Breaking News

ಬೆಂಗಳೂರಲ್ಲಿ ಹಾಡಹಗಲೇ ಇಂಥಾ ಘಟನೆ ನಡೆಯುತ್ತಾ ಅನ್ನೋ ಭಯ ಹುಟ್ಟಿಸುತ್ತಿದೆ.

ಬೆಂಗಳೂರು: ಇತ್ತೀಚೆಗಷ್ಟೇ ಚಾಕು ಹಿಡಿದ ವ್ಯಕ್ತಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಇಬ್ಬರ ಕೊಂದು ಹಾಕಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಅಂಥದ್ದೇ ಭಯಾನಕ ವಿಡಿಯೋವೊಂದು ವೈರಲ್ ಆಗಿದೆ. ಬೆಂಗಳೂರಿನಲ್ಲಿ ಸದ್ಯ ವೈರಲ್ ಆಗಿರೋ ವಿಡಿಯೋ ನೋಡ್ತಿದ್ರೆ ನಿಜಕ್ಕೂ ಬೆಂಗಳೂರಲ್ಲಿ ಹಾಡಹಗಲೇ ಇಂಥಾ ಘಟನೆ ನಡೆಯುತ್ತಾ ಅನ್ನೋ ಭಯ ಹುಟ್ಟಿಸುತ್ತಿದೆ. ಕೈಯಲ್ಲಿ ಡ್ಯಾಗರ್ ಹಿಡಿದು ಡರೋಡೆಗೆ ಸ್ಕೆಚ್! ಯೆಸ್.. ಸಿಟಿ ಮಾರ್ಕೆಟ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಲೈವ್ ರಾಬರಿಯ …

Read More »

ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ .

ಜಾರ್ಖಂಡ್​ನಲ್ಲಿ ಆಡಳಿತರೂಢ ಜೆಎಮ್​ಎಮ್ ಪಕ್ಷದ ಲೊಮಿನ್ ಹೆಂಬ್ರೊಮ್ ಎಂಬ ಹೆಸರಿನ ಶಾಸಕ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಅಪಹರಣದಂಥ ಪ್ರಕರಣಗಳು ಹೆಚ್ಚಾಗಲು ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ . ಕಳೆದ ವಾರ ರಾಜ್ಯದ ದುಮ್ಕಾ ಎಂಬಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಉಲ್ಲೇಖಿಸಿ ಹೆಂಬ್ರೊಮ್ ಹಾಗೆ ಹೇಳಿದ್ದಾರೆ . ಇದೇ ಕ್ಷೇತ್ರದಲ್ಲಿ ವಿಧಾನಸಭೆಗೆ ಉಪಚುನಾವಣೆ ನಡೆಯುತ್ತಿರುವುದರಿಂದ ಜೆ …

Read More »

ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ. ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ …

Read More »

ಸಿಡಿಲು ಬಡಿದು ಕುರಿಗಾರರ 45 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.

ಸವದತ್ತಿ : ಇಂದು ತಾಲೂಕಿನಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಭಾರಿ ಮಳೆಗೆ ನವಿಲುತೀರ್ಥ ಡ್ಯಾಮ್ ಹತ್ತಿರ ಸಿಡಿಲು ಬಡಿದು ಕುರಿಗಾರರ 45 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.   ಸ್ಥಳಕ್ಕೆ ಶಾಸಕ ಹಾಗೂ ವಿಧಾನಸಭೆಯ ಉಪಸಭಾದ್ಯಕ್ಷ ಆನಂದ ಮಾಮನಿ ಹಾಗೂ ತಾಲೂಕು ದಂಡಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಂತರ ಕುರಿಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಆನಂದ ಮಾಮನಿ ಸೂಚಿಸಿದರು.  

Read More »

ಕೊರೋನಾ ಮಹಾಮಾರಿಗೆ ಹೋರಾಟಗಾರ ಬಲಿ

ಕಲಬುರಗಿ : ಕೊರೋನಾ ಮಹಾಮಾರಿ ಎಲ್ಲೆಡೆ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಹೋರಾಟಗಾರ ಮಾರುತಿ ಮಾನ್ಪಡೆ (65) ಮಹಾಮಾರಿಗೆ ಬಲಿಯಾಗಿದ್ದಾರೆ ಕಮ್ಯುನಿಸ್ಟ್ ಪಾರ್ಟಿ ಮುಖಂಡರು ಆಗಿದ್ದ ಮಾನ್ಪಡೆ ಕಳೆದ ಎರಡು ವಾರದ ಹಿಂದೆ ಆಸ್ಪತ್ರೆಗೆ ಸೇರಿದ್ದರು. ಚಿಕಿತ್ಸೆ ಫಲಿಸದೆ ಇಂದು ಅವರು ನಿಧನರಾಗಿದ್ದಾರೆ. ಕೊರೋನಾ ಪಾಸಿಟಿವ್ ಹಿನ್ನೆಲೆ ಅಕ್ಟೋಬರ್ 5 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಾಮಾರಿ ಕೊರೋನಾದಿಂದ ನಿಧನರಾಗಿದ್ದು ಪತ್ನಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ ಇಂದು ಬೆಳಗ್ಗೆ 9.30ಕ್ಕೆ ಮಾರು ಅವರು …

Read More »

ಅಣ್ಣನ ಮಗುವಿಗಾಗಿ 10 ಲಕ್ಷ ಮೌಲ್ಯದ ಬೆಳ್ಳಿ ತೊಟ್ಟಿಲನ್ನು ಧ್ರುವ ಖರೀದಿ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮೂಡಲಿದೆ. ಚಿರು ಅಗಲಿಕೆಯ ನಂತರ ದುಃಖದಲ್ಲಿಯೇ ಇದ್ದ ಇಡೀ ಕುಟುಂಬ ಇದೀಗ ವಿಶೇಷ ಅತಿಥಿಯನ್ನು ಬರಮಾಡಿಕೊಳ್ಳಲು ಸಿದ್ಧವಾಗಿದೆ. ಅಂದರೆ, ಇನ್ನು ಕೆಲ ದಿನಗಳಲ್ಲಿ ಮೇಘನಾ ಹೆರಿಗೆ ಆಗಲಿದ್ದು, ಈಗಾಗಲೇ ಆ ದಿನಕ್ಕೆ ಇಡೀ ಕುಟುಂಬ ಎದುರು ನೋಡುತ್ತಿದೆ. ಹೀಗಿರುವಾಗಲೇ ಅಣ್ಣನ ಮಗುವಿಗೆ ಅಂತಾನೇ ವಿಶೇಷ ಉಡುಗೊರೆಯೊಂದನ್ನು ಖರೀದಿಸಿದ್ದಾರೆ ಸಹೋದರ ಧ್ರುವ ಸರ್ಜಾ.ಹೌದು, ಬರೋಬ್ಬರಿ 10 ಲಕ್ಷ ಮೌಲ್ಯದ ಬೆಳ್ಳಿ ತೊಟ್ಟಿಲನ್ನು …

Read More »

ಕೋವಿಡ್‌ 19 ಸೋಂಕಿಗೆ ಮೂವರು ಕೋವಿಡ್‌ ವಾರಿಯರ್ ಮೃತ

ರಾಮನಗರ: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿಗೆ ಮೂವರು ಕೋವಿಡ್‌ ವಾರಿಯರ್ ಮೃತಪಟ್ಟಿದ್ದು, ವಾರಿಯರ್ಸ್ ಗೆ ಸರ್ಕಾರ ಘೋಷಿಸಿರುವ ಪರಿಹಾರದ ಮೊತ್ತ ಮೃತರ ಕುಟುಂಬವನ್ನು ಇನ್ನಷ್ಟೇ ತಲುಪಬೇಕಾಗಿದೆ. ವಾರಿಯರ್ಸ್ ಗೆ 50 ಲಕ್ಷ ರೂ. ವರೆಗೆ ಪರಿಹಾರ: ಇಬ್ಬರು ಸರ್ಕಾರಿ ವೈದ್ಯರು, ಒಬ್ಬ ಪೊಲೀಸ್‌ ಪೇದೆ ಸೇರಿ ಜಿಲ್ಲೆಯಲ್ಲಿ ಮೂವರು ಕೋವಿಡ್‌ ವಾರಿಯರ್ಸ್ ಮೃತ ಪಟ್ಟಿದ್ದಾರೆ. ಕೋವಿಡ್‌ ವಾರಿಯರ್ಸ್ ಗೆ ಸಿಗಬೇಕಾದ ಪರಿಹಾರದ ಮೊತ್ತಕ್ಕೆ ಸಂಬಂಧಿಸಿದ ಇಲಾಖೆಗಳು ಅರ್ಜಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದ್ದು, ಇನ್ನಷ್ಟೇ ಈ …

Read More »

ನೋ ಪಾರ್ಕಿಂಗ್‌ ನಲ್ಲಿ ಬೈಕ್‌ ನಿಲ್ಲಿಸಿದ ವಿಷಯಕ್ಕೆ ಪೊಲೀಸರೊಂದಿಗೆ ಗಲಾಟೆ ಮಹಿಳೆಯೊಬ್ಬರು ಪೊಲೀಸನಿಗೆ ಕಪಾಳ ಮೋಕ್ಷ

ಬಾಗಲಕೋಟೆ: ನೋ ಪಾರ್ಕಿಂಗ್‌ ನಲ್ಲಿ ಬೈಕ್‌ ನಿಲ್ಲಿಸಿದ ವಿಷಯಕ್ಕೆ ಪೊಲೀಸರೊಂದಿಗೆ ಗಲಾಟೆ ನಡೆದ ವೇಳೆ ಮಹಿಳೆಯೊಬ್ಬರು ಪೊಲೀಸನಿಗೆ ಕಪಾಳ ಮೋಕ್ಷ ಮಾಡಿದ ಘಟನೆ ಸೋಮವಾರ ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ನವನಗರದ ಗರ್ಭಿಣಿ ತನ್ನ ಮೈದುನನ ಜತೆಗೆ ಬಸವೇಶ್ವರ ವೃತ್ತದ ಬಳಿ ಇರುವ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಬೈಕ್‌ ನಿಲ್ಲಿಸಿದ್ದರಿಂದ ಸಂಚಾರಿ ಪೊಲೀಸರು ಬೈಕ್‌ನ ಪ್ಲಗ್‌ ಕಿತ್ತುಕೊಂಡಿದ್ದರು. ಬೈಕ್‌ ಪ್ಲಗ್‌ ಕೊಡಲು ಒತ್ತಾಯಿಸಿದ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆದಿದೆ. ಈ …

Read More »

ವಿಶ್ವದ ಎಲ್ಲಾ ರಾಷ್ಟ್ರಗಳಿಗೂ ಕೊರೊನಾ ಲಸಿಕೆ ಲಭ್ಯವಾಗುವಂತೆ ಮಾಡಲು ಈಗಿನಿಂದಲೇಸಿದ್ಧತಾ ಕಾರ್ಯ:W.H.O.

ವಿಶ್ವಸಂಸ್ಥೆ, ಅ.20- ಕಿಲ್ಲರ್ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ಸಹಕಾರ ನೀಡುತ್ತಿರುವ ವಿಶ್ವಸಂಸ್ಥೆಯ ಪ್ರಮುಖ ಅಂಗ ಸಂಸ್ಥೆಗಳಲ್ಲಿ ಒಂದಾದ ಯೂನಿಸೆಫ್ (ಸಂಯುಕ್ತ ರಾಷ್ಟ್ರಗಳ ಮಕ್ಕಳ ನಿಧಿ) ವರ್ಷಾಂತ್ಯದ ವೇಳೆಗೆ ಕೋವಿಡ್-19 ಲಸಿಕೆಗೆ ಪೂರ್ವಭಾವಿಯಾಗಿ 52 ಕೋಟಿ ಸಿರಿಂಜ್‍ಗಳನ್ನು ಸಿದ್ಧವಾಗಿಟ್ಟುಕೊಳ್ಳಲಿದೆ.ಮುಂದಿನ ವರ್ಷದ ಆರಂಭದಲ್ಲಿ ಕೊರೊನಾ ಲಸಿಕೆ ಮತ್ತು ಔಷಧಿಗಳು ಲಭ್ಯವಾಗಲಿದ್ದು, ಇವುಗಳ ಪೂರೈಕೆ ಮತ್ತು ನಿರ್ವಹಣೆಯಲ್ಲಿ ಯಾವುದೇ ರೀತಿಯ ಅಡಚಣೆಯಾಗದಂತೆ ಈ ವರ್ಷದ ಅಂತ್ಯದ ವೇಳೆಗೆ 52 ದಶಲಕ್ಷ ಸಿರಿಂಜ್‍ಗಳನ್ನು ದಾಸ್ತಾನು …

Read More »

ಶಿಕಾರಿಪುರ ತಾಲೂಕಿನ ಉಡುತಡಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ 30 ಕೋಟಿ ರೂ………

ಶಿವಮೊಗ್ಗ: ಅಕ್ಕಮಹಾದೇವಿ ಜನ್ಮಸ್ಥಳವಾದ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಈಗಾಗಲೇ 30 ಕೋಟಿ ರೂ.ಗಳನ್ನು ಮೀಸಲಾಗಿರಿಸಿದ್ದು, ಜಿಲ್ಲೆಯ ಆಕರ್ಷಕ ಪ್ರವಾಸಿ ತಾಣಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಉಡುಗುಣಿ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ ಸಿಎಂ ಶರಣೆ ಅಕ್ಕಮಹಾದೇವಿಯವರ ಹಾಗೂ 12ನೇ ಶತಮಾನದ ಶಿವಶರಣರ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವ ಸದುದ್ದೇಶ ಹೊಂದಲಾಗಿದೆ ಎಂದರು. ಈ ಕ್ಷೇತ್ರವು ಕರ್ನಾಟಕ ಮಾತ್ರವಲ್ಲದೇ …

Read More »