ಬೆಂಗಳೂರಿನಲ್ಲಿ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳ ಸಭೆ : ಬಾಲಚಂದ್ರ ಜಾರಕಿಹೊಳಿ

ಕೆಎಮ್‍ಎಫ್ ಬಲವರ್ಧನೆಗೆ ವಿನೂತನ ಯೋಜನೆ ಬೆಂಗಳೂರಿನಲ್ಲಿ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು: ಮುಂದಿನ ದಿನಗಳಲ್ಲಿ ಕರ್ನಾಟಕ ಹಾಲು ಮಹಾಮಂಡಳಿಯ ಮಾರುಕಟ್ಟೆಯನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳು ಶಕ್ತಿ ಮೀರಿ ದುಡಿದು ಕೆಎಮ್‍ಎಫ್ ಬಲವರ್ಧನೆಗೆ ಶ್ರಮಿಸುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ಬೆಂಗಳೂರಿನಲ್ಲಿ 14 ಜಿಲ್ಲಾ ಹಾಲು …

Read More »

ಭಾರತಕ್ಕೆ ಭೇಷ್ ಎಂದ ವಿಶ್ವ ಆರೋಗ್ಯ ಸಂಸ್ಥೆ!

ನವ​ದೆ​ಹ​ಲಿ [ಮಾ.18]: ವಿಶ್ವದಾದ್ಯಂತ ತಲ್ಲಣ ಹುಟ್ಟುಹಾಕಿರುವ ಕೊರೋನಾ ವೈರಸ್‌ ತಡೆ ಮತ್ತು ನಿವಾರಣೆ ನಿಟ್ಟಿನಲ್ಲಿ ಭಾರತ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು ಎಚ್‌​ಒ) ಬಹುವಾಗಿ ಮೆಚ್ಚಿಕೊಂಡಿದೆ. ಅಲ್ಲದೆ ಕೊರೋನಾ ವೈರಸ್‌ ಅನ್ನು ನಿರ್ವ​ಹಿ​ಸು​ವಲ್ಲಿ ಭಾರ​ತ ವಿಶ್ವಕ್ಕೇ ಮಾದರಿಯಾಗಿ ಹೊರಹೊಮ್ಮಿದೆ ಎಂದು ಹಾಡಿ ಹೊಗ​ಳಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತದಲ್ಲಿನ ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಹೆಂಕ್‌ ಬೆಕೆ​ಡ​ಮ್‌, ‘ಕೊರೋನಾ ವೈರಸ್‌ ನಿಯಂತ್ರ​ಣಕ್ಕೆ ಭಾರತ ಸರ್ಕಾರದ …

Read More »

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಸಿದ್ದಾಪುರದ ಕೆಲವು ಭಾಗ, ಶಿರಸಿ ಸೇರಿದಂತೆ ಹಲವಡೆ ಮಳೆಯಾಗಿದೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರ್ನಾಟಕದ ಕರಾವಳಿ ಭಾಗ, ಉತ್ತರ ಕನ್ನಡ, ಉತ್ತರ ಒಳನಾಡು, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ …

Read More »

ಈ ಲಕ್ಷಣಗಳು ಕಂಡು ಬಂದರೆ.? ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ

ಬೆಂಗಳೂರು: ವಿಶ್ವದಾದ್ಯಂತ ಜನರಿಗೆ ಕೊರೋನಾ ಬಿಟ್ಟುಬಿಡದೆ ಕಾಡುತ್ತಿದೆ. ಅಮೆರಿಕದ ಸಂಶೋಧಕರು ಬಿಡುಗಡೆ ಮಾಡಿದ ವರದಿಯೊಂದು ಮಾಡಿದೆ. ಕೊರೋನಾ ವೈರಸ್ ಪೀಡಿತನಲ್ಲಿ ಮೊದಲ 5 ದಿನಗಳಲ್ಲಿ ಒಣ ಕೆಮ್ಮು, ಜ್ವರ, ಉಷ್ಣತೆ ಹೆಚ್ಚಳ, ಉಸಿರಾಟದ ತೊಂದರೆ ಕಾಣಿಸಿಕೊಳುತ್ತದೆ. ಹೀಗಾಗಿ ಈ ಮೇಲಿನ ಯಾವುದೇ ಈ ಲಕ್ಷಣಗಳು ಕಂಡು ಬಂದರೆ ಕೂಡಲೇ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ. ಭಾರತದಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತೆ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

Read More »

ಇಟಲಿಯಲ್ಲಿ ಸಿಲುಕಿಕೊಂಡಿದ್ದ ಸಚಿವ ಆನಂದ್ ಸಿಂಗ್ ಪುತ್ರಿ ಆಗಮನ

ಬಳ್ಳಾರಿ, ಮಾರ್ಚ್ 18: ಇಟಲಿಯ ರೋಮ್ ನಗರದಲ್ಲಿ ಸಿಲುಕಿಕೊಂಡಿದ್ದ ಅರಣ್ಯ ಸಚಿವ ಆನಂದ್ ಸಿಂಗ್ ಪುತ್ರಿ ಇಂದು ಬೆಳಗಿನ ಜಾವ ಬೆಂಗಳೂರಿಗೆ ಆಗಮಿಸಿದ್ದಾಳೆ. ಕರ್ನಾಟಕದ 150 ವಿದ್ಯಾರ್ಥಿಗಳು ಸೇರಿದಂತೆ 445 ಜನರು ಇಟಲಿಯಲ್ಲಿ ಸಿಲುಕಿಕೊಂಡಿದ್ದರು. ಕೊರೊನಾ ಪರೀಕ್ಷೆಯ ನೆಗಟಿವ್ ಸರ್ಟಿಫಿಕೇಟ್ ಕೊಡದೇ ಏರ್ ಇಂಡಿಯಾದವರು ವಿಮಾನ ಹತ್ತಿಸಿಕೊಳ್ಳಲು ಬಿಟ್ಟಿರಲಿಲ್ಲ. ಇಂದು ಅಗಮಿಸಿದ ಆನಂದ್ ಸಿಂಗ್ ಪುತ್ರಿಗೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಆನಂದ್ ಸಿಂಗ್ ಪುತ್ರಿಯ ಜೊತೆಯಲ್ಲಿ …

Read More »

ಹಾಲಿಗೆ ಕಲಬೆರಕೆ ಮಿಶ್ರಣ : ಅಧಿಕಾರಿಗಳ ದಾಳಿ

ಮೂಡಲಗಿ : ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಿಂಗಪ್ಪ ಹಣಮಂತ ದಡ್ಡಗೋಳ ಎನ್ನುವ ಮಾಲೀಕ ಹಾಗೂ ನಿಂಗಪ್ಪ ಯಲ್ಲಪ್ಪ ಸಂಕನ್ನವರ ಎಂಬ ವ್ಯಕ್ತಿಗಳು, ರೈತರಿಂದ ಸಂಗ್ರಹಿಸಿದ ಹಾಲಿಗೆ ಕಲಬೆರಕೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರಿಗೆ ಮೂಡಲಗಿ ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ಹಾಗೂ ಸಿಬ್ಬಂಧಿ ಮತ್ತು ಗೋಕಾಕ ಆಹಾರ ಇಲಾಖೆಯ ಅಧಿಕಾರಿ ಲೋಕಶ್ ಗಾನೂರ್ ಮನೆಯ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮನೆಯಲ್ಲಿ 6 ಕೆಜಿ ಯೂರಿಯಾ, …

Read More »

6 ಕಿ.ಮೀ ರಸ್ತೆಗೆ 6 ಕೋಟಿ- ರಾತ್ರಿ ಹಾಕಿದ್ದ ಡಾಂಬರ್ ಬೆಳಗ್ಗೆ ಕೈಯಲ್ಲಿ

ಚಿಕ್ಕಮಗಳೂರು: 6 ಕಿ.ಮೀ. ರಸ್ತೆಗೆ 6 ಕೋಟಿ ರೂ. ಒಂದು ವರ್ಷದ ಹಿಂದೆ ಬಿಡುಗಡೆಯಾಗಿತ್ತು. ಆದರೆ ಒಂದು ವರ್ಷದಿಂದ ಕಾಮಗಾರಿ ಮಾಡಿದ ಗುತ್ತಿಗೆದಾರ ಹಾಗೂ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ಮಾಡಿದ್ದು ಮೂರೇ ಮೂರು ಕಿ.ಮೀ. ರಸ್ತೆ. ಅದು ರಾತ್ರಿ ಹಾಕಿದ ಡಾಂಬರ್ ಬೆಳಗ್ಗೆ ಕೈಗೆ ಬರುವಂತೆ ಎಂದು ಆರೋಪಿಸಿರೋ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಿಕ್ಕನಕೂಡಿಗೆ ಗ್ರಾಮಸ್ಥರು ಗುತ್ತಿಗೆದಾರ ಹಾಗೂ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನೇರ ರಸ್ತೆಗೆ ಡಾಂಬರ್ …

Read More »

ಹಾವೇರಿ ಜಿಲ್ಲೆಯ ಹಲಗೇರಿಯಲ್ಲಿ ಪಾಪು ಅಂತ್ಯಕ್ರಿಯೆ

ಹುಬ್ಬಳ್ಳಿ/ಧಾರವಾಡ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಾಡೋಜ ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಾರ್ಚ್ 16 ರಾತ್ರಿ 10 ಗಂಟೆ 10 ನಿಮಿಷಕ್ಕೆ ನಿಧನರಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ಇಂದು ಅಂತ್ಯಕ್ರಿಯೆ ಜರುಗಲಿದೆ. ಕಡಿಮೆ ರಕ್ತದೊತ್ತಡ , ರಕ್ತಹೀನತೆ, ಬ್ರೇನ್ ಹೆಮರೈಜ್, ಶ್ವಾಸಕೋಶದ ಸೋಂಕು ಸೇರಿದಂತೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾಟೀಲ ಪುಟ್ಟಪ್ಪ ಅವರಿಗೆ ಕಿಮ್ಸ್ ನಲ್ಲಿ ಒಂದು ತಿಂಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. …

Read More »

ಕಲಬುರಗಿ ವೈದ್ಯರಿಗೆ ಕೊರೊನಾ- ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ

ಕಲಬುರಗಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ ಕಂಡಿದೆ. ಕಲಬುರಗಿಯಲ್ಲಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಕೊರೊನಾ ವೈರಸ್ ತಗುಲಿರೋದು ವರದಿಯಲ್ಲಿ ದೃಢಪಟ್ಟಿದೆ. ಮೃತ ಕಲಬುರಗಿ ವೃದ್ಧನಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕೊರೊನೊ ಸೋಂಕು ತಗುಲಿದೆ. ಮೃತ ವೃದ್ಧನಿಗೆ ವೈದ್ಯರು ಆತನ ಮನೆಯಲ್ಲಿ ಚಿಕಿತ್ಸೆ ನೀಡಿದ್ದರು ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಮತ್ತೆರಡು ಕೋವಿಡ್- 19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆಯಾಗಿ …

Read More »

ಕೊರೊನಾ ಭೀತಿ ನಡುವೆಯೇ ಅದ್ದೂರಿ ಮದ್ವೆಯಲ್ಲಿ ಎಚ್‍ಡಿಡಿ ಭಾಗಿ:ಸಿಎಂ ಆದೇಶಕ್ಕೆ ಕ್ಯಾರೇ ಎನ್ನದ ಜೆಡಿಎಸ್ ಜಿಲ್ಲಾಧ್ಯಕ್ಷ

ಚಿತ್ರದುರ್ಗ: ಸ್ವತಃ ತಾವೇ ಆದೇಶ ಹೊರಡಿಸಿ ಇಂದು ಬೆಳಗಾವಿಯಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಸಿಎಂ ಯಡಿಯೂರಪ್ಪ ಪಾಲ್ಗೊಂಡರೆ, ಇತ್ತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕೂಡ ತಮ್ಮ ಪಕ್ಷದ ಜಿಲ್ಲಾಧ್ಯಕ್ಷನ ಮಗನ ಮದುವೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ರಾಜ್ಯಾದ್ಯಂತ ಹಬ್ಬ ಹರಿದಿನಗಳು ಹಾಗೂ ಮದುವೆ, ಸಮಾರಂಭಗಳು ಸೇರಿದಂತೆ ಜಾತ್ರೆಯನ್ನು ಸಹ ನಡೆಸದಂತೆ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಆದರೆ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಅದ್ದೂರಿಯಾಗಿ ಸಾವಿರಾರು ಜನರನ್ನು …

Read More »