ಬೆಂಗಳೂರು: ಖ್ಯಾತ ನಿರೂಪಕಿ, ನಟಿ ಅನುಶ್ರೀಗೆ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಈ ಕುರಿತು ಅನುಶ್ರೀ ಕೂಡ ಸ್ಪಷ್ಟನೆ ಕೊಟ್ಟಿದ್ದಾರೆ. ಇದೀಗ ಮಾಧ್ಯಮಗಳಲ್ಲಿ ಅನುಶ್ರೀ ಮನವಿವೊಂದನ್ನು ಮಾಡಿಕೊಂಡಿದ್ದಾರೆ. ನಟಿ ಅನುಶ್ರೀ ಒಂದು ಪತ್ರವನ್ನು ಬರೆದು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ಏನಿದೆ? ಗುರುವಾರ ಸಂಜೆ ನನಗೆ ಮಂಗಳೂರಿನಲ್ಲಿ ಸಿಸಿಬಿ ಕಚೇರಿಯಿಂದ ವಿಚಾರಣೆಗೆ ಹಾಜರಾಗಲು ಒಂದು …
Read More »ಸಿಆರ್ಪಿಎಫ್ ಯೋಧರ ಮೇಲೆ ಮತ್ತೆ ಉಗ್ರರ ದಾಳಿ
ಶ್ರೀನಗರ, -ಕಾಶ್ಮೀರ ಕಣಿವೆಯಲ್ಲಿ ಯೋಧರನ್ನು ಗುರಿಯಾಗಿರಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸುವ ಪ್ರಕರಣಗಳು ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ನಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋದರ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದಾರೆ. ಸುದೈವವಶಾತ್ ಭಯೋತ್ಪಾದಕರ ಆಕ್ರಮಣದಲ್ಲಿ ಸಾವು-ನೋವು ಸಂಭವಿಸಿಲ್ಲ. ಮಿನಿ ಸೆಕ್ರೆಟರಿಯೇಟ್ (ಪುಟ್ಟ ಸಚಿವಾಲಯ)ನ ಭದ್ರತೆಗೆ ನಿಯೋಜಿಸಿದ್ದ ಸಿಆರ್ಪಿಎಫ್ ಯೋಧರನ್ನು ಹತ್ಯೆ ಮಾಡಲು ಉಗ್ರರು ಗುಂಡು ಹಾರಿಸಿ ಪರಾರಿಯಾದರು. ಅದೃಷ್ಟವಶಾತ್ …
Read More »ರೈತ ವಿರೋಧಿ ಕಾಯ್ದೆ ಖಂಡಿಸಿ ಇಂದು ರಸ್ತೆ ತಡೆ; ಎಲ್ಲೆಲ್ಲಿ ಪ್ರತಿಭಟನೆ ಬಿಸಿ?
ಬೆಂಗಳೂರು : ರೈತ ವಿರೋಧಿ ಕಾಯ್ದೆ ವಿರೋಧಿಸಿ ಅನ್ನದಾತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರದ ನಡೆಯನ್ನು ವಿರೋಧಿಸಿ ಇಂದು ಅನೇಕ ರೈತ ಸಂಘಟನೆಗಳು ರಸ್ತೆ ತಡೆ ಮಾಡಲಿದ್ದಾರೆ. ಇಂದು ಐಕ್ಯ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಲಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆಯಲು ಕರೆ …
Read More »ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಆದ್ದರಿಂದ ಸದನ ಸಭೆಯಿಂದ ದೂರ ಉಳಿಯಲು ಹೇಳಿ : ಮಾಧುಸ್ವಾಮಿ
ಬೆಂಗಳೂರು: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಆದ್ದರಿಂದ ಸದನ ಸಭೆಯಿಂದ ದೂರ ಉಳಿಯಲು ಹೇಳಿ ಎಂದು ಡಿಸಿಎಂ ಮಾಧುಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಘಟನೆ ಇಂದು ಸದನದಲ್ಲಿ ನಡೆಯಿತು. ವಿಧಾನಸಭೆಯಲ್ಲಿ ಮಾತನಾಡಿದ ಚಿವ ಮಾಧುಸ್ವಾಮಿ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಭೆಯಿಂದ ದೂರ ಉಳಿಯಲು ಹೇಳಿ ಎಂದು ಮನವಿ ಮಾಡಿದರು. ಆದರೆ ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಅವರು, …
Read More »ರಾಜ್ಯದ ಹಲವೆಡೆ ರೈತರ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ
ದಾವಣಗೆರೆ: ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ವಿವಿಧ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ದಾವಣಗೆರೆ ನಗರದ ಜಿಲ್ಲಾ ಪಂಚಾಯತ್ ಎದುರಿನ ರಾಷ್ಟ್ರೀಯ ಹೆದ್ದಾರಿ 4ನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ರೈತ ಸಂಘ ಹುಚ್ಚವ್ವನಹಳ್ಳಿ ಬಣ ಮುಂಜಾನೆ 5 ಗಂಟೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಪೊಲೀಸರ ಎಚ್ಚರಿಕೆಯ ನಡುವೆಯೇ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ.
ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ. 5,800 ಗ್ರಾಮ ಪಂಚಾಯತ್ ಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಲು ಚುನಾವಣಾ ಆಯೋಗ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಪತ್ರ ಬರೆದಿದೆ. ಚುನಾವಣಾ ಸಮದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ …
Read More »ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ವಿಷಮಿಸಿದ್ದು, ಕೆಲ ಹೊತ್ತಲ್ಲೇ ಎಂಜಿಎಂ ಆಸ್ಪತ್ರೆಯಿಂದ ಮತ್ತೊಂದು ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ.
ಚೆನ್ನೈ: ಖ್ಯಾತ ಗಾಯಕ, ಗಾನ ಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ವಿಷಮಿಸಿದ್ದು, ಕೆಲ ಹೊತ್ತಲ್ಲೇ ಎಂಜಿಎಂ ಆಸ್ಪತ್ರೆಯಿಂದ ಮತ್ತೊಂದು ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಗಾಯಕನ ಕೋಟ್ಯಂತರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿದೆ. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೆ.5ರಂದು ವೈದ್ಯರ ಸಲಹೆ ಮೇರೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದ ತೊಂದರೆ ಹಾಗೂ ವಿವಿಧ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಗುಣಮುಖರಾಗಿದ್ದಾರೆ …
Read More »ರೈತರ ಪ್ರತಿಭಟನೆ : ಬೆಂಗಳೂರಿಗೆ ಟ್ರಾಫಿಕ್ ಬಿಸಿ
ಬೆಂಗಳೂರು-ಎಪಿಎಂಸಿ ಭೂ ಸುಧಾರಣೆ ಕಾಯ್ದೆ ವಿರೋಸಿ ರಾಷ್ಟ್ರೀಯ ಕಿಸಾನ್ ಮಹಾಸಂಘ ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ 35 ಸಂಘಟನೆಗಳು ಇಂದು ರಾಜ್ಯದ ಹಲವೆಡೆ ಹೆದ್ದಾರಿ ತಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದವು. ಪ್ರತಿಭಟನಾ ನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಬೆಂಗಳೂರಿನ ಗೊರಗುಂಟೆಪಾಳ್ಯ ವೃತ್ತದಲ್ಲಿ ರೈತ ಸಂಘದ ವತಿಯಿಂದ ಗಿರೀಶ್ಗೌಡ ನೇತೃತ್ವದಲ್ಲಿ ಬೆಳ್ಳಂಬೆಳಗ್ಗೆ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಿದ್ದರಿಂದ ಕೆಲ ಕಾಲ ಟ್ರಾಫಿಕ್ ಜಾಮ್ …
Read More »ಸಾಫ್ಟ್ವೇರ್ ಎಂಜಿನಿಯರ್ to ಶಂಕರ್: ಮಾದಕ ಜಾಲದ ಕೊಂಡಿ ಇಲ್ಲಿದೆ ನೋಡಿ
ಬೆಂಗಳೂರು: ಬಂಧಿತ ಬಾಲಿವುಡ್ ನಟ ಕಿಶೋರ್ಗೂ ಅನುಶ್ರೀಗೂ 5 ವರ್ಷಗಳಿಂದ ನಂಟಿದೆ ಎಂದು ತಿಳಿದುಬಂದಿದೆ. ಮುಂಬೈ ಸೇರಿ ವಿವಿಧ ಕಡೆ ಇಬ್ಬರು ಒಟ್ಟಿಗೆ ಓಡಾಡಿರುವ ಮಾಹಿತಿ ಸಹ ಸಿಕ್ಕಿದೆ. ಜೊತೆಗೆ, ಕಿಶೋರ್ ಌಂಕರ್ ಅನುಶ್ರೀ ಜೊತೆ ಮಾತನಾಡಿರೋ ಕಾಲ್ ಲಿಸ್ಟ್ ಲಭ್ಯವಾಗಿದ್ದು ಆಕೆಗೆ ಕರೆ ಮಾಡಿದ್ದ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದಲ್ಲದೆ, ಅನುಶ್ರೀ ಜೊತೆ ಪಾರ್ಟಿ ಮಾಡಿರುವುದಾಗಿ ಮತ್ತೊಬ್ಬ ಬಂಧಿತ ಆರೋಪಿ ತರುಣ್ ಹೇಳಿದ್ದ ಎಂದು ತಿಳಿದುಬಂದಿದೆ.ಸದ್ಯ ಬೆಂಗಳೂರಲ್ಲಿ …
Read More »ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ
ಉತ್ತರಕನ್ನಡ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುರುವಾರ ಸಂಜೆ ನಡೆದಿದೆ. ಕಿರವತ್ತಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಗುರುತಿನ್ನೂ ಪತ್ತೆಯಾಗಿಲ್ಲ. ಮೃತರು ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಎಂದು ತಿಳಿದುಬಂದಿದೆ. ಕಾರು …
Read More »