Breaking News

ಖಾಸಗಿ ವಾಹನಗಳಿಗೆ ತೆರಿಗೆ ವಿನಾಯಿತಿ, ಪರ್ಯಾಯ ಸಾರಿಗೆ ವ್ಯವಸ್ಥೆ: ಡಿಸಿಎಂ ಸವದಿ

ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಮುಂದುವರೆಸುವ ನಿರ್ಧಾರವನ್ನು ಸಾರಿಗೆ ನೌಕರರ ಒಕ್ಕೂಟದ ಮುಖಂಡರು ಕೈಗೊಂಡಿರುವುದು ನಿಜಕ್ಕೂ ದುರ್ದೈವದ ವಿಚಾರವಾಗಿದೆ ಎಂದು ಸಾರಿಗೆ ಸಚಿವರಾದ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಮುಷ್ಕರದಿಂದ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಸರ್ಕಾರವು ಹಲವು ರೀತಿಯಲ್ಲಿ ಪರ್ಯಾಯ ವ್ಯವಸ್ಥೆ ಕೈಗೊಂಡಿರುವುದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು. ಸಾರಿಗೆ ನೌಕರರ ವೇತನ …

Read More »

ಸಾರಿಗೆ ನೌಕರರ ಮುಷ್ಕರ, ಯುಗಾದಿ ಹಬ್ಬ: ನೈರುತ್ಯ ರೈಲ್ವೆಯಿಂದ ಹೆಚ್ಚುವರಿ ರೈಲು ಸಂಚಾರ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು ನೈರುತ್ಯ ರೈಲ್ವೆ ಗುರುವಾರದಿಂದ ಏಪ್ರಿಲ್ 14ರವರೆಗೆ ಹೆಚ್ಚುವರಿ ರೈಲಿನ ಸಂಚಾರ ನಡೆಸಲಿದೆ. ಯುಗಾದಿ ಸಮಯದಲ್ಲಿ ಒಂದು ಊರಿನಿಂದ ಇನ್ನೊಂದು ಊರಿಗೆ ಪ್ರಯಾಣ ಮಾಡುವವರ ಸಂಖ್ಯೆ ಅಧಿಕವಾಗಿರುತ್ತದೆ. ಅಲ್ಲದೆ ಈಗ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ, ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ …

Read More »

BIG NEWS: 1 ರಿಂದ 9 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್: ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ತೀರ್ಮಾನ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಕೊರೋನಾನ ಎರಡನೇ ಬಾರಿ ಆತಂಕ ಉಂಟು ಮಾಡಿದ ಹಿನ್ನೆಲೆಯಲ್ಲಿ 1 ರಿಂದ 9 ಮತ್ತು 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂಬ ಕುರಿತು ಚರ್ಚೆ ನಡೆದಿದೆ. ಇಂದು 1 …

Read More »

ಮೊಬೈಲ್‌ ವ್ಯಾಲೆಟ್‌ ಮಿತಿ 2 ಲಕ್ಷ ರೂ.ಗೆ : ಆರ್‌ಬಿಐ ಆದೇಶ

ಹೊಸದಿಲ್ಲಿ : ಮೊಬೈಲ್‌ ವ್ಯಾಲೆಟ್‌ ಬಳಕೆದಾರರಿಗೆ ಆರ್‌ಬಿಐ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ನೀವು ವ್ಯಾಲೆಟ್‌ನಲ್ಲಿ 2 ಲಕ್ಷ ರೂ.ವರೆಗೆ ಇಟ್ಟುಕೊಳ್ಳಬಹುದು. ವ್ಯಾಲೆಟ್‌ನಲ್ಲಿ ಇಡ ಬಹುದಾದ ಮೊತ್ತದ ಮಿತಿಯನ್ನು 1 ಲಕ್ಷ ರೂ.ನಿಂದ 2 ಲಕ್ಷ ರೂ.ಗಳಿಗೆ ಏರಿಸಿ ಆರ್‌ಬಿಐ ಬುಧವಾರ ಆದೇಶ ಹೊರಡಿಸಿದೆ. ಅಲ್ಲದೆ ಪೇಟಿಎಂ, ಫೋನ್‌ಪೇ, ಮೊಬಿವಿಕ್‌, ಗೂಗಲ್‌ಪೇ ಸೇರಿದಂತೆ ಪ್ರೀಪೇಯ್ಡ ಮೊಬೈಲ್‌ ವ್ಯಾಲೆಟ್‌ ಕಂಪೆನಿಗಳು ಕೂಡ ಶೀಘ್ರದಲ್ಲೇ ಸಂಪೂರ್ಣ ಕೆವೈಸಿ (ನೋ ಯುವರ್‌ ಕಸ್ಟಮರ್‌) ಪ್ರಕ್ರಿಯೆಯನ್ನು …

Read More »

ತಪ್ಪು ಸಾಬೀತಾಗದಿದ್ದರೂ ಅಮಾನತು ಶಿಕ್ಷೆ ! ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆಯ ಅವಸ್ಥೆ

ಉಡುಪಿ: ಇಲಾಖೆ ವಿಚಾರಣಾ ವರದಿಯಲ್ಲಿ ಆರೋಪ ನಿರಾಧಾರ ಎಂದು ಸಾಬೀತಾಗಿದ್ದರೂ ಹಾಗೂ ಅನಾಮಧೇಯ ದೂರು ಪತ್ರ ಅನೂರ್ಜಿತಗೊಂಡಿದ್ದರೂ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದ ಪ್ರಸಂಗ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ. ಎರಡು ವರ್ಷಗಳಿಂದ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಆಗಿರುವ ಮಂಜುಳಾ ಕೆ. ಅವರು ಈಗ ಅಮಾನತು ಶಿಕ್ಷೆ ಎದುರಿಸುತ್ತಿರುವವರು. ಇಲಾಖೆಯಲ್ಲಿ 22 ವರ್ಷ ಸೇವೆ ಸಲ್ಲಿಸಿರುವ ಮಂಜುಳಾ ಅವರು 2 ವರ್ಷ 2 ತಿಂಗಳ ಕಾಲ ಉಡುಪಿ ಬಿಇಒ …

Read More »

ಸಂಚರಿಸದ KSRTC-BMTC ಬಸ್‌ಗಳು: ಪ್ರಯಾಣಿಕರ ಸಂಚಾರಕ್ಕೆ ಅಡಚಣೆ

ಬೆಂಗಳೂರು : ವಿವಿಧ ಬೇಡಿಕೆಗಳು ಹಾಗೂ ಆರನೇ ವೇತನ ಆಯೋಗ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ನಾಲ್ಕೂ ಸಾರಿಗೆ ನಿಗಮಗಳ ಸಾರಿಗೆ ನೌಕರರು ಮುಂಜಾನೆಯಿಂದ ಬಸ್‌ಗಳನ್ನು ಡಿಪೋಗಳಿಂದ ಹೊರತೆಗೆಯದೇ ಪ್ರತಿಭಟನೆ ಮಾಡುತ್ತಿದ್ದು, ಪ್ರಯಾಣಿಕರಿಗೆ ಅಡಚಣೆ ಉಂಟಾಗಿದೆ. ಸದಾ ಜನಜಂಗುಳಿಯಿಂದ ಜುನುಗುಡುತ್ತಿದ್ದ ಕೆಂಪೇಗೌಡ ಬಸ್‌ ನಿಲ್ದಾಣದ ಬಸ್‌ಗಳಿಲ್ಲದೇ ಬಣಗುಡುತ್ತಿದೆ. ಮುಂಜಾನೆ 5 ಗಂಟೆಯಿಂದ ಕೆಲ ಖಾಸಗಿ ಬಸ್‌ಗಳು ಮಾತ್ರ ಸಂಚಾರ ಆರಂಭಿಸಿವೆ. ಆದರೆ ಸಮರ್ಪಕ ಸೇವೆ ಸಿಗದೇ ಪ್ರಯಾಣಿಕರು ತೀವ್ರ ಬೇಸರವನ್ನು ಹೊರಹಾಕುತ್ತಿದ್ದಾರೆ. …

Read More »

ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಬಳಕೆ, ಪ್ರಯಾಣಿಕರ ಪರದಾಟ

ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅತ್ತ ಸರ್ಕಾರ ಖಾಸಗಿ ಬಸ್ ಗಳನ್ನು ಬಳಸಲು ಅವಕಾಶ ನೀಡಿದ್ದರೆ, ಇತ್ತರ ಸಾರಿಗೆ ನೌಕರರೂ ಪಟ್ಟು ಬಿಡದೆ ಮುಷ್ಕರ ಮುಂದುವರಿಸಿದ್ದಾರೆ. ಇಂದು ಸಹ ಯಾವುದೇ ಸಾರಿಗೆ ಬಸ್ ಸಂಚಾರ ಕಂಡುಬಂದಿಲ್ಲ. ಹೆಚ್ಚಿನೆಡೆ ಖಾಸಗಿ ಬಸ್ ಗಳನ್ನು ಬಳಸಲಾಗುತ್ತಿದೆ. ಆದರೆ ಪ್ರಯಾಣಿಕರು ಮಾತ್ರ ಪರದಾಡುವಂತಾಗಿದೆ. ಒಂದೆಡೆ ಅನಿರ್ದಿಷ್ಟಾವಧಿ ಖಾಸಗಿ ವಾಹನಗಳ ಕಾರ್ಯಾಚರಣೆಗೆ ಸರ್ಕಾರ …

Read More »

ಬೈಎಲೆಕ್ಷನ್‍ನಲ್ಲಿ ರೈತಪರ, ಕನ್ನಡಪರ, ಕಮ್ಯುನಿಷ್ಟ ಪಕ್ಷಗಳಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನವಿ

ಬೈಎಲೆಕ್ಷನ್‍ನಲ್ಲಿ ರೈತಪರ, ಕನ್ನಡಪರ, ಕಮ್ಯುನಿಷ್ಟ ಪಕ್ಷಗಳಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನವಿ

Read More »

ಮನೆಗಳ್ಳನ ಬಂಧನ; ೨೩,೧೫,೦೦೦/- ರೂ. ಮೌಲ್ಯದ ಬಂಗಾರದ ಆಭರಣ, ಹಾಗೂ ೬೦ ಸಾವಿರ ನಗದು ವಶಕ್ಕೆ

ಬೆಳಗಾವಿ – ದಿನಾಂಕ:೦೩-೦೪-೨೦೨೧ ರಂದು ಗೌಸಮೋದಿನ ಮೈನುದ್ದಿನ ತೋರಗಲ್ಲ, ಬೆಳಗಾವಿ ಇವರು  ದಿನಾಂಕ: ೦೨-೦೪-೨೦೨೧ ರಂದು ರಾತ್ರಿ ವೇಳೆಯಲ್ಲಿ ಸಂಗಮೇಶ್ವರ ನಗರದಲ್ಲಿರುವ ತಮ್ಮ ಮನೆಯಲ್ಲಿದ್ದ ೪೭೦ ಗ್ರಾಂ ಬಂಗಾರದ ಆಭರಣ ಹಾಗೂ ಒಂದು ಲಕ್ಷ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ನೀಡಿದ ದೂರಿನನ್ವಯ ಎ.ಪಿ.ಎಮ್.ಸಿ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಮೊಹ್ಮದಸಲ್ಮಾನ ನಸೀರಅಹ್ಮದ ಅನ್ಸಾರಿ ( ವಯಾ: ೨೨ ವರ್ಷ, ಸಾ: ಸಿಕಂದರಪೂರ, …

Read More »

ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು

ಬೆಳಗಾವಿ : ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಜೆಡಿಎಸ್ ಜಿಲ್ಲಾಧ್ಯಕ್ಷ ತೀರ್ಥಹಳ್ಳಿಯ ಮಂಜುನಾಥಗೌಡ ಅವರು ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜಂಜುನಾಥ್ ಗೌಡ ಹಾಗೂ ಬೆಂಬಲಿಗರನ್ನು ಕಾಂಗ್ರೆಸ್ಸಿಗೆ ಬರಮಾಡಿಕೊಳ್ಳಲಾಯಿತು. ಕಾಂಗ್ರೆಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಮತ್ತಿತರರು ಹಾಜರಿದ್ದರು. ಇದೇ ವೇಳೆ ಬೆಳಗಾವಿ ಮತ್ತು ಬಾಗಲಕೋಟೆಯ ಅನ್ಯಪಕ್ಷಗಳ ಮಹಿಳಾ ಮುಖಂಡರು ಕೂಡ ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ …

Read More »