Breaking News

B.S.N.L. ನೊಂದಿಗೆ ಒಟಿಟಿ ಸಹಭಾಗಿತ್ವ

ಬೆಂಗಳೂರು,ಫೆ.5- ಪ್ರಮುಖ ಜಾಗತಿಕ ಒಟಿಟಿ ಪ್ಲಾಟ್‍ಫಾರ್ಮ್ ಯುಪ್.ಟಿವಿ, ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‍ಎನ್‍ಎಲ್) ನೊಂದಿಗೆ ಸಹಭಾಗಿತ್ವ ಹೊಂದಿದೆ. ಪರಿಣಾಮ ಹೊಸ-ಯುಗದ ಟೆಕ್-ಶಕ್ತಗೊಂಡ ಏಕ ಚಂದಾದಾರಿಕೆ ವಿಡಿಯೋ ಸ್ಟ್ರೀಮಿಂಗ್ ಪ್ಲಾಟ್‍ಫಾರ್ಮ್ ಯುಪ್ಟಿವಿ ಸ್ಕೋಪ್ ಸೇವೆಯನ್ನು ಪ್ರಾರಂಭಿಸಿದೆ. ಟ್ರಿಪಲ್ ಪ್ಲೇ ಕೊಡುಗೆಯಾಗಿ ಬ್ರಾಡ್‍ಬ್ಯಾಂಡ್ ಚಂದಾದಾರರಿಗೆ ಕಟ್ಟುಗಳ ಒಟಿಟಿ ಸೇವೆಗಳನ್ನು ನೀಡಲು ಈ ಹಿಂದೆ ಬಿಎಸ್‍ಎನ್‍ಎಲ್‍ನೊಂದಿಗೆ ಎಂಒಯುಗೆ ಸಹಿ ಹಾಕಿದ್ದ ಯುಪ್.ಟಿವಿ ಈಗ ಬಿಎಸ್‍ಎನ್‍ಎಲ್ ಬ್ರಾಡ್‍ಬ್ಯಾಂಡ್ ಬಳಕೆದಾರರಿಗಾಗಿ ಬಲವಾದ ವೀಡಿಯೊ ಸೇವೆಗಳನ್ನು ಪ್ರಾರಂಭಿಸುತ್ತಿದೆ.ಅಂತಹ …

Read More »

ಫೆ. 9ಕ್ಕೆ ಪರಿಷತ್‌ ಸಭಾಪತಿ ಚುನಾವಣೆ :

ಬೆಂಗಳೂರು: ವಿಧಾನಪರಿಷತ್‌ ಸಭಾಪತಿ ಚುನಾವಣೆಗೆ ಫೆ. 9ರಂದು ದಿನಾಂಕ ನಿಗದಿಯಾಗಿದೆ. ಬಿಜೆಪಿ -ಜೆಡಿಎಸ್‌ ಬೆಂಬಲದೊಂದಿಗೆ ಜೆಡಿಎಸ್‌ನ ಬಸವರಾಜ ಹೊರಟ್ಟಿ ಸಭಾಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತ. ಸಭಾಪತಿ ಚುನಾವಣೆ ಹಿನ್ನೆಲೆಯಲ್ಲಿ ಪರಿಷತ್‌ ಕಲಾಪವನ್ನು ಫೆ. 10ರ ವರೆಗೆ ಮುಂದುವರಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ತೀರ್ಮಾನಿಸಲಾಯಿತು. ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರ ರಾಜೀನಾಮೆ ಪತ್ರ ಅಂಗೀಕರಿಸಿ ಪರಿಷತ್‌ ಕಲಾಪ ಮುಂದುವರಿಕೆ ಮತ್ತು ಸಭಾಪತಿ ಚುನಾವಣೆ ನಿಗದಿಗೆ ರಾಜ್ಯಪಾಲರು ಅನುಮತಿ ನೀಡಿದರು.

Read More »

ಸೋಮವಾರ ಬೆಳಗಾವಿ ಜಿಲ್ಲೆಯ ಖಾನಾಪುರಕ್ಕೆ ಶಿಕ್ಷಣ ಸಚಿವ ಸುರೇಶ ಕುಮಾರ ಭೇಟಿ

ಬೆಂಗಳೂರು – ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಸೋಮವಾರ ಬೆಳಗಾವಿ ಜಿಲ್ಲೆಯ ಖಾನಾಪುರಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 6.30ಕ್ಕೆ ದಾವಣಗೆರೆಯಿಂದ ರಸ್ತೆ ಮಾರ್ಗವಾಗಿ ಹೊರಟು 9.30ಕ್ಕೆ ಖಾನಾಪುರಕ್ಕೆ ಆಗಮಿಸುವರು. ನಂತರ ಖಾನಾಪುರ ತಾಲೂಕಿನಲ್ಲಿ ಆಯ್ದ ಸರಕಾರಿ ಶಾಲೆಗಳಿಗೆ ಭೇಟಿ ನೀಡುವರು. 10.30ಕ್ಕೆ ಜಾಂಬೋಟಿಯಲ್ಲಿ ವಿಶ್ವಭಾರತಿ ಸಂಸ್ಥೆಯ ವತಿಯಿಂದ ಪುನರುತ್ಥಾನಗೊಂಡ ಶಾಲಾ ಕಟ್ಟಡವನ್ನು ಸಚಿವರು ಲೋಕಾರ್ಪಣೆಗೊಳಿಸಲಿದ್ದಾರೆ. 12.30ಕ್ಕೆ ಗಡಿ ಭಾಗದ ಶಾಲೆಗಳ ಅಭಿವೃದ್ಧಿ ಕುರಿತಂತೆ ಪ್ರಗತಿ …

Read More »

B.S.Y.&ಸಿದ್ದು ಟಾಕ್ ವಾರ್

ಬೆಂಗಳೂರು : ಶುಕ್ರವಾರ ವಿಧಾನಸಭೆ ಕಲಾಪದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನ ನಿರ್ಣಯ ಪ್ರಸ್ತಾವದ ಚರ್ಚೆಗೆ ಸಿಎಂ ಯಡಿಯೂರಪ್ಪ ಉತ್ತರ ನೀಡಿದ್ದು, ತಮ್ಮ ವಿರುದ್ಧ ವಾಗ್ಧಾಳಿ ನಡೆಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾತಿನಲ್ಲೇ ತಿವಿದಿದ್ದಾರೆ. – ಎಲ್ಲಿಯ ವರೆಗೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವರ ಬೆಂಬಲ, ರಾಜ್ಯದ ಜನರ ಆಶೀರ್ವಾದ ಇರುವುದೋ ಅಲ್ಲಿಯ ವರೆಗೆ ನನ್ನ ವಿರುದ್ಧ 100 ಕೇಸ್‌ ದಾಖಲಿಸಿದರೂ ಎದುರಿಸುವ ಶಕ್ತಿ ಇದೆ. – …

Read More »

ಕೃಷಿ ಕಾಯ್ದೆ ಖಂಡಿಸಿ ಇಂದು ರೈತರಿಂದ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ಹೆದ್ದಾರಿ ಬಂದ್‌

ಬೆಂಗಳೂರು/ಹೊಸದಿಲ್ಲಿ : ಕೃಷಿ ಕಾಯ್ದೆಗಳನ್ನು ಖಂಡಿಸಿ ಶನಿವಾರ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ರೈತ ಸಂಘಟನೆಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಬಂದ್‌ ನಡೆಸಲಿವೆ. ರಾಷ್ಟ್ರ ಮಟ್ಟದಲ್ಲಿ ಕಿಸಾನ್‌ ಮೋರ್ಚಾ ಸೇರಿ ಹಲವು ರೈತ ಸಂಘನೆಗಳು ಹೆದ್ದಾರಿ ಬಂದ್‌ನಲ್ಲಿ ಭಾಗಿ ಆಗಲಿದ್ದು, ರಾಜ್ಯದಲ್ಲಿ ಸಂಯುಕ್ತ ಹೋರಾಟ -ಕರ್ನಾಟಕ ವೇದಿಕೆ ಕಾರ್ಯಕರ್ತರು, ರೈತರ ಜತೆಗೂಡಿ ಹಲವು ಕಡೆ ರಸ್ತೆ ತಡೆ ನಡೆಸಲಿದ್ದಾರೆ. ಹಾಗೆಯೇ ರಸ್ತೆ ಮಧ್ಯೆ ಊಟ ಸಿದ್ಧಪಡಿಸಿ ಸೇವಿಸಲಿದ್ದಾರೆ. ಎಲ್ಲೆಲ್ಲಿ ಚಕ್ಕಾ …

Read More »

ಮುಂದಿನ ವರ್ಷದಿಂದ ರಾಜ್ಯದ ಎಲ್ಲ ಇಲಾಖೆಗಳಿಗೆ ಸಮವಸ್ತ್ರಗಳನ್ನು ಜವಳಿ ಇಲಾಖೆಯ ನಿಗಮ ಗಳಿಂದಲೇ ಪೂರೈಕೆ

ಬೆಂಗಳೂರು: ‘ಮುಂದಿನ ವರ್ಷದಿಂದ ರಾಜ್ಯದ ಎಲ್ಲ ಇಲಾಖೆಗಳಿಗೆ ಸಮವಸ್ತ್ರಗಳನ್ನು ಜವಳಿ ಇಲಾಖೆಯ ನಿಗಮ ಗಳಿಂದಲೇ ಪೂರೈಕೆ ಮಾಡಲಾಗುವುದು. ಹೊರ ರಾಜ್ಯಗಳಿಂದ ಬಟ್ಟೆ ಆಮದು ಮಾಡುವುದನ್ನು ನಿಲ್ಲಿಸಿ ಸ್ಥಳೀಯ ನೇಕಾರರಿಗೆ ಆದ್ಯತೆ ನೀಡಲಾಗುವುದು’ ಎಂದು ಕೈಮಗ್ಗ ಹಾಗೂ ಜವಳಿ ಸಚಿವ ಶ್ರೀಮಂತ ಪಾಟೀಲ ಭರವಸೆ ನೀಡಿದರು. ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಬಿಜೆಪಿಯ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ವರ್ಷದಿಂದ ಸಮವಸ್ತ್ರಕ್ಕೆ ರಾಜ್ಯದ ನೇಕಾರರ ಬಟ್ಟೆಯನ್ನೇ ಪೂರೈಕೆ ಮಾಡಲು …

Read More »

#KarnatakaWithFarmersProtest ಎಂಬ ಟ್ವಿಟರ್ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದೆ.

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ವ್ಯಕ್ತಪಡಿಸಿದೆ. ಆ ಮೂಲಕ ಟ್ವಿಟರ್‌ ಅಭಿಯಾನಕ್ಕೆ ಕರವೇ ಸಿದ್ಧತೆ ನಡೆಸಿದೆ. ಶನಿವಾರ(ಫೆ.06) ಸಂಜೆ ಐದು ಗಂಟೆಯಿಂದ #ರೈತಹೋರಾಟದೊಂದಿಗೆಕರ್ನಾಟಕ ಮತ್ತು #KarnatakaWithFarmersProtest ಎಂಬ ಟ್ವಿಟರ್ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ‘ಇದೊಂದು ಐತಿಹಾಸಿಕ ಸಂದರ್ಭವಾಗಿದೆ. ನಮ್ಮ ನಾಡು ರೈತರ ಜತೆ …

Read More »

86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ: ಅರವಿಂದ ಲಿಂಬಾವಳಿ

ಬೆಂಗಳೂರು: ಫೆಬ್ರವರಿ ತಿಂಗಳ ಕೊನೆಯಲ್ಲಿ ಹಾವೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ಕನ್ನಡ ಹಬ್ಬದ ಸಿದ್ಧತೆ ಇನ್ನೂ ಪೂರ್ಣಗೊಂಡಿಲ್ಲ. ಅಲ್ಲದೆ, ಹೆಚ್ಚಿನ ಸಂಖ್ಯೆಯ ಜನರು ಸೇರುವುದರಿಂದ, ಕೋವಿಡ್ ನಿಯಮ ಪಾಲನೆ ಕಷ್ಟವಾಗಲಿದೆ. ಫೆಬ್ರವರಿ ಅಂತ್ಯದಲ್ಲಿ ಕೋವಿಡ್ ಹೊಸ ನಿಯಮಾವಳಿ ಜಾರಿಗೆ ಬಂದ ಬಳಿಕ ಮಾರ್ಚ್ 9ಕ್ಕೆ ಮತ್ತೊಂದು ಸಭೆ ನಡೆಸಿ, ಸಮ್ಮೇಳನ ದಿನಾಂಕ …

Read More »

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: B,S,Y,- ಯತ್ನಾಳ ಜಟಾಪಟಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ‘ಪ್ರವರ್ಗ 2 ಎ’ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ಸದಸ್ಯ ಬಸನಗೌಡ ಯತ್ನಾಳ ನಡುವಿನ ಜಟಾಪಟಿಗೆ ವಿಧಾನಸಭೆ ಶುಕ್ರವಾರ ಸಾಕ್ಷಿಯಾಯಿತು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಉತ್ತರ ನೀಡಿ ಕೂತರು. ಈ ವೇಳೆ ಬಸನಗೌಡ ಯತ್ನಾಳ, ‘ಪಂಚಮಸಾಲಿ ಹಾಗೂ ಹಾಲುಮತ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಮೂರು ಪಕ್ಷಗಳ ಸದಸ್ಯರು ಸದನದಲ್ಲಿ ಧರಣಿ ನಡೆಸಿದ್ದೇವೆ. ಆದರೆ, …

Read More »

ಬಿಪಿಎಲ್‌ ಕಾರ್ಡ್‌ಗೆ ಆನ್‌ಲೈನ್ ಮೂಲಕ ಅರ್ಜಿ: ಉಮೇಶ ಕತ್ತಿ

ಬಿಪಿಎಲ್‌ ಕಾರ್ಡ್‌ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಆಹಾರ ಸಚಿವ ಉಮೇಶ ಕತ್ತಿ ತಿಳಿಸಿದರು. ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವುದಕ್ಕೆ ತಡೆ ನೀಡಲಾಗಿತ್ತು. ಈಗ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವೇಳೆ ಸರ್ವರ್‌ನಲ್ಲಿ ಯಾವುದೇ ಸಮಸ್ಯೆ ಇದ್ದರೆ ಇದೇ 15 ರೊಳಗೆ ಸರಿಪಡಿಸಿ ಬಿಪಿಎಲ್‌ ಕಾರ್ಡ್‌ ವಿತರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Read More »