Breaking News

ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ

ಮೈಸೂರು: ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಸುರಕ್ಷಿತ ಜಾಗಕ್ಕೆ ಬಿಟ್ಟ ಘಟನೆ ಮೈಸೂರು ಜಿಲ್ಲೆಯ ಸಿ ಬಿ ಹುಂಡಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಸಿ ಬಿ ಹುಂಡಿ ಗ್ರಾಮದ ಜಮೀನಿನ‌ ಬಾವಿಯಲ್ಲಿ ಈ ಮೊಸಳೆ ಸೇರಿಕೊಂಡಿತ್ತು. 15 ರಿಂದ 20 ಅಡಿ ಆಳದ ಬಾವಿಯಲ್ಲಿ ಮೊಸಳೆ ಸೇರಿಕೊಂಡಿತ್ತು. ಈ ಮೊಸಳೆ ಬರೋಬ್ಬರಿ 750 ಕೆಜಿ ತೂಕದ ಹೊಂದಿತ್ತು. ಸುಮಾರು …

Read More »

ಸಾವಳಗಿ ಬಳಿ ಮುಂಜಾನೆ ಸಂಭವಿಸಿದ ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತ

ಕಲಬುರಗಿ: ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅಪಘಾತವಾಗಿರುವ ದಾರುಣ ಘಟನೆ ನಡಿದೆ. ನಿಂತಿದ್ದ ಲಾರಿಯೊಂದಕ್ಕೆ ಗರ್ಭಿಣಿ ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದ ಕಾರೊಂದು ನಸುಕಿನ ಜಾವ ಬಲವಾಗಿ ಗುದ್ದಿದೆ. ಸಾವಳಗಿ ಬಳಿ ಮುಂಜಾನೆ ಸಂಭವಿಸಿದ ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತರ ಪೈಕಿ ನಾಲ್ವರು ಮಹಿಳೆಯರು, ಮೂವರು ಪುರುಷರಿದ್ದರು. ಮೃತರೆಲ್ಲರೂ ಕಲಬುರಗಿ ಜಿಲ್ಲೆ ಆಳಂದದವರು ಎಂದು …

Read More »

ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನಕ್ಕೆ ಬಂದಿದ್ದವರಲ್ಲಿ ಆತಂಕ ಸೃಷ್ಟಿಸಿದೆ.

ಬೆಂಗಳೂರು: ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನಕ್ಕೆ ಬಂದಿದ್ದವರಲ್ಲಿ ಆತಂಕ ಸೃಷ್ಟಿಸಿದೆ. ಸದ್ಯ ಶಾಸಕರು ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿರುವ ದಿನೇಶ್​ ಗುಂಡೂರಾವ್​, ‘ನನಗೆ ಕೋವಿಡ್​ ರೋಗಲಕ್ಷಣ ಇಲ್ಲರಲ್ಲ. ಆದರೆ ಕೋವಿಡ್ ಟೆಸ್ಟ್​ನ ವರದಿ ಪಾಸಿಟಿವ್​ ಬಂದಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಕೋವಿಡ್​ …

Read More »

ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ.

ಬೆಂಗಳೂರು- ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟ ಮೇಲೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ. ಅವಿಶ್ವಾಸ ನಿರ್ಣಯದ ಬಗ್ಗೆ ಎರಡನೇ ಪ್ರತಿಪಕ್ಷ ಜೆಡಿಎಸ್‍ ತಟಸ್ಥ ನಿಲುವು ಅನುಸರಿಸಿತ್ತು. ಅವಿಶ್ವಾಸವನ್ನು ವಿಭಜನೆಯ ಮತಕ್ಕೆ ಹಾಕುವುದಾದರೆ ಕೊರೊನಾ ಸೋಂಕಿಗೆ ಸಿಲುಕಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರನ್ನು ಪಿಪಿಇ ಕಿಟ್‍ ಹಾಕಿಸಿ ವಿಧಾನಸಭೆಗೆ ಕರೆ ತರುವುದಾಗಿ ಬಿಜೆಪಿ ಹೇಳಿತ್ತು. ಈ ಕುರಿತಂತೆ ಬೆಳಗ್ಗೆ ನಡೆದ ಚರ್ಚೆಯಲ್ಲಿ …

Read More »

ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ವಿಧಿವಶರಾಗಿದ್ದಾರೆ.

ನವದೆಹಲಿ : ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ವಿಧಿವಶರಾಗಿದ್ದಾರೆ. 82 ವರ್ಷದ ಜಸ್ವಂತ್‌ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದ ಜಸ್ವಂತ್‌ ಸಿಂಗ್‌ ಬಳಿಕ ರಾಜಕೀಯಕ್ಕೆ ಪ್ರವೇಶಿಸಿ ಸಂಸತ್‌ ಗೆ ಆಯ್ಕೆಯಾಗಿದ್ದರು. ಅಟಲ್‌ ಬಿಹಾರಿ ವಾಜಪೇಯಿ ಸಚಿವ ಸಂಪುಟದಲ್ಲಿ ಹಲವಾರು ಪ್ರಮುಖ ಖಾತೆಗಳನ್ನು ಜಸ್ವಂತ್‌ ಸಿಂಗ್‌ ನಿಭಾಯಿಸಿದ್ದರು.‌ ಜಸ್ವಂತ್‌ ಸಿಂಗ್‌ …

Read More »

ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ

ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

Read More »

ಬೆಳಗಾವಿ: ಗರ್ಭಿಣಿ ಸೇರಿ ಇಬ್ಬರ ಬರ್ಬರ ಕೊಲೆ

ಬೆಳಗಾವಿ: ತಾಲ್ಲೂಕಿನ ಮಚ್ಚೆ ಗ್ರಾಮದ ಲಕ್ಷ್ಮಿ ನಗರದ ಹೊರವಲಯದಲ್ಲಿ ಶನಿವಾರ ಸಂಜೆ ಐದು ತಿಂಗಳ ಗರ್ಭಿಣಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಅದೇ ಗ್ರಾಮದವರಾದ ರೋಹಿಣಿ ಗಂಗಪ್ಪ ಹುಲಿಮನಿ (22) ಹಾಗೂ ರಾಜಶ್ರೀ ರವಿ ಬನ್ನೂರ (21) ಕೊಲೆಯಾದವರು. ‘ಅವರು ವಾಯುವಿಹಾರಕ್ಕೆಂದು ಬ್ರಹ್ಮದೇವರ ದೇವಸ್ಥಾನದ ಕಡೆಗೆ ಹೋಗಿದ್ದಾಗ ಘಟನೆ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದಿದ್ದವರು ಮಹಿಳೆಯರ ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ಕತ್ತಿಗೆ ಕೊಯ್ದು ಹಾಗೂ ಬೆನ್ನಿಗೆ ಇರಿದು …

Read More »

ರಾಜ್ಯ ಸರ್ಕಾರದಿಂದ ಅನುದಾನ ರಹಿತ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಕೊರೊನಾದಿಂದ ಸಂಕಷ್ಟದಲ್ಲಿರುವ ಅನುದಾನ ರಹಿತ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅನುದಾನ ರಹಿತ ಶಿಕ್ಷಕರಿಗೆ ಶೀಘ್ರವೇ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಭರವಸೆ ನೀಡಿದ್ದಾರೆ. ಕರ್ನಾಟಕ ಧನವಿನಿಯೋಗ ವಿಧೇಯಕ 2020 ಮಂಡಿಸಿದ ಬಳಕ ಜೆಡಿಎಸ್ ನ ಬಸವರಾಜ ಹೊರಟ್ಟಿ, ಕೊರೊನಾ ಸಂಕಷ್ಟದಲ್ಲಿ ಸರ್ಕಾರ ಎಲ್ಲಾ ವರ್ಗದ ಜನರಿಗೂ ನೆರವು ಘೋಷಿಸಿದೆ. ಆದರೆ, ಅನುದಾನ ರಹಿತ ಶಿಕ್ಷಕರಿಗೆ ಸಹಾಯಧನ ನೀಡಿಲ್ಲ. ಹೀಗಾಗಿ ಅನುದಾನ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (27-09-2020-ಭಾನುವಾರ)

ನಿತ್ಯ ನೀತಿ: ಹಿಂ ಸೆ ಮತ್ತು ದ್ವೇಷದಿಂದ ಏನನ್ನೂ ಸಾಧಿಸಲಾಗುವುದಿಲ್ಲ. ಅಹಿಂಸೆ ಮತ್ತು ಪ್ರೀತಿಯಿಂದಲೋಕವನ್ನೇ ಜಯಿಸಬಹುದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ :ಭಾನುವಾರ, 27.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.12 ಚಂದ್ರ ಉದಯ ಬೆ.03.37 / ಚಂದ್ರ ಅಸ್ತ ರಾ.03.11 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಧಿಕ ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ(ರಾ.07.47) ನಕ್ಷತ್ರ: …

Read More »

ಇನ್ನೂ 20 ವರ್ಷ ಕಾಂಗ್ರೆಸ್‍ನ್ನು ವಿಪಕ್ಷ ಸ್ಥಾನದಲ್ಲೇ ಕೂರಿಸುತ್ತೇನೆ : ಬಿಎಸ್ವೈ ಚಾಲೆಂಜ್

ಬೆಂಗಳೂರು,  ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 145ರಿಂದ 150 ಸ್ಥಾನ ಗೆದ್ದು ಇನ್ನೂ 20 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲೇ ಕೂರುವಂತೆ ಮಾಡುವುದು ನನ್ನ ಗುರಿ. ಅದನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸವಾಲು ಹಾಕಿದರು. ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಬಿಡಿಎ ವಸತಿ ಯೋಜನೆಯಲ್ಲಿ ನೀವು ಮಾಡಿರುವ ಆರೋಪ ಕುರಿತು ನೀವು ಸಿಬಿಐಗಾದರೂ ಹೋಗಿ, ಹೈಕೋರ್ಟ್‍ಗಾದರೂ ಹೋಗಿ, ಲೋಕಾಯುಕ್ತಕ್ಕಾದರೂ ಹೋಗಿ, …

Read More »