ಧಾರವಾಡ: ಕೊರೊನಾ ವಿರುದ್ಧ ನಮ್ಮ ಪೊಲೀಸರು ಹೋರಾಡಬೇಕಿದೆ, ಕೆಲಸ ಮಾಡಬೇಕಿದೆ. ಹೀಗಾಗಿ ಮುನ್ನೆಚ್ಚರಿಕಾ ಪರಿಕರಗಳ ಅಗತ್ಯವಿದೆ ಎಂದು ಧಾರವಾಡ ಎಸ್‍ಪಿ ವರ್ತಿಕಾ ಕಟಿಯಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಠಾಣೆಗೆ ಪಲ್ಸ್ ಆಕ್ಸಿಮೀಟರ್ ಕೊಟ್ಟಿದ್ದೇವೆ, ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಠಾಣೆಯವರು ಪಲ್ಸ್ ಆಕ್ಸಿಮೀಟರ್ ರೀಡಿಂಗ್ ತೆಗೆಯಬೇಕು ಎಂದು ಹೇಳಿದರು. ಈಗಾಗಲೇ ನಮ್ಮಲ್ಲಿ 8 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಆಗಿದೆ, ಇಬ್ಬರು ಗುಣಮುಖರಾಗಿದ್ದಾರೆ, ನಮ್ಮೊಂದಿಗೆ ಕರ್ತವ್ಯ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು116 ಜನರಿಗೆ ಸೊಂಕುದೃಡ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ 116 ಜನರಿಗೆ ಸೊಂಕು ತಗಲಿದ್ದು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಪತ್ತೆಯಾದ 116ಜನ ಸೊಂಕಿತರು ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕಿನವರಾಗಿದ್ದಾರೆ.ಇವತ್ತಿನವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1645 ಕ್ಕೆ ಏರಿಕೆಯಾಗಿದೆ https://youtu.be/tAGGn6JHTPE
Read More »ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ. : ಸಚಿವ ಸುರೇಶ ಅಂಗಡಿ
ಬೆಳಗಾವಿ: ಬಿಮ್ಸ್ ಆಸ್ಪತ್ರೆಯ ಆ್ಯಂಬುಲೆನ್ಸ್ ಸುಟ್ಟವರು ದೇಶದ್ರೋಹಿಗಳು ಅಂತಾ ಕೇಂದ್ರ ಸಚಿವ ಸುರೇಶ ಅಂಗಡಿ ಹೇಳಿಕೆ ನೀಡಿದ್ದಾರೆ. ಆ್ಯಂಬುಲೆಸ್ ಗೆಬೆಂಕಿ ಹಚ್ಚಿದ ವಿಚಾರವಾಗಿ ನಗರದ ಕಾಡಾ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ. ಇದರ ಹಿಂದಿರುವವರನ್ನು ಪೊಲೀಸರು ಕಂಡು ಹಿಡಿಯಬೇಕು. ವೈದ್ಯಕೀಯ ಸಿಬ್ಬಂದಿಗಳು ಯಾವುದೇ ಕಾರಣಕ್ಕೂ ಹೆದರುವ ಅವಶ್ಯಕತೆ ಇಲ್ಲ. ಸೂಕ್ತ ಬಂದೋಬಸ್ತ್ ಒದಗಿಸಲಾಗುವುದು . ಕೃತ್ಯ ಎಸಗಿದವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು …
Read More »50 ಜನ ರೋಗಿಗಳ ಶವಗಳನ್ನು ಹೈದರಾಬಾದ್‌ನಲ್ಲಿ ಸಾಮೂಹಿಕವಾಗಿ ದಹನ ಮಾಡಲಾಗಿದೆ.
ಹೈದರಾಬಾದ್: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ 50 ಜನ ರೋಗಿಗಳ ಶವಗಳನ್ನು ಹೈದರಾಬಾದ್‌ನಲ್ಲಿ ಸಾಮೂಹಿಕವಾಗಿ ದಹನ ಮಾಡಲಾಗಿದೆ. ಸರ್ಕಾರದ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರ್ರಗಡ್ಡ ಶವಾಗಾರದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ. ದೇಶಾದ್ಯಂತ ವ್ಯಾಪಿ ಭಾರೀ ಖಂಡನೆ ವ್ಯಕ್ತವಾಗಿದೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಕುರಿತು ಸ್ಪಷ್ಟನೆ ನೀಡಿರುವ ತೆಲಂಗಾಣ ಆರೋಗ್ಯ ಇಲಾಖೆ, ಈ ಮೃತ ದೇಹಗಳು ಒಂದೇ ದಿನ ಸಾವನ್ನಪ್ಪಿದವರದ್ದಲ್ಲ. ಕಳೆದ …
Read More »ರಾಮದುರ್ಗ ತಾಲ್ಲೂಕಿನಲ್ಲಿ 16 ಜನ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಶುಕ್ರವಾರ ಕೊರೊನಾ
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲ್ಲೂಕಿನಲ್ಲಿ 16 ಜನ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಶುಕ್ರವಾರ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ರಾಮದುರ್ಗ ಪುರಸಭೆಯ ಸಿಬ್ಬಂದಿ, ಕಟಕೋಳ ಪೊಲೀಸ್ ಠಾಣೆಯ ಮೂವರು ಪೇದೆಗಳಿಗೆ , ಹಾಗೂ ರಾಮದುರ್ಗ ಕೆಎಸ್‌ಆರ್‌ಟಿಸಿ ಘಟಕದ 10 ಸಿಬ್ಬಂದಿಗೆ ಕೊರೊನಾ ದೃಢವಾಗಿದೆ. ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ 48 ಗಂಟೆಗಳ ಕಾಲ ರಾಮದುರ್ಗ ಪುರಸಭೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಕಟಕೋಳ ಪೊಲೀಸ್ ಠಾಣೆಯ ಪೇದೆಗಳಿಗೂ …
Read More »ಬಿಮ್ಸ್ ಆಸ್ಪತ್ರೆಯಲ್ಲಿ ಒಪಿಡಿ ಬಂದ್ ಮಾಡಿರುವ ಹಿನ್ನೆಲೆ ಸಾಮಾನ್ಯ ರೋಗಿಗಳು ಪರದಾಡುವಂತಾಗಿದೆ.
ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ಒಪಿಡಿ ಬಂದ್ ಮಾಡಿರುವ ಹಿನ್ನೆಲೆ ಸಾಮಾನ್ಯ ರೋಗಿಗಳು ಪರದಾಡುವಂತಾಗಿದೆ. ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿರುವ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಒಪಿಡಿ ಬಂದ್ ಮಾಡಲಾಗಿದೆ. ಆಸ್ಪತ್ರೆಗೆ ಬರುವ ಸಾಮಾನ್ಯ ರೋಗಿಗಳನ್ನು ಯಳ್ಳೂರು ಬಳಿಯ ಕೆಎಲ್‌ಇ ಆಸ್ಪತ್ರೆಗೆ ಕಳುಹಿಸಿ ಕೊಡಲಾಗುತ್ತಿದೆ. ಬಿಮ್ಸ್ ನಲ್ಲಿ ಕೇವಲ ತುರ್ತು ಚಿಕಿತ್ಸೆಯನ್ನು ಮಾತ್ರ ಅವಕಾಶ ನೀಡಲಾಗುತ್ತಿದೆ. ಇನ್ನು ಖಾಸಗಿ ಆಸ್ಪತ್ರೆಯಲ್ಲಿಯೂ ರೋಗಿಗಳ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ರೋಗಿಗಳು ಸಂಕಷ್ಟಕ್ಕೆ …
Read More »ದಯವಿಟ್ಟು ಅಜ್ಜಿಯ ಅಡ್ರೆಸ್ ಹೇಳಿ- ಸೋನು ಸೂದ್……….
ಮುಂಬೈ: ಇತ್ತೀಚೆಗೆ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನವೀಯತೆ ಮೆರೆದ ಬಾಲಿವುಡ್ ನಟ ಸೋನು ಸೂದ್, ಇದೀಗ ಅಜ್ಜಿಯೊಬ್ಬರ ಅಡ್ರೆಸ್ ಕೇಳುವ ಮೂಲಕ ಹುಬ್ಬೇರಿಸುವಂತೆ ಮಾಡಿದ್ದಾರೆಸಾಮಾಜಿಕ ಜಾಲತಾಣಗಳಲ್ಲಿ ಅಜ್ಜಿಯ ಲಾಠಿ ಕೈಚಳಕದ ವಿಡಿಯೋ ವೈರಲ್ ಆಗಿದ್ದು, ಇದನ್ನು ನಟ ಸೋನು ಸೂದ್ ಸಹ ಹಂಚಿಕೊಂಡಿದ್ದಾರೆ. ಈ ಕುರಿತು ಟ್ವೀಟದದ ಮಾಡಿ, ದಯವಿಟ್ಟು ನಾನು ಅಜ್ಜಿಯ ಬಗ್ಗೆ ಮಾಹಿತಿ ಪಡೆಯಬಹುದೆ, ನಮ್ಮ ದೇಶದ ಮಹಿಳೆಯರಿಗೆ ಕೆಲ ರಕ್ಷಣಾ ತಂತ್ರಗಳನ್ನು …
Read More »ಸರ್ಕಾರದ ಆದೇಶ ಪಾಲಿಸದ ಖಾಸಗಿ ಆಸ್ಪತ್ರೆಗಳು, ಅಧಿಕಾರಿಗಳಿಗೆ ಚಾಟಿ ಬೀಸಿದ ಸಿಎಂ..!
ಬೆಂಗಳೂರು,ಜು.24- ಸರ್ಕಾರದ ಆದೇಶವನ್ನು ಪಾಲನೆ ಮಾಡಲು ಮೀನಾಮೇಷ ಎಣಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಮತ್ತೆ ಚಾಟಿ ಬೀಸಿದ್ದಾರೆ. ಒಪ್ಪಂದದಂತೆ ಖಾಸಗಿ ಆಸ್ಪತ್ರೆಯವರು ಸರ್ಕಾರಕ್ಕೆ ಈವರೆಗೂ ಕೊಟ್ಟ ಭರವಸೆಯಂತೆ ಹಾಸಿಗೆಗಳನ್ನು ನೀಡದೆ ನಮ್ಮ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿನ ಬೆಲೆ ನೀಡುತ್ತಿಲ್ಲ. ಒಂದು ಹಂತದವರೆಗೂ ಸಹಿಸಿಕೊಳ್ಳಬಹುದು. ಖಾಸಗಿ ಆಸ್ಪತ್ರೆಗಳ ವರ್ತನೆ ಅತಿಯಾಗಿದೆ. ಕೂಡಲೇ ಕಾನೂನು ಕ್ರಮ ಜರುಗಿಸಿ ಎಂದು ಎಚ್ಚರಿಕೆ ಕೊಟ್ಟರು. …
Read More »ಮಾಸ್ಕ್ ಧರಿಸದೇ ಎಂಟ್ರಿ – ಪ್ರಶ್ನಿಸಿದ್ದಕ್ಕೆ ಕಂಪ್ಯೂಟರ್ ಎತ್ತಿ, ಪೀಠೋಪಕರಣ ಧ್ವಂಸ
ಹಾಸನ: ಪಾನಮತ್ತ ವ್ಯಕ್ತಿಯೊಬ್ಬ ಮಾಸ್ಕ್ ಧರಿಸದೆ ಗ್ರಾಮ ಪಂಚಾಯಿತಿಗೆ ನುಗ್ಗಿ ಅಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ಆತಂಕ ಸೃಷ್ಟಿ ಮಾಡಿದ ಘಟನೆ ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನಲ್ಲಿ ನಡೆದಿದ್ದು ವಿಡಿಯೋ ವೈರಲ್ ಆಗಿದೆ. ಗುರುವಾರ ಬ್ಯಾಕರವಳ್ಳಿ ಗ್ರಾಮ ಪಂಚಾಯತಿಗೆ ನುಗ್ಗಿದ ಹರೀಶ್, ನನಗೆ ಹೆಲ್ತ್ ಕಾರ್ಡ್ ಮಾಡಿಕೊಡಬೇಕು ಎಂದು ಸಿಬ್ಬಂದಿಗೆ ಜೋರು ದನಿಯಲ್ಲಿ ಕೇಳಿದ್ದಾನೆ. ಆಗ ಸಿಬ್ಬಂದಿ ಹಿರಿಯ ಅಧಿಕಾರಿಗಳು ಹೊರಗೆ ಹೋಗಿದ್ದಾರೆ ಅವರು ಬಂದ …
Read More »ಮನ್ಯಾಗ ಇರ್ತಿರೋ ಅಥವಾ ಮನೆ ಮಾರಿ K.L.E.ನಾಗ ಇರ್ತಿರ್ ನೀವೇ ನಿರ್ಧಾರ ಮಾಡಿ…….?
ಕ ರೋ ನಾ ವೈರಸ್ ಇತ್ತೀಚಿನ ದಿನಗಳಲ್ಲಿ ತುಂಬಾ ಕೆಳಿಬರ್ಥಿರೋ ವಿಷಯ ಎಲ್ಲಿ ನೋಡಿದ್ರೂ ಅದೇ ಮಾತು, quarantine , isolation , ಸುಮಾರು ಇಂಥ ಪದಗಳನ್ನ ಬಹುಶಃ ನಮ್ಮೋರು ಬಳಸೆ ಇಲ್ಲ ಅನ್ಸತ್ತೆ , ಆದ್ರೆ ಇತ್ತೀಚಿನ ದಿನಮಾನ ಗಳಲ್ಲಿ ಇವೆಲ್ಲ ರೂಢಿ ನಾಮ ಥರ ಪ್ರತಿದಿನ ಉಪಯೋಗ ಮಾಡುವಂಥ ಪದ ಗಳಾಗಿವೆ ಇದರಲ್ಲಿ ಈ ಒಂದು ಮಹಾ ಮಾರಿ ವಿಷಯ ದಲ್ಲಿ ಸೋಶಿಯಲ್ ಮೀಡಿಯಾ ನಲ್ಲಿ ಆರೋಗ್ಯ …
Read More »