Breaking News

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ವೇಗ ಅಪಾಯಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು,

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ವೇಗ ಅಪಾಯಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, ಗುರುವಾರದವರೆಗೆ ವರದಿಯಾಗಿರುವ 51,422 ಪ್ರಕರಣಗಳ ಪೈಕಿ ಶೇ.67.82 ಮಂದಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ಇದು ರಾಜ್ಯದಲ್ಲಿ ಕೊರೋನಾ ಸಮುದಾಯದ ಮಟ್ಟಕ್ಕೆ ಮುಟ್ಟಿದೆಯೇ ಎಂಬ ಅಪಾಯಕಾರಿ ಪ್ರಶ್ನೆಯನ್ನು ಹುಟ್ಟುಹಾಕಿದೆ. ಏಕೆಂದರೆ, ‘ರಾಜ್ಯದಲ್ಲಿ ಸೋಂಕು ಹಬ್ಬುತ್ತಿರುವ ಪ್ರಮಾಣದಿಂದಾಗಿ ಸೋಂಕಿನ ಮೂಲ ಹಾಗೂ ಸಂಪರ್ಕಗಳ ಪತ್ತೆಯೇ ಸಾಧ್ಯವಾಗುತ್ತಿಲ್ಲ’ ಎಂದು ಸ್ವತಃ ಆರೋಗ್ಯ ಇಲಾಖೆ ಅಧಿಕಾರಿಗಳೇ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಹೀಗಿದ್ದರೂ ರಾಜ್ಯ ಸರ್ಕಾರ …

Read More »

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಂಕು ತಗುಲಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅಭಿಷೇಕ್ ಪತ್ನಿ ಐಶ್ವರ್ಯಾ ರೈ ಮತ್ತು ಆರಾಧ್ಯ ಅವರಿಗೆ ಜ್ವರ, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಕೂಡ ಶುಕ್ರವಾರ ರಾತ್ರಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಚ್ಚನ್ ಕುಟುಂಬದ ನಾಲ್ವರು ಸದಸ್ಯರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ …

Read More »

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್’ಕೌಂಟರ್ ನಡೆಸಲು ಆರಂಭಿಸಿದ್ದು, ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು …

Read More »

ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

ನವದೆಹಲಿ,  ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ. ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಭಕ್ತರು ಬಂದರೆ ಮತ್ತಷ್ಟು ಬೇಗ ಸೋಂಕು ತಗುಲುತ್ತದೆ ಎಂದು ಹೇಳಲಾಗಿತ್ತು. ಜೂನ್ ಮಧ್ಯವಾರದಲ್ಲೇ ದೇವಸ್ಥಾನವನ್ನು ತೆರೆಯಲಾಯಿತು. ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿಯ ಅಧ್ಯಕ್ಷ ವೈವಿ ಸುಬ್ಬಾರೆಡ್ಡಿ ಮಾತನಾಡಿ, ಯಾವುದೇ ಕಾರಣಕ್ಕೂ ದೇವಸ್ಥಾನದ ಬಾಗಿಲು ಮುಚ್ಚುವುದಿಲ್ಲ ಭಕ್ತರಿಗೆ ವೆಂಕಟೇಶನ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದರು. …

Read More »

ಬೆಂಗಳೂರಿನಲ್ಲಿ ಲಾಕ್‌ಡೌನ್‌ ವಿಸ್ತರಿಸಿʼ: ತಜ್ಞರ ಸಲಹೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಸಾವಿರ ದಾಟಿದರೆ ಮತ್ತೆ ಲಾಕ್‍ಡೌನ್ ಮಾಡಬೇಕಾಗುತ್ತದೆ ಎಂದು 15 ದಿನಗಳ ಹಿಂದೆಯೇ ಕೊರೊನಾ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈಗಲೂ ಕೂಡ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದು, ತಕ್ಷಣಕ್ಕೆ ಲಾಕ್‍ಡೌನ್ ತೆರವು ಬೇಡ ಬೇಡ ವಿಸ್ತರಿಸಿ ಎಂದಿದ್ದಾರೆ. ತಜ್ಞರ ಸಲಹೆ ಏನು? ದಿನದ ಸೋಂಕಿತರ ಸಂಖ್ಯೆ 2 ಸಾವಿರ ದಾಟಿದೆ. ಇಂತಹ ಸಂದರ್ಭಗಳಲ್ಲಿ ಮೈಮರೆಯಬಾರದು. ಈಗ ಲಾಕ್‍ಡೌನ್ ತೆರವು ಮಾಡಿದರೆ ಜುಲೈ ಅಂತ್ಯದಲ್ಲಿ ಕೇಸ್ …

Read More »

ರಾಯಚೂರಿನಲ್ಲಿ ಲಾಕ್‍ಡೌನ್ ಬಿಗಿ- ಶಾಸಕರ ಕಾರನ್ನೂ ವಾಪಸ್ ಕಳುಹಿಸಿದ ಪೊಲೀಸರು

ರಾಯಚೂರು: ಜಿಲ್ಲೆಯ ರಾಯಚೂರು ಹಾಗೂ ಸಿಂಧನೂರು ನಗರಗಳ 3ನೇ ದಿನದ ಲಾಕ್‍ಡೌನ್‍ನಲ್ಲೂ ಜನ ಯಾವುದೇ ಭೀತಿಯಿಲ್ಲದೆ ರಸ್ತೆಗಿಳಿಯುತ್ತಿದ್ದಾರೆ. ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಎರಡು ನಗರಗಳನ್ನು ಒಂದು ವಾರ ಕಾಲ ಲಾಕ್‍ಡೌನ್ ಮಾಡಲಾಗಿದೆ. ಅನಗತ್ಯವಾಗಿ ಜನ ರಸ್ತೆಗೆ ಇಳಿಯುತ್ತಲೇ ಇದ್ದಾರೆ. ಹೀಗಾಗಿ ಲಾಕ್‍ಡೌನ್ ಬಿಗಿಗೊಳಿಸಲು ಪೋಲಿಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ಶಾಸಕರ ಕಾರನ್ನು ಸಹ ವಾಪಸ್ ಕಳುಹಿಸಿ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿಷ್ಠೆ …

Read More »

ಬೆಳಗಾವಿಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದೆ.

ಬೆಂಗಳೂರು – ರಾಜ್ಯದಲ್ಲಿ ಇಂದು 3693 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಳಗಾವಿಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ 2208, ಧಾರವಾಡದಲ್ಲಿ 157, ಬಳ್ಳಾರಿ 133, ವಿಜಯಪುರ 118, ಮೈಸೂರು 93, ಕಲಬುರಗಿ 89, ಉಡುಪಿ 80, ಉತ್ತರ ಕನ್ನಡ 75 ಜನರಿಗೆ ಸೋಂಕು ಪತ್ತೆಯಾಗಿದೆ.

Read More »

ಖಾನಾಪುರದ ಈ ಹೋಟೆಲ್ ನಲ್ಲಿ ಯಾರಾದ್ರೂ ತಿಂಡಿ ತಿಂದ್ರೆ ಪರೀಕ್ಷೆ ಮಾಡಿಸಿಕೊಳ್ಳಿ

ಖಾನಾಪುರ –  : ಖಾನಾಪುರ ತಾಲೂಕು ಇಲ್ಲಿಯವರೆಗೆ ಕೊರೋನಾ ರಹಿತವಾಗಿ ಗುರುತಿಸಿಕೊಂಡಿತ್ತು. ತಾಲೂಕಿನಲ್ಲಿ ಕೋವಿಡ್-೧೯ ಗೆ ಮೊದಲ ಬಲಿಯಾಗಿದೆ. ಪಟ್ಟಣದ ರೇಣುಕಾ ಹೊಟೇಲ್ ಉದ್ಯಮಿ ೩ ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆದ್ದಾರಿಗೆ ಹೊಂದಿಕೊಂಡಿರುವ ಹೊಟೆಲನ್ನು ಸೀಲಡೌನ್ ಮಾಡಲಾಗಿದೆ. ಶಾಸಕಿ ಡಾ.ಅಂಜಲಿ ನಿಂಬಾಳಕರ, ತಹಶೀಲದಾರ ರೇಷ್ಮಾ ತಾಳಿಕೋಟೆ, ಪಂ.ಪ.ಮುಖ್ಯಾಧಿಕಾರಿ ವಿವೇಕ ಬನ್ನೆ, ಪೋಲಿಸ್ ಅಧಿಕಾರಿಗಳು, ಡಾ.ನಾಂದ್ರೆ , ಸರ್ವ ಪಕ್ಷಗಳ ಮುಖಂಡರು ಸೇರಿ ಹೊಟೇಲ್ …

Read More »

ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ.

ಗೋಕಾಕದಲ್ಲಿ ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ. ಲಾಕಡೌನ್ ಲೆಕ್ಕಕ್ಕಿಲ್ಲದಂತೆ ಜನ ಓಡಾಡುತ್ತಿದ್ದಾರೆ. ಲಾಕಡೌನ್ ಆದ ಪ್ರದೇಶದಲ್ಲಿ ಹೇಳೊರಿಲ್ಲ,ಕೇಳೊರಿಲ್ಲ ಅನ್ನೋ ಸ್ಥಿತಿ ಇದ ಕೊರೋನಾ ಸೋಂಕು ತಡೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಆದರೆ ಗೋಕಾಕ ಜನತೆ ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೇಗೆ ಬೇಕೋ ಹಾಗೆ ವರ್ತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಗೋಕಾಕ ತಹಸೀಲ್ದಾರ್ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ.ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿಲ್ಲ. ಕೊರಾನಾ ಕೇಸ್‍ಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಲಾಕ್‍ಡೌನ್ ಘೋಷಿಸಲಾಗಿತ್ತು. …

Read More »

ಗೋಕಾಕ ನಗರದ ವಾರ್ಡ್ ಗಳಲ್ಲಿ  ಸದಸ್ಯರೊಂದಿಗೆ ಕೊರೊನಾ ವಾರಿಯರ್ಸ್ ಗಳು ಜಾಗೃತಿ ಮೂಡಿಸಿದರು.

ಗೋಕಾಕ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ  ಹಿನ್ನೆಲೆಯಲ್ಲಿ ಗೋಕಾಕ ನಗರದ ವಾರ್ಡ್ ಗಳಲ್ಲಿ  ಸದಸ್ಯರೊಂದಿಗೆ ಕೊರೊನಾ ವಾರಿಯರ್ಸ್ ಗಳು ಜಾಗೃತಿ ಮೂಡಿಸಿದರು. ನಗರಸಭೆ ಕಂದಾಯ ಅಧಿಕಾರಿ ಎಸ್. ಕೆ. ಹಳ್ಳೂರು, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಸಿಬ್ಬಂದಿಗಳು  ನಗರದ ಪ್ರತಿಯೊಂದು  ವಾರ್ಡ್ ಗೆ ಸದಸ್ಯರೊಂದಿಗೆ  ಭೇಟಿ ನೀಡಿ ಜನರಿಗೆ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಿ ಆರೋಗ್ಯ ರಕ್ಷಣೆ  ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಜತೆಗೆ ಕಡ್ಡಾಯವಾಗಿ …

Read More »