Breaking News

ಮಾಹಿತಿ ನೀಡಲು ವಿಳಂಬ ಮಾಡಿದ ಪಿಡಿಒ ಸೇರಿ ಗ್ರಾಪಂ ಅಧಿಕಾರಿಗಳಿಗೆ ತಲಾ 10 ಸಾವಿರ ರೂ. ದಂಡ

ಕೊಪ್ಪಳ: ಸಕಾಲಕ್ಕೆ ಮಾಹಿತಿ ನೀಡಿದೆ ನಿರ್ಲಕ್ಷ್ಯ ವಹಿಸಿದ ಒಬ್ಬ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಮೂವರು ಗ್ರಾಮ ಪಂಚಾಯತ್ ಕಾರ್ಯದರ್ಶಿಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್ ಅವರು ತಲಾ 10,000 ರೂ.ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಮೇಲ್ಮನವಿದಾರರು ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡದೆ ಇರುವುದರಿಂದ ಅರ್ಜಿದಾರರು ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಲ್ಲಿ ಸಲ್ಲಿಸಿದ …

Read More »

ರಾಜ್ಯದಲ್ಲಿ 56 ಸಾವಿರ ಹುದ್ದೆಗಳ ಭರ್ತಿ ಐತಿಹಾಸಿಕ ನಿರ್ಧಾರ: ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತಿರುವುದು ಐತಿಹಾಸಿಕ ನಿರ್ಧಾರವಾಗಿದೆ. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ನೇಮಕಾತಿ ನಡೆದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸೋಮವಾರ ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಸಾಗರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಆಶೀರ್ವಾದ ಪಡೆದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮೀಸಲಾತಿ ನಿಗದಿ ಪಡಿಸದೆ ನೇಮಕಾತಿ ಮಾಡಿಕೊಂಡರೆ ಕೆಲವು ವರ್ಗಗಳಿಗೆ ಅನ್ಯಾಯವಾಗುತ್ತದೆ. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು …

Read More »

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ ಆಕಾಶದಲ್ಲಿ ಒಂದು ಕೌತುಕ ನಡೆಯಲಿದೆ. ಮಾರ್ಚ್ 3 ಇಂದು ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದ್ದು, ಇದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ಮೇಲೆ ಭಾರಿ ಪರಿಣಾಮ ಬೀರಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಚಂದ್ರಗ್ರಹಣವು ಎಲ್ಲಾ ರಾಶಿಗಳ ಮೇಲೆ ಮಿಶ್ರ ಫಲ ನೀಡಲಿದೆ. ಮುಖ್ಯವಾಗಿ ಸಿಂಹ ಮತ್ತು ಕುಂಭ ರಾಶಿಯವರು …

Read More »

ಮಿದುಳು ಕ್ಯಾನ್ಸರ್‌ಗೆ ತುತ್ತಾದ ಬಾಲಕಿಗೆ ಜಿಲ್ಲಾಡಳಿತದ ನೆರವು

ಗುಬ್ಬಿ: ಆಧಾರ್ ಕಾರ್ಡ್‌ನಲ್ಲಿ ಕನ್ನಡದಲ್ಲಿ ಹೆಸರು ಇಲ್ಲದೆ ಸಮಸ್ಯೆ ಎದುರಿಸಿದ್ದ ಮಿದುಳು ಕ್ಯಾನ್ಸರ್‌ಗೆ ತುತ್ತಾದ ಬಾಲಕಿಗೆ ಜಿಲ್ಲಾಡಳಿತ ಕೊಟ್ಟ ಮಾತಿನಂತೆ ನಾಲ್ಕು ದಿನದಲ್ಲಿ ಆಧಾರ್ ತಿದ್ದುಪಡಿ ಹಾಗೂ ಬಿಪಿಎಲ್ ಕಾರ್ಡ್ ಸಿದ್ಧ ಮಾಡಿ ಕುಟುಂಬಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ ಹಸ್ತಾಂತರ ಮಾಡಿದ್ದಾರೆ. ಪಟ್ಟಣದ ಸಮೀಪದ ಜಿ.ಹರಿವೇಸಂದ್ರ ಗ್ರಾಮದ ಮಂಜುನಾಥ್ ಹಾಗೂ ನೇತ್ರಾವತಿ ದಂಪತಿಯ ಹತ್ತು ವರ್ಷದ ಪುತ್ರಿ ಐದು ತಿಂಗಳ ಹಿಂದೆ ಜ್ವರದಿಂದ ಬಳಲಿ ನಂತರ ಕೈ ಕಾಲು …

Read More »

ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕಾರ್ಯಾಗಾರ, ಶೈಕ್ಷಣಿಕ ಸಮಾವೇಶ

ಗದಗ: ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ರಾಜ್ಯ ಘಟಕ, ಗದಗ ಜಿಲ್ಲಾ ಘಟಕ ಹಾಗೂ ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಶೇ. 100% ರಷ್ಟು ಫಲಿತಾಂಶ ಪಡೆದ ಶಾಲಾ ಮುಖ್ಯಸ್ಥರಿಗೆ ಗೌರವ ಹಾಗೂ ಜಿಲ್ಲಾ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತು ಕಾರ್ಯಾಗಾರ ಹಾಗೂ ಶೈಕ್ಷಣಿಕ ಸಮಾವೇಶ – 2026 ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಮಾರ್ಚ್ 4 …

Read More »

ಬೆಳಗಾವಿ ಗಡಿ ಹೋರಾಟದ ಕಥೆ ಇನ್ನು ಬೆಳ್ಳಿತೆರೆಯ ಮೇಲೆ: ಖ್ಯಾತ ನಿರ್ದೇಶಕ ಹೇಮಂತ್ ಢೋಮೆ ಘೋಷಣೆ

ಬೆಳಗಾವಿಯ ಗಡಿ ಹೋರಾಟ ಹಾಗೂ ಮರಾಠಿ ಶಾಲೆಗಳ ಅಸ್ತಿತ್ವದ ಕಿಚ್ಚು ಇನ್ನು ಮುಂದೆ ಚಿತ್ರಮಂದಿರಗಳಲ್ಲಿ ಮೊಳಗಲಿದೆ. ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಖ್ಯಾತ ಮರಾಠಿ ಚಲನಚಿತ್ರ ನಿರ್ದೇಶಕ ಹೇಮಂತ್ ಢೋಮೆ ಅವರು, ಬೆಳಗಾವಿಯ ಗಡಿ ಪ್ರಶ್ನೆಯನ್ನೇ ಆಧಾರವಾಗಿಟ್ಟುಕೊಂಡು ಸಿನಿಮಾ ಮಾಡುವುದಾಗಿ ಘೋಷಿಸಿದ್ದಾರೆ. ಮಾತೃಭಾಷೆಯ ಶಿಕ್ಷಣದ ಮಹತ್ವ ಸಾರುವ ಈ ವಿಶೇಷ ವರದಿ ನಿಮ್ಮ ಮುಂದೆ… ಬೆಳಗಾವಿಯ ಮರಾಠಾ ಮಂದಿರದಲ್ಲಿ ನಡೆದ ‘ಮರಾಠಿ ಭಾಷಾ ಗೌರವ ದಿನ’ …

Read More »

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

ಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ನಿರ್ಧಾರ ಕೈಬಿಡಬೇಕು ಎಂದು ಮಂಡ್ಯದ ಲೋಕಸಭೆ ಸದಸ್ಯರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ  ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವರು, ಜನಾಭಿಪ್ರಾಯ ಪರಿಗಣಿಸದೇ ಏಕಪಕ್ಷೀಯವಾಗಿ ಸಂಪುಟ ಸಭೆಯಲ್ಲಿ ಕೂಡ …

Read More »

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ: ಮಹಿಳೆಯ ರಕ್ಷಣೆ, ಪುಣಾಣಿಗಳು ಸಾವು

ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳ ಜೊತೆ ತಾಯಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 3 ವರ್ಷದ ಹರ್ಷಿತ್​ ಮತ್ತು ಹಿತೇಶ್ ಮೃತಪಟ್ಟಿದ್ದು, ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಉಷಾರನ್ನು ಪ್ರವಾಸಿ ಮಿತ್ರ ಸಿಬ್ಬಂದಿ ರಕ್ಷಿಸಿದ್ದಾರೆ. ಮೃತ ಪುಟಾಣಿಗಳಿಬ್ಬರೂ ಅವಳಿ-ಜವಳಿ ಎಂಬುದು ಗೊತ್ತಾಗಿದೆ. ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. …

Read More »

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದು ಬಿಡಬೇಕು ಎಂದು ಸಚಿವ ಎಂ.ಬಿ ಪಾಟೀಲ್‌  ಒತ್ತಾಯಿಸಿದರು. ವಿಜಯಪುರದ  ಆಲಮಟ್ಟಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಮಂತರು ಗ್ಯಾರಂಟಿ  ತೆಗೆದುಕೊಳ್ಳುತ್ತಿದ್ದರೆ ಅದು ತಪ್ಪು ಎನ್ನುವ ಡಿಕೆ ಸುರೇಶ್‌ ಹೇಳಿಕೆಯನ್ನ ಸಮರ್ಥಿಸಿಕೊಂಡರು. ಸ್ವಯಂ ಪ್ರೇರಿತರಾಗಿ ಶ್ರೀಮಂತರು ಗ್ಯಾರಂಟಿ ಯೋಜನೆ ಲಾಭ ಪಡೆಯೋದು ಬಿಡಬೇಕು ಅಂತ ನಾನೂ ಒತ್ತಾಯಿಸುತ್ತೇನೆ ಎಂದರು. ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು. ಅರ್ಹ ಬಿಪಿಎಲ್ ಕುಟುಂಬದವರು ಗ್ಯಾರಂಟಿ …

Read More »

ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ

ಮೈಸೂರು: ಹಳೇ ದ್ವೇಷದ ಹಿನ್ನೆಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ನಡೆದಿದೆ. ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಆಕೆ ಪರೀಕ್ಷೆ  ಮುಗಿಸಿ ಮನೆಗೆ ಬಂದಾಗ ವಿದ್ಯಾರ್ಥಿನಿಯ ಸೋದರ ಮಾವ ಸೋಮಣ್ಣ ಎಂಬಾತ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಹಳೇ ದ್ವೇಷದ ಹಿನ್ನಲೆ ನೀನು ಓದಬಾರದು ಅಂತ ಹಲ್ಲೆ ಮಾಡಿದ್ದಾನೆ. ಯುವತಿಯ ನೆರವಿಗೆ ಬಂದ ಕುಟುಂಬಸ್ಥರ …

Read More »