More »