ಮುಂಬೈ : ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಸದ್ಯದಲ್ಲೇ ಪ್ರಕಟವಾಗಲಿದೆ. ಆದರೆ ಇದಕ್ಕೂ ಮೊದಲು ಫಿಟ್ನೆಸ್ ತರಬೇತುದಾರರು ರಿಷಬ್ ಪಂತ್ ಅತಿಯಾದ ತೂಕದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅವರು ತೂಕ ಕಡಿಮೆ ಮಾಡಿಕೊಂಡು ಫಿಟ್ ಆಗದ ಹೊರತು ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ. ಅವರು ಅತೀ ತೂಕ ಹೊಂದಿದ್ದಾರೆ ಎಂಬುದು ಟ್ರೈನರ್ ಗಳ ದೂರು. ಇದನ್ನು ಸರಿಪಡಿಸದೇ ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು …
Read More »65 ವರ್ಷದ ಹರೀಶ್ ಸಾಳ್ವೆ ಎರಡನೇ ಮದುವೆಗೆ ಸಿದ್ಧತೆ
ನವದೆಹಲಿ : ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತದ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಲು ಕೇವಲ 1 ರೂ ಶುಲ್ಕ ಪಡೆಯುವ ಮೂಲಕ ಸುದ್ದಿಯಾಗಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ, ಲಂಡನ್ ಮೂಲದ ಕಲಾವಿದೆಯೊಂದಿಗೆ ಎರಡನೆಯ ಮದುವೆಗೆ ಸಿದ್ಧತೆ ನಡೆಸಿದ್ದಾರೆ. 65 ವರ್ಷದ ಹರೀಶ್ ಸಾಳ್ವೆ, 38 ವರ್ಷಗಳ ವೈವಾಹಿಕ ಜೀವನದ ಬಳಿಕ ಮೀನಾಕ್ಷಿ ಸಾಳ್ವೆ ಅವರಿಂದ ಜೂನ್ ತಿಂಗಳಲ್ಲಿ ವಿಚ್ಚೇದನ ಪಡೆದುಕೊಂಡಿದ್ದರು. ಭಾರತದ ಮಾಜಿ ಸಾಲಿಸಿಟರ್ ಜನರಲ್ …
Read More »ನಾಯಿಯ ಮೇಲೆ ಅತ್ಯಾಚಾರ ನಡಸಿದ ಅಲ್ಲದೆ, ನಾಯಿಯ ಗುಪ್ತಾಂಗಕ್ಕೆ 11 ಇಂಚಿನ ಕೋಲನ್ನು ತುರುಕಿದ್ದಾನೆ
ಮುಂಬೈ :ಈ ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಪ್ರಾಣಿಪ್ರಿಯರು ಪ್ರತಿದಿನ ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ. ಸ್ಥಳೀಯರಾದ ನೂರಿ ಎಂಬ ಮಹಿಳೆ ಅಕ್ಟೋಬರ್ 22ರಂದು ಶಾಪಿಂಗ್ ಕಾಂಪ್ಲೆಕ್ಸ್ನ ಪಾರ್ಕಿಂಗ್ನಲ್ಲಿ ಇರುವ ಹೆಣ್ಣು ನಾಯಿಗೆ ಊಟ ಕೊಡಲು ಬಂದಾಗ ಆ ನಾಯಿ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಮೈತುಂಬ ಗಾಯಗೊಂಡಿದ್ದ ಆ ನಾಯಿಯನ್ನು ಅನಿಮಲ್ ಕೇರ್ ಸೆಂಟರ್ ಆಫ್ ವರ್ಲ್ಡ್ ಫಾರ್ ಆಲ್ಗೆ ಕರೆದುಕೊಂಡು ಬಂದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ …
Read More »ಸೋಲಿನ ಭಯದಿಂದ ತಮ್ಮ ವಿರುದ್ಧ ಅಪಪ್ರಚಾರ ಹಾಗೂ ತೇಜೋವಧೆ ಮಾಡಲಾಗುತ್ತಿದೆ:ವಿ.ಕೃಷ್ಣಮೂರ್ತಿ
ಬೆಂಗಳೂರು, ಅ.26- ಸೋಲಿನ ಭಯದಿಂದ ತಮ್ಮ ವಿರುದ್ಧ ಅಪಪ್ರಚಾರ ಹಾಗೂ ತೇಜೋವಧೆ ಮಾಡಲಾಗುತ್ತಿದೆ ಎಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿ.ಕೃಷ್ಣಮೂರ್ತಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಮಾಡುತ್ತಿರುವ ಅಪಪ್ರಚಾರದ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿದರು. ತಮ್ಮ ವಿರುದ್ಧ ತೇಜೋವಧೆ ಮಾಡಿರುವವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ನ್ಯಾಯ ಒದಗಿಸುವಂತೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ. …
Read More »ಯಡಿಯೂರಪ್ಪ ಅವರು ಊಟ ಮಾಡಲು ಕಲಬುರಗಿಗೆ ಬಂದು ಹೋಗಿರಬಹುದು. ಇದು ಜನಪ್ರತಿನಿಧಿಗಳ ಸರ್ಕಾರವೇ ಅಲ್:ಸಿದ್ದರಾಮಯ್ಯಲ
ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ಆದರೆ ಜನಪ್ರತಿನಿಧಿಗಳ ಜೊತೆ ಚರ್ಚಿಸದೇ ಹೋಗಿದ್ದಾರೆ. ಯಡಿಯೂರಪ್ಪ ಅವರು ಊಟ ಮಾಡಲು ಕಲಬುರಗಿಗೆ ಬಂದು ಹೋಗಿರಬಹುದು. ಇದು ಜನಪ್ರತಿನಿಧಿಗಳ ಸರ್ಕಾರವೇ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ 100 ಕೋಟಿ ರೂಪಾಯಿ ನಷ್ಟವಾಗಿದೆ. ರಾಜ್ಯ ಸರ್ಕಾರದ ಪ್ರಕಾರ ಒಟ್ಟು 700 …
Read More »ಸೊರಬ ಪಟ್ಟಣದಲ್ಲಿ ದಿ.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು ಈಗಾಗಲೇ 1 ಕೋಟಿ ರೂ. ಅನುದಾನ:B.S.Y.
ಶಿವಮೊಗ್ಗ: ಸಮಾಜಮುಖಿ ಚಿಂತನೆಯ ನಾಯಕರಾಗಿದ್ದ ಬಂಗಾರಪ್ಪ ಅವರು ಜಾರಿಗೊಳಿಸಿದ ಜನಪರ ಹಾಗೂ ದೂರದೃಷ್ಟಿಯ ಯೋಜನೆಗಳಿಂದಾಗಿ ಇಂದಿಗೂ ಅವರು ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ 87ನೇ ಜನ್ಮಸ್ಮರಣೆ ಹಾಗೂ ಸೊರಬ ಪಟ್ಟಣದಲ್ಲಿ 21.15ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಉದ್ಯಾನವನವನ್ನು ಆನ್‍ಲೈನ್ ಸಮಾರಂಭದ ಮೂಲಕ ಉದ್ಘಾಟಿಸಿ ಮಾತನಾಡಿದ ಸಿಎಂ, ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರದಲ್ಲಿ ಬಂಗಾರಪ್ಪ ಅವರು ತಂದ ದೂರದೃಷ್ಟಿ ಯೋಜನೆಯಿಂದಾಗಿ ಅವರು …
Read More »ಕೆಜಿಎಫ್ ರಾಕಿಗೆ ಡೆತ್ ನೋಟ್ ನೀಡಲು ಬಂದ ರಮಿಕಾ ಸೇನ್
ಬೆಂಗಳೂರು: ಕೆಜಿಎಫ್ ದುನಿಯಾದ ರಾಕಿಗೆ ಡೆತ್ ನೋಟ್ ನೀಡಲು ಬಂದ ರಾಜಕಾರಣಿ ರಮೀಕಾ ಸೇನ್ ಫಸ್ಟ್ ಲುಕ್ ಔಟ್ ಆಗಿದೆ. ರಮೀಕಾ ಸೇನ್ ಪಾತ್ರದಲ್ಲಿ ನಟಿಸುತ್ತಿರುವ ರವೀನಾ ಟಂಡನ್ ಹುಟ್ಟುಹಬ್ಬದ ಹಿನ್ನೆಲೆ ಚಿತ್ರತಂಡ ಫಸ್ಟ್ ಲುಕ್ ಬಿಡುಗಡೆಗೊಳಿಸುವ ಮೂಲಕ ಬರ್ತ್ ಡೇ ಗಿಫ್ಟ್ ನೀಡಿದೆ. ಕನ್ನಡಕ್ಕೆ ಮೊದಲ ಬಾರಿಗೆ ಬಂದಿರುವ ರವೀನಾ ಟಂಡನ್ ಕೆಜಿಎಫ್ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೊದಲ ಭಾಗದಲ್ಲಿ ಕಾಣಿಸಿಕೊಂಡಿದ್ದ ಮಹಿಳಾ ರಾಜಕಾರಣಿಯಾಗಿ ರವೀನಾ ನಟಿಸುತ್ತಿದ್ದಾರೆ. …
Read More »ಎಂಟು ತಿಂಗಳ ನಂತರ ಸಿನಿಮಾ ಚಟುವಟಿಕೆ ಆರಂಭಇಡ್ಲಿ, ವಡೆ ತುಂಬಾ ಮಿಸ್ ಮಾಡಿಕೊಂಡಿದ್ದೆ: ದರ್ಶನ್
ಬೆಂಗಳೂರು: ಇಡ್ಲಿ, ವಡೆ ಮಿಸ್ ಮಾಡಿಕೊಳ್ತಿದ್ದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ರಾಜರಾಜೇಶ್ವರಿ ನಗರದ ಶೃಂಗಗಿರಿ ಷಣ್ಮುಖ ದೇವಸ್ಥಾನದಲ್ಲಿ ನಡೆದ ಆಪ್ತ ಧ್ರುವನ್ ಅವರ ಭಗವಾನ್ ಶ್ರೀಕೃಷ್ಣಪರಮಾತ್ಮ ಸಿನಿಮಾದ ಮುಹೂರ್ತದಲ್ಲಿ ದರ್ಶನ್ ಭಾಗಿಯಾಗಿದ್ದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ದರ್ಶನ್, ಇಡ್ಲಿ,ವಡೆಯನ್ನೇ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಒಂದೊಂದೇ ಟಿಫನ್ ತಿಂದು ಬೇಜಾರಾಗಿದೆ. ಹೀಗಾಗಿ ಮನೆಯಲ್ಲಿ ಟಿಫನ್ ತಿನ್ನೋದೇ ಬಿಟ್ಟಿದ್ದೆ. ಶೂಟಿಂಗ್ ಆರಂಭವಾದ್ರೆ 4 ರೀತಿಯ ಟಿಫನ್ ಸಿಗುತ್ತೆ ಎಂದರು. …
Read More »ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನದ ಸಮಸ್ಯೆಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯಗೊಂಡಿದೆ.
ಗೋಕಾಕ : ತೀವ್ರ ವಿವಾದಕ್ಕೆ ಕಾರಣವಾಗಿದ್ದ ತಪಸಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನದ ಸಮಸ್ಯೆ ಕೊನೆಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯಗೊಂಡಿದೆ. ೧೯.೨೦ ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ತಲೆಯೆತ್ತಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನೂತನ ಕಟ್ಟಡಕ್ಕೆ ತಪಸಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆದಿತ್ತು. ಗ್ರಾಮ ಪಂಚಾಯತ ತಪಸಿ ಅಧೀನದಲ್ಲಿ ಸರ್ವೇ ನಂ. ೧೯೩ ರಲ್ಲಿ ಈಗಾಗಲೇ ೩೯.೧೯ ಎಕರೆ ಸರ್ಕಾರಿ ಜಮೀನಿನಲ್ಲಿ …
Read More »ಸಂಗೊಳ್ಳಿ ರಾಯಣ್ಣ ಹಾಗೂ ರಾಣಿ ಚನ್ನಮ್ಮ ಪುತ್ಥಳಿಗಳನ್ನು ಸುವರ್ಣ ಸೌಧ ಆವರಣದಲ್ಲಿ ಸ್ಥಾಪಿಸಬೇಕು.: ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಬೆಳಗಾವಿ – ಸಂಗೊಳ್ಳಿ ರಾಯಣ್ಣ ಹಾಗೂ ರಾಣಿ ಚನ್ನಮ್ಮ ಪುತ್ಥಳಿಗಳನ್ನು ಸುವರ್ಣ ಸೌಧ ಆವರಣದಲ್ಲಿ ಸ್ಥಾಪಿಸಬೇಕು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಕಿತ್ತೂರಲ್ಲಿ ಸ್ಥಾಪಿಸಬೇಕೆಂದು ಆಗ್ರಹಿಸಿ ಕೂಡಲಸಂಗಮ ಮಹಾಪೀಠ ಧರ್ಮಕ್ಷೇತ್ರದ ಅಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಇವರಿಂದ ಅಕ್ಟೋಬರ್ 28ರಂದು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಅಖಿಲ ಭಾರತ ಅಂಗಾಯತ ಪಂಚಮಸಾಲಿ ಸಮಾಜದ ಸರ್ವ ಸಂಘಟನೆಗಳ ಸಹಯೋಗದೊಂದಿಗೆ …
Read More »