Breaking News

ಜೋಗ ಜಲಪಾತದಲ್ಲಿ ಧುಮ್ಮಿಕ್ಕಿ ಹರಿಯುತ್ತಿರೋ ಶರಾವತಿ- ರಸ್ತೆ ಬದಿಯಲ್ಲಿ ಮಣ್ಣು ಕುಸಿತ

ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡಿನಾದ್ಯಂತ ಉತ್ತಮ ಮಳೆಯಾಗುತ್ತಿದೆ. ಉತ್ತಮ ಮಳೆಯ ಕಾರಣ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ ಹರಿಯುತ್ತಿದೆ. ಮಳೆಗಾಲದ ಸಮಯದಲ್ಲಿ ಜೋಗ ಜಲಪಾತವನ್ನು ವೀಕ್ಷಿಸಲು ರಾಜ್ಯ, ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡಿ ನಯನ ಮನೋಹರವಾದ ಜಲಪಾದ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಕೊರೊನಾ ವೈರಸ್ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಸರ್ಕಾರ ಪ್ರವಾಸಿ ತಾಣಗಳಿಗೂ …

Read More »

ಖಾಸಗಿ ಹಾಗೂ ಸರ್ಕಾರಿ ವೈದ್ಯರು ಚಿಕಿತ್ಸೆ ನೀಡಲು ಹಿಂದೇಟುನರಳಾಡಿ ಪ್ರಾಣ ಕಳೆದುಕೊಂಡ ವ್ಯಕ್ತಿ………..

ವಿಜಯಪುರ: ಜಿಲ್ಲೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವ್ಯಕ್ತಿಯೊಬ್ಬರು ನರಳಾಡಿ ಪ್ರಾಣ ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ರೋಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಕಂಡು ಬಂದ ಕೂಡಲೇ ತಡ ರಾತ್ರೀ ವಿಜಯಪುರ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಈ ವೇಳೆ ಖಾಸಗಿ ಹಾಗೂ ಸರ್ಕಾರಿ ವೈದ್ಯರು ವ್ಯಕ್ತಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು. ರಾತ್ರಿ ಇಡೀ ಅಲೆದು ಕೊನೆಗೆ …

Read More »

ಪಿಎಫ್‍ಐ ಯುವಕರ ತಂಡದಿಂದ ಸೋಂಕಿತರ ಶವಗಳಿಗೆ ಗೌರವದ ಅಂತ್ಯಕ್ರಿಯೆ…….

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಅತ್ಯಂತ ಭೀಕರವಾಗಿತ್ತು. ಈ ಹಿಂದೆ ಕೊರೊನಾದಿಂದ ಮೃತಪಟ್ಟರೆ ಜೆಸಿಬಿಯಿಂದ ಶವವನ್ನು ತಂದು, ಗುಂಡಿಗಳಿಗೆ ಎಳೆದು ತಂದು ಬಿಸಾಕುವ ಮೂಲಕ ನಿರ್ಲಕ್ಷ್ಯವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಆದರೆ ಇದೀಗ ಕೊರೊನಾ ರೋಗಿಗಳಿಗೆ ಮರ್ಯಾದೆಯ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. ಹೌದು. ಫ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ) ದಿಂದ ಕೊರೊನಾದಿಂದ ಮೃತಪಟ್ಟವರ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸುವ ಕಾರ್ಯ ಮಾಡುತ್ತಿದೆ. ಪಿಎಫ್‍ಐ ಯುವಕರ ತಂಡ ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡುತ್ತಿದೆ. …

Read More »

ಹು-ಧಾ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೂ ಕೊರೊನಾ ಸೋಂಕು

ಹುಬ್ಬಳ್ಳಿ: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಹು-ಧಾ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ನಿನ್ನೆ ಕೆಮ್ಮು, ನೆಗಡಿ ಕಾಣಿಸಿಕೊಂಡಿದ್ದರಿಂದ ಗುರುವಾರ ಕಿಮ್ಸ್ ಗೆ ದಾಖಲಾಗಿದ್ದರು. ನಿನ್ನೆಯೇ ಶಾಸಕರ ಗಂಟಲ ದ್ರವ ಪರೀಕ್ಷೆ ಮಾಡಲಾಗಿತ್ತು. ಇಂದು ವರದಿ ಕೈ ಸೇರಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತ ಶಾಸಕರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕರಿಗೆ ಸೋಂಕು …

Read More »

ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ……………

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಕೊರೊನಾ ತಡೆಗೆ ಈಗಾಗಲೇ ಹಲವೆಡೆ ಸೆಲ್ಫ್ ಲಾಕ್‍ಡೌನ್ ಮಾಡಲಾಗಿದೆ. ರಾಜ್ಯದಲ್ಲಿ ಶುಕ್ರವಾರ 2,313 ಮಂದಿಗೆ ಕೋವಿಡ್-19 ಸೋಂಕು ತಗಲುವ …

Read More »

ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ

ಮೈಸೂರು : ಅಂತರ್ಜಾತಿ ವಿವಾಹಕ್ಕೆ ಮನೆಯವರ ವಿರೋಧ ವ್ಯಕ್ತವಾದ ಕಾರಣ ಕತ್ತು ಕುಯ್ದುಕೊಂಡು ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲ್ಲೂಕಿನ ದುಗ್ಗ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಪ್ರಿಯತಮೆಯ ಮನೆ ಮುಂದೆ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿ ಗಾಯಗೊಂಡ ಪ್ರೇಮಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಸ್ಪರ ಪ್ರೀತಿಸುತ್ತಿದ್ದ ಇವರ ಮದುವೆಗೆ ಎರಡೂ ಕುಟುಂಬದ ಒಪ್ಪಿಗೆಯಿರಲಿಲ್ಲ. ಇದರಿಂದ ನೊಂದ ಪ್ರೇಮಿಗಳು, ಯುವತಿಯ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ …

Read More »

ಕೆ ಪಿ ಸಿ ಸಿ ಕಚೇರಿಯಲ್ಲಿರುವ ಮೂರು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆಗಿದೆ.

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿರುವ ಮೂರು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಇವೆರೆಲ್ಲರೂ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಇಬ್ಬರು ಸಿಬ್ಬಂದಿಯಾಗಿ ಮತ್ತೆ ಒಬ್ಬರು ಕೆಪಿಸಿಸಿ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಇದರಿಂದಾಗಿ ಈಗ ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿರುವ ಹಲವಾರು ಮಂದಿ ನಾಯಕರಿಗೆ ಕೊರೋನಾ ಭೀತಿ ಶುರುವಾಗಿದೆ.

Read More »

ದುಬೆ ನಂತರ ಮತ್ತೋರ್ವ ಗ್ಯಾಂಗ್ ಸ್ಟರ್ ಹತ್ಯೆ – ಯುಪಿಯಲ್ಲಿ ಇಂದು ಡಬಲ್ ಎನ್‍ಕೌಂಟರ್

ಲಕ್ನೋ: ರೌಡಿ ಶೀಟರ್ ವಿಕಾಸ್ ದುಬೆ ನಂತರ ಉತ್ತರ ಪ್ರದೇಶದಲ್ಲಿ ಇನ್ನೊಬ್ಬ ಗ್ಯಾಂಗ್ ಸ್ಟರ್ ಅನ್ನು ಹತ್ಯೆ ಮಾಡಿದ್ದು, ಇಂದು ಒಂದೇ ದಿನ ಎರಡು ಎನ್‍ಕೌಂಟರ್ ಗಳು ನಡೆದಿವೆ. ಇಂದು ಮುಂಜಾನೆ ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ವಿಕಾಸ್ ದುಬೆಯನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದರು. ಇದಾದ ಬಳಿಕ 36 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿ ಪನ್ನಾ ಯಾದವ್‍ನನ್ನು ವಿಶೇಷ ಕಾರ್ಯಪಡೆಯ (ಎಸ್‍ಟಿಎಫ್) ಪೊಲೀಸ್ ಅಧಿಕಾರಿಗಳು ಬಹ್ರೈಚ್‍ನ ಹಾರ್ಡಿ …

Read More »

ಗಂಡು ಮಗು ಆಗಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರವಾರ: ಗಂಡು ಮಗು ಆಗಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನ ಜಿಲ್ಲೆಯ ಶಿರಸಿಯ ಅಂದಳ್ಳಿಯಲ್ಲಿ ನಡೆದಿದ್ದು ಶುಕ್ರವಾರ ಎಫ್‌ಐಆರ್ ದಾಖಲಾಗಿದೆ. ಮಧುರಾ ಹೆಗಡೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈ ಹಿಂದೆ ತನಗೆ ಎರಡೂ ಹೆಣ್ಣು ಮಕ್ಕಳೆ ಆಗಿದ್ದು ಗಂಡು ಮಗು ಆಗಿಲ್ಲ ಎಂದು ನೊಂದಿದ್ದಾಳೆ ಎನ್ನಲಾಗಿದೆ. ಬಚ್ಚಲ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಶಿರಸಿ ಗ್ರಾಮೀಣ ಪೊಲೀಸ್ …

Read More »

ಭಾರತದ ಮೂಲದ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸಿದ ಇಂಗ್ಲೆಂಡ್ ಕ್ರಿಕೆಟ್………

ಸೌತಾಂಪ್ಟನ್: ಬರೋಬ್ಬರು 117 ದಿನಗಳ ಬಳಿಕ ಕ್ರಿಕೆಟ್ ಚಟುವಟಿಕೆಗಳು ಆರಂಭವಾಗಿದ್ದು, ಇಂಗ್ಲೆಂಡ್ ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಪಂದ್ಯ ಮಳೆಯ ಅಡೆತಡೆಯ ನಡುವೆಯೂ ಸಾಗುತ್ತಿದೆ. ಇತ್ತ ಇಂಗ್ಲೆಂಡ್ ಕ್ರಿಕೆಟ್ ತಂಡ ಭಾರತ ಮೂಲದ ನಾಲ್ವರು ವೈದ್ಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದೆ. ಕೋವಿಡ್-19 ಸಂದಿಗ್ಧ ಸಂದರ್ಭದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸಿದ್ದ ವೈದ್ಯರ ಹೆಸರಗಳನ್ನು ತಮ್ಮ ಜೆರ್ಸಿ ಮೇಲೆ ಮುದ್ರಿಸಿ ಕಣಕ್ಕೆ ಇಳಿಯುವ ಮೂಲಕ ವಿಶೇಷ ಗೌರವ ಅರ್ಪಿಸಿದೆ. ‘ರೈಸ್ ದಿ ಬ್ಯಾಟ್’ …

Read More »