Breaking News

ಕಾಲು ಜಾರಿ ಬಾವಿಯೊಳಗೆ ಬಿದ್ದು ಬಾಲಕ ಸಾವು, ರಕ್ಷಿಸಲು ಹೋದ ಅಜ್ಜಿಯೂ ನೀರು ಪಾಲು

ವಿಜಯಪುರ : ನೀರು ಕುಡಿಯಲು ಬಾವಿಗೆ ಇಳಿದಿದ್ದ ಬಾಲಕ ಕಾಲು ಜಾರಿ ಮುಳುಗಿದ್ದು, ಬಾಲಕನ ರಕ್ಷಿಸಲು ಹೋದ ಆತನ ಅಜ್ಜಿಯೂ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ತೋಟದಲ್ಲಿ ನಡೆದಿದೆ. ಅಸಾದ್‌ ಮುಲ್ಲಾ (12) ಮೃತ ಬಾಲಕ, ಸಲೀಮಾ‌ ಮುಲ್ಲಾ (55) ಮೃತ ಅಜ್ಜಿ‌ ಎಂಬುದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ಹೊರ್ತಿ ಪೊಲೀಸರು ಬಾವಿಯೊಳಗಿದ್ದ ಇಬ್ಬರ ಶವವನ್ನ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ …

Read More »

ಬೈಕ್​ ಡಿಕ್ಕಿ ಹೊಡೆದ ಪರಿಣಾಮ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ.

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿಂದ ಕೆಳಗಿಳಿದು ನಿಂತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್​ನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ರಭಸಕ್ಕೆ ನೆಲಕ್ಕೆ ಬಿದ್ದ ಪರಿಣಾಮ …

Read More »

ಜಲಜೀವನ್​​​ ಮಿಷನ್​​​ ಯೋಜನೆ ಅನುಷ್ಠಾನದಲ್ಲಿನ ತಪ್ಪುಗಳ ಬಗ್ಗೆ ತನಿಖೆ ?

ಬೆಂಗಳೂರು: ತುಮಕೂರು ಜಿಲ್ಲೆಯ ಜಲಜೀವನ್​​ ಮಿಷನ್​​ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರ್ಕಾರ ತನಿಖೆ ನಡೆಸಿ ವರದಿ ನೀಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂವರು ಅಧಿಕಾರಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದರು. ಇಂದು ಕಾಂಗ್ರೆಸ್​​ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ಗಮನ ಸೆಳೆಯುವ ಸೂಚನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​​ ಖರ್ಗೆ ಅವರ ಪರವಾಗಿ ಉತ್ತರ ನೀಡಿದ ಸಚಿವರು, …

Read More »

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಕ್ರಮದ ಬಗ್ಗೆ ಸಿಎಂ, ಕ್ಯಾಬಿನೆಟ್ ನಿರ್ಧಾರ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಗುತ್ತಿಗೆ ಅವ್ಯವಹಾರದ ತನಿಖಾ ವರದಿ;* ಕ್ರಮದ ಬಗ್ಗೆ ಸಿಎಂ, ಕ್ಯಾಬಿನೆಟ್ ನಿರ್ಧಾರ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ *ಬೆಂಗಳೂರು:* ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸಲ್ಲಿಕೆ ಆಗಿದ್ದು ವರದಿಯಾನುಸಾರ ಮುಂದೆ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಯವರು ಹಾಗೂ ಮಂತ್ರಿಮಂಡಲ ನಿರ್ಧರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಂತಹ ಹಗರಣಗಳು ಒಂದೆರಡಲ್ಲ; ಅದರಲ್ಲೂ ಪಿಎಸ್‌ …

Read More »

ಹೋಳಿ ಹಬ್ಬದ ವೇಳೆ ಪಾರ್ಟಿ ಮಾಡ್ತಿದ್ದ ಸ್ನೇಹಿತರ ಮಧ್ಯೆ ಗಲಾಟೆ

ಹೋಳಿ ಹಬ್ಬದ ವೇಳೆ ಪಾರ್ಟಿ ಮಾಡ್ತಿದ್ದ ಸ್ನೇಹಿತರ ಮಧ್ಯೆ ಗಲಾ*ಟೆ* ಕುಡಿದ ಮತ್ತಿನಲ್ಲಿ ಕ್ಷಲ್ಲಕ್ಕ ಕಾರಣಕ್ಕೆ ಚಾ*ಕು ಇರಿತ ಬೆಳಗಾವಿಯ ಶಹಾಪುರದ ಹೊರವಲಯದಲ್ಲಿ ಘಟನೆ ಶಹಾಪುರ ನಿವಾಸಿ ಪ್ರಕಾಶ ಚತುರ (63) ಚಾ**ಕು ಇರಿತಕ್ಕೆ ಒಳಗಾದವ ತೀವ್ರ ಅಸ್ವಸ್ಥಗೊಂಡಿರುವ ಪ್ರಕಾಶ ಚತುರಗೆ ಬೀಮ್ಸ್‌ನಲ್ಲಿ ಚಿಕಿತ್ಸೆ ಬೆಳಗಾವಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ

Read More »

ಒಂದೇ ಫಾರಂನಲ್ಲಿನ ಮೂರು ಸಾವಿರ ಕೋಳಿಗಳ ಸಾವು

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಬಳಿಯ ಖಂಡಿಕೇರಿ ತಾಂಡಾ ನಿವಾಸಿ ಪರಮೇಶ್ ‌ನಾಯ್ಕ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿನ ಮೂರು ಸಾವಿರ ಕೋಳಿಗಳು ಇದ್ದಕ್ಕಿದ್ದಂತೆ ಮೃತಪಟ್ಟಿವೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಜ್ಞ ವೈದ್ಯರು ಕೋಳಿಗಳ ಮಾದರಿ ಸಂಗ್ರಹಿಸಿದ್ದಾರೆ. ಹಕ್ಕಿ ಜ್ವರದ ಲಕ್ಷಣಗಳು ಕಂಡು ಬಂದಿಲ್ಲ. ವಿಷಪುರಿತ ಆಹಾರ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಮಾದರಿ ಸಂಗ್ರಹಿಸಲಾಗಿದ್ದು, ಕೋಳಿಗಳ ಸಾವಿಗೆ ನಿಖರ ಕಾರಣ ‌ಪತ್ತೆಗೆ‌ ಕ್ರಮಕೈಗೊಳ್ಳಿತ್ತೇವೆ …

Read More »

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ಬೆಂಗಳೂರು ಯೋಜನೆಗಳ ಬಗ್ಗೆ ವಿವರವಾಗಿ ಉತ್ತರ ನೀಡಿದ ಡಿ.ಕೆ.ಶಿ

ಬೆಂಗಳೂರು: “ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಆಲಮಟ್ಟಿ ಜಲಾಶಯ ಎತ್ತರಿಸಲು ಆಗಬೇಕಾದ ಭೂಸ್ವಾಧೀನ, ಕಲ್ಪಿಸಬೇಕಾದ ಪರಿಹಾರ ಹಾಗೂ ಪರಿಷ್ಕೃತ ಮೊತ್ತಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯರಾದ ಪಿ.ಎಚ್.ಪೂಜಾರ್ ಹಾಗೂ ಹನುಮಂತ ರುದ್ರಪ್ಪ ನಿರಾಣಿ ಕೇಳಿದ ಪ್ರಶ್ನೆಗೆ ಡಿ.ಕೆ.ಶಿವಕುಮಾರ್​ ಉತ್ತರಿಸಿದರು. “ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜನಪ್ರತಿನಿಧಿಗಳು …

Read More »

ಸವದತ್ತಿ ಯಲ್ಲಮ್ಮ ದೇವಿಗೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ

ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ದೇವತೆ ಯಲ್ಲಮ್ಮದೇವಿ ಮಂದಿರದಲ್ಲಿ ಗುರುವಾರ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಈ ಬಾರಿ 3.68 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಪ್ರತಿ ಬಾರಿ ಎಣಿಕೆ ಮಾಡಿದಾಗಲೂ 1ರಿಂದ 1.5 ಕೋಟಿ ರೂ.ವರೆಗೆ ಕಾಣಿಕೆ ಸಂಗ್ರಹವಾಗುತ್ತಿತ್ತು. ಆದರೆ, ಈ ಬಾರಿ ಮೂರೂವರೆ ಕೋಟಿಗೂ ಅಧಿಕ ಹಣ ಸಂಗ್ರಹವಾಗುವ ಮೂಲಕ ಹೊಸ ದಾಖಲೆಯಾಗಿದೆ. 2024ರ ಡಿಸೆಂಬರ್ 14ರಿಂದ 2025ರ ಮಾರ್ಚ್ 12ರವರೆಗೆ(89 ದಿನ) ಏಳುಕೊಳ್ಳದ ತಾಯಿ ಎಂದೇ ಖ್ಯಾತಿ …

Read More »

ವೈಯಕ್ತಿಕ ದ್ವೇಷದ ಹಿನ್ನೆಲೆ ಕೊಲೆ‌: ಅಪರಾಧಿಗೆ ಜೀವಾವಧಿ ಶಿಕ್ಷೆ – MURDER CASE

ಶಿವಮೊಗ್ಗ: 2021ರಲ್ಲಿ ವೈಯಕ್ತಿಕ ದ್ವೇಷದಿಂದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಅನಿಲ್ ಎಂಬಾತನಿಗೆ ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. 2021ರ ಅಕ್ಟೋಬರ್ 14 ರಂದು ಬಾಪೂಜಿ ನಗರದ ಗಂಗಾಮತ ಎಂಬ ಹಾಸ್ಟೆಲ್ ಮುಂಭಾಗ ರಾತ್ರಿ ಸಂತೋಷ್ ಎಂಬಾತನ ಮೇಲೆ ಅನಿಲ್ ಹಾಗೂ ಆತನ ಸಹಚರರು ಸೇರಿ ದಾಳಿ ನಡೆಸಿದ್ದರು. ಬೈಕ್​ನಲ್ಲಿ ಬರುತ್ತಿದ್ದ ಸಂತೋಷನನ್ನು ಅಡ್ಡಗಟ್ಟಿ ಮಚ್ಚಿನಿಂದ ತಲೆಗೆ …

Read More »

‘ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್​ನಲ್ಲಿ ಸರ್ಕಾರ ಯಾರನ್ನೋ ರಕ್ಷಿಸುತ್ತಿದೆ’: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪ್ರಕರಣವನ್ನು ನಿರ್ವಹಿಸುತ್ತಿರುವ ರೀತಿಯನ್ನು ನೋಡಿದರೆ ಯಾರನ್ನೋ ರಕ್ಷಣೆ ಮಾಡಲು ಹೊರಟಿರೋದು ಸ್ಪಷ್ಟವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ‌ಅವರು, ಪ್ರಕರಣದ ಹಿಂದೆ ರಾಜಕಾರಣಿಗಳಿದ್ದಾರೆ ಅನ್ನೋ ವರದಿಗಳು ಬರುತ್ತಿವೆ. ಇದು ದೇಶದ್ರೋಹದ ಕೆಲಸ. ಚಿನ್ನ ಎಲ್ಲಿಗೆ ಹೋಗುತ್ತಿದೆ? ಅಲ್ಲಿಂದ ಬರೋ ಹಣ ಎಲ್ಲಿ ಹೋಗುತ್ತೆ? ಅನ್ನೋದು ಯಾರಿಗೂ ಗೊತ್ತಿಲ್ಲ. ದೇಶವಿರೋಧಿ ಕೃತ್ಯಕ್ಕೆ …

Read More »