Breaking News

ಮಂಗಳ ವಾರ ಎಂಟು ಗಂಟೆಯಿಂದ ಮತ್ತೆ ಲಾಕ್ ಡೌನ್… ….!

ಬೆಂಗಳೂರು: ಕಳೆದ 10 ದಿನಗಳಿಂದ ಎದ್ದಿರುವ ಕೊರೊನಾ ಮಹಾ ಸುನಾಮಿಗೆ ತತ್ತರಿಸಿರುವ ರಾಜ್ಯ ಸರ್ಕಾರ, ರಾಜಧಾನಿಯನ್ನು ಒಂದು ವಾರ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸಿದೆ. ಮಂಗಳವಾರದಿಂದ ಅಂದ್ರೆ ಜುಲೈ 14ರಿಂದ ರಾತ್ರಿ 8 ಗಂಟೆಯಿಂದ ಜುಲೈ 22ರ ನಸುಕಿನಜಾವ ಐದು ಗಂಟೆಯವರೆಗೂ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಲಾಕ್‍ಡೌನ್ ಆಗಲಿದೆ. ಈ ಸಂಬಂಧ ರಾತ್ರಿ 8 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಈ ಪ್ರಕಟಣೆ ಮಾಡಿದರು. ಸೋಂಕು ತಡೆಗೆ, ಸಂಡೇ …

Read More »

ಇಂದು ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು………..

ಬೆಂಗಳೂರು – ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತ ಸಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ 1533 ಜನರಿಗೆ ಸೋಂಕು ತಗುಲಿದೆ. ಇಂದು ಒಟ್ಟೂ 70 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 23 ಜನರು ಸಾವಿಗೀಡಾಗಿದ್ದಾರೆ. ಈ ಮಧ್ಯೆ ಮಂಗಳವಾರ ರಾತ್ರಿಯಿಂದ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಒಂದು ವಾರ ಲಾಕ್ ಡೌನ್ ಮಾಡಲು ಸರಕಾರ ನಿರ್ಧರಿಸಿದೆ.  ಇಡೀ ರಾಜ್ಯಕ್ಕೆ ಲಾಕ್ ಡೌನ್ ಮಾಡಬೇಕೋ …

Read More »

ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು

ಬೆಂಗಳೂರು: ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಪ್ರಾಣೇಶ್, ಅಜೇಯ್ ಸಿಂಗ್, ಪುಟ್ಟಣ್ಣಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ತಗುಲಿದೆ. ಎಲ್ಲರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಬರುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಸಿ.ಟಿ.ರವಿ ಸ್ವಯಂ ಕ್ವಾರಂಟೈನ್ …

Read More »

ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿ

ಚಿಕ್ಕೋಡಿ: ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್‍ದಿಂದಾಗಿ ಬಿದರಿನ ಬುಟ್ಟಿ ತಯಾರಿಸಿ ಬದುಕು ಸಾಗಿಸುತ್ತಿದ್ದ ಬುರುಡ(ಮೇದಾರ)ಸಂಕಷ್ಟದಲ್ಲಿದ್ದು, ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿ ಶನಿವಾರ ಮೇದಾರ ಕೇತಯ್ಯ ಬುರುಡ ಸಮಾಜ ಸಂಘದಿಂದ ವಿಧಾನ ಪರಿಷತ್‍ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಮನವಿ ಅಲ್ಲಿಸಿದರು. ಕೊರೊನಾ ಬಂದು ಲಾಕ್‍ಡೌನ್‍ದಿಂದ ಪರಿಶಿಷ್ಟ ಪಂಗಡದ ವರ್ಗದವರಾಗಿರುವ ನಾವು ನಮ್ಮ ಮೂಲ ಕಸುಬು ಬಿದರಿನ ಬುಟ್ಟಿ ಮತ್ತು ಮರಗಳು ಸೇರಿದಂತೆ ಇನ್ನಿತರ ಬಿದರಿನ ವಸ್ತುಗಳನ್ನು …

Read More »

ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭ

ಬೆಳಗಾವಿ: ನಿಯಮಗಳನ್ನು ಪಾಲಿಸಿ ಜನರಿಗೆ ಮಾದರಿಯಾಗಬೇಕಿರುವ ನಮ್ಮ ನಾಯಕರು ನಿಯಮಗಳನ್ನು ಮುರಿಯುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ. ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಇಂದು ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್​ ಜೊಲ್ಲೆ ಸಹ ಉಪಸ್ಥಿತರಿದ್ದರು. ಇದೇ ವೇಳೆ ಸಮಾರಂಭದಲ್ಲಿ ಅಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಸಹ ಭಾಗಿಯಾಗಿದ್ದರು. ಜೊತೆಗೆ, ಸಾಮಾಜಿಕ …

Read More »

ಕೋರ್ಟ್ ಆದೇಶಿಸಿದರೂ ಕೆರೆ ಒತ್ತುವರಿ ತೆರವುಗೊಳಿಸದ ಅಧಿಕಾರಿಗಳು

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರ ಹೋಬಳಿಯ ಮಾದಾವರ ಗ್ರಾಮದ ಕೆರೆ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಈಗಾಗಲೇ ಲೋಕಾಯಕ್ತ ಕೋರ್ಟ್ ಅಧಿಕಾರಿಗಳಿಗೆ ಆದೇಶ ನೀಡಿದೆ. ಆದರೆ ಅಧಿಕಾರಿಗಳು ತೆರವು ಕಾರ್ಯ ಮಾತ್ರ ಮಾಡದಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿದೆ ಎಂದು ದೂರುದಾರ ರಾಮಕೃಷ್ಣಯ್ಯ ಆರೋಪಿಸಿದ್ದಾರೆ. ಮಾದಾವರ ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ಲೋಕಾಯುಕ್ತ ಕೋರ್ಟ್ ಆದೇಶ ನೀಡಿದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಒತ್ತುವರಿ ತೆರವುಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. …

Read More »

ಲಾಕ್‍ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಡಿಸಿಎಂ ಕಾರಜೋಳ

ಚಿಕ್ಕೋಡಿ: ಲಾಕ್‍ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಶನಿವಾರ ಲಾಕ್‍ಡೌನ್ ಮಾಡುವ ವಿಚಾರ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ಹಾಗೂ ನೂತನ ಪ್ರವಾಸಿ ಮಂದಿರ ಉದ್ಘಾಟಿಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಸುರಕ್ಷತೆಗಾಗಿ ಶನಿವಾರ ಹಾಗೂ ಭಾನುವಾರ ಲಾಕ್ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮದುವೆ ಕಾರ್ಯಕ್ರಮಗಳಿಂದ ಹೆಚ್ಚಿನ ಕೊರೊನಾ ಪ್ರಕರಣ ಬಂದ ಕಾರಣ …

Read More »

ವೃದ್ಧಾಪ್ಯದಲ್ಲೂ ಕೊರೊನಾ ಗೆದ್ದ ರಾಯಚೂರಿನ 12 ಜನ ಗಟ್ಟಿಗರು

ರಾಯಚೂರು: ಅರವತ್ತು ವರ್ಷ ಮೇಲ್ಪಟ್ಟವರಿಗೆ ಕೊರೊನಾ ಸೋಂಕು ತಗುಲಿದರೆ ಪ್ರಾಣಾಪಾಯ ಹೆಚ್ಚು ಅನ್ನೋದನ್ನ ರಾಯಚೂರಿನ 12 ಜನ ವೃದ್ಧರು ಮೆಟ್ಟಿನಿಂತು ಮಹಾಮಾರಿ ವಿರುದ್ಧ ಗೆದ್ದು ಹೊರಬಂದಿದ್ದಾರೆ. 60 ರಿಂದ 73 ವರ್ಷದ ಮಧ್ಯದ 12 ಜನರು ಕೊರೊನಾ ಸೋಂಕಿನಿಂದ ಗೆದ್ದು ಬಂದು ಸಂಪೂರ್ಣ ಗುಣಮುಖರಾಗುವ ಮೂಲಕ ಸೋಂಕಿತರಲ್ಲಿನ ಭಯ ಹೋಗಲಾಡಿಸಲು ಮಾದರಿಯಾಗಿದ್ದಾರೆ ಜಿಲ್ಲೆಯಲ್ಲಿ ಇದುವರೆಗೆ 631 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 442 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ …

Read More »

ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರು ಪ್ರಶ್ನೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಖರ್ಚು ವೆಚ್ಚದ ಲೆಕ್ಕದ ಬಗ್ಗೆ ರಾಜ್ಯ ಸರ್ಕಾರಕ್ಕೆ ಆರು ಪ್ರಶ್ನೆಗಳನ್ನು ಕೇಳಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ 6 ಪ್ರಶ್ನೆಗಳನ್ನ ಕೇಳಿರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸಿದ್ದರಾಮಯ್ಯ ಟ್ವಿಟ್ಟರಿನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದು, “ಕೊರೊನಾ ನಿಯಂತ್ರಣದಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ #LekkaKodi ಎಂಬ ಹ್ಯಾಷ್ ಟ್ಯಾಗ್‍ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಲಾಗಿದೆ. ನಮ್ಮ ಪಕ್ಷದ ಎಲ್ಲ ಶಾಸಕರು, ಸಂಸದರು, …

Read More »

KSRTC ಸಿಬ್ಬಂದಿಗೆ ವೇತನವನ್ನು ನೀಡುತ್ತೇವೆ: ಸಾರಿಗೆ ಸಚಿವ ಸವದಿ

ಚಿಕ್ಕೋಡಿ: ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದಲ್ಲಿ ನೂತನ ಪ್ರವಾಸಿ ಮಂದಿರ ಹಾಗೂ ಅಂಬೇಡ್ಕರ್ ಭವನ ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, 2,652 ಕೋಟಿ ನಷ್ಟವನ್ನು ಕೆ.ಎಸ್.ಆರ್.ಟಿ.ಸಿ ಅನುಭವಿಸುತ್ತಿದೆ. ಆದರೂ ಸಂಸ್ಥೆಯ 1 ಲಕ್ಷ 30 ಸಾವಿರ ಸಿಬ್ಬಂದಿಗೆ ವೇತನ ನೀಡಲಾಗುವುದು ಎಂದರು.ಪ್ರತಿ ತಿಂಗಳು …

Read More »