Breaking News

ಛತ್ತೀಸ್‍ಗಢ ರಾಜ್ಯದ ದಂಪತಿ ತಮಗೆ ಜನಿಸಿದ ಅವಳಿ ಮಕ್ಕಳಿಗೆ ‘ಕೊರೊನಾ’ ಮತ್ತು ‘ಕೋವಿಡ್’ ಎಂದು ನಾಮಕರಣ

ರಾಯ್ಪುರ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೋವಿಡ್-19 ಹಾಗೂ ಕೊರೊನಾ ಎಂಬ್ ಹೆಸರು ಕೇಳಿದರೇ ಜನರು ಬೆಚ್ಚಿ ಬೀಳುವ ಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಛತ್ತೀಸ್‍ಗಢ ರಾಜ್ಯದ ದಂಪತಿ ತಮಗೆ ಜನಿಸಿದ ಅವಳಿ ಮಕ್ಕಳಿಗೆ ‘ಕೊರೊನಾ’ ಮತ್ತು ‘ಕೋವಿಡ್’ ಎಂದು ನಾಮಕರಣ ಮಾಡಿರುವುದು ಅಚ್ಚರಿ ಮೂಡಿಸಿದೆ. ರಾಯ್ಪುರ ಮೂಲದ ದಂಪತಿಗೆ ಮಾರ್ಚ್ 27ರ ಮುಂಜಾನೆ ಅವಳಿ ಮಕ್ಕಳು ಜನಿಸಿದ್ದು, ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಾಗಿದೆ. ಕೊರೊನಾ …

Read More »

ಸೋಮವಾರದಿಂದ ನಗರದ ಹೊರವಲಯದ ಹಿಂಡಾಲ್ಕೋ ಮೈದಾನ, ಆರ್.ಟಿ.ಓ ಮೈದಾನ, ಪೊದ್ದಾರ್ ಶಾಲಾ ಮೈದಾನ ಮಾತ್ರವೇ ತರಕಾರಿ ಮಾರಾಟಕ್ಕೆ ಅವಕಾಶ

ಕೊರೋನಾ ಹಿನ್ನೆಲೆಯಲ್ಲಿ ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ ಜನಸಂದಣಿ ಕಡಿಮೆಗೊಳಿಸುವ ದೃಷ್ಟಿಯಿಂದ ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಪ್ರತ್ಯೇಕ ಹೋಲಸೇಲ್ ತರಕಾರಿ ಮಾರಾಟಕ್ಕೆ ಸ್ಥಳ ನಿಗದಿಪಡಿಸಲಾಗಿದ್ದು, ಸೋಮವಾರದಿಂದ ನಿಗದಿತ ನಾಲ್ಕು ಸ್ಥಳಗಳಲ್ಲಿ ಮಾತ್ರವೇ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು. ಎಪಿಎಂಸಿ ಕಚೇರಿಯಲ್ಲಿ ಶುಕ್ರವಾರ (ಏ.೩) ನಡೆದ ವರ್ತಕರ ಸಭೆಯಲ್ಲಿ ಅವರು ಮಾತನಾಡಿದರು. ಸೋಮವಾರದಿಂದ ನಗರದ ಹೊರವಲಯದ ಹಿಂಡಾಲ್ಕೋ ಮೈದಾನ, ಆರ್.ಟಿ.ಓ ಮೈದಾನ, ಪೊದ್ದಾರ್ ಶಾಲಾ ಮೈದಾನ …

Read More »

ಕೊರೋನಾ ಹಾವಳಿ : ಭಾರತಕ್ಕೆ 1 ಬಿಲಿಯನ್ ಡಾಲರ್ ನೆರವು ನೀಡಿದ ವಿಶ್ವಬ್ಯಾಂಕ್

ವಾಷಿಂಗ್ಟನ್ : ವಿಶ್ವದಾದ್ಯಂತ ಕೊರೋನಾ ಮಹಾಮಾರಿ ರಣಕೇಕೆ ಹಾಕುತ್ತಿದ್ದು, ಬಲಿಷ್ಠ ರಾಷ್ಟ್ರಗಳ ಜಂಗಾಭಲವನ್ನೇ ಕುಸಿಯುವಂತೆ ಮಾಡಿದೆ. ಕೊರೋನಾ ಪೀಡಿತ ರಾಷ್ಟ್ರಗಳ ಆರ್ಥಿಕತೆ ಪಾತಾಳಕ್ಕೆ ಕುಸಿಯುತ್ತಿದ್ದು ಸಂಕಷ್ಟಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಅನೇಕ ದೇಶಗಳಿಗೆ ನೆರವಾಗಲು ಮಂದಾಗಿದ್ದ ವಿಶ್ವಬ್ಯಾಂಕ್, 12 ಶತಕೋಟಿ ಡಾಲರ್ ವರೆಗೆ ನೆರವು ನೀಡುವುದಾಗಿ ಘೋಷಣೆ ಮಾಡಿತ್ತು. ಇದರಂತೆ ಇದೀಗ ಭಾರತಕ್ಕೆ 1 ಬಿಲಿಯನ್ ಡಾಲರ್ ಗಳಷ್ಟು ತುರ್ತು ನೆರವು ನೀಡಲು ಇದೀಗ ಒಪ್ಪಿಗೆ …

Read More »

ಮೇಣದಬತ್ತಿ ಎಲ್ಲಿಂದ ತರೋದು ಎಲ್ಲಾ ಕಡೆ ಲಾಕ್ ಡೌನ್ ಆಗಿದೆ.:ಹೆಚ್ ಡಿ ರೇವಣ್

ಬೆಂಗಳೂರು: ದೇಶದ ಜನತೆ 5ನೇ ತಾರೀಖು ಮೇಣದಬತ್ತಿ ಹಚ್ಚಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಈಗ ಮೇಣದಬತ್ತಿ ಎಲ್ಲಿಂದ ತರೋದು ಎಲ್ಲಾ ಕಡೆ ಲಾಕ್ ಡೌನ್ ಆಗಿದೆ. ಮೇಣದಬತ್ತಿ ತರೋಕೆ ಮನೆಯಿಂದ ಹೊರಗೆ ಹೋದ್ರೆ ಲಾಠಿ ಏಟು ಬೀಳುತ್ತವೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಶೇ.30 ರಷ್ಟು ಜನರು ಹಸಿವಿನಿಂದ ಸಾಯುತ್ತಿದ್ದಾರೆ. ಮೋದಿಯವರು ಹೇಳ್ತಾರೆ ದೀಪ ಹಚ್ಚಿ, …

Read More »

ಕೋಳಿ ಮತ್ತು ಮೊಟ್ಟೆ ತಿಂದು ಕೊರೊನಾ ಸೋಂಕಿನಿಂದ ದೂರವಿರಿ : ಸಚಿವ ಕೆ.ಎಸ್‍.ಈಶ್ವರಪ್ಪ

ಶಿವಮೊಗ್ಗ, ಮಾ.31- ಕೋಳಿ ಮತ್ತು ಮೊಟ್ಟೆ ತಿನ್ನುವುದರಿಂದ ಉಷ್ಣಾಂಶ ಹೆಚ್ಚಾಗುತ್ತದೆ, ಆ ಮೂಲಕ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಲಿದೆ ಎಂದು ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ. ಹಾಗಾಗಿ ಜನ ಸಾಮಾನ್ಯರು ಇನ್ನು ಮುಂದೆ ಕೋಳಿ ಮೊಟ್ಟೆ ಹೆಚ್ಚಾಗಿ ತಿನ್ನಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್‍.ಈಶ್ವರಪ್ಪ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಈವರೆಗೂ ಒಂದೇ ಒಂದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಜನ ಸಾಮಾನ್ಯರು ವದ್ಧಂತಿಗಳಿಗೆ ಕಿವಿಗೊಟ್ಟು …

Read More »

ಬೆಳಗಾವಿಯ ಮೂವರಿಗೆ ಕೊರೊನಾ ಜಗದೀಶ್ ಶೆಟ್ಟರ್ ಪುಣೆಯ ರಿಪೋರ್ಟ್ ಗಾಗಿ ಬೆಳಗಾವಿ ಜಿಲ್ಲಾಡಳಿತ ಕಾಯುತ್ತಿದೆ.

ಬೆಂಗಳೂರು: ದೆಹಲಿ ತಬ್ಲಿಘಿ ಜಮಾತ್ ಸಭೆಗೆ ಹೋಗಿ ಬಂದಿದ್ದ ಬೆಳಗಾವಿಯ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 128ಕ್ಕೆ ಏರಿಕೆ ಕಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿ, ಬೆಳಗಾವಿಯ ಮೂವರಲ್ಲಿ ಕೊರೊನಾ ಸೋಂಕು ತಗುಲಿದೆ. ಈ ಮೂವರು ದೆಹಲಿಯ ಜಮಾಜ್ ಸಭೆಗೆ ತೆರಳಿದ್ದವರೇ ಆಗಿದ್ದಾರೆ. ಶಿವಮೊಗ್ಗದ ಲ್ಯಾಬ್‍ನಿಂದ ಬಂದಿರುವ ರಿಪೋರ್ಟ್ ನಲ್ಲಿ ಸೋಂಕು ತಗುಲಿರುವುದು ಖಚಿತವಾಗಿದೆ. ಆದರೆ …

Read More »

ಲಾಕ್ ಡೌನ್ ಹಿನ್ನೆಲೆಯಲ್ಲಿ ವಾಹನ ತೆರಿಗೆ ಪಾವತಿಸಲು ಕಾಲಾವಕಾಶ : ಸವದಿ

ಕೋವಿಡ್ – 19ರ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಿರುವುದರಿಂದ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಜೂನ್ ಒಂದರವರೆಗೂ ಕಾಲಾವಕಾಶ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 4(1)ರ ನಿಯಮಗಳನ್ನು ಸಡಿಲಗೊಳಿಸಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಅವಕಾಶ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ …

Read More »

ಪ್ರತಿನಿತ್ಯ ಊರಿನ ಕಸವನ್ನ ಕೊಂಡೊಯ್ಯುವ ಆಟೋದಲ್ಲಿ ಪಡಿತರ ಅಕ್ಕಿಯನ್ನ ಸಾಗಿಸಿದ್ದಕ್ಕೆ ಆಕ್ರೋಶ

ಚಿಕ್ಕಮಗಳೂರು: ಪ್ರತಿನಿತ್ಯ ಊರಿನ ಕಸವನ್ನ ಕೊಂಡೊಯ್ಯುವ ಆಟೋದಲ್ಲಿ ಪಡಿತರ ಅಕ್ಕಿಯನ್ನ ಸಾಗಿಸಿದ್ದಕ್ಕೆ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ. ಕೊರೊನಾ ವೈರಸ್ ಕಾಟ ಆರಂಭವಾದಾಗಿನಿಂದ ದೇಶ ಸೇರಿದಂತೆ ಜಗತ್ತೇ ತತ್ತರಿಸಿ ಹೋಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಈ ಮಧ್ಯೆ ರಾಜ್ಯದಲ್ಲಿ ಜನಸಾಮಾನ್ಯರಿಗೆ ಪಡಿತರ ಸಮಸ್ಯೆ ಉದ್ಭವಿಸದಂತೆ ಸರ್ಕಾರ ಮುಂಗಡವಾಗಿ ಮೂರು ತಿಂಗಳ ಪಡಿತರ ಸಾಮಾಗ್ರಿಗಳನ್ನು ನೀಡಲು …

Read More »

ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣ: ಚಿವ ರಮೇಶ ಜಾರಕಿಹೊಳಿ

ಬೆಳಗಾವಿ: ಕೊರೊನಾ ಸೋಂಕು ನಿರ್ಮೂಲನೆಗೆ ಹೆಜ್ಜೆ ಹಾಕುತ್ತಿರುವ ನಾವು ಏ.5ರಂದು ಪ್ರಧಾನಿ ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು,ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಂಡಿವೆ. ಈ ನಿಟ್ಟಿನಲ್ಲಿ ಜನರು ನಿಯಮಗಳನ್ನು ಪಾಲಿಸಬೇಕು ಎಂದರು. ಭಾರತವನ್ನು ಕೊರೊನಾ ಸೋಂಕು ಮುಕ್ತ ಮಾಡುವ ನಮ್ಮ ಸಂಕಲ್ಪ …

Read More »

ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು: ಸಚಿವ ರಮೇಶ ಜಾರಕಿಹೊಳಿ

ಗೋಕಾಕ್: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದಾರೆ. ಆದ ಕಾರಣ ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳು ಹಾಗೂ ಸರ್ವ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಟ ನಡೆಸಬೇಕಾಗಿದೆ. ಆದ ಕಾರಣ ಗೋಕಾಕ್ ತಾಲ್ಲೂಕಿನ …

Read More »