ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹಳ್ಳಿಯಿಂದ ದಿಲ್ಲಿಗೆ ವ್ಯಾಪಿಸಿಕೊಂಡಿದೆ. ಪ್ರತಿನಿತ್ಯ 25 ಸಾವಿರ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು ಮುಂದಿನ ಮೂರು ತಿಂಗಳು ಕೊರೊನಾ ಆರ್ಭಟಿಸಲಿದಯಂತೆ. ಈ ಆತಂಕ ನಡುವೆ ತಜ್ಞರು ಅಕ್ಟೋಬರ್ ಮಧ್ಯ ಭಾಗದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಬಹುದು ಎಂದು ಹೇಳಿದ್ದಾರೆ. ಇಡೀ ವಿಶ್ವವನ್ನೇ ಇನ್ನಿಲ್ಲದಂತೆ ಕಾಡ್ತಿರುವ ಕೊರೊನಾ ದಿನೇ ದಿನೇ ತನ್ನ ಕಬಂಧಬಾಹುವಿನ ಉದ್ದಗಲವನ್ನು ಹೆಚ್ಚಿಸುತ್ತಿದೆ. ಈ ಕೊರೊನಾ ನಿಯಂತ್ರಣ ಮಾಡಲು ಪ್ರತಿದಿನ ಹತ್ತು ಹಲವು ಸಂಶೋಧನೆಗಳು ನಡೆಯುತ್ತಲೇ …
Read More »ಮೂರು ದಿನ ಮೈಸೂರು ಅರಮನೆ ಪ್ರವಾಸಿಗರಿಗೆ ಬಂದ್
ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಉಲ್ಬಣವಾಗುತ್ತಿದ್ದು, ಮೈಸೂರು ಅರಮನೆಗೂ ಕೊರೊನಾ ಭೀತಿ ಕಾಡುತ್ತಿದೆ. ಮೂರು ದಿನ ಅರಮನೆಯನ್ನು ಪ್ರವಾಸಿಗರಿಗೆ ಬಂದ್ ಮಾಡಲಾಗಿದೆ. ಅರಮನೆಯಲ್ಲಿ ಒಂಟೆ ನೋಡಿಕೊಳ್ಳುವ ವ್ಯಕ್ತಿಯ ಮಗನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮೂರು ದಿನ ಅರಮನೆಯನ್ನು ಬಂದ್ ಮಾಡಲಾಗಿದೆ. ಇಂದು ಅರಮನೆ ಆವರಣದಲ್ಲಿ ಸ್ಯಾನಿಟೈಸ್ ಮಾಡಲು ಸಿದ್ಧತೆ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರ ಪ್ರವಾಸಿಗರಿಗೆ ನಿರ್ಬಂಧ ಮಾಡಲಾಗಿದೆ. ಇವತ್ತು ಒಂದು ದಿನ ಅರಮನೆ ಆವರಣ ಸ್ಯಾನಿಟೈಸ್‍ಗಾಗಿ ನಿರ್ಬಂಧ …
Read More »ರಾಜ್ಯದಲ್ಲಿ ಡೆಡ್ಲಿ ಕೊರೊನಾ ನಡುವೆಯೇ ಮಳೆರಾಯನ ಆರ್ಭಟ ಜೋರಾಗಿ ಇದೆ.
ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ನಡುವೆಯೇ ಮಳೆರಾಯನ ಆರ್ಭಟ ಜೋರಾಗಿ ಇದೆ. ಕಾರವಾರದಲ್ಲಿ ಭಾರೀ ಮಳೆಗೆ ಅಮದಳ್ಳಿ ಗ್ರಾಮ ಸಂಪೂರ್ಣ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಯ್ತು. ಜಿಲ್ಲೆಯ ಬೆಳಗಾವಿಯ ಚಿಕ್ಕೋಡಿ ಉಪ ವಿಭಾಗದ ಕೃಷ್ಣಾ ನದಿ ತೀರದಲ್ಲಿ ಈಗ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಕೋಂಕಣ ಪ್ರದೇಶಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ ಕರ್ನಾಟಕದ ವೇದಗಂಗಾ, ದೂಧಗಂಗಾ, ಕೃಷ್ಣಾ ನದಿಗೆ ಭಾರೀ ಪ್ರಮಾಣದ …
Read More »ಈ ಕೊರೊನಾದಿಂದ ಸಾವು ಮಾತ್ರ ಬರೋದು ಬೇಡ. ಬೇರೆ ಯಾವುದೇ ರೀತಿಯಾದರೂ ಸಾವು ಬರಲಿ ಅನ್ನೋ ಸ್ಥಿತಿ ನಿರ್ಮಾಣವಾಗಿದೆ.
ಕೊಪ್ಪಳ: ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಕೊರೊನಾದಿಂದ ಸಾವು ಮಾತ್ರ ಬರೋದು ಬೇಡ. ಬೇರೆ ಯಾವುದೇ ರೀತಿಯಾದರೂ ಸಾವು ಬರಲಿ ಅನ್ನೋ ಸ್ಥಿತಿ ನಿರ್ಮಾಣವಾಗಿದೆ. ಕೊಪ್ಪಳದಲ್ಲಿ ಒಂದೇ ದಿನ ಕೊರೊನಾ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಹಿರೇಜಂತಕಲ್ ಗ್ರಾಮದ ನಿವಾಸಿ 51 ವರ್ಷದ ವ್ಯಕ್ತಿ ಮತ್ತು ಕೊಪ್ಪಳ ತಾಲೂಕಿನ ಮುನಿರಾಬಾದನ 65 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದರು. 51 ವರ್ಷದ ವ್ಯಕ್ತಿಯ …
Read More »ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಿ ಉದ್ಯೋಗಿಗಳ ಬಳಕೆ ಮಾಡಿಕೊಳ್ಳಲು ಸರ್ಕಾರ ಮಹತ್ವ ನಿರ್ಧಾರ
ಬೆಂಗಳೂರು: ಅನ್‍ಲಾಕ್-2 ಅವಧಿಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಿ ಉದ್ಯೋಗಿಗಳ ಬಳಕೆ ಮಾಡಿಕೊಳ್ಳಲು ಸರ್ಕಾರ ಮಹತ್ವ ನಿರ್ಧಾರವನ್ನು ಮಾಡಿದೆ. ಕೋವಿಡ್ ನಿಯಂತ್ರಣ ಮಾಡಲು ಉದ್ದೇಶಕ್ಕಾಗಿ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿರುವ ಕಾರಣ ಸರ್ಕಾರಿ ಉದ್ಯೋಗಿಗಳ ಬಳಕೆಗೆ ಸರ್ಕಾರ ಮುಂದಾಗಿದೆ. ಆದ್ದರಿಂದ ರಾಜ್ಯದ ಎಲ್ಲಾ ಇಲಾಖೆಯ, ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ 50 ವರ್ಷ ಒಳಗಿನ ಅಧಿಕಾರಿಗಳು, ಸಿಬ್ಬಂದಿಗಳ ಮಾಹಿತಿ ನೀಡಲು ಸೂಚನೆ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿ ಮುಖ್ಯ …
Read More »ಊಟ ಕೋಡೋದು ನನ್ನ ಕೆಲಸ ಅಲ್ಲ: ಕ್ವಾರಂಟೈನ್ ಕೇಂದ್ರದಲ್ಲಿ ಅಧಿಕಾರಿಯ ಉದ್ಧಟತನ
ತುಮಕೂರು: ಕ್ವಾರಂಟೈನ್‍ನಲ್ಲಿ ಇದ್ದವರಿಗೆ ಸರಿಯಾದ ಊಟ, ತಿಂಡಿ ವ್ಯವಸ್ಥೆ ಮಾಡದ್ದನ್ನು ಪ್ರಶ್ನಿಸಿದಕ್ಕೆ ಪಟ್ಟಣ ಪಂಚಾಯ್ತಿ ಮುಖ್ಯ ಅಧಿಕಾರಿಯೋರ್ವ ಬೀದಿ ರಂಪಾಟ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕನಾಯಹಳ್ಳಿ ತಾಲೂಕಿನ ಹುಳಿಯಾರಿನ ಬಿಸಿಎಂ ಹಾಸ್ಟೆಲ್‍ನಲ್ಲಿ ಯುವಕ ಮತ್ತು ಆತನ ತಾಯಿಯನ್ನು ಕ್ವಾರಂಟೈನ್ ಮಾಡಲಾಗಿತ್ತು. ರಾತ್ರಿ ಊಟ ವ್ಯವಸ್ಥೆ ಇಲ್ಲದೆ ಬಗ್ಗೆ ಕ್ವಾರಂಟೈನ್‍ನಲ್ಲಿದ್ದ ಯುವಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದ, ಇದನ್ನು ಗಮನಿಸಿದ ಸ್ಥಳೀಯರು ಅವರಿಗೆ ಊಟದ ವ್ಯವಸ್ಥೆ ಮಾಡಿದ್ದರು. …
Read More »ಖಾಸಗಿ ಹೋಟೆಲ್ ನಲ್ಲಿ ಕೋವಿಡ್ ಕೇರ್ ಕೇಂದ್ರ ತೆರೆಯಲು ಆರೋಗ್ಯ ಇಲಾಖೆ ಸುತ್ತೋಲೆ
ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಕೋವಿಡ್ ಕೇರ್ ಕೇಂದ್ರ ತೆರೆಯಲು ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ. ಈ ಮೂಲಕ ರೋಗ ಲಕ್ಷಣ ಇಲ್ಲದ ರೋಗಿಗಳು ಮನೆಯಲ್ಲೇ ಐಸೊಲೇಶನ್ ಆಗಬಹುದು. ಇದರ ಜೊತೆ ಸರ್ಕಾರಿ ಕೇಂದ್ರ ಅಲ್ಲದೇ ಖಾಸಗಿ ಹೋಟೆಲ್ ನಲ್ಲೂ ಐಸೊಲೇಶನ್ ಆಗಬಹುದು. ಹೋಟೆಲ್ ಐಸೋಲೇಷನ್ ಮೂರು ವಿಭಾಗ ಮಾಡಿರುವ ಸರ್ಕಾರ ದರವನ್ನು ನಿಗದಿ ಮಾಡಿದೆ. ಬಜೆಟ್ ಹೋಟೆಲಿಗೆ 8 ಸಾವಿರ ರೂ., 3 ಸ್ಟಾರ್ ಹೋಟೆಲಿಗೆ 10 ಸಾವಿರ …
Read More »ಗದ್ದೆ ಹದ ಮಾಡುತ್ತಿದ್ದ ರೈತನ ಮೇಲೆ ಬಿದ್ದ ವಿದ್ಯುತ್ ತಂತಿ………..
ಉಡುಪಿ: ಗದ್ದೆಯಲ್ಲಿ ಬೇಸಾಯ ಕೆಲಸ ಮಾಡುತ್ತಿದ್ದ ರೈತ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ರೈತ ಸಾಧು (70) ಬೇಸಾಯ ಚಟುವಟಿಕೆ ಮಾಡುತ್ತಿದ್ದಾಗ ಮೃತಪಟ್ಟಿದ್ದಾರೆ. ಚೇರ್ಕಾಡಿ ಗ್ರಾಮದ ಜಾರ್ ಜೆಡ್ಡು ಎಂಬಲ್ಲಿ ಈ ಘಟನೆ ನಡೆದಿದ್ದು, ಸಾಧು ಅವರು ಗದ್ದೆಯ ಬದು ಕಟ್ಟುತ್ತಿದ್ದರು. ನಾಳೆ ಬಿತ್ತನೆ ಮತ್ತು ನಾಟಿ ಕೆಲಸ ಮಾಡಬೇಕಿತ್ತು. ಹೀಗಾಗಿ ಇಂದು ದಿನ ಪೂರ್ತಿ ಬೇಸಾಯದ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ವಿದ್ಯುತ್ ತಂತಿ …
Read More »ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಚಾರ್ಮಾಡಿ ಸಂಚಾರ ಬಂದ್……..
ಚಿಕ್ಕಮಗಳೂರು: ಕಳೆದ ಬಾರಿ ತಿಂಗಳುಗಟ್ಟಲೇ ಬಂದ್ ಆಗಿದ್ದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶಿಸಿದ್ದಾರೆ. ಕಳೆದ ಬಾರಿ ಭಾರೀ ಮಳೆಯಿಂದ ಚಾರ್ಮಾಡಿ ಘಾಟ್‍ನ ಹಲವೆಡೆ ಬೆಟ್ಟ-ಗುಡ್ಡಗಳು ಕುಸಿದಿದ್ದವು. ತಿಂಗಳುಗಟ್ಟಲೇ ಚಾರ್ಮಾಡಿ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಕುಸಿದಿದ್ದ ಬೆಟ್ಟಗುಡ್ಡಗಳ ಮಣ್ಣನ್ನು ತೆಗೆಯಲು ಮೂರ್ನಾಲ್ಕು ಜೆಸಿಬಿಗಳು ತಿಂಗಳುಗಟ್ಟಲೇ …
Read More »ನಟ ಶಿವರಾಜ್‍ಕುಮಾರ್ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ದಿಢೀರ್ ಭೇಟಿ
ಬೆಂಗಳೂರು: ನಟ ಶಿವರಾಜ್‍ಕುಮಾರ್ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ದಿಢೀರ್ ಭೇಟಿ ನೀಡಿದ್ದಾರೆ. ಇಂದು ಮಾನ್ಯತಾ ಟೆಕ್‍ಪಾರ್ಕ್ ಬಳಿ ಇರುವ ಶಿವಣ್ಣನ ಮನೆ ಹತ್ತಿರದಲ್ಲಿ ಸ್ನೇಹಿತರ ಮಗಳ ಮದುವೆಗೆ ಹಾಜರಾಗಿದ್ದ ಡಿಕೆ ಶಿವಕುಮಾರ್, ನಂತರ ಅಲ್ಲೇ ಶಿವಣ್ಣ ಅವರ ಮನೆಗೂ ಹೋಗಿ ಮಾತನಾಡಿಕೊಂಡು ಬಂದಿದ್ದಾರೆ. ಡಿಕೆಶಿ ಶಿವಣ್ಣ ಅವರ ಮನೆಗೆ ಹೋಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇಂದು ಮಾನ್ಯತಾ ಟೆಕ್‍ಪಾರ್ಕ್ ಬಳಿ ನಡೆದ ಸ್ನೇಹಿತರ …
Read More »