ಕೋಲ್ಕತ್ತಾ, ಜು.13- ಸಿಪಿಎಂನಿಂದ ಶಾಸಕನಾಗಿ ಆರಿಸಿ ಬಂದು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಶಾಸಕರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ದೀನಜ್ಪುರ್ನಲ್ಲಿ ನಡೆದಿದೆ. ಹೆಮ್ತಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡ ದೇಬೇಂದ್ರನಾಥ್ ರೇ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ರಾಜಕೀಯ ದುರುದ್ದೇಶಕ್ಕಾಗಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಕುಟುಂಬವರ್ಗದವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಹೆಮ್ತಾಬಾದ್ ವಿಧಾನಸಭಾ ಕ್ಷೇತ್ರದಿಂದ ಸಿಪಿಐ(ಎಂ) ಪಕ್ಷದಿಂದ ಸ್ಪರ್ಧಿಸಿ ವಿಜೇತರಾಗಿದ್ದ …
Read More »ರಾಣೇಬೆನ್ನೂರು ತಾಲೂಕಿನಲ್ಲಿ ಬುಧವಾರದಿಂದ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ
ಹಾವೇರಿ: ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನಲ್ಲಿ ಬುಧವಾರದಿಂದ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಅಧಿಕಾರಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಸಲಹೆ ಮೇರೆಗೆ ರಾಣೇಬೆನ್ನೂರು ಶಾಸಕ ಅರುಣ್ ಕುಮಾರ್ ಗುತ್ತೂರ ಇಂದು ಈ ನಿರ್ಧಾರ ಪ್ರಕಟಿಸಿದ್ದಾರೆ. ಲಾಕ್ಡೌನ್ ವೇಳೆ ಹಾಲು, ದಿನಪತ್ರಿಕೆ ಮತ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶವಿದ್ದು, ಉಳಿದಂತೆ ಎಲ್ಲವೂ ಲಾಕ್ಡೌನ್ ಆಗಲಿದೆ. ಯಾರೂ ಮನೆಯಿಂದ ಹೊರಬರದೆ …
Read More »ನಟ ದರ್ಶನ್ ಮೇಕಪ್ ಮ್ಯಾನ್ ಹೃದಯಾಘಾತದಿಂದ ಸಾವು
ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಕಪ್ ಮ್ಯಾನ್ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಸ್ವತಃ ನಟ ದರ್ಶನ್ ಅವರೇ ಟ್ವೀಟ್ ಮಾಡಿದ್ದು, ಎರಡು ದಶಕಗಳಿಂದ ನನ್ನ ಬಳಿ ಮೇಕಪ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸೀನ ಅಲಿಯಾಸ್ ಶ್ರೀನಿವಾಸ್ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ಬರೆದುಕೊಂಡು ಸಂತಾಪ …
Read More »ಔಷಧಿ ಅಂಗಡಿಗಳು ಮುಚ್ಚಿಕೊಂಡಿದ್ದರಿಂದ ಗ್ರಾಮೀಣ ಪ್ರದೇಶದಿಂದ ಬಂದಿರುವ ರೋಗಿಗಳು ಔಷಧಿ ದೊರೆಯದೇ ಪರದಾಡುವಂತಹ ಪರಿಸ್ಥಿತಿ
ಚಿಕ್ಕೋಡಿ: ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಚಿಕ್ಕೋಡಿ ಪಟ್ಟಣವನ್ನು ಸೋಮವಾರದಿಂದ ಜು. 20ರವರೆಗೆ ಲಾಕ್ಡೌನ್ ಮಾಡಲಾಗಿದೆ. ಆದರೆ ಲಾಕ್ಡೌನ್ಗೆ ಜನರಿಂದ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳಿಗೆ ರಾಜ್ಯ ಸರ್ಕಾರ ರಿಯಾಯತಿ ನೀಡಿದೆ. ಆದರೆ ಚಿಕ್ಕೋಡಿ ಪಟ್ಟಣದಲ್ಲಿ ಜು.13 ರಿಂದ 20ರವರೆಗೆ ಅಂಗಡಿಕಾರರು ಸ್ವಯಂ ಪ್ರೇರಿತ ಲಾಕ್ಡೌನ್ ಘೋಷಣೆ ಮಾಡಿ ಸೋಮವಾರ ಅಂಗಡಿ ಮುಗ್ಗಟ್ಟುಗಳನ್ನು ಬಂದ ಮಾಡಿದ್ದಾರೆ. ಲಾಕ್ಡೌನ್ ಆರಂಭಿಸಿದ್ದರಿಂದ ಪಟ್ಟಣದಲ್ಲಿ ಔಷಧಿ ಅಂಗಡಿಗಳು ಮುಚ್ಚಿಕೊಂಡಿದ್ದರಿಂದ ಗ್ರಾಮೀಣ ಪ್ರದೇಶದಿಂದ …
Read More »ಭಾರತದಲ್ಲಿ 75 ಸಾವಿರ ಕೋಟಿ ರೂ. ಹೂಡಿಕೆ ಮಾಡಲಿದೆ ಗೂಗಲ್
ಬೆಂಗಳೂರು: ಮುಂದಿನ ದಿನಗಳಲ್ಲಿ ಡಿಜಿಟಲ್ ಕ್ಷೇತ್ರದಲ್ಲಿ ಅದರಲ್ಲೂ ಭಾರತದಲ್ಲಿ ಭಾರೀ ಬೆಳವಣಿಗೆ ಆಗಲಿದೆ ಎಂಬುದನ್ನು ಊಹಿಸಿರುವ ಬಹುರಾಷ್ಟ್ರೀಯ ಕಂಪನಿಗಳು ಈಗ ದೇಶದಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದು, ಗೂಗಲ್ ಒಟ್ಟು 10 ಶತಕೋಟಿ ಡಾಲರ್(75 ಸಾವಿರ ಕೋಟಿ ರೂ.) ಹೂಡಿಕೆ ಮಾಡುವುದಾಗಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ ಬಳಿಕ ಗೂಗಲ್ ಕಂಪನಿಯ ಸಿಇಒ ಸುಂದರ್ ಪಿಚೈ 10 ಶತಕೋಟಿ ಡಾಲರ್ …
Read More »ಉಡುಪಿ ಲಾಕ್ಡೌನ್ ಆಗಲ್ಲ, ಗಡಿ ಸೀಲ್ ಮಾಡುವ ಚಿಂತನೆ ಇದೆ: ಡಿಸಿ ಜಿ.ಜಗದೀಶ್
ಉಡುಪಿ: ಜಿಲ್ಲೆಯನ್ನು ಲಾಕ್ಡೌನ್ ಮಾಡುವ ಸಾಧ್ಯತೆ ಇಲ್ಲ. ನಾಳೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಭೆ ಕರೆದು ಲಾಕ್ಡೌನ್ ಕುರಿತು ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ ನೀಡಿದ್ದಾರೆ. ಉಡುಪಿ ಜಿಲ್ಲೆಗೆ ಮುಕ್ತ ಪ್ರವೇಶ ಇರುವುದಿಲ್ಲ. ಜಿಲ್ಲೆಯ ಗಡಿಯನ್ನು ಸೀಲ್ಡೌನ್ ಮಾಡಿ, ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸುತ್ತೇವೆ. ಈ ನಿರ್ಧಾರಕ್ಕೆ ಮೊದಲು ಉಡುಪಿ ಜಿಲ್ಲೆಯಿಂದ ಹೊರಗಡೆ ಹೋಗಲು ಹಾಗೂ ಜಿಲ್ಲೆಯ ಒಳಗೆ ಬರಲು ಸಮಯ ನಿಗದಿ ಮಾಡಲಾಗುತ್ತದೆ ಎಂದಿದ್ದಾರೆ. ಕೋವಿಡ್-19 ಸೋಂಕಿನ …
Read More »ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸುವಂತೆ ಸಿಎಂಗೆ ಡಿಸಿಎಂ ಸಲಹೆ
ಬೆಂಗಳೂರು: ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಇದುವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜತೆ ಸೋಮವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಕಾಲಕ್ಕೆ …
Read More »ಬೆಳಗ್ಗೆಯಿಂದಲೇ ಗಂಟೆಗಟ್ಟಲೇ ಟ್ರಾಫಿಕ್ ಜಾಮ್
ಬೆಂಗಳೂರು,ಜು.13- ನಾಳೆ ರಾತ್ರಿಯಿಂದ ಜಾರಿಯಾಗುತ್ತಿರುವ ಎರಡನೆ ಹಂತದ ಲಾಕ್ಡೌನ್ ಘೋಷಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊರಹೋಗುತ್ತಿರುವವರು ಮತ್ತು ಬೆಂಗಳೂರಿಗೆ ಬರುತ್ತಿರುವವರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಟೋಲ್ಗಳ ಬಳಿ ಇಂದು ಬೆಳಗ್ಗೆಯಿಂದಲೇ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಸರ್ಕಾರ ಉಚಿತವಾಗಿ ವಾಹನಗಳನ್ನು ಬಿಡಲು ಸೂಚಿಸಿದೆ. ಕೊರೋನಾ ನಿಯಂತ್ರಣಕ್ಕಾಗಿ ನಾಳೆ ರಾತ್ರಿ 8 ಗಂಟೆಯಿಂದ 8 ದಿನ ಲಾಕ್ಡೌನ್ ಘೋಷಣೆ ಮಾಡಿದ್ದು, ಊರುಗಳಿಗೆ ತೆರಳುವವರು ಮತ್ತು ಬೆಂಗಳೂರಿಗೆ ಬರುವವರಿಗೆ ಅವಕಾಶವನ್ನು ನೀಡಿದ …
Read More »ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟ
ಬೆಂಗಳೂರು: ಮಾರ್ಚ್ 18ರ ಸುಮಾರಿಗೆ ಫಲಿತಾಂಶ ಬರಬಹುದೆಂದು ನಿರೀಕ್ಷಿಸಲಾಗಿದ್ದ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್ಬುಕ್ ಲೈವ್ನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಮಂಗಳವಾರ ಬೆಳಗ್ಗೆ 11:30ಕ್ಕೆ ವಿದ್ಯಾರ್ಥಿಗಳ ಮೊಬೈಲ್ಗೆ SMS ಮೂಲಕ ರಿಸಲ್ಟ್ ತಲುಪಲಿದೆ. 12 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ …
Read More »ಮೈಸೂರಿನಲ್ಲಿ ಲಾಕ್ಡೌನ್ ಇಲ್ಲ, : ಡಿಸಿ ಅಭಿರಾಮ್ ಜಿ.ಶಂಕರ್
ಮೈಸೂರು: ಕೊರೊನಾ ತಡೆಗಾಗಿ ಮೈಸೂರಿನಲ್ಲಿ ಲಾಕ್ಡೌನ್ ಮಾಡಲ್ಲ. ಬದಲಾಗಿ ಮುಂಬೈನ ಧಾರಾವಿ ಸ್ಲಂ ಮಾಡೆಲ್ ಜಾರಿಗೆ ತರಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹೇಳಿದ್ದಾರೆ. ಇಡೀ ಮೈಸೂರು ಲಾಕ್ ಆಗಲ್ಲ. ಬದಲಾಗಿ ಸೋಂಕು ಹೆಚ್ಚಿರುವ ಎನ್.ಆರ್. ಕ್ಷೇತ್ರದ ಕೆಲವು ಭಾಗಗಳು ಲಾಕ್ಡೌನ್ ಆಗಲಿವೆ. ಲಾಕ್ಡೌನ್ ಮಾಡೋದರಿಂದ ಕೊರೊನಾ ಪ್ರಕರಣಗಳು ಕಡಿಮೆ ಆಗಲ್ಲ. ಕೊರೊನಾದಿಂದ ಆಗುತ್ತಿರುವ ಸಾವುಗಳ ಸಂಖ್ಯೆ ಕಡಿಮೆ ಮಾಡೋದು ನಮ್ಮ ಉದ್ದೇಶ. ಲಾಕ್ಡೌನ್ ಮಾಡಿ ಹಾಟ್ಸ್ಪಾಟ್ ಗಳ ಸರ್ವೇ …
Read More »