Breaking News

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ”

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ” ಕೊರೋನಾ ವೈರಸ್ ಲಾಕ್ಡೌನ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಿಪ್ಪಾಣಿಯ ಅಕ್ಕೋಳ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರು, ಅಧಿಕಾರಗಳು ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೋವಿಡ್ …

Read More »

ಲಾಕಡೌನ್ನಲ್ಲಿ ಔಷಧಿ ಪೂರೈಸುವ ‘ಸಹಾಯ’ ವಾರಿಯರ್ಸ..

ಅಥಣಿ : ಮಹಾಮಾರಿ ಕೋರೋನ ವ್ಯಾಪಿಸಿರುವುದರಿಂದ ನಿತ್ಯ ಜನತೆ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಜೊತೆಗೆ ಸರ್ಕಾರಿ ಅಧಿಕಾರಿಗಳು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ,ಪುರಸಭೆ, ಹೀಗೆ ಸರಕಾರವೇ ಜನತೆಯ ಆರೋಗ್ಯ ರಕ್ಷಣೆಯ ಜೊತೆಗೆ ಸಹಾಯಕ್ಕಾಗಿ ನಿಂತಿದೆ  ಜೊತೆಗೆ ಅನೇಕ ಸಂಘ-ಸಂಸ್ಥೆಗಳು  ಸರಕಾರದ ಜೊತೆ ಕೈಜೋಡಿಸಿ ಜನತೆಯ ಸಂಕಷ್ಟ ನಿವಾರಿಸುವಲ್ಲಿ ಸಹಕಾರಿಯಾಗಿವೆ. ಕೊರೋನಾ ಸಂದರ್ಭದಲ್ಲಿ ಜನತೆಯ ಮೂಲಭೂತ ಅವಶ್ಯಕತೆಗಳ ಪೂರೈಕೆಗೆ ಸರಕಾರ ಹಲವಾರು ಕ್ರಮಗಳ ಮೂಲಕ ಹರಸಾಹಸ ಪಡುತ್ತಿರುವಾಗ ಅಥಣಿಯಲ್ಲೊಂದು ಸಹಾಯ …

Read More »

ನಶೆಯಲ್ಲಿಸಾಧ್ಯವಾದ್ರೆ ಹಿಡಿಯಿರಿ ಎಂದು ಎಸ್ಕೇಪ್,1 ಕಿ.ಮೀ ಚೇಸ್ ಮಾಡಿ ತಡೆದ ಪೊಲೀಸರು

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಕೆಲವು ಕಡೆ ಕಟ್ಟುನಿಟ್ಟಿನ ರೀತಿಯಲ್ಲಿ ಸೀಲ್‍ಡೌನ್ ಕೂಡ ಮಾಡಲಾಗಿದೆ. ಆದರೆ ಈ ಮಧ್ಯೆ ಯುವತಿಯರಿಬ್ಬರು ಕುಡಿದ ನಶೆಯಲ್ಲಿ ಕಾರನ್ನು ರ‍್ಯಾಶ್ ಆಗಿ ಚಾಲನೆ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಲೀಲಾ ಪ್ಯಾಲೇಸ್ ಚೆಕ್ ಪೋಸ್ಟ್ ಬಳಿ ಯುವತಿಯರು ಪುಂಡಾಟ ಮಾಡಿದ್ದಾರೆ. ಪೊಲೀಸರು ಲೀಲಾ ಪ್ಯಾಲೇಸ್ ಬಳಿ ವಾಹನಗಳ ತಪಾಸಣೆ ಮಾಡುತ್ತಿದ್ದರು. ಆಗ ನಶೆಯಲ್ಲಿದ್ದ ಯುವತಿಯರು ಕಾರನ್ನು …

Read More »

ರೈತರಿಂದ ಡಿ.ಕೆ.ಸುರೇಶ್ ಹಣ್ಣು, ತರಕಾರಿ ಖರೀದಿ – ಜನರಿಗೆ ಉಚಿತವಾಗಿ ವಿತರಣೆ

ರಾಮನಗರ: ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಆಗುತ್ತಿಲ್ಲ. ಇದರಿಂದ ರೈತರು ಜಮೀನುಗಳಲ್ಲೇ ನಾಶ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದೀಗ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಿದ್ದು, ತರಕಾರಿ, ಹಣ್ಣು ಹಂಪಲನ್ನು ಖರೀದಿಸಿ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಡಿ.ಕೆ.ಸುರೇಶ್ ರೈತರು ಬೆಳೆಗಳನ್ನು ಖರೀದಿ ಮಾಡುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಜಿಲ್ಲೆಯ ರೈತರು ಸಹ ಫೋನ್ …

Read More »

388ಕ್ಕೆ ಏರಿದ ಸೋಂಕಿತರ ಸಂಖ್ಯೆ – ಮೈಸೂರಿನಲ್ಲಿ ನಾಲ್ವರಿಗೆ ಕೊರೊನಾ

ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇವತ್ತು ನಾಲ್ವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 388ಕ್ಕೆ ಏರಿಕೆ ಕಂಡಿದೆ. ಬೆಳಗ್ಗೆ ಒಟ್ಟು ನಾಲ್ವರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ದೆಹಲಿಗೆ ತಬ್ಲಿಘಿ ಜಮಾತ್‍ಗೆ ಹೋಗಿದ್ದ ಮೈಸೂರಿನ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಇನ್ನೂ ನಂಜನಗೂಡಿನ ಇಬ್ಬರಲ್ಲಿ ಸೋಂಕು ಇರುವುದು ದೃಢವಾಗಿದೆ. ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 4 #COVID19 …

Read More »

ಯಾದಗಿರಿ/ಹಾವೇರಿ:ರಾತ್ರಿ ಸುರಿದ ಮಳೆಗೆ ಭತ್ತದ ಬೆಳೆ ಮಣ್ಣುಪಾಲಾಗಿದೆ.

ಯಾದಗಿರಿ/ಹಾವೇರಿ: ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಯಾದಗಿರಿ ಹಾಗೂ ಹಾವೇರಿ ಜಿಲ್ಲೆಯ ರೈತರು ಅಕ್ಷರಶಃ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಯಾದಗಿರಿಯಲ್ಲಿ ರಾತ್ರಿ ಸುರಿದ ಮಳೆಗೆ ಭತ್ತದ ಬೆಳೆ ಮಣ್ಣುಪಾಲಾಗಿದೆ. ಜಿಲ್ಲೆಯ ಅಬ್ಬೆತುಮಕೂರ, ಹೆಡಗಿಮುದ್ರಾ, ಠಾಣಾಗುಂದಿ, ನಾಯ್ಕಲ್, ಮನಗನಾಳ, ಅನಕಸೂಗುರ, ಐಕೂರ ಮೊದಲಾದ ಕಡೆ ಭತ್ತದ ಬೆಳೆ ಹಾಗೂ ಸಜ್ಜೆ ಬೆಳೆ ನೆಲ ಕಚ್ಚಿದೆ. ಏಪ್ರಿಲ್ 7ರಂದು ಸುರಿದ ಬಿರುಗಾಳಿ ಸಹಿತ ಮಳೆಗೆ ಕೂಡ ಬೆಳೆ ಹಾನಿಯಾಗಿತ್ತು. ಈಗ ಮತ್ತೆ …

Read More »

ರಾಜ್ಯದ ವಿವಿಧೆಡೆ ಗುಡುಗು , ಭಾರೀ ಮಳೆ, ನಿವೃತ್ತ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.

ಬೆಂಗಳೂರು: ರಾಜ್ಯದ ಹಲವೆಡೆ ಸಿಡಿಲು, ಗುಡುಗು ಸಹಿತ ಮಳೆ ಸುರಿದಿದ್ದು, ಸಿಡಿಲಿನ ಹೊಡೆತಕ್ಕೆ ನಿವೃತ್ತ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ನಿವೃತ್ತ ಯೋಧ ಚನ್ನಬಸಪ್ಪ ರುದ್ರಪ್ಪ ಚಾಜಗೌಡ (50) ಮೃತರಾಗಿದ್ದಾರೆ. ಸಂಜೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಈ ವೇಳೆ ಸಿಡಿಲು ಬಡಿದು ಚನ್ನಬಸಪ್ಪ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಚನ್ನಬಸಪ್ಪ ಅವರು ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಸುತ್ತಿದ್ದರು. ಕೆಲಸದಿಂದ ನಿವೃತ್ತಿ …

Read More »

ನೀನು ನನಗೆ ವೋಟ್ ಹಾಕಲ್ಲ, ನಾನ್ಯಾಕೆ ನಿಂಗ ರೇಷನ್ ಕಿಟ್ ಕೊಡಬೇಕು?ವಿಧವೆಯ ಮೇಲೆ ಹಲ್ಲೆ

ಬಳ್ಳಾರಿ: ರೇಷನ್ ಕಿಟ್ ಕೇಳಿದ್ದಕ್ಕೆ ವಿಧವೆಯೊಬ್ಬರಿಗೆ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ತಾಲೂಕಿನ ಬೆಳಗಲ್ಲು ತಾಂಡಾದ ಮೋತಿ ಬಾಯಿ (38) ಹಲ್ಲೆಗೆ ಒಳಗಾದ ವಿಧವೆ. ಬೆಳಗಲ್ಲು ತಾಂಡಾದ ನಿವಾಸಿಗಳಾದ ಲೇಬರ್ ಕಂಟ್ರಾಕ್ಟರ್ ರಾಮುನಾಯ್ಕ, ಲಾರಿ ಮಾಲೀಕರಾದ ಬಾಬು ನಾಯ್ಕ, ವೆಂಕಟೇಶ ನಾಯ್ಕ, ಲಕ್ಷ್ಮಣ ನಾಯ್ಕ ಹಾಗೂ ತೇಜು ನಾಯ್ಕ ಹಲ್ಲೆಗೈದವರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಡ ಜನರಿಗೆ ಬೆಳಗಲ್ಲು ತಾಂಡಾ ಸಮೀಪ ಕಾರ್ಖಾನೆಗಳು ರೇಷನ್ ಕಿಟ್ …

Read More »

ಕುಟುಂಬದ 26 ಮಂದಿಗೆ ಕೊರೊನಾ ಸೋಂಕು

ನವದೆಹಲಿ: ಇಡೀ ದೇಶ ಲಾಕ್‍ಡೌನ್ ಆಗಿದೆ. ಕೆಲವು ಕಡೆ ಸೀಲ್‍ಡೌನ್ ಕೂಡ ಮಾಡಿದೆ. ಸರ್ಕಾರ ಮನೆಯಿಂದ ಆಚೆ ಬರಬೇಡಿ ಅಂತ ಸಾರಿ ಸಾರಿ ಹೇಳುತ್ತಿದೆ. ಆದರೆ ಜನರು ಮಾತ್ರ ಸರ್ಕಾರದ ಮಾತು ಕೇಳುತ್ತಿಲ್ಲ. ಇದೀಗ ರೆಡ್ ಝೋನ್‍ನಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡಿದ ಇಡೀ ಕುಟುಂಬವೊಂದಕ್ಕೆ ಕೊರೊನಾ ಸಂಕಷ್ಟ ಎದುರಾಗಿದೆ. ದೆಹಲಿಯ ರೆಡ್ ಝೊನ್ ಪ್ರದೇಶವಾಗಿರುವ ಜಹಾಂಗೀರ್ ಪುರಿಯಲ್ಲಿ ಒಂದೇ ಕುಟುಂಬದ 26 ಜನರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ರೆಡ್ …

Read More »

ರಾಜ್ಯ ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆಯಾ? ಸರ್ಕಾರವೇ ಕೊರೊನಾ ಸೋಂಕು ಹರಡಿಸುತ್ತಿದೆಯಾ?

ಬೆಂಗಳೂರು: ರಾಜ್ಯ ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆಯಾ? ಸರ್ಕಾರವೇ ಕೊರೊನಾ ಸೋಂಕು ಹರಡಿಸುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಹೌದು, ಸರ್ಕಾರ ನೀಡುತ್ತಿರುವ ಉಚಿತ ಹಾಲು ಪಡೆಯಲು ಜನರು ಕಿಲೋ ಮೀಟರ್ ಗಟ್ಟಲೇ ಕ್ಯೂ ನಿಲ್ಲುತ್ತಿದ್ದಾರೆ. ಕೆಲವೊಮ್ಮೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದ ಪ್ರಸಂಗಗಳನ್ನು ವರದಿಯಾಗಿವೆ. ಇಂತಹದ್ದೇ ಪ್ರಸಂಗ ಇಂದು ಮಲ್ಲೇಶ್ವರಂನ ದತ್ತಾತ್ರೇಯ ವಾರ್ಡ್ ನಲ್ಲಿ ನಡೆದಿದೆ. ಮಲ್ಲೇಶ್ವರಂನ ದತ್ತಾತ್ರೇಯ ವಾರ್ಡ್‍ನಲ್ಲಿ ಬೆಳಗ್ಗೆ 7 ಗಂಟೆಗೆ ಉಚಿತ ಹಾಲು ವಿತರಣೆ ಮಾಡಲಾಗುತ್ತದೆ. …

Read More »