ಬೆಂಗಳೂರು : ಹೆಚ್ಎಂಪಿವಿ ಅಪಾಯಕಾರಿ ವೈರಸ್ ಅಲ್ಲ, ಆದರೂ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಚೈನಾ ವೈರಸ್ ಕಾಣಿಸಿಕೊಂಡಿದೆ. ಕರ್ನಾಟಕಕ್ಕೆ HMPV ವೈರಸ್ ಬಂದಿದೆ ಎಂಬ ಮಾಹಿತಿ ಬಂದಿದೆ. ಮುಂಜಾಗ್ರತಾ ಕ್ರಮಕ್ಕೆ ಆರೋಗ್ಯ ಇಲಾಖೆಗೆ ದಿನೇಶ್ ಗುಂಡೂರಾವ್ ಅವರಿಗೆ ಸೂಚನೆ ಕೊಟ್ಟಿದ್ದೇನೆ. ಈಗಾಗಲೇ ಇದರ ಬಗ್ಗೆ ಸಭೆ ನಡೆಯುತ್ತಿದೆ. ಈ ವೈರಸ್ ಎರಡು ಮಕ್ಕಳಲ್ಲಿ ಕಾಣಿಸಿಕೊಂಡಿದೆ ಎಂದರು. ಆರೋಗ್ಯ ಇಲಾಖೆಯವರು ಏನೇನು …
Read More »ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ
ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆರ್‌ಎಂವಿ 2ನೇ ಹಂತದಲ್ಲಿರುವ ಮನೆಯೊಂದರಲ್ಲಿ ನಡೆದಿದೆ. ಮೃತರನ್ನು ಅನೂಪ್ (38), ಅವರ ಪತ್ನಿ ರಾಖಿ (35), ಮತ್ತು ಐದು ಹಾಗೂ 2 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸದಾಶಿವನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಮಕ್ಕಳಿಬ್ಬರಿಗೂ ವಿಷಪ್ರಾಶನ ಮಾಡಿದ ಬಳಿಕ ದಂಪತಿ ಆತ್ಮಹತ್ಯೆ …
Read More »ಕೆಎಸ್ಆರ್ಟಿಸಿ ಆರೋಗ್ಯ ಯೋಜನೆಗೆ ಸಿಎಂ ಚಾಲನೆ
ಬೆಂಗಳೂರು: ಕೆಎಸ್ಆರ್ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಮೂಲಕ ಸಾರಿಗೆ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಈ ಯೋಜನೆಯಡಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲ ಆಸ್ಪತ್ರೆಗಳು ಕೆಎಸ್ಆರ್ಟಿಸಿ ನೌಕರರು ಮತ್ತು ಕುಟುಂಬದವರು ಆಸ್ಪತ್ರೆಗೆ ಬಂದಾಗ ಅವರನ್ನು ಗೌರವಯುತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆ ನೀಡಬೇಕು ಎಂದು …
Read More »ಚರಂಡಿಯಲ್ಲಿ ನವಜಾತ ಶಿಶು ಪತ್ತೆ
ಮೈಸೂರು : ಇಲ್ಲಿನ ಹೆಚ್. ಡಿ ಕೋಟೆ ತಾಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿನ ಚರಂಡಿಯಲ್ಲಿ ನವಜಾತ ಶಿಶುವೊಂದು ಇಂದು ಪತ್ತೆಯಾಗಿದೆ. ಇದೀಗ ಮಗುವನ್ನ ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳಗ್ಗೆ ಗ್ರಾಮಸ್ಥರು ತಮ್ಮ ಹೊಲಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು ಅಳುವ ಶಬ್ಧ ಕೇಳಿಸಿದೆ. ಕೂಡಲೇ ಗ್ರಾಮಸ್ಥರು ಸ್ಥಳೀಯ ಆಶಾ ಕಾರ್ಯಕರ್ತರಿಗೆ ಈ ವಿಚಾರ ತಿಳಿಸಿದ್ದಾರೆ. ತಕ್ಷಣ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಥಳಕ್ಕೆ …
Read More »ಇನ್ಫೋಸಿಸ್ ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಸೆರೆ ಕಾರ್ಯಾಚರಣೆ ಐದನೇ ದಿನವೂ ಮುಂದುವರೆದಿದೆ.
ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಸೆರೆ ಕಾರ್ಯಾಚರಣೆ ಐದನೇ ದಿನವೂ ಮುಂದುವರೆದಿದೆ. ಚಿರತೆಯ ಚಲನವಲನದ ಬಗ್ಗೆ ಈವರೆಗೆ ಸುಳಿವು ಕಂಡುಬಂದಿಲ್ಲ. ಡಿಸೆಂಬರ್ 31ರಂದು ಮುಂಜಾನೆ ಇನ್ಫೋಸಿಸ್ ಭದ್ರತಾ ಸಿಬ್ಬಂದಿಗಳ ಜೀಪ್‌ಗೆ ಅಡ್ಡಲಾಗಿ ಹಾದು ಹೋಗಿದ್ದ ಚಿರತೆಯ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಪತ್ತೆಯಾಗಿದ್ದು ಬಿಟ್ಟರೆ, ಕಳೆದ ಐದು ದಿನದಿಂದ ಚಿರತೆ ಯಾರ ಕಣ್ಣಿಗೂ ಕಂಡಿಲ್ಲ. ಚಿರತೆ ಸೆರೆಗಾಗಿ ಇನ್ಫೋಸಿಸ್ ಆವರಣದಲ್ಲಿ 12ಕ್ಕೂ ಹೆಚ್ಚು ಕ್ಯಾಮರಾ ಟ್ರ್ಯಾಪ್ಗಳನ್ನು ಅಳವಡಿಸಲಾಗಿದ್ದು, …
Read More »ಬೆಳಗಾವಿ ಜಿಲ್ಲಾಡಳಿತದ ವಿರೋಧ ನಡುವೆಯೂ ಸಂಭಾಜಿ ಮಹಾರಾಜ ಪ್ರತಿಮೆ ಅನಾವರಣ
ಬೆಳಗಾವಿ: ಜಿಲ್ಲಾಡಳಿತದ ವಿರೋಧದ ನಡುವೆಯೂ ಭಾನುವಾರ ರಾತ್ರಿ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣಗೊಂಡಿತು. ಶಿವಾಜಿ ಮಹಾರಾಜರ 13ನೇ ವಂಶಸ್ಥರಾದ ಶಿವೇಂದ್ರರಾಜೇ ಭೋಸ್ಲೆ, ಶಾಸಕ ಅಭಯ್ ಪಾಟೀಲ ಸೇರಿ ಸಾವಿರಾರು ಜನರು ಇದಕ್ಕೆ ಸಾಕ್ಷಿಯಾದರು. ಕಳೆದ ಐದಾರು ದಿನಗಳಿಂದ ಬೆಳಗಾವಿಯ ಅನಗೋಳದ ಸಂಭಾಜಿ ವೃತ್ತದಲ್ಲಿ 21 ಅಡಿ ಎತ್ತರದ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣಕ್ಕೆ ಶಾಸಕ ಅಭಯ ಪಾಟೀಲ ಹಾಗೂ ಪಾಲಿಕೆ ಸದಸ್ಯರು ವಿಶೇಷ ತಯಾರಿ ನಡೆಸಿದ್ದರು. ಆದರೆ, ಇದಕ್ಕೆ …
Read More »ಪತಿಯ ಅನುಮಾನ ರೋಗಕ್ಕೆ ಹಾರಿ ಹೋಯ್ತು ಪತ್ನಿ ಪ್ರಾಣ..!
ಕೊಪ್ಪಳ, (ಜನವರಿ 05): ಆಕೆ ಮುದ್ದು ಮುಖದ ತಾವರೆಯಂತಿದ್ದಳು. ಮನೆಯಲ್ಲಿ ಚೆನ್ನಾಗಿ ಸಾಕಿದ್ದ ಹೆತ್ತವರು,ಗಿಣಿಯಂತೆ ಇದ್ದ ಮಗಳನ್ನು ಮದುವೆ ಮಾಡಿ, ಆಕೆಯ ಸಂಸಾರದ ಬಾಳು ಆನಂದಸಾಗರವಾಗಲಿ ಅಂತ ಹರಿಸಿದ್ದರು. ಮದುವೆಯಾದ ಒಂದೇ ವರ್ಷಕ್ಕೆ ಮುದ್ದಾದ ಹೆಣ್ಣು ಮಗು ಕೂಡಾ ಹುಟ್ಟಿತ್ತು. ಮದುವೆಯಾದ ಮಗಳು ಚೆನ್ನಾಗಿರಲಿ ಅಂತ ಹೆತ್ತವರು ಸಾಕಷ್ಟು ವರದಕ್ಷಿಣೆ ನೀಡಿದ್ದರು. ಅಳಿಯ ಕೇಳಿದಾಗ ಮತ್ತೆ ಹಣ ಕೂಡಾ ನೀಡಿದ್ದರು. ಆದ್ರೆ ಇಂತಹ ಮುದ್ದಾದ ಮಗಳು, ಬಾರದ ಲೋಕಕ್ಕೆ ಹೋಗಿದ್ದ ಸುದ್ದಿ …
Read More »ಮಾಜಿ ಲವರ್ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ನೆಲಮಂಗಲ, ಜನವರಿ 05: ಮಾಜಿ ಲವರ್ನಿಂದ ಯುವತಿಗೆ (girl) ಕಿರುಕುಳ ನೀಡಿದ್ದಲ್ಲದೇ ಅವಳ ಬೈಕ್ ಕದ್ದು, ಒಂದು ದಿನದ ಬಳಿಕ ಜಖಂಗೊಳಿಸಿ ಅದೇ ಜಾಗದಲ್ಲಿ ತಂದು ನಿಲ್ಲಿಸಿ ಪರಾರಿ ಆಗಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಚಿಕ್ಕಬಿದರಕಲ್ಲು ಗ್ರಾಮದ ಸುನೀಲ್ ಗೌಡನಿಂದ ಕಿರುಕುಳ ಆರೋಪ ಮಾಡಲಾಗಿದೆ. ನಿಲ್ಲಿಸಿದ್ದ ಬೈಕ್ ಕದಿಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಬೇರೊಬ್ಬ ಯುವಕನ ಜೊತೆ ಸಂಬಂಧ ಆರೋಪ ಮೇರೆಗೆ ಇಬ್ಬರ ಮಧ್ಯೆ ಬ್ರೇಕ್ ಆಪ್ ಆಗಿತ್ತು. ಕಿರುಕುಳ ಸಂಬಂಧ ಪೀಣ್ಯಾ …
Read More »ದುಡಿಯುವ ಗಂಡುಮಕ್ಕಳಿಗೆ ಶೇ.15% ಬಸ್ ಪ್ರಯಾಣ ದರ ಏರಿಕೆ ಭಾರ: ಸಚಿವ ಶಿವಾನಂದ ಪಾಟೀಲ್
ಹಾವೇರಿ: “ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಬಸ್ ಪ್ರಯಾಣ ದರ ನಮಗಿಂತ ದರ ಹೆಚ್ಚಿದೆ. ನಮ್ಮಲ್ಲಿ ಕಡಿಮೆ ಇದೆ” ಎಂದು ಬಸ್ ಟಿಕೆಟ್ ದರ ಏರಿಕೆಯನ್ನು ಸಚಿವ ಶಿವಾನಂದ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿಯವರಿಗೆ ಹೋರಾಟ ಮಾಡೋದು ಬಿಟ್ಟು ಬೇರೆ ಏನು ಕೆಲಸ ಹೇಳಿ?. ಅವರು ಒಂದು ಸಲವಾದರೂ ಅಭಿವೃದ್ಧಿ ಬಗ್ಗೆ ಮಾತಾನಾಡುತ್ತಾರಾ?. ಶಕ್ತಿ ಯೋಜನೆಯಲ್ಲಿ ಬಡ ಜನರನ್ನು ಓಡಾಡಿಸ್ತಿದ್ದೇವೆ ಅಂದರೆ ಅಟ್ ಲೀಸ್ಟ್ ನೋ …
Read More »ಚಿತ್ರ ಸಂತೆ: ಗಮನ ಸೆಳೆದ ಕ್ಲೇ ಆರ್ಟ್, ಡಾಟ್ ಅಂಡ್ ರಿವರ್ಸ್ ಪೇಂಟಿಂಗ್ಸ್
ಬೆಂಗಳೂರು: ನಗರದ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ತು ಇಂದು ಆಯೋಜಿಸಿರುವ 22ನೇ ಚಿತ್ರ ಸಂತೆಯಲ್ಲಿ ಹಲವು ವಿಧದ ಮನಮೋಹಕ ಚಿತ್ರಕಲೆಗಳು ಕಲಾಭಿಮಾನಿಗಳಿಗೆ ಬೆರಗು ಮೂಡಿಸಿದವು. ಡಾಟ್ ಪೇಂಟಿಂಗ್, ರಿವರ್ಸ್ ಪೇಂಟಿಂಗ್ ಮತ್ತು ಕ್ಲೇ ಆರ್ಟ್ ಮೂಲಕ ಮೂಡಿ ಬಂದ ಕಲಾಕೃತಿಗಳು ಚಿತ್ರಸಂತೆಯ ಮೆರುಗು ಹೆಚ್ಚಿಸಿದವು. ಡಾಟ್ ಪೇಂಟಿಂಗ್ ವಿಶೇಷತೆಯೇನು? ಪಶ್ಚಿಮ ಬಂಗಾಳದ ಕೋಲ್ಕತ್ತಾ ಮೂಲದ ವೃತ್ತಿಪರ ಚಿತ್ರಕಲಾವಿದ ಉಷಾರಂಜನ್ ಮಂಡಲ್ ಅವರ ಡಾಟ್ ಪೇಂಟಿಂಗ್ ವಿಶೇಷವಾಗಿ ಜನರ ಗಮನ ಸೆಳೆಯಿತು. ತರಹೇವಾರಿ ಪೆನ್ …
Read More »