Breaking News

ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ

ಮೂಡಲಗಿ : ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದು ಅದೇ ಪ್ರಕಾರ ಸ್ಥಳೀಯ ಆಶಾ ಕಾರ್ಯಕರ್ತೆಯರು ತಮ್ಮ  ಬೇಡಿಕೆಗಳ ಈಡೇರಿಕೆಗಾಗಿ ತಹಸಿಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.  ಸೋಮವಾರದಂದು ಸಲ್ಲಿಸಿದ ಮನವಿ ಪತ್ರದಲ್ಲಿ ಈಗಾಗಲೇ ತಿಳಿಸಿದಂತೆ ಇದೇ ಜುಲೈ 10 ರಿಂದ ಆರೋಗ್ಯಸೇವೆಯನ್ನು ಸ್ಥಗಿತಗೊಳಿಸಲಾಗಿದೆ.  ಬೇಡಿಕೆಗಳು ಮಾಸಿಕ 12 ಸಾವಿರ ರೂಗಳ ಗೌರವ ಖಾತರಿಪಡಿಸಬೇಕು.ಕೋವಿಡ 19  ವಿರುದ್ಧ ಹೋರಾಟದಲ್ಲಿ ಅಗತ್ಯ …

Read More »

ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೋಂ ಕ್ವಾರಂಟೈನ್ ನಲ್ಲಿ

ಬೆಳಗಾವಿ – ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಕಳೆದ ಶನಿವಾರ ಅವರಿಗೆ ಸ್ವಲ್ಪಮಟ್ಟಿಗೆ ಅನಾರೋಗ್ಯ ಕಾಣಿಸಿಕೊಂಡಾಗ ಗಂಟಲು ದ್ರವ ತಪಾಸಣೆಗೆ ಕಳುಹಿಸಿದರು. ಅಂದಿನಿಂದಲೇ ಅವರು ಮನೆಯ ಒಂದು ಕೊಠಡಿಯಲ್ಲೇ ವಾಸ್ತವ್ಯ ಮಾಡಿದರು. ಸೋಮವಾರ ಅವರ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಕೊರೋನಾ ಲಕ್ಷಣಗಳು ಕಾಣಿಸಿವೆ. ಹಾಗಾಗಿ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಒಂದು ವಾರ ಕ್ವಾರಂಟೈನ್ ನಲ್ಲಿರುವುದಾಗಿ …

Read More »

ಯುವತಿಯ ಜೊತೆ ವಾಟ್ಸಪ್‍ನಲ್ಲಿ ನಗ್ನ ವಿಡಿಯೋ ಕಾಲ್……………..

ಬೆಂಗಳೂರು: ಯುವತಿಯ ಜೊತೆ ವಾಟ್ಸಪ್‍ನಲ್ಲಿ ನಗ್ನ ವಿಡಿಯೋ ಕಾಲ್ ಮಾಡಿ ಯುವಕನೊಬ್ಬ ಪೇಚಿಗೆ ಸಿಕ್ಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೊಡ್ಡನೆಕ್ಕುಂದಿ ನಿವಾಸಿ 26 ವರ್ಷದ ಯುವಕ ಅಪರಿಚಿತ ಯುವತಿಯಿಂದ ಮೋಸ ಹೋಗಿದ್ದಾನೆ. ಯುವಕ 22 ಸಾವಿರ ಹಣ ಕಳೆದುಕೊಂಡಿದ್ದಲ್ಲದೇ ಆತನಿಗೆ ಎಟಿಎಂ ಕಾರ್ಡ್ ಫೋಟೋ ಕೂಡ ಕಳುಹಿಸಿದ್ದಾನೆ. ಇದೀಗ ಯುವಕ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾನೆ. ಮೋಸ ಹೋದ ಯುವಕ ಸೋಶಿಯಲ್ ಮೀಡಿಯಾದ ಮೂಲಕ ಹುಡುಗಿಯನ್ನು ಪರಿಚಯ ಮಾಡಿಕೊಂಡಿದ್ದನು. …

Read More »

ಪಿಯು ಫಲಿತಾಂಶ, ಎಂದಿನಂತೆ ಬಾಲಕಿಯರೇ ಮೇಲುಗೈ – ಉಡುಪಿ, ದಕ್ಷಿಣ ಕನ್ನಡ ಫಸ್ಟ್‌

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಗಿತ ಕಂಡಿದೆ. ಕಳೆದ ವರ್ಷ ಶೇ.68.68 ಫಲಿತಾಂಶ ಬಂದಿತ್ತು. 5,56,267 ಹೊಸದಾಗಿ ಬರೆದ ವಿದ್ಯಾರ್ಥಿಗಳ ಪೈಕಿ 3,84,947 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೊದಲ ಸ್ಥಾನ ಸಿಕ್ಕಿದೆ. ಕೊಡಗು, ಉತ್ತರ ಕನ್ನಡ ಜಿಲ್ಲೆಗಳು ಕ್ರಮವಾಗಿ ಎರಡು, ಮೂರನೇ …

Read More »

ಬೆಳಗಾವಿಯಲ್ಲಿ ಫೋಟೋಗ್ರಾಫರ್ ಒಬ್ಬರು ವಿಭಿನ್ನವಾಗಿ ಕನಸು ಕಂಡಿದ್ದು, ಇದೀಗ ತನ್ನ ಕನಸಿನಂತೆ

ಬೆಳಗಾವಿ: ಸಾಮಾನ್ಯವಾಗಿ ಎಲ್ಲರಲ್ಲೂ ತಾನೊಂದು ದೊಡ್ಡ ಮನೆ ಕಟ್ಟಬೇಕೆಂಬ ಕನಸು ಇದ್ದೇ ಇರುತ್ತದೆ. ಆದರೆ ಬೆಳಗಾವಿಯಲ್ಲಿ ಫೋಟೋಗ್ರಾಫರ್ ಒಬ್ಬರು ವಿಭಿನ್ನವಾಗಿ ಕನಸು ಕಂಡಿದ್ದು, ಇದೀಗ ತನ್ನ ಕನಸಿನಂತೆ ಕ್ಯಾಮರಾ ಶೈಲಿಯ ಮನೆ ನಿರ್ಮಾಣ ಮಾಡುವ ಮೂಲಕ ಜನರ ಗಮನಸೆಳೆದಿದ್ದಾರೆ. ಹೌದು. ರವಿ ಹೊಂಗಲ್ ಅವರಿಗೆ ಬಾಲ್ಯದಿಂದಲೇ ಫೋಟೋಗ್ರಫಿ ಅಂದ್ರೆ ಪಂಚಪ್ರಾಣ. ಹೀಗಾಗಿ ಅವರು ಚಿಕ್ಕಂದಿನಿಂದಲೇ ಹತ್ತಿರದ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಕೆಲವೊಂದು ಫೋಟೋಗಳನ್ನು ತೆಗೆಯುವ ಹವ್ಯಾಸ ಬೆಳೆಸಿಕೊಂಡಿದ್ದರು. ರವಿ ಅವರಿಗಿದ್ದ …

Read More »

ಸರ್ಕಾರ ಕಡಿಮೆ ಬೆಲೆಯಲ್ಲಿ ಉತ್ತಮ ಔಷದಿ ನೀಡಬೇಕು : ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ : ಸರ್ಕಾರ ಬಡಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಔಷದಿ ನೀಡುವ ಕೆಲಸ ಮಾಡಬೇಕಾಗಿದ್ದು. ಆ ನಿಟ್ಟಿನಲ್ಲಿ ಜನೌಷಧಿ ಕೇಂದ್ರಗಳು ಬಹುಮುಖ್ಯವಾಗಲಿವೆ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಾಎಖೇಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಬಳಿ ನೂತನವಾಗಿ ನಿರ್ಮಾಣವಾದ ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ’ವನ್ನು ಉದ್ಘಾಟಿಸಿ ಮಾತನಾಡಿದ …

Read More »

ಸರ್ಕಾರದ ನೋಟಿಸ್‍ನಂತೆ ಆಗಸ್ಟ್ 1ರಂದು ನಾನು 35, ಲೋದಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡಲಿದ್ದೇನೆ.

ಬೆಂಗಳೂರು, ಜು.14- ಸರ್ಕಾರದ ನೋಟಿಸ್‍ನಂತೆ ಆಗಸ್ಟ್ 1ರಂದು ನಾನು 35, ಲೋದಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡಲಿದ್ದೇನೆ. ಮನೆ ಖಾಲಿ ಮಾಡಿಸದಂತೆ ನಾನು ಯಾರ ಬಳಿಯೂ ಮನವಿ ಮಾಡಿಲ್ಲ ಎಂದು ಎಐಸಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾರ್ದಾ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ವರದಿಯನ್ನು ಟ್ಯಾಗ್ ಮಾಡಿರುವ ಅವರು, ಇದು ಫೆಕ್ ನ್ಯೂಸ್ ಎಂದು ಟ್ವಿಟರ್‍ನಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮನೆ ಖಾಲಿ ಮಾಡುವಂತೆ ನನಗೆ ಜುಲೈ 1ರಂದು ಸರ್ಕಾರ …

Read More »

ಬ್ರೇಕಿಂಗ್ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..! ಇಲ್ಲಿದೆ ಡೀಟೇಲ್ಸ್

ಬೆಂಗಳೂರು,ಜು.14- ಹಲವು ಸಂಕಷ್ಟಗಳ ನಡುವೆ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ. 61.81ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪಿಯು ಪರೀಕ್ಷಾ ಮಂಡಳಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು, ಫಲಿತಾಂಶದ ವಿವರಗಳನ್ನು ಪ್ರಕಟಿಸಿದರು.ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆ ಮಾರ್ಚ್ 23ರಿಂದ ನಡೆದಿತ್ತು. ರಾಜ್ಯದಲ್ಲಿ 6,75,277 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ ಹೊಸಬರು 5,56,267 ಹಾಜರಾಗಿದ್ದು, 3,84,947 ಮಂದಿ ತೇರ್ಗಡೆ …

Read More »

ಕೊರೊನಾ ಎಫೆಕ್ಟ್- ಸೆಕ್ಯೂರಿಟಿ ಗಾರ್ಡ್ ಆದ ಸ್ಯಾಂಡಲ್‍ವುಡ್ ನಟ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕೊರೊನಾ ಪರಿಣಾಮ ಕನ್ನಡದಲ್ಲಿ ಅನೇಕ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿರುವ ಹಿರಿಯ ನಟರೊಬ್ಬರು ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಹಿರಿಯ ನಟ ಶ್ರೀನಾಥ್ ವಸಿಷ್ಠ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಶ್ರೀನಾಥ್ ವಸಿಷ್ಠ ಅಪಾರ್ಟ್‍ಮೆಂಟ್‍ನಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಇತರ ಸಿಬ್ಬಂದಿ ಕೂಡ ಕ್ವಾರಂಟೈನ್ ಆಗಿದ್ದಾರೆ. …

Read More »

ಕೇವಲ ಶಿಕ್ಷಕಿ ಮಾತ್ರವಲ್ಲ, SSLC ಮಕ್ಕಳ ತಾಯಿ – ಸುರೇಶ್ ಕುಮಾರ್ ಅಭಿನಂದನೆ

ಮಡಿಕೇರಿ: ತಾಯಿ ಮೃತಪಟ್ಟಿದ್ದರೂ ಎಸ್‍ಎಸ್‍ಎಲ್‍ಸಿ ಪರಿಕ್ಷಾ ಮೌಲ್ಯ ಮಾಪನಕ್ಕೆ ಹಾಜರಾಗಿ ವೃತ್ತಿ ಬದ್ಧತೆಗೆ ಮೆರೆದಿದ್ದ ಶಿಕ್ಷಕಿ ಕವಿತಾ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.   ಸುರೇಸ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿ ಶಿಕ್ಷಕಿ ಕವಿತಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವನ್ನು ನುಂಗಿಕೊಂಡು SSLC ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ …

Read More »