ಲಕ್ನೋ: 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ತೀರ್ಪು ನೀಡುವ ದಿನದಂದು ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್ ಸೆ.16 ರಂದು ಸೂಚಿಸಿದ್ದರು. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ …
Read More »ಸತೀಶ ಜಾರಕಿಹೊಳಿ ಅವರ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ನಿಧನ ಹೊಂದಿದ್ದಾರೆ.
ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ. ತುಕ್ಕಾನಟ್ಟಿ ಗ್ರಾಮದ ಪ್ರಮುಖರಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಸತೀಶ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಅವರ …
Read More »ಹವಾಲಾ ದಂಧೆಯಲ್ಲಿ ಸಂಜನಾ ಹಣ ತೊಡಗಿಸಿರುವ ಶಂಕೆ ವ್ಯಕ್ತ
ಬೆಂಗಳೂರು: ಡ್ರಗ್ಸ್ ನಶೆಯ ನಂಟಲ್ಲಿ ಜೈಲಿ ಸೇರಿರುವ ನಟಿ ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹವಾಲಾ ದಂಧೆಯಲ್ಲಿ ಸಂಜನಾ ಹಣ ತೊಡಗಿಸಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ED ಅಧಿಕಾರಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಸಂಜನಾ ಗಲ್ರಾನಿ ವಿಚಾರಣೆ ನಡೆದಿದೆ. ಸಂಜನಾ ಬಿಟ್ ಕಾಯಿನ್ ವ್ಯವಹಾರದಲ್ಲಿ ಭಾಗಿ?: ಹವಾಲಾ ದಂಧೆಯಲ್ಲಿ ಹಣ ತೊಡಗಿಸಿರುವ ಬಗ್ಗೆ ತನಿಖೆ ನಡೆಸಲಾಗಿದೆ. ವಿಚಾರಣೆ ವೇಳೆ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ರು. ಈ ವೇಳೆ ED …
Read More »ಇನ್ನು ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ:
ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಾಲೆ ಆರಂಭಿಸುವ ವಿಚಾರವಾಗಿ ಎಲ್ಲ ಶಾಸಕರ ಜತೆ ಮಾತುಕತೆ ನಡೆಸುತ್ತೇವೆ. ಅದಾದ ಮೇಲಷ್ಟೆ ಶಾಲೆ ರೀ ಓಪನಿಂಗ್ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದ್ರೆ ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಶಾಸಕರೂ ಒಲವು ತೋರಿಲ್ಲ. ಸಂಸದರು, ಶಾಸಕರು, ಪರಿಷತ್ ಸದಸ್ಯರಿಗೂ ಪತ್ರ ಬರೆದಿದ್ದೇನೆ. ಶಾಲೆ ಆರಂಭದ ಬಗ್ಗೆ …
Read More »ಕೊರೊನಾ ರೋಗಿಯಿಂದಲೂ ಹಣ ವಸೂಲಿ- ಸರ್ಕಾರದಿಂದಲೂ ದುಡ್ಡು ಗುಳಂ
ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿತರಿಂದಲೂ ಹಣ ಪಡೆದು, ಇತ್ತ ಸರ್ಕಾರಕ್ಕೂ ಬಿಲ್ ಪಾವತಿಸಿ ಎಂದು ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆ ಚಿಕಿತ್ಸೆ ದಾಖಲಾತಿ ಸಲ್ಲಿಸಿದೆ. ಈ ಮೂಲಕ ಎರಡೂ ಕಡೆಯಿಂದ ಹಣ ಹೊಡೆಯುವ ಪ್ಲಾನ್ ಮಾಡಿಕೊಂಡಿದ್ದ ಆಸ್ಪತ್ರೆಯ ನಿಜ ಬಣ್ಣ ಬಯಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡುತ್ತಿದೆ. ದಿನೇ ದಿನೇ ಏರುತ್ತಿರೋ ಕೊರೊನಾ ಸೋಂಕಿತರ ಸಂಖ್ಯೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಎದುರಾಗಿದೆ. ಹೀಗಾಗಿ …
Read More »ಕಟೀಲ್ ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್: ಕಾಂಗ್ರೆಸ್ ಟ್ವೀಟ್
ಬೆಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್ ಎಂದು ವ್ಯಂಗ್ಯವಾಡಿ ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಕಾಂಗ್ರೆಸ್ ಟ್ವೀಟ್ಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಮಿಡಿ ಮಾಡುವ ವ್ಯಕ್ತಿ ಯಾರು ಮತ್ತು ಕಾಮಿಡಿಯಾದ ಪಕ್ಷ ಯಾವುದು ಎಂದು ದೇಶದ ಜನತೆಗೆ ಗೊತ್ತು ಎಂದು ಟ್ವೀಟ್ ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಬಗ್ಗೆ ಕಾಂಗ್ರೆಸ್ ರಾಜ್ಯದ ರೈತರನ್ನು ದಿಕ್ಕು …
Read More »ಪೆಟ್ರೋಲ್, ಡೀಸೆಲ್ ಬದಲು ನೀರು – ಬಂಕ್ ವಿರುದ್ಧ ಗ್ರಾಹಕರ ಆಕ್ರೋಶ
ಯಾದಗಿರಿ: ಬಂಕ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬದಲು ನೀರು ಹಾಕುತ್ತಿದ್ದು, ಡೀಸೆಲ್ ಹಾಕಿಸಿಕೊಂಡ ವಾಹನಗಳ ಇಂಜಿನ್ ಫುಲ್ ಬ್ಲಾಕ್ ಆಗಿ ಕೆಟ್ಟು ನಿಂತ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ಈ ಘಟನೆ ನಡೆದಿದೆ. ಕಳೆದ ಎರಡು ದಿನಗಳಿಂದ ನಾರಾಯಣಪುರದಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ನಲ್ಲಿ ಇಂಧನ ಬದಲಿಗೆ ನೀರು ಹಾಕಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿತ್ತು. ಸೋಮವಾರ ರಾತ್ರಿ ನಾರಾಯಣಪುರ ಗ್ರಾಮದ ಹನುಮಂತ …
Read More »ರಸ್ತೆ ಬದಿಯ ಹಳ್ಳಕ್ಕೆ ಕಾರು ಪಲ್ಟಿ – ವಾರಕ್ಕೊಂದು ಗಾಡಿ ಪಲ್ಟಿಯಾದ್ರೂ ಸರ್ಕಾರ ಡೋಂಟ್ ಕೇರ್
ಚಿಕ್ಕಮಗಳೂರು: ರಸ್ತೆ ತಿರುವಿನಲ್ಲಿ ತಡೆಗೋಡೆಗಳಿಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಸಮೀಪದ ಮೂಲೆಮನೆ ಗ್ರಾಮದಲ್ಲಿ ನಡೆದಿದೆ. ಶಿಫ್ಟ್ ಕಾರಿನಲ್ಲಿ ನಾಲ್ವರು ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದರು. ಬೆಳಗಿನ ಜಾವ ಸುಮಾರು 4 ಗಂಟೆಗೆ ಮೂಲೆಮನೆ ಗ್ರಾಮದ ಬಳಿ ರಸ್ತೆ ತಿರುವಿನಲ್ಲಿ ಕಾರು ಹಳ್ಳಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ವಾರಕ್ಕೊಂದು ಅಪಘಾತ: …
Read More »ಶಾಸಕರು, ಸಚಿವರಿಗೆ ಪತ್ರ- ಸುರೇಶ್ ಕುಮಾರ್ ವಿರುದ್ಧ ಶೆಟ್ಟರ್ ಗರಂ
ಹುಬ್ಬಳ್ಳಿ: ಕೊರೊನಾ ನಂತರ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭದ ವಿಚಾರವಾಗಿ ಶಿಕ್ಷಣ ಸಚಿವರು ಎಲ್ಲ ಶಾಸಕರು, ಸಚಿವರಿಗೆ ಪತ್ರ ಬರೆದು ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಈ ವಿಚಾರಕ್ಕೆ ಕೈಗಾರಿಕಾ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಗರಂ ಆಗಿದ್ದಾರೆ. ಅಲ್ಲದೆ ಶಾಲೆಗಳ ಆರಂಭ ಮಾಡೋ ವಿಚಾರದಲ್ಲಿ ಪೋಷಕರ ಅಭಿಪ್ರಾಯ ಮುಖ್ಯವಾಗಿದೆ. ನಮ್ಮದಲ್ಲವೆಂದು ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ. ಹುಬ್ಬಳ್ಳಿಯ ನಿವಾಸದಲ್ಲಿಂದು ಮಾತನಾಡಿದ ಶೆಟ್ಟರ್, ಶಾಲೆಗಳ ಆರಂಭದ ಬಗ್ಗೆ ಪಾಲಕರಲ್ಲಿ ವಿಭಿನ್ನ ಅಭಿಪ್ರಾಯಗಳಿವೆ. ಪೋಷಕರಿಗೆ ನಮ್ಮ …
Read More »ರಾಗಿಣಿ, ಸಂಜನಾಗೆ ಬಿಗ್ ಶಾಕ್ – ಮೊಬೈಲ್ನಲ್ಲಿ ಸಿಕ್ಕಿದೆ ಸ್ಫೋಟಕ ಸಾಕ್ಷ್ಯ!
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಸೇರಿರುವ ಮಾದಕ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಬಿಗ್ ಶಾಕಿಂಗ್ ನ್ಯೂಸ್ ಒಂದು ಇದೀಗ ಹೊರಬಿದ್ದಿದೆ. ಡ್ರಗ್ಸ್ ಕೇಸ್ ಬೆನ್ನು ಹತ್ತಿರೋ ಪೊಲೀಸರಿಗೆ ಸಿನಿಲೋಕದ ಡ್ರಗ್ಸ್ ಕೇಸ್ಗೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ನಟಿ ರಾಗಿಣಿ, ಸಂಜನಾ ಮೊಬೈಲ್ನಲ್ಲಿ ಸ್ಫೋಟಕ ಸಾಕ್ಷ್ಯ ದೊರೆತಿದೆ. ಅದೇನೆಂದರೆ ಡ್ರಗ್ಸ್ ಕೇಸ್ನಲ್ಲಿ ಬಂಧಿತರಾಗಿರುವ ಆರೋಪಿಗಳಿಂದ ಸೆಕ್ಸ್ ದಂಧೆ ನಡೆಯುತ್ತಿರುವ ಶಂಕೆ ವ್ಯಕ್ತವಾಗಿದೆ. …
Read More »