Breaking News

ಮತ್ತೆ ಶುರುವಾಯ್ತು ಸಂಪುಟ ಸರ್ಕಸ್: ಸಿ.ಟಿ.ರವಿ ಫಸ್ಟ್ ವಿಕೆಟ್…?

ತುಮಕೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಸಿಕ್ಕ ಬಳಿಕ ಸಿ.ಟಿ. ರವಿ ಅವರು ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ತುಮಕೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎನ್ನುವಂತ ನಿಯಮವಿದೆ. ಈ ಬಗ್ಗೆ ಸಚಿವ ಸಿಟಿ ರವಿಯವರಿಗೂ ಗಮನವಿದೆ. ಹೀಗಾಗಿ ಅವರೇ ಸ್ವಯಂ ಪ್ರೇರಿತರಾಗಿ ಸಚಿವ …

Read More »

ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರ

ಬೆಂಗಳೂರು: ಯಲಹಂಕದ ಅನಂತಪುರ ಗೇಟ್ ಬಳಿ ಇರುವ ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 11 ಕೆಪಿಟಿಸಿಎಲ್, 2 ಬಿಎಚ್​​ಇಎಲ್​​ ಹಾಗೂ ಇತರೆ ಇಬ್ಬರು ಇಂಜಿಯರ್‌ಗಳು ಗಾಯಗೊಂಡಿದ್ದು, ಎಲ್ಲರನ್ನೂ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅನಂತ್‌ಪುರ ಗೇಟ್‌ ಬಳಿ ನಸುಕಿನ ಜಾವ 3.30ಕ್ಕೆ ಅವಘಡ ಸಂಭವಿಸಿರೋದಾಗಿ ಅಧಿಕಾರಿಯೊಬ್ಬರು ತಿಳಿಸಿದರು. ಆಸ್ಪತ್ರೆಗೆ ಅಲೆದಾಟ ಗಾಯಾಳುಗಳನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. …

Read More »

ದಿವಂಗತ ಡಿ.ಕೆ ರವಿ ಪತ್ನಿಗೆ ಕುಸುಮಾಗೆ ಟಿಕೆಟ್ :ರವಿ ಕುಟುಂಬದವರಿಂದ ಭಾರಿ ವಿರೋಧ

ತುಮಕೂರು: ಆರ್.ಆರ್.ನಗರ ಉಪ ಚುನಾವಣೆಗೆ ಪ್ರಾಮಾಣಿಕ ಅಧಿಕಾರಿಯಾಗಿದ್ದ ದಿವಂಗತ ಡಿ.ಕೆ ರವಿ ಪತ್ನಿಗೆ ಕುಸುಮಾಗೆ ಟಿಕೆಟ್ ನೀಡುತ್ತಾರೆಂಬ ವದಂತಿ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಡಿ.ಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುತ್ತಿರುವ ವಿಷಯ ತಿಳಿದ ರವಿ ಕುಟುಂಬದವರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ನನ್ನ ಮಗನ ಜೊತೆ ಅವಳೂ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ ಎಂದು ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ದೊಡ್ಡಕೊಪ್ಪಲಿನಲ್ಲಿ ಡಿ.ಕೆ ರವಿ ತಾಯಿ ಗೌರಮ್ಮ ಆಕ್ರೋಶ ಹೊರ …

Read More »

‘ಅಂಗಡಿ ಕುಂಟುಂಬದವರಿಗೆ ಅನ್ಯಾಯ : ಡಿ ಕೆ ಸಿ ಗೆ ರಮೇಶ ಜಾರಕಿಹೊಳಿ ತಿರುಗೇಟು

ಬೆಳಗಾವಿ: ‘ಅಂಗಡಿ ಕುಂಟುಂಬದವರಿಗೆ ನ್ಯಾಯ ಒದಗಿಸದ ಬಿಜೆಪಿ ಸರ್ಕಾರ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿರುಗೇಟು ನೀಡಿದರು. ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸುರೇಶ ಅಂಗಡಿ ನಿಧನದ ವಿಷಯದಲ್ಲಿ ಅವರೇ ರಾಜಕೀಯ ಮಾಡುತ್ತಿದ್ದಾರೆ. ಕೋವಿಡ್-19 ಮಾರ್ಗಸೂಚಿ ಪ್ರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರದಂತೆ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲಾಗಲಿಲ್ಲ. ಎಷ್ಟೇ ದೊಡ್ಡವರಿದ್ದರೂ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎನ್ನುವುದು …

Read More »

ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ

ಗದಗ: ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಲಕ್ಷ್ಮಣ ಪಾಂಡಪ್ಪ ಲಮಾಣಿ (39) ಮೃತ ದುರ್ದೈವಿ. ಈತನ ಪತ್ನಿ ಲಲಿತಾ ಮತ್ತು ಈಕೆಯ ಪ್ರಿಯಕರ ಸೋಮಪ್ಪ ಚೆನ್ನಪ್ಪ ಲಮಾಣಿ ಕೊಲೆ ಆರೋಪಿಗಳು. ರಾತ್ರಿ ಮನೆಯಲ್ಲಿ ಮಲಗಿದ್ದ ಲಕ್ಷ್ಮಣ ಪಾಂಡಪ್ಪ ಅವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಲಲಿತಾ ಮತ್ತು ಸೋಮಪ್ಪ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ …

Read More »

ಅನುಶ್ರೀ ಮೊಬೈಲ್ ತಪಾಸಣೆ ನಡೆಸಿದಾಗ ಅನುಶ್ರೀ ಕಾಲ್ ಲಿಸ್ಟ್ ನಲ್ಲಿದ್ದ ಹೆಸರು ಕಂಡು ಸ್ವತಃ ಸಿಸಿಬಿ ಅಧಿಕರಿಗಳೇ ದಂಗಾಗಿದ್ದಾರೆ.

ಮಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ನಿರೂಪಕಿ ಅನುಶ್ರೀ ಅವರ ಮೊಬೈಲ್ ಪರಿಶೀಲಿಸಿದ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಪ್ರಕರಣದಲ್ಲಿ ತಮ್ಮ ಹೆಸರು ಹೊರ ಬರುತ್ತಿದ್ದಂತೆಯೇ ಅನುಶ್ರೀ ಪ್ರಭಾವಿ ನಾಯಕರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಅನುಶ್ರೀಗೆ ನೋಟಿಸ್ ನೀಡುತ್ತಿದ್ದಂತೆಯೇ ಅನುಶ್ರೀ ಮೂವರು ಪ್ರಭಾವಿ ರಾಜಕಾರಣಿಗಳಿಗೆ ಕರೆ ಮಾಡಿದ್ದಾರೆ. ವಿಚಾರಣೆ ವೇಳೆ ಅನುಶ್ರೀ ಮೊಬೈಲ್ ತಪಾಸಣೆ ನಡೆಸಿದಾಗ ಅನುಶ್ರೀ ಕಾಲ್ ಲಿಸ್ಟ್ ನಲ್ಲಿದ್ದ ಹೆಸರು …

Read More »

ಕರೊನಾ ಬಂದ್ರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುತ್ತಿದ್ದೆ ಎಂದ ಸಂಸದನಿಗೆ ಕರೊನಾ ಪಾಸಿಟಿವ್​!

ಕೋಲ್ಕತಾ: ಕರೊನಾ ಬಂದ್ರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುತ್ತಿದ್ದೆ ಎಂದ ಸಂಸದನಿಗೆ ಕರೊನಾ ಪಾಸಿಟಿವ್​! ನನಗೇನಾದರೂ ಕರೊನಾ ಪಾಸಿಟಿವ್​ ಬಂದಿದ್ದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ತಬ್ಬಿಕೊಳ್ಳುತ್ತಿದೆ ಎಂದು ಹೇಳಿದ್ದ ಬಿಜೆಪಿ ಮುಖಂಡ ಅನುಪಮ್ ಹಜ್ರಾ ಅವರಿಗೆ ಕರೊನಾ ಪಾಸಿಟಿವ್​ ವರದಿ ಬಂದಿದೆ. ಟಿಎಂಸಿಯ ಸಂಸದರಾಗಿದ್ದ ಹಜ್ರಾ, ಕಳೆದ ವರ್ಷ ಬಿಜೆಪಿಗೆ ಸೇರಿದ್ದಾರೆ. ಇತ್ತೀಚೆಗೆ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅವರು ಮಮತಾ ಬ್ಯಾನರ್ಜಿ ವಿರುದ್ಧ ತಬ್ಬಿಕೊಳ್ಳುವ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. …

Read More »

ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗೆ ಪೈಪೋಟಿ : ಮುನ್ನೀರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗೆ ಪೈಪೋಟಿ ಏರ್ಪಟ್ಟಿದೆ. ಮಾಜಿ ಶಾಸಕ ಮುನಿರತ್ನ ಹಾಗೂ ತುಳಸಿ ಮುನಿರಾಜು ಗೌಡ ಅವರ ಹೆಸರುಗಳನ್ನು ಪರಿಗಣಿಸಿದ ಕೋರ್ ಕಮಿಟಿ ಸಭೆ ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಸರ್ಕಾರ ರಚನೆಯಲ್ಲಿ ಸಹಕಾರ ನೀಡಿದ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಹೇಳಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ತುಳಸಿ ಮುನಿರಾಜು …

Read More »

ಸಾಮೂಹಿಕ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ

ಬೆಳಗಾವಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟ ಯುವ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಅವರು, ಆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡಲೆ ತಪ್ಪಿತಸ್ಥರನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು. …

Read More »

ರಾಹುಲ್ ಗಾಂಧಿ ಅವರನ್ನು ತಡೆದು, ಬಂಧಿಸಿದ ಉತ್ತರ ಪ್ರದೇಶದ ಪೊಲೀಸರ ಕ್ರಮ ಸರಿಯಲ್ಲ: ದೇವೇಗೌಡ

ಬೆಂಗಳೂರು : ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಉತ್ತರ ಪ್ರದೇಶದ ಹತ್ರಾಸ್‍ಗೆ ತೆರಳುತ್ತಿದ್ದ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರನ್ನು ತಡೆದು, ಬಂಧಿಸಿದ ಉತ್ತರ ಪ್ರದೇಶದ ಪೊಲೀಸರ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿರುವ ಜೆಡಿಎಸ್ ವರಿಷ್ಟ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಗುರುವಾರ ಟ್ವೀಟ್ ಮಾಡಿರುವ ದೇವೇಗೌಡರು, ಎಐಸಿಸಿ ಮುಖಂಡ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು …

Read More »