ಹಾಸನ: ಮಾನಸಿಕ ಅಸ್ವಸ್ಥೆಯಂತೆ ಕಾಣುತ್ತಿದ್ದ ಮಹಿಳೆಯೊಬ್ಬಳು ಕೆಎಸ್‍ಆರ್ ಟಿಸಿ ಬಸ್‍ಗೆ ಅಡ್ಡಲಾಗಿ ಮಲಗಿ ರಂಪಾಟ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಎಸ್‍ಪಿ ಕಚೇರಿ ಸಮೀಪ ನನಗೆ ಕೊರೊನಾ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿದ್ದಾರೆ. ಮಹಿಳೆ ಅಡ್ಡ ಬಂದ ಪರಿಣಾಮ ಕೆಎಸ್‍ಆರ್ ಟಿಸಿ ಬಸ್ ಡ್ರೈವರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬಸ್ ಕೆಳಗೆ ಅಡ್ಡಲಾಗಿ ಮಲಗಿದ ಮಹಿಳೆ ಬಸ್ ಮುಂದೆ ಹೋಗದಂತೆ ಅಡ್ಡ …
Read More »ಗಾಯನ ನಿಲ್ಲಿಸಿದ S.P.B. ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ.
ಚೆನ್ನೈ: ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ಗಾಯನವನ್ನು ನಿಲ್ಲಿಸಿದ್ದಾರೆ. ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಪಿಬಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಜ್ಞ ವೈದ್ಯರ ತಂಡದಿಂದ ಆರೈಕೆ ಮಾಡಲಾಗುತ್ತಿತ್ತು. ಆಗಸ್ಟ್ 24ರಂದು ಕೊರೊನಾ …
Read More »ಹೋರಾಟ ಮಾಡಿ ಸಾಕಾಗಿದೆ, ಆದ್ರೆ ಶಸ್ತ್ರ ತ್ಯಾಗ ಮಾಡಿಲ್ಲ: H.D.K.
ಬೆಂಗಳೂರು: ಭೂ ಸುಧಾರಣ ಕಾಯ್ದೆ ಹಾಗೂ ಎಪಿಎಂಸಿ ಕೃಷಿ ಮಸೂದೆ ವಿರುದ್ಧ ನಾನು ಹೋರಾಟ ಮಾಡಿ ಸಾಕಾಗಿದೆ. ಆದರೆ ನಾನು ಶಸ್ತ್ರ ತ್ಯಾಗ ಮಾಡಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭೂ ಸುಧಾರಣ ಕಾಯ್ದೆ, ಎಪಿಎಂಸಿ ಕಾಯ್ದೆ ವಿರುದ್ಧ ಜೆಡಿಎಸ್ ಈಗಾಗಲೇ ಪ್ರತಿಭಟನೆ ಮಾಡಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ನಾವು ಪ್ರತಿಭಟನೆ ಮಾಡಿದ್ದೇವೆ. ಆದರೆ ಆತುರವಾಗಿ ಈ ಕಾಯ್ದೆ ಸುಗ್ರಿವಾಜ್ಞೆ ತರುವ …
Read More »ಅಖಿಲ ಭಾರತ ವೀರಶೈವ ಮಹಾಸಭಾ – ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಸಿಎಂ ಬಿಎಸ್‍ವೈ ಪುತ್ರಿ
ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಉದಯಕುಮಾರ್ ನೇಮಕವಾಗಿದ್ದಾರೆ. ಯಡಿಯೂರಪ್ಪ ಅವರ ಅವರು ಮೊದಲ ಪುತ್ರಿ ಅರುಣಾದೇವಿ ಉದಯಕುಮಾರ್ ಅವರನ್ನು ಇಂದು ಮಹಿಳಾ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಯ್ತು. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕಚೇರಿಯಲ್ಲಿ ಅರುಣಾದೇವಿ ಅವರು ಅಧಿಕಾರ ಸ್ವೀಕರಿಸಿದರು. ಇದೇ ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ. ಗುರುಬಸಪ್ಪ ನೇಮಕಗೊಂಡರು. ಅರುಣಾದೇವಿಯವರು ವೀರಶೈವ …
Read More »ಭಾರತ್ ಬಂದ್‍ಗೆ ಬಾಗಲಕೋಟೆಯಲ್ಲಿ ನೀರಸ ಪ್ರತಿಕ್ರಿಯೆ
ಬಾಗಲಕೋಟೆ: ಭೂ ಸುಧಾರಣ ಕಾಯ್ದೆ ಹಾಗೂ ಎಪಿಎಂಸಿ ಕೃಷಿ ಮಸೂದೆ ವಿರೋಧಿಸಿ ಭಾರತ್ ಬಂದ್‍ಗೆ ಕರೆ ನೀಡಿದ್ದು, ಬಾಗಲಕೋಟೆಯಲ್ಲಿ ಭಾರತ್ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಾಗಲಕೋಟೆಯಲ್ಲಿ ಜನಜೀವನ ಯಥಾ ಸ್ಥಿತಿಯಲ್ಲಿದೆ. ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರು ಸೇರಿದಂತೆ 10 ಕ್ಕೂ ಹೆಚ್ಚು ಸಂಘಟನೆಗಳಿಂದ ಇಂದಿನ ಬಂದ್‍ಗೆ ಕೇವಲ ನೈತಿಕ ಬೆಂಬಲ ಸೂಚಿಸಲಾಗುತ್ತಿದೆ. ಇಳಕಲ್ ಹಾಗೂ ಜಮಖಂಡಿ ರೈತರಿಂದ ಇಂದು 10 ಗಂಟೆಗೆ ಪ್ರತಿಭಟನೆ ನಡೆಸಲಿದ್ದು, ಅಂಗಡಿಮುಂಗಟ್ಟು ತೆರೆದಿದ್ದು, …
Read More »ನಟಿ ಅನುಶ್ರೀ ಒಂದು ಪತ್ರವನ್ನು ಬರೆದು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಮನವಿ
ಬೆಂಗಳೂರು: ಖ್ಯಾತ ನಿರೂಪಕಿ, ನಟಿ ಅನುಶ್ರೀಗೆ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಈ ಕುರಿತು ಅನುಶ್ರೀ ಕೂಡ ಸ್ಪಷ್ಟನೆ ಕೊಟ್ಟಿದ್ದಾರೆ. ಇದೀಗ ಮಾಧ್ಯಮಗಳಲ್ಲಿ ಅನುಶ್ರೀ ಮನವಿವೊಂದನ್ನು ಮಾಡಿಕೊಂಡಿದ್ದಾರೆ. ನಟಿ ಅನುಶ್ರೀ ಒಂದು ಪತ್ರವನ್ನು ಬರೆದು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ಏನಿದೆ? ಗುರುವಾರ ಸಂಜೆ ನನಗೆ ಮಂಗಳೂರಿನಲ್ಲಿ ಸಿಸಿಬಿ ಕಚೇರಿಯಿಂದ ವಿಚಾರಣೆಗೆ ಹಾಜರಾಗಲು ಒಂದು …
Read More »ಸಿಆರ್‌ಪಿಎಫ್ ಯೋಧರ ಮೇಲೆ ಮತ್ತೆ ಉಗ್ರರ ದಾಳಿ
ಶ್ರೀನಗರ, -ಕಾಶ್ಮೀರ ಕಣಿವೆಯಲ್ಲಿ ಯೋಧರನ್ನು ಗುರಿಯಾಗಿರಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸುವ ಪ್ರಕರಣಗಳು ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್‍ನಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‍ಪಿಎಫ್) ಯೋದರ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದಾರೆ. ಸುದೈವವಶಾತ್ ಭಯೋತ್ಪಾದಕರ ಆಕ್ರಮಣದಲ್ಲಿ ಸಾವು-ನೋವು ಸಂಭವಿಸಿಲ್ಲ. ಮಿನಿ ಸೆಕ್ರೆಟರಿಯೇಟ್ (ಪುಟ್ಟ ಸಚಿವಾಲಯ)ನ ಭದ್ರತೆಗೆ ನಿಯೋಜಿಸಿದ್ದ ಸಿಆರ್‍ಪಿಎಫ್ ಯೋಧರನ್ನು ಹತ್ಯೆ ಮಾಡಲು ಉಗ್ರರು ಗುಂಡು ಹಾರಿಸಿ ಪರಾರಿಯಾದರು. ಅದೃಷ್ಟವಶಾತ್ …
Read More »ರೈತ ವಿರೋಧಿ ಕಾಯ್ದೆ ಖಂಡಿಸಿ ಇಂದು ರಸ್ತೆ ತಡೆ; ಎಲ್ಲೆಲ್ಲಿ ಪ್ರತಿಭಟನೆ ಬಿಸಿ?
ಬೆಂಗಳೂರು : ರೈತ ವಿರೋಧಿ ಕಾಯ್ದೆ ವಿರೋಧಿಸಿ ಅನ್ನದಾತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರದ ನಡೆಯನ್ನು ವಿರೋಧಿಸಿ ಇಂದು ಅನೇಕ ರೈತ ಸಂಘಟನೆಗಳು ರಸ್ತೆ ತಡೆ ಮಾಡಲಿದ್ದಾರೆ. ಇಂದು ಐಕ್ಯ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಲಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆಯಲು ಕರೆ …
Read More »ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಆದ್ದರಿಂದ ಸದನ ಸಭೆಯಿಂದ ದೂರ ಉಳಿಯಲು ಹೇಳಿ : ಮಾಧುಸ್ವಾಮಿ
ಬೆಂಗಳೂರು: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಆದ್ದರಿಂದ ಸದನ ಸಭೆಯಿಂದ ದೂರ ಉಳಿಯಲು ಹೇಳಿ ಎಂದು ಡಿಸಿಎಂ ಮಾಧುಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಘಟನೆ ಇಂದು ಸದನದಲ್ಲಿ ನಡೆಯಿತು. ವಿಧಾನಸಭೆಯಲ್ಲಿ ಮಾತನಾಡಿದ ಚಿವ ಮಾಧುಸ್ವಾಮಿ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಭೆಯಿಂದ ದೂರ ಉಳಿಯಲು ಹೇಳಿ ಎಂದು ಮನವಿ ಮಾಡಿದರು. ಆದರೆ ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಅವರು, …
Read More »ರಾಜ್ಯದ ಹಲವೆಡೆ ರೈತರ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ
ದಾವಣಗೆರೆ: ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ವಿವಿಧ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ದಾವಣಗೆರೆ ನಗರದ ಜಿಲ್ಲಾ ಪಂಚಾಯತ್ ಎದುರಿನ ರಾಷ್ಟ್ರೀಯ ಹೆದ್ದಾರಿ 4ನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ರೈತ ಸಂಘ ಹುಚ್ಚವ್ವನಹಳ್ಳಿ ಬಣ ಮುಂಜಾನೆ 5 ಗಂಟೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಪೊಲೀಸರ ಎಚ್ಚರಿಕೆಯ ನಡುವೆಯೇ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »