Breaking News

ಪೌರತ್ವ ತಿದ್ದುಪಡಿ ಕಾಯ್ದೆ ಭಾರತದ ನೈತಿಕ, ಸಾಂವಿಧಾನಿಕ ಬಾಧ್ಯತೆ: RSS ನಿರ್ಣಯ ಅಂಗೀಕಾರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಆರ್‌ಎಸ್ಎಸ್ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮೂರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಿಎಎ ಜಾರಿ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ, ರಾಮ ಮಂದಿರ ನಿರ್ಮಾಣ ಹಸಿರು ನಿಶಾನೆಗೆ ಆರ್‌ಎಸ್ಎಸ್ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದೆ. ರಾಜಕೀಯ ಪಕ್ಷಗಳು ಸಿಎಎ ಬಗ್ಗೆ ಗೊಂದಲ ಸೃಷ್ಟಿಸುತ್ತಿವೆ. ಆದರೆ ಸಿಎಎ ಜಾರಿಗೆ ತಂದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಆರ್‌ಎಸ್ಎಸ್ ಕಾರ್ಯವಾಹಕ ಸುರೇಶ್ ಭೈಯಾಜೀ ಜೋಷಿ ಹೇಳಿದ್ದಾರೆ. ಅಂದಹಾಗೆ ಬೆಂಗಳೂರು …

Read More »

ಸರ್ಕಾರಿ ಶಾಲೆಯಲ್ಲಿ ಓದಿ ನನ್ನ ಮಗ ವಿಜ್ಞಾನಿಯಾಗಿದ್ದಾನೆ: ವಿಜ್ಞಾನಿ ಮಹದೇಶ್ ತಾಯಿ

ಮೈಸೂರು: ಕೊರೊನಾ ವೈರಸ್‍ಗೆ ಔಷಧ ಕಂಡು ಹಿಡಿಯಲು ಯುರೋಪಿಯನ್ ರಾಷ್ಟ್ರಗಳು ನೇಮಿಸಿದ ತಂಡದಲ್ಲಿ ಕನ್ನಡಿಗ ಡಾ. ಮಹದೇಶ್ ಪ್ರಸಾದ್ ಅವರಿಗೆ ಸ್ಥಾನ ಸಿಕ್ಕಿದ್ದು ತಾಯಿ ಸಂತಸಗೊಂಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಹದೇಶ್ ಪ್ರಸಾದ್ ಅವರ ತಾಯಿ ರತ್ನಮ್ಮ, ನನ್ನ ಮಗ ಕೊರೊನಾಗೆ ಔಷಧ ಕಂಡು ಹಿಡಿಯುವ ತಂಡದಲ್ಲಿ ಸ್ಥಾನ ಪಡೆದಿರುವುದು ನನಗೆ ಖುಷಿಯಿದೆ ಹಾಗೂ ತುಂಬಾ ಹೆಮ್ಮೆ ಇದೆ. ನಾವು ಮೂಲತಃ ಹಾಸನದ ಅರಕಲಗೂಡಿನವರಾಗಿದ್ದು, ನನ್ನ ಮಗ ಸರ್ಕಾರಿ …

Read More »

ಕೊರೊನಾ ಭೀತಿ – ಎರಡೇ ದಿನದಲ್ಲಿ 15 ಸಾವಿರ ವಿದ್ಯಾರ್ಥಿಗಳು ಮನೆಗೆ ವಾಪಸ್

ಧಾರವಾಡ: ಇಡೀ ವಿಶ್ವದ ಜನಜೀವನವನ್ನು ಅಲ್ಲೋಲ ಕಲ್ಲೋಲ ಮಾಡಿರುವ ಮಹಾಮಾರಿ ಕೊರೊನಾ ಭಯಕ್ಕೆ ಧಾರವಾಡದ ಹಾಸ್ಟೆಲ್ ವಿದ್ಯಾರ್ಥಿಗಳು ಜಾಗ ಖಾಲಿ ಮಾಡಿದ್ದಾರೆ. ಧಾರವಾಡ ನಗರದ ಸಪ್ತಾಪೂರದಲ್ಲಿ ಬಹುತೇಕ ಕೋಚಿಂಗ್ ಕ್ಲಾಸ್‍ಗಳಿವೆ. ಆದರೆ ಆ ಕ್ಲಾಸ್‍ಗಳೆಲ್ಲವೂ ಈಗ ಬಂದ್ ಮಾಡಲಾಗಿದ್ದು, ಸದ್ಯ ಕೋಚಿಂಗ್‍ಗೆ ಬಂದ ವಿದ್ಯಾರ್ಥಿಗಳು ತಮ್ಮ ತಮ್ಮ ಊರಿಗೆ ವಾಪಸ್ ಹೋಗುತ್ತಿದ್ದಾರೆ. ಕೊರೊನಾ ಸೋಂಕು ಬರಬಹುದು ಎಂಬ ಭಯದಿಂದ ಎಲ್ಲಾ ಕೋಚಿಂಗ್ ಕ್ಲಾಸಿನ ಮಾಲಿಕರು ವಿದ್ಯಾರ್ಥಿಗಳಿಗೆ ತಮ್ಮ ಊರಿಗೆ ವಾಪಸ್ …

Read More »

ಉಚಿತವಾಗಿ ಕೋಳಿ ಹಂಚಿಕೆ – ಭೀತಿ ನಡುವೆಯೂ ಕೋಳಿ ಒಯ್ಯಲು ಮುಗಿಬಿದ್ದ ಜನ

ಚಿಕ್ಕೋಡಿ/ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕೊರೊನಾ ವೈರಸ್ ಭೀತಿಯಿಂದ ಕೋಳಿ ವ್ಯಾಪಾರ ನೆಲಕಚ್ಚಿರುವ ಹಿನ್ನೆಲೆಯಲ್ಲಿ ಉಚಿತವಾಗಿ ಕೋಳಿಗಳ ಹಂಚಿಕೆ ಮಾಡಲಾಗಿದೆ. ಕೋಳಿಗಳ ಜೀವಂತ ಸಮಾಧಿ ಬಳಿಕ ಈಗ ಫಾರಂ ಮಾಲೀಕರು ಚಿಕನ್ ಪ್ರಿಯರಿಗೆ ಉಚಿತವಾಗಿ ಕೋಳಿಗಳನ್ನ ಹಂಚಿಕೆ ಮಾಡಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ವಿವಿಧ ಕಾಲೋನಿಗಳಲ್ಲಿ ಲಾರಿಗಳಲ್ಲಿ ಕೋಳಿ ತಂದು ಜನರಿಗೆ ಉಚಿತವಾಗಿ ನೀಡಲಾಗಿದೆ. ಕೊರೊನಾ ಭೀತಿ ನಡುವೆಯೂ ಉಚಿತ ಕೋಳಿ ತೆಗೆದುಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು ಒಬ್ಬರು ಎರಡು …

Read More »

ಮಹಾಮಾರಿ ಕೊರೊನಾ ಭೀತಿ- ಮಣಿಪಾಲ ವಿವಿಗೆ 15 ದಿನ ರಜೆ

ಉಡುಪಿ: ಕರೊನಾ ವೈರಸ್ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಒಂದು ವಾರ ಹೈ ಅಲರ್ಟ್ ಘೋಷಿಸಿದೆ. ಇದೀಗ ಜಿಲ್ಲೆಯ ಮಣಿಪಾಲ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಎರಡು ವಾರಗಳ ಕಾಲ ರಜೆ ಘೋಷಿಸಿದೆ. ವಿವಿಯ ಸಾವಿರಾರು ವಿದ್ಯಾರ್ಥಿಗಳು ವಿದೇಶದ ಸಂಪರ್ಕ ಹೊಂದಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶವನ್ನು ಹೊರಡಿಸಿದೆ. ಹೊರ ರಾಜ್ಯದ ವಿದ್ಯಾರ್ಥಿಗಳು ಮಣಿಪಾಲದಿಂದ ತಮ್ಮ ರಾಜ್ಯಗಳಿಗೆ ತೆರಳಿದ್ದು, ವಿದೇಶದ ವಿದ್ಯಾರ್ಥಿಗಳು ಮಣಿಪಾಲದಲ್ಲೇ ಉಳಿದುಕೊಳ್ಳುವ ಸೂಚನೆಯನ್ನು ವಿವಿ ಕೊಟ್ಟಿದೆ. ಇಂಗ್ಲಿಷ್ ಮಾತನಾಡುವ ಐವತ್ನಾಲ್ಕು …

Read More »

ಶಿಕ್ಷಣ ಸಚಿವರ ಸಂದೇಶ ದ್ವಿತೀಯ ಪಿಯುಸಿ ವಿದ್ಯಾಥಿಗಳಿಗೆ

ಬೆಂಗಳೂರು, ಮಾ.16- ಮಾರ್ಚ್ 4ರಿಂದ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆ ಈವರೆಗೆ ಸುಲಲಿತವಾಗಿ ನಡೆದಿದ್ದು, ಇನ್ನೂ ಏಳು ದಿನಗಳ ಕಾಲ ನಡೆಯಲಿರುವ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಎದುರಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಹೇಳಿದ್ದಾರೆ. ಈಗಾಗಲೇ 39 ವಿಷಯಗಳ ಪರೀಕ್ಷೆ ಮುಗಿದಿದೆ. ಇನ್ನೂ 7 ಪರೀಕ್ಷೆಗಳು ನಡೆಯಬೇಕಿದೆ. ವಿದ್ಯಾರ್ಥಿಗಳು ನಿರ್ಭಯದಿಂದ ಪರೀಕ್ಷೆ ಬರೆಯಿರಿ. ವಿಜಯಪುರದಲ್ಲಿ ಯಾರೋ ಇಬ್ಬರು ಕಿಡಿಗೇಡಿಗಳು ಮಾಡಿದ ಕೃತ್ಯದಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲವು ವದಂತಿ …

Read More »

ದೇಶದಲ್ಲಿ ಕೊರೊನಾ ಎಫೆಕ್ಟ್ ನಿಂದಾಗಿ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೂ ಕರಿಛಾಯೆ ಬೀರಿದೆ

ಹನೂರು, ಮಾ.16- ದೇಶದಲ್ಲಿ ಕೊರೊನಾ ಎಫೆಕ್ಟ್ ನಿಂದಾಗಿ ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೂ ಕರಿಛಾಯೆ ಬೀರಿದೆ. ಇದೇ ತಿಂಗಳು 21 ರಿಂದ 25ರ ವರೆಗೆ ಅದ್ಧೂರಿಯಾಗಿ ನಡೆಯಬೇಕಾಗಿದ್ದ ಯುಗಾದಿ ಹಬ್ಬದ ಜಾತಾ ಮಹೋತ್ಸವವನ್ನು ಸಂಪ್ರದಾಯದಂತೆ ಸ್ಥಳೀಯರಿಗೆ ಮಾತ್ರ ಸೀಮಿತಗೊಳಿಸಿದೆ. ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಬರುತ್ತಿದ್ದ ಮಾದಪ್ಪನ ಭಕ್ತರು ಮ.ಬೆಟ್ಟಕ್ಕೆ ಬಾರದಂತೆ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ನಿರ್ಬಂಧ ಹೇರಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ …

Read More »

ಕೊರೊನಾ ಹರಡದಂತೆ ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚುವರಿ ವೇತನ

ಬೆಂಗಳೂರು, ಮಾ.16- ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ಸೋಂಕು ಹಬ್ಬದಂತೆ ಹಗಲಿರುಳು ಯೋಧರ ರೀತಿ ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚುವರಿ ವೇತನ ಹಾಗೂ ಪಾಲಿಸಿ (ವಿಮೆ) ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸರ್ಕಾರಿ ವೈದ್ಯರು ಯೋಧರ ರೀತಿ ಕೊರೊನಾ ವೈರಸ್ ತಡೆಗಟ್ಟಲು ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ನಾನು ಅವರಿಗೆ ವಿಶೇಷವಾದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಸಿಬ್ಬಂದಿಗಳಿಗೆ ಆರ್ಥಿಕ ಬೆಂಬಲ ಹೆಚ್ಚಿಸುವ ನಿಟ್ಟಿನಲ್ಲಿ ವೇತನ ಹೆಚ್ಚಳ …

Read More »

ಯೆಸ್ ಬ್ಯಾಂಕ್‍ನಿಂದ 12,800 ಕೋಟಿ ರೂ. ಸಾಲ ಸುಸ್ತಿ : ಅನಿಲ್ ಅಂಬಾನಿಗೆ ಇಡಿ ಸಮನ್ಸ್

ಯೆಸ್ ಬ್ಯಾಂಕ್‍ನಿಂದ 12,800 ಕೋಟಿ ರೂ. ಸಾಲ ಸುಸ್ತಿ : ಅನಿಲ್ ಅಂಬಾನಿಗೆ ಇಡಿ ಸಮನ್ಸ್ ನವದೆಹಲಿ, ಮಾ.16-ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ(ಇಡಿ) ರಿಲಾಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಮನ್ಸ್ ಜಾರಿಗೊಳಿಸಿದೆ. ಉದ್ಯಮದಲ್ಲಿ ಭಾರೀ ನಷ್ಟ ಅನುಭವಿಸಿ ಕಂಗೆಟ್ಟಿರುವ ಅನಿಲ್ ಅಂಬಾನಿಗೆ ಇಡಿ ನೀಡಿರುವ ಸಮನ್ಸ್‍ನಿಂದಾಗಿ ಮತ್ತೊಂದು ಕಂಟಕ ಎದುರಾದಂತಾಗಿದೆ. ತೀವ್ರ ಆರ್ಥಿಕ …

Read More »

ಖಾನಾಪುರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕರಡಿ ದಾಳಿಯಿಂದ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವೀಸ್ಟ್

ಖಾನಾಪುರ: ವಾರದ ಹಿಂದೆ ಖಾನಾಪುರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕರಡಿ ದಾಳಿಯಿಂದ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವೀಸ್ಟ್ ದೊರೆತಿದ್ದು, ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಾನಾಪುರ ತಾಲೂಕಿನ ಅಮಟೆ ಗ್ರಾಮದ ದೇವಿದಾಸ ಗಾವಕರ್, ಸಂತೋಷ ಸೋಮಾ ಗಾವಕರ, ವಿಠ್ಠಲ ನಾಯಕ, ವಿಠ್ಠಲ ಗಣಪತಿ ನಾಯಕ, ರಾಮಾ ಗಣಪತಿ ನಾಯಕ, ಪ್ರಶಾಂತ ಗಣಪತಿ ಸುತಾರ ಬಂಧಿತರು. ಮಾ. 11 ರಂದು ಅಮಟೆ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ …

Read More »