ಮಂಗಳೂರು: ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಂದು ವಾರ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಗುರುವಾರದಿಂದ ಒಂದು ವಾರಗಳ ಕಾಲ ಲಾಕ್ಡೌನ್ ಘೋಷಣೆ ಮಾಡಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ ಹೊರಡಿಸಿದ್ದಾರೆ. ಬುಧವಾರದ ತನಕ ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ನಂತರ ಬುಧವಾರ ರಾತ್ರಿ 8 ಗಂಟೆಯಿಂದಲೇ ಲಾಕ್ಡೌನ್ ಆರಂಭವಾಗಲಿದೆ. ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ 11 …
Read More »ಬೆಂಗಳೂರು ಲಾಕ್ಡೌನ್-800 ಹೆಚ್ಚುವರಿ ಬಸ್ಗಳ ವ್ಯವಸ್ಥೆ
ಬೆಂಗಳೂರು: ಮಂಗಳವಾರ ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಲಾಕ್ಡೌನ್ ಆಗಲಿದೆ. ಈ ಹಿನ್ನೆಲೆ ಬೆಂಗಳೂರಿನಿಂದ ಹೊರ ಹೋಗುತ್ತಿರುವ ಜನ ಅನಕೂಲಕ್ಕಾಗಿ 800 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಇಂದು (ಸೋಮವಾರ) ಮತ್ತು ನಾಳೆ (ಮಂಗಳವಾರ) ಪ್ರತಿದಿನ 800 ಹೆಚ್ಚುವರಿ ಬಸ್ಸುಗಳನ್ನು ಅಂದರೆ ಒಟ್ಟು 1600 ಬಸ್ಸುಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಕಾರ್ಯಾಚರಣೆಗೊಳಿಸಲಾಗುತ್ತಿದೆ. ಇದಲ್ಲದೇ ಅಗತ್ಯವಿದ್ದರೆ …
Read More »ಹಾಸನ ಜಿಲ್ಲೆಯನ್ನೂ ಲಾಕ್ಡೌನ್ ಮಾಡಿ: ಎಂಎಲ್ಸಿ ಗೋಪಾಲಸ್ವಾಮಿ
ಹಾಸನ: ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲೆಯನ್ನು ಲಾಕ್ಡೌನ್ ಮಾಡಿ ಎಂದು ಎಂಎಲ್ಸಿ ಗೋಪಾಲಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಜಿಲ್ಲೆಯನ್ನು ಈಗಾಗಲೇ ಜನರೇ ಸ್ವಯಂಪ್ರೇರಿತವಾಗಿ ಭಾಗಶಃ ಲಾಕ್ಡೌನ್ ಮಾಡಿದ್ದಾರೆ. ಚನ್ನರಾಯಪಟ್ಟಣ ತಾಲೂಕನ್ನು 14 ದಿನಗಳ ಕಾಲ ಸ್ವಯಂಪ್ರೇರಿತವಾಗಿ ಸಂಪೂರ್ಣ ಲಾಕ್ಡೌನ್ ಮಾಡಿ ಈಗಾಗಲೇ ಒಂದು ವಾರ ಕಳೆದಿದೆ. ಅಂದಿನಿಂದ ತಾಲೂಕಿನಲ್ಲಿ ಸೋಂಕು ಹರಡುತ್ತಿರುವ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಚನ್ನರಾಯಪಟ್ಟಣದಂತೆಯೇ ಜಿಲ್ಲೆಯ ಅರಸೀಕೆರೆ, ಸಕಲೇಶಪುರ, ಹಾಸನ, ಹೊಳೆನರಸೀಪುರ ತಾಲೂಕುಗಳಲ್ಲೂ ಮಧ್ಯಾಹ್ನದ ನಂತರ …
Read More »ಮದ್ಯ ಪ್ರಿಯರು ಇಷ್ಟದ ಬ್ರಾಂಡ್ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿ
ಮಡಿಕೇರಿ: ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ವಿಷಯ ಮುನ್ನೆಲೆಗೆ ಬಂದಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಮಡಿಕೇರಿಯಲ್ಲಿ ಮದ್ಯ ಪ್ರಿಯರು ಇಷ್ಟದ ಬ್ರಾಂಡ್ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಒಂದು ವೇಳೆ ಇಡೀ ರಾಜ್ಯ ಅಥವಾ ಆಯ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಿಸಿದರೆ ಎಂಬ ಮುಂದಾಲೋಚನೆಯಿಂದ ಮದ್ಯ ಪ್ರಿಯರು ತಮ್ಮಿಷ್ಟದ ಮದ್ಯದ ಬ್ರ್ಯಾಂಡ್ಗಳನ್ನು ಖರೀದಿಸಲು ಮುಗಿಬೀಳುತ್ತಿದ್ದಾರೆ. ಹಲವರು ಒಂದು ವಾರಕ್ಕೆ ಸಾಕಾಗುವಷ್ಟು ಮದ್ಯ …
Read More »ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತ್ತೊಂದು ಹೆಜ್ಜೆ ಮುಂದಿರಿಸಿ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ಇಲ್ಲಿನ ಸದಾಶಿವ ನಗರದ ಬುದ್ದ,ಬಸವ, ಅಂಬೇಡ್ಕರ್ ರುದ್ರಭೂಮಿಯಲ್ಲಿ ಸೋಮವಾರ ಸತೀಶ ಜಾರಕಿಹೊಳಿ ಅವರ ನೂತನ ಕಾರಿಗೆ ಪುಷ್ಪಾರ್ಚನೆ ಮಾಡುವ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ನಾಡಿನ ಹೆಸರಾಂತ ಸ್ವಾಮೀಜಿಗಳು ಸಾಥ್ ನೀಡಿದರು. ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಪುತ್ರಿ ಪ್ರಿಯಾಂಕಾ …
Read More »ಸ್ಮಶಾನದಲ್ಲಿ ನೂತನ ಕಾರಿಗೆ ಚಾಲನೆ ನೀಡಿ ಐತಿಹಾಸ ಹೆಜ್ಜೆ
ಬೆಳಗಾವಿ: ಸ್ಮಶಾನವೂ ಕೂಡ ಒಳ್ಳೆಯ ಜಾಗ ಎಂದು ಜನರಿಗೆ ಸಂದೇಶ ನೀಡುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮವನ್ನು ರುದ್ರಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಸದಾಶಿವನಗರ ಬುದ್ದ, ಬಸವ, ಅಂಬೇಡ್ಕರ್ ರುದ್ರಭೂಮಿಯಲ್ಲಿ ರಾಜ್ಯದ ಹಲವು ಮಠಾಧೀಶರ ನೇತೃತ್ವದಲ್ಲಿ ಸೋಮವಾರ ನಡೆದ ನೂತನ ಕಾರು ಚಾಲನಾ ಸಮಾರಂಭದ ಬಳಿಕ ಮಾತನಾಡಿದರು. ದೇವಸ್ಥಾನಕ್ಕೆ ಮತ್ತು ಸ್ಮಶಾನದ ಜಾಗಕ್ಕೆ ಯಾವುದೇ ರೀತಿಯ ವ್ಯತ್ಯಾಸವಿಲ್ಲ. ಎಲ್ಲವೂ …
Read More »ಧಾರವಾಡ ಜಿಲ್ಲೆಯನ್ನು 10 ದಿನಗಳ ಕಾಲ ಲಾಕ್ಡೌನ್: ಜಗದೀಶ್ ಶೆಟ್ಟರ್
ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯನ್ನು 10 ದಿನಗಳ ಕಾಲ ಲಾಕ್ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದರು. ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಬಗ್ಗೆ ಮಾತನಾಡಿದ ಸಚಿವರು, ಜುಲೈ 15ರ ಬೆಳಗ್ಗೆ 10 ಗಂಟೆಯಿಂದ ಜುಲೈ 24ರ ರಾತ್ರಿ 8ವರೆಗೆ ಜಿಲ್ಲೆಯಲ್ಲಿ ಲಾಕ್ಡೌನ್ ಘೋಷಣೆ ಮಾಡುವುದಾಗಿ ತಿಳಿಸಿದರು. 11 ಜಿಲ್ಲೆಗಳ ಬಗ್ಗೆ ಚರ್ಚೆ …
Read More »ಲಾಕ್ಡೌನ್ ಜೊತೆಗೆ ಬೆಂಗಳೂರಿನಲ್ಲಿ ಸೀಲ್ಡೌನ್ಗೂ ಸಿದ್ಧರಾಗಿ- ಯಾವ್ಯಾವ ಏರಿಯಾ ಸೀಲ್?
ಬೆಂಗಳೂರು: ಸಿಲಿಕಾನ್ ಸಿಟಿ ಜನರು ಒಂದು ವಾರದ ಲಾಕ್ಡೌನ್ ಕಾಲಕ್ಕೆ ಸಜ್ಜಾಗುತ್ತಿದ್ದಾರೆ. ಈ ಮಧ್ಯೆ ಲಾಕ್ಡೌನ್ ಜೊತೆಗೆ ಸೀಲ್ಡೌನ್ಗೆ ಪಾಲಿಕೆ ಪ್ಲ್ಯಾನ್ ಸಿದ್ಧಗೊಳಿಸುತ್ತಿದೆ. ಹೌದು.ಕೊರೊನಾ ಹೆಚ್ಚಿರುವ ವಾರ್ಡ್ಗಳನ್ನು ಲಾಕ್ಡೌನ್ ಜೊತೆಗೆ ಸೀಲ್ಡೌನ್ ಮಾಡಲು ಬಿಬಿಎಂಪಿ ಪ್ಲ್ಯಾನ್ ಮಾಡಿಕೊಂಡಿದೆ. ಕಳೆದ 15 ದಿನಗಳಲ್ಲಿ ಕೊರೊನಾ ಸ್ಫೋಟಗೊಂಡ ವಾರ್ಡ್ಗಳಲ್ಲಿ ಟಫ್ ಸೀಲ್ಡೌನ್ ಜಾರಿಯಾಗುವ ಸಾಧ್ಯತೆಯಿದೆ. ಸೀಲ್ಡೌನ್ ಜಾರಿಯಾದರೆ ತುರ್ತು ಮತ್ತೊಂದು ಕಾರಣ ಹೇಳಿ ಓಡಾಡಲು ಸಾಧ್ಯವಿಲ್ಲ. ಭಾನುವಾರ ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ …
Read More »ಒಂದು ವಾರ ಸಚಿವ ಬಿ.ಸಿ.ಪಾಟೀಲ್ ಕ್ವಾರಂಟೈನ್
ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಕೆಲ ರಾಜಕೀಯ ನಾಯಕರು ಕೂಡ ಕ್ವಾರಂಟೈನ್ ಆಗಿದ್ದಾರೆ. ಇದೀಗ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೂಡ ಒಂದು ವಾರಗಳ ಕಾಲ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಅವರ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರು ಬೆಂಗಳೂರಿನ ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿದ್ದರು. ಈ ಹಿನ್ನೆಲೆಯಲ್ಲಿ ಬಿ.ಸಿ.ಪಾಟೀಲ್ ಒಂದು ವಾರ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಮಾತ್ರವಲ್ಲದೇ ಅವರ ಕುಟುಂಬಸ್ಥರು ಮತ್ತು ಸಿಬ್ಬಂದಿ ವರ್ಗ ಕೂಡ ಕ್ವಾರಂಟೈನ್ ಆಗಿದ್ದಾರೆ. ಈ …
Read More »ಲಾಕ್ಡೌನ್ ವೇಳೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮದ್ಯ ಮಾರಾಟ………….
ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ರುದ್ರ ತಾಂಡವಾಡುತ್ತಿದೆ. ಸೋಂಕಿತರ ಸಂಖ್ಯೆ 1,300ರ ಗಡಿದಾಟುತ್ತಿದೆ. ನಿಯಂತ್ರಣಕ್ಕೆ ಮಾಡುವ ನಿಟ್ಟಿನಲ್ಲಿ ಯಾದಗಿರಿ ಜಿಲ್ಲಾಡಳಿತ ಮತ್ತು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಆದರೆ ಇನ್ನೊಂದೆಡೆ ಅಕ್ರಮ ಮದ್ಯ ಮಾರಾಟದ ಮೂಲಕ ಅವರ ಕೆಲಸಕ್ಕೆ ಬೆಲೆಯೇ ಇಲ್ಲದಂತೆ ಕೆಲ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಸಂಜೆ 5ರ ನಂತರ ಎಲ್ಲ ರೀತಿಯ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಿದ್ದರೂ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾತ್ರ …
Read More »