ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ಡೌನ್ ಮುಂದುವರಿಯುವ ಸಾಧ್ಯತೆ ಇದೆ. ಕಳೆದ ಜುಲೈ 16 ರಿಂದ ಜಿಲ್ಲಾದ್ಯಂತ ಲಾಕ್ಡೌನ್ ಆರಂಭವಾಗಿದ್ದು ನಾಳೆಗೆ ಅಂತ್ಯವಾಗಲಿದೆ. ಆದರೆ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿಯುತ್ತಲೇ ಇದೆ. ಜಿಲ್ಲೆಯಲ್ಲಿ ಪ್ರತಿದಿನ 10-200 ಪಾಸಿಟಿವ್ ಕೇಸ್ ಗಳು ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಹಾಗೂ ಜನಪ್ರತಿನಿಧಿಗಳು ಮತ್ತೆ ಲಾಕ್ ಡೌನ್ ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ. ಹೀಗಾಗಿ ರಾಜ್ಯದ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಿ …
Read More »ಮಣಿಪಾಲ ಕೆಎಂಸಿಯ ಹದಿನೆಂಟು ವೈದ್ಯರಿಗೆ ಕೊರೊನಾ ಸೋಂಕು ದೃಢ:ಒಂದು ವಾರ ಒಪಿಡಿ ಬಂದ್
ಉಡುಪಿ: ಮಣಿಪಾಲ ಕೆಎಂಸಿಯ ಹದಿನೆಂಟು ವೈದ್ಯರಿಗೆ ಕೊರೊನಾ ಸೋಂಕು ದೃಢವಾಗಿದೆ. ಅಲ್ಲದೇ 20ಕ್ಕಿಂತಲೂ ಹೆಚ್ಚು ನರ್ಸ್, ಆಸ್ಪತ್ರೆಯ ಸಿಬ್ಬಂದಿಯಲ್ಲಿ ಕೋವಿಡ್ 19 ಕಾಣಿಸಿಕೊಂಡಿದೆ. ಹೀಗಾಗಿ ಒಂದು ವಾರ ಒಪಿಡಿ ಬಂದ್ ಮಾಡಲಾಗಿದೆ. ಕೊರೊನಾ ವಾರಿಯರ್ಗಳಿಗೆ ಒಂದು ವಾರ ಒಪಿಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಒಂದು ವಾರಗಳ ಕಾಲ ಆಸ್ಪತ್ರೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿ ಎಲ್ಲಾ ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಿಸಲಿದೆ. ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಕೆಎಂಸಿಗೆ ಆಗಮಿಸುವ ಎಲ್ಲ …
Read More »ಹಾಸನ: ಜಿಲ್ಲೆಯಲ್ಲಿ ಇಂದು ಒಂದೇ ದಿನ 96 ಜನರಿಗೆ ಕೊರೊನಾ ಪಾಸಿಟಿವ್………
ಹಾಸನ: ಜಿಲ್ಲೆಯಲ್ಲಿ ಇಂದು ಒಂದೇ ದಿನ 96 ಜನರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. ಇಂದಿನ 96 ಪಾಸಿಟಿವ್ ಪ್ರಕರಣಗಳು ಸೇರಿ ಹಾಸನದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಕೋವಿಡ್ ಸೋಂಕಿನಿಂದ ಮೃತರಾದವರ ಸಂಖ್ಯೆ 33ಕ್ಕೇರಿದೆ. ಇಂದು ಪಾಸಿಟಿವ್ ಬಂದ 96 ಜನರಲ್ಲಿ ಸುಮಾರು 18 ಜನ ಬೆಂಗಳೂರು ಟ್ರಾವೆಲ್ ಹಿಸ್ಟರಿಯನ್ನು ಹೊಂದಿದ್ದಾರೆ. ಹಾಸನದಲ್ಲಿ ಇದುವರೆಗೂ 1,049 …
Read More »ಪೌರ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು: ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ವಾಹನ ಮೇಲಿಂದ ಬಿದ್ದು ಪೌರ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಮಂಗಳವಾರ ಪಾಲಿಕೆ ಎದುರು ಪೌರ ಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದರು. ಪೌರ ಕಾರ್ಮಿಕರ ಪ್ರತಿಭಟನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಂಬಲ ಸೂಚಿಸಿದರು. ಪಾಲಿಕೆ ಎದುರು ಧರಣಿ ಕುಳಿತು ಪರಿಹಾರಕ್ಕೆ ಆಗ್ರಹಿಸಿದರು. ಜು. 19 ರಂದು ತ್ಯಾಜ್ಯ ವಿಲೇವಾರಿ ಮಾಡುವ ವೇಳೆ ವಾಹನ ಮೇಲಿಂದ ಬಿದ್ದ ಪೌರ ಕಾರ್ಮಿಕ ಪ್ರಾಣ …
Read More »ಕೊರೊನಾ ಸೋಂಕು ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಸತೀಶ ಜಾರಕಿಹೊಳಿ
ಬೆಳಗಾವಿ: ಕೊರೊನಾ ಸೋಂಕು ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಮತ್ತು ಸಚಿವರು, ಅಧಿಕಾರಿಗಳ ಮಧ್ಯೆ ಸಮನ್ವಯತೆ ಕೊರತೆಯಿಂದ ಈ ರೀತಿ ಸಮಸ್ಯೆ ಉಂಟಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ. ಗೋಕಾಕ ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರ ಚಲಾಯಿಸುವುದೊಂದೆ ಅವರ ಗುರಿಯಾಗಿದೆ. ಹೇಗಾದರು ಮಾಡಿ ದಿನ ದೂಡುತ್ತಿದ್ದಾರೆ. ಜನರ ಸಮಸ್ಯೆ ಪರಿಹರಿಸಲು ಇವರಿಗೆ ಇಂಟರೆಸ್ಟ್ ಇಲ್ಲವಾಗಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. …
Read More »ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ಪ್ರೋತ್ಸಹಧನ ನೀಡಿ, ಅಭಿನಂದನಾ ಪತ್ರ ವಿತರಿಸಿ ಸನ್ಮಾನ ಮಾಡಿದ: ರಮೇಶ ಜಾರಕಿಹೊಳಿ ಅವರು
ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಅಭಿನಂದಿಸಿದರು. ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ಪ್ರೋತ್ಸಹಧನ ನೀಡಿ, ಅಭಿನಂದನಾ ಪತ್ರ ವಿತರಿಸಿ ಸನ್ಮಾನ ಮಾಡಿದರು. ಗೋಕಾಕ …
Read More »ಖಾಲಿ ಖಾಲಿ ಆಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವನ್ಯಜೀವಿಗಳು……….
ಚಾಮರಾಜನಗರ: ಕೊರೊನಾ ಎಪೆಕ್ಟ್ ಸರಕು ಸಾಗಣೆ ವಾಹನಗಳ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಹೀಗಾಗಿ ಖಾಲಿ ಖಾಲಿ ಆಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವನ್ಯಜೀವಿಗಳು ನಿರ್ಭೀತಿಯಿಂದ ಓಡಾಟ ಮಾಡುತ್ತಿವೆ. ಬೆಂಗಳೂರು-ಕೊಯಮತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳು ಹಿಂಡು ರಸ್ತೆಯಲ್ಲಿ ನಡೆದುಕೊಂಡು ಹೋಗಿವೆ. 8ಕ್ಕೂ ಹೆಚ್ಚು ಆನೆಗಳು ಸುಮಾರು 2 ಕಿಲೋ ಮೀಟರ್ ತನಕ ರಸ್ತೆಯಲ್ಲೇ ನಡೆದು ಹೋಗಿವೆ. ಸ್ಥಳದಲ್ಲಿದ್ದವರು ಆನೆಗಳು ನಡೆದುಕೊಂಡು ಹೋಗುತ್ತಿದ್ದ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಕೊರೊನಾ ಕಡಿಮೆಯಾಗದ ಕಾರಣ ಸರಕು ಸಾಗಣೆ …
Read More »ಜಿಲ್ಲೆಯಲ್ಲಿ ಲಾಕ್ಡೌನ್ ಮುಂದುವರಿಸುವ ಕುರಿತು ಜಿಲ್ಲಾಡಳಿತ, ಜನಪ್ರತಿನಧಿಗಳು ಹಾಗೂ ಸಂಘ ಸಂಸ್ಥೆಗಳ ಅಭಿಪ್ರಾಯ ಪಡೆದು ತೀರ್ಮಾನ
ಹುಬ್ಬಳ್ಳಿ: ಜಿಲ್ಲೆಯಲ್ಲಿ ಲಾಕ್ಡೌನ್ ಮುಂದುವರಿಸುವ ಕುರಿತು ಜಿಲ್ಲಾಡಳಿತ, ಜನಪ್ರತಿನಧಿಗಳು ಹಾಗೂ ಸಂಘ ಸಂಸ್ಥೆಗಳ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದ ಮಧುರ ಕಾಲೋನಿಯ ನಿವಾಸದಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಜಿಲ್ಲೆಯಲ್ಲಿ ಲಾಕ್ಡೌನ್ ಮಾಡುವ ಅವಶ್ಯಕತೆ ಕುರಿತು ಚರ್ಚಿಸಲಾಯಿತು. ಮುಖ್ಯಮಂತ್ರಿಗಳು ಹಾಗೂ ಮುಖ್ಯಕಾರ್ಯದರ್ಶಿಗಳ ಒಪ್ಪಿಗೆ ಪಡೆದು …
Read More »ನ್ಯಾಯಾಧೀಶರಿಗೆ ಕೊರೊನಾ- ಉಡುಪಿ ಕೋರ್ಟ್ 2 ದಿನ ಸೀಲ್ಡೌನ್
ಉಡುಪಿ: ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಂದನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ವೈದ್ಯಕೀಯ ಮೂಲಗಳು ಮಾಹಿತಿ ನೀಡಿದೆ. ಉಡುಪಿ ನಗರದ ಒಳಗಿರುವ ನ್ಯಾಯಾಲಯದ ಒಂದು ವಿಭಾಗವನ್ನು ಸದ್ಯ ಸೀಲ್ಡೌನ್ ಮಾಡಲಾಗಿದೆ ಎಂದು ಮಾಹಿತಿ ಇದೆ. ಮುಂದಿನ ಎರಡು ದಿನ ಉಡುಪಿ ಜಿಲ್ಲಾ ನ್ಯಾಯಾಲಯದ ಒಳಗೆ ಯಾವುದೇ ಚಟುವಟಿಕೆಗಳು ನಡೆಯುವುದಿಲ್ಲ ಸಂಪೂರ್ಣ ಸ್ಯಾನಿಟೈಸ್ ಪ್ರಕ್ರಿಯೆಯನ್ನು ಮಾಡಲಾಗುವುದು. ನ್ಯಾಯಾಧೀಶರ ಸಂಪರ್ಕಕ್ಕೆ ಬಂದ ಎಲ್ಲಾ ಸಿಬ್ಬಂದಿಗಳಿಗೆ …
Read More »ಕ ರೋನಾ ಇದೆ ಎಂದು ಹಂಗಿಸಿದಕ್ಕೆ ಆತ್ಮ ಹತ್ಯೆ ಮಾಡಿಕೊಂಡ ಸೋಂಕಿತ..
ಬೆಂಗಳೂರು: ಕೊರೊನಾ ಸೋಂಕಿತರನ್ನು ಜನರು ಅವಮಾನಿಸುತ್ತಿದ್ದು, ಇದರಿಂದ ನೊಂದ ಸೋಂಕಿತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಸಮಾಜ ಎಷ್ಟೇ ಬದಲಾಗಿದ್ದರೂ ವಿದ್ಯಾವಂತರು ಹೆಚ್ಚಿದ್ದರೂ ಕೂಡ ಜನರ ಮನ:ಸ್ಥಿತಿ ಮಾತ್ರ ಇನ್ನೂ ಬದಲಾಗುತ್ತಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪತ್ನಿ ಮತ್ತು ಮಗನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಕೀಲಾಗಿ ನೋಡುತ್ತಿದ್ದುದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಸರುಘಟ್ಟದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ನಿವಾಸಿ ನಾಗರಾಜು (56) ಮೃತ …
Read More »