ಬೆಂಗಳೂರು: ರೈತರು ಎಪಿಎಂಸಿ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ರೈತರ ಹೋರಾಟಕ್ಕೆ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಬೆಂಬಲ ಸೂಚಿಸಲು ಸಾಧ್ಯವಿಲ್ಲ. ಇಡೀ ರಾಷ್ಟ್ರದಲ್ಲೇ ಬೆಂಬಲ ನೀಡಬೇಕು. …
Read More »ಹುಬ್ಬಳ್ಳಿಯ ರಂಗೋಲಿ ಹಾಕಿ ಶೆಟ್ಟರ್ ಫೋಟೋ ನೆಟ್ಟ ಸ್ಥಳೀಯ ನಿವಾಸಿಗಳು..
ಹುಬ್ಬಳ್ಳಿಯ ರಂಗೋಲಿ ಹಾಕಿ ಶೆಟ್ಟರ್ ಫೋಟೋ ನೆಟ್ಟ ಸ್ಥಳೀಯ ನಿವಾಸಿಗಳು.. ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ನಗರದ ವಿದ್ಯಾವನ ನಿವಾಸಿಗಳು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಅವರ ಭಾವಚಿತ್ರವನ್ನು ರಸ್ತೆಯ ಗುಂಡಿಯಲ್ಲಿ ನೆಟ್ಟು ವಿನೂತನ ಪ್ರತಿಭಟನೆ ನಡೆಸಿದರು. ಮಳೆಯಿಂದ ರಸ್ತೆಗಳು ಹಾಳಾಗಿ ಹೋಗಿವೆ. ಎಲ್ಲೆಂದರಲ್ಲಿ ಗುಂಡುಗಳು ಬಿದ್ದು ಜನರು ಓಡಾಡಲು ಆಗದ ಸ್ಥಿತಿ ಇದೆ. ಹೀಗಾಗಿ ರಸ್ತೆ ದುರಸ್ತಿ ಹಾಗೂ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ರಸ್ತೆ ಗುಂಡಿಗೆ ರಂಗೋಲಿ ಹಾಕಿ ಹಾಗೂ …
Read More »ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ನಿಧನ
ಮಂಗಳೂರು: ಅಸೌಖ್ಯದಿಂದ ಬಳಲುತ್ತಿದ್ದ ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಹವ್ಯಾಸಿ ಭಾಗವತರಾಗಿಯೂ, ಕೆಲ ವರ್ಷ ವೃತ್ತಿ ಮೇಳಗಳಲ್ಲಿ ಭಾಗವತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೈರಂಗಳ, ಬಪ್ಪನಾಡು, ಮಲ್ಲ, ಮಧೂರು, ಇರಾ, ಕುಂಟಾರು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ. ಪೆರ್ಲದ ಶ್ರೀ ಪಡ್ರೆ ಚಂದು ಯಕ್ಷಗಾನ ತರಬೇತಿ ಕೇಂದ್ರದ ಹಿಮ್ಮೇಳ ಅಧ್ಯಾಪಕರಾಗಿ ಹಲವಾರು ಶಿಷ್ಯರನ್ನು ಹೊಂದಿದ್ದರು. ತನ್ನ ವಿಶಿಷ್ಟ ಶೈಲಿಯ ಹಾಡುಗಾರಿಕೆಯಿಂದ ಅಭಿಮಾನಿಗಳನ್ನು …
Read More »ಹುಬ್ಬಳ್ಳಿಯಲ್ಲಿ ಕೂಡಾ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ..
ಹುಬ್ಬಳ್ಳಿ:ಇಂದು ಕೇಂದ್ರ ಸರ್ಕಾರದ ವಿರುದ್ಧ ಭಾರತ ಬಂದ್ ಗೆ ಹಲವಾರು ರೈತ ಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಬಂದ್ ಗೆ ಕರೆಯನ್ನು ನೀಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕೂಡಾ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ.. ಇಂದು ಬೆಳ್ಳಿಗ್ಗೆ ಇಂದಲೇ ವಿವಿಧ ಸಂಘಟನೆಗಳು ರಸ್ತೆಗೆ ಇಳಿದಿದ್ದು ಅಂಗಡಿ ಮುಂಗಟ್ಟುಗಳನ್ನು ತೆಗೆದವರಿಗೆ ಹೂ ಕೊಡುವುದರ ಮೂಲಕ ಬಂದ್ ಗೆ ಬೆಂಬಲ ಕೊಡಬೇಕು ಎಂದು ಮನವಿಯನ್ನು ಮಾಡಿಕೊಂಡರು. ಇನ್ನು ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದಲ್ಲಿ …
Read More »ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದ ಹೋರಾಟಗಾರರಿಗೆ ವಾಟಾಳ್ ನಾಗರಾಜ್
ಹಾಸನ: ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದು ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸುಮಾರು 3 ಸಾವಿರ ಕನ್ನಡಪರ ಸಂಘಟನೆಗಳು ಮತ್ತು ರೈತರು ಒಂದಾಗಿ ಬಂದ್‍ಗೆ ಬೆಂಬಲವನ್ನು ಕೊಟ್ಟಿದೆ. ಕನ್ನಡ ಒಕ್ಕೂಟದ ಮುಖಂಡರುಗಳಾದ ಸಾ.ರಾ. ಗೋವಿಂದ್, ಶಿವರಾಮೇಗೌಡ, ನಾರಾಯಣಗೌಡ, ಪ್ರವೀಣ್ ಶೆಟ್ಟಿ, ಕೆ.ಆರ್ ಕುಮಾರ್, ಮಂಜುನಾಥ್ ದೇವ್, ಗಿರೀಶ್ ಗೌಡ ಸೇರಿದಂತೆ ಅನೇಕ ಸಂಘಟನೆಗಳು ಬಂದ್‍ಗೆ ಕೈಜೋಡಿಸಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ …
Read More »ಸರಳವಾಗಿ ವಿವಾಹವಾದ ಅಂತಾರಾಷ್ಟ್ರೀಯ ಹಾಕಿ ಆಟಗಾರ
ಮಡಿಕೇರಿ: ಅಂತಾರಾಷ್ಟ್ರೀಯ ಹಾಕಿ ಆಟಗಾರ ಕೊಡಗಿನ ಎಸ್.ಕೆ.ಉತ್ತಪ್ಪ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಕೊಡಗಿನ ವಿರಾಜಪೇಟೆ ಬಾಲಾಜಿ ಗ್ರಾಮದ ರೆಸಾರ್ಟ್‍ವೊಂದರಲ್ಲಿ ಸರಳವಾಗಿ ಕೇವಲ ಬೆರಳೆಣಿಕೆಯಷ್ಟು ಕುಟುಂಬ ಸದಸ್ಯ ಒಳಗೊಂಡು ಮದುವೆ ಕಾರ್ಯಕ್ರಮ ನಡೆದಿದೆ. ಎಸ್.ಕೆ.ಉತ್ತಪ್ಪ ಅವರ ನಿಶ್ಚಿತಾರ್ಥ ಕೊಡಗಿನ ಮೂಲದ ಪುಟ್ಟಿಚಂಡ ಸಂಜನಾಳೊಂದಿಗೆ ನಿನ್ನೆ ಮುಗಿದಿದ್ದು, ಇಂದು ಈ ಜೋಡಿ ಹಸೆಮಣೆಯೇರಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮವನ್ನು ಮಾಡಲಾಗಿದೆ. ಇಂದು ರಾತ್ರಿ ದಂಪತಿ ಮುಹೂರ್ತ ನಿಗದಿಯಾಗಿದ್ದು, ಕುಟುಂಬದವರು ಮತ್ತು …
Read More »ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್ – ಕಮಲ್ ಪಂಥ್ ಎಚ್ಚರಿಕೆ
ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಕೆ ನೀಡಿದ್ದಾರೆ. ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಹೇಳಿದರು. ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಲು ಯತ್ನಿಸಿದರೆ ಕಾನೂನು ಕ್ರಮ …
Read More »ಬೆಳ್ಳಂಬೆಳಗ್ಗೆ ರೈಲು, ವಿಮಾನ ನಿಲ್ದಾಣಕ್ಕೆ ಕರವೇ ಮುತ್ತಿಗೆ – ಕಾರ್ಯಕರ್ತರ ಬಂಧನ
ಬೆಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ರೈತರು ಆಕ್ರೋಶ ಶುರು ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ. ಪರಿಣಾಮ 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರವೇ ಮಹಿಳಾ ಕಾರ್ಯಕರ್ತೆಯರು ಏರ್‌ಪೋರ್ಟಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಪೊಲೀಸರು 30ಕ್ಕೂ ಹೆಚ್ಚು ಮಹಿಳಾ ಪ್ರತಿಭಟನಕಾರರನ್ನ ಬಂಧಿಸಿದ್ದಾರೆ. …
Read More »ಮುಂದಿನ ಎರಡು ದಿನಗಳಲ್ಲಿ ನೈರುತ್ಯ ಮುಂಗಾರು
ಹೊಸದಿಲ್ಲಿ : ಮುಂದಿನ ಎರಡು ದಿನಗಳಲ್ಲಿ ನೈರುತ್ಯ ಮುಂಗಾರು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕ್ಷೀಣವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ತಿಳಿಸಿದೆ. ಒಟ್ಟಾರೆ ಸೆಪ್ಟೆಂಬರ್ 26ರ ವರೆಗೆ ವಾಡಿಕೆಗಿಂತ ಶೇ 9ರಷ್ಟು ಹೆಚ್ಚು ಮಳೆಯಾಗಿದೆ. ಸೆಪ್ಟೆಂಬರ್ 28ರಿಂದ ಪಶ್ಚಿಮ ರಾಜಸ್ಥಾನ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಮುಂಗಾರು ಇಳಿಮುಖವಾಗುವ ಅನುಕೂಲಕರ ವಾತಾವರಣ ವಾತಾವರಣ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಖಾಸಗಿ ಮುನ್ಸೂಚನೆ ಕಾರ ಸ್ಕೈಮೆಟ್ …
Read More »ಕರ್ನಾಟಕ ಬಂದ್ : ನಾಳೆ ರಾಜ್ಯದ್ಯಂತ ಸಾರಿಗೆ ಸಂಚಾರ ಆರಂಭ
ಬೆಂಗಳೂರು: ಕೆಲವು ಸಂಘಟನೆಗಳು ನಾಳೆ ಬಂದ್ ಗೆ ಕರೆ ಕೊಟ್ಟಿರುವುದ ರಿಂದ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಎಂದಿನಂತೆ ಬಸ್ ಸಂಚಾರ ಮುಂದುವರೆಯಲಿದೆ. ಜನತೆಗೆ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಲಕ್ಷ್ಮಣ …
Read More »