ನವದೆಹಲಿ,ಜು.6- ರಾಹುಲ್ ಗಾಂಧಿ ಅವರು ರಕ್ಷಣಾ ಸ್ಥಾಯಿ ಸಮಿತಿಯ ಒಂದೇ ಒಂದು ಸಭೆಯಲ್ಲೂ ಭಾಗವಹಿಸುವುದಿಲ್ಲ, ಜವಾಬ್ದಾರಿಯುತ ಪ್ರತಿಪಕ್ಷದ ನಾಯಕ ಏನು ಮಾಡಬಾರದೋ ಅದನ್ನೇ ಅವರು ಮಾಡುತ್ತಿದ್ದಾರೆ. ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ರಾಷ್ಟ್ರವನ್ನು ನಿರಾಶೆಗೊಳಿಸಿದ್ದಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ. ಚೀನಾ-ಭಾರತದ ಗಡಿ ವಿವಾದ ಕುರಿತು ರಾಹುಲ್ ಗಾಂಧಿ ಸರ್ಕಾರದ ವಿರುದ್ಧದ ಆಕ್ರಮಣಕಾರಿ ಪ್ರಶ್ನೆ ಮುಂದುವರಿಸುತ್ತಿದ್ದಂತೆ, ಇದನ್ನೇ ಗುರಿಯಾಗಿಸಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ನಾಯಕ ಸಂಸತ್ತಿನ ರಕ್ಷಣಾ ಸ್ಥಾಯಿ ಸಮಿತಿಯ ಒಂದೇ …
Read More »ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಶ್ರಮವಹಿಸಬೇಕು.:ಸತೀಶ ಜಾರಕಿಹೊಳಿ
ಚಿಕ್ಕೋಡಿ : ಕಾಂಗ್ರೆಸ್ ಪಕ್ಷವೂ ಹಿಂದಿನಿಗಿಂತಲ್ಲೂ ವಿಭಿನ್ನವಾಗಿ ಮುನ್ನಡೆಯಲಿದೆ. ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಶ್ರಮವಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತುಂಬಾ ಉತ್ಸಾಹಿ ಇದ್ದಾರೆ. ಪಕ್ಷವನ್ನು ಕಟ್ಟುವ ಛಲ ಅವರಲ್ಲಿದೆ. ಆದ ಕಾರಣ ಅವರೊಂದಿಗೆ ಮುನ್ನಡೆದರೆ ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೆ ಬರುತ್ತದೆ ಎಂದು …
Read More »ಬಾಗಲಕೋಟೆಯಲ್ಲಿ ರಿಜಿಸ್ಟರ ಮ್ಯಾರೇಜಗೆ ಮಾತ್ರ ಅವಕಾಶ, ಮದುವೆ, ಸೀಮಂತ ಕಾರ್ಯಗಳಿಗೆ ಅನುಮತಿ ನಿಷೇಧ
ಬಾಗಲಕೋಟೆ : ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನಡೆಯುವ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮುಂದಿನ ಆದೇಶದ ವರೆಗೆ ನಿಷೇಧಿಸಲಾಗಿದ್ದು, ರಿಜಿಸ್ಟರ ಮದುವೆಗೆ ಮಾತ್ರ ಅವಕಾಶವಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನಡೆಯುತಿರುವ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುತ್ತಿದ್ದು, ಇದರ ಪರಿಣಾಮ ಕಾರ್ಯಕ್ರಮದಲ್ಲಿ ಭಾಗವಹಿಸಿದರಿಗೂ ಕೊರೊನಾ ಸೋಂಕು ಹರಡುತ್ತಿರುವುದನ್ನು ಗಮನಿಸಿದ ಜಿಲ್ಲಾ ಉಸ್ತುವಾರಿ …
Read More »ಅತಿ ಕಡಿಮೆ ‘ಆಕ್ಟಿವ್ ಕೇಸ್’ ಹೊಂದಿರುವ ಕರ್ನಾಟಕದ ಐದು ಜಿಲ್ಲೆಗಳು..
ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23 ಸಾವಿರ ಗಡಿ ದಾಟಿದೆ. ದೇಶದಲ್ಲಿ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪೈಕಿ ಟಾಪ್ ಹತ್ತರೊಳಗೆ ಕರ್ನಾಟಕ ಗುರುತಿಸಿಕೊಂಡಿದೆ. ಒಂದು ಹಂತದಲ್ಲಿ ಇತರೆ ರಾಜ್ಯಗಳಿಗೆ ಮಾದರಿ ಎನಿಸಿಕೊಂಡಿದ್ದ ಕರ್ನಾಟಕ ಈಗ ಗಂಭೀರ ಸ್ಥಿತಿ ತಲುಪಿತ್ತಿದೆ. ಈವರೆಗೂ ರಾಜ್ಯದಲ್ಲಿ 23,474 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಅದರಲ್ಲಿ 9847 ಜನರು ಗುಣಮುಖರಾಗಿದ್ದು, 13,251 ಕೇಸ್‌ಗಳು ಸಕ್ರಿಯವಾಗಿದೆ. ಈ ಪೈಕಿ ಬೆಂಗಳೂರು …
Read More »ಅಂಬುಲೆನ್ಸ್‌ಗೆ ಕರೆ ಮಾಡಿದ್ರೆ ಬಂದಾಗ ಕಳಿಸ್ತೀವಿ ಅಂದ ಸಿಬ್ಬಂದಿ!
ಬೆಂಗಳೂರು: ಕೊರೊನಾ ಮಹಾಮಾರಿಯ ಅಟ್ಟಹಾಸ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲು ಕೆಲವರು ಅಂಬುಲೆನ್ಸ್ ಸಿಗದೆ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಈ ಮಧ್ಯೆ ಅಪಘಾತ ಸಂಭವಿಸಿ ರೋಗಿ ಒದ್ದಾಡುತ್ತಿದ್ದರೂ ಅಂಬುಲೆನ್ಸ್ ಗಳು ಸಿಗುತ್ತಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಸಿಲಿಕಾನ್ ಸಿಟಿಯಲ್ಲೊಂದು ಘಟನೆ ನಡೆದಿದೆ. ಹೌದು. ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬರು ಕುಸಿದು ಬಿದ್ದಿದ್ದಾರೆ. ಈ ವೇಳೆ ಅಂಬುಲೆನ್ಸ್ ಗೆ ಕರೆ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಘಟನೆಯಿಂದಾಗಿ ವ್ಯಕ್ತಿಯ ಕಾಲಿಗೆ …
Read More »ಬೆಂಗಳೂರಿನಲ್ಲಿ ಟ್ರಿಪಲ್ ಲಾಕ್‍ಡೌನ್ ಜಾರಿ ಮಾಡುವ ಬಗ್ಗೆ ಸರ್ಕಾರ ಆಸಕ್ತಿ…………..?.
ಬೆಂಗಳೂರು: ಮೂಲವೇ ಇಲ್ಲದೆ ರಾಜ್ಯದಲ್ಲಿ ಪ್ರತಿನಿತ್ಯ ನೂರಾರು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳುತ್ತಿದ್ದು, ಸಮುದಾಯಕ್ಕೆ ಸೋಂಕು ಹಬ್ಬುವ ಭೀತಿ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕೇರಳ ಮಾದರಿಯ ಟ್ರಿಪಲ್ ಲಾಕ್‍ಡೌನ್ ಪದ್ಧತಿಯನ್ನು ಬೆಂಗಳೂರಿನಲ್ಲಿ ಜಾರಿ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಕೇರಳದ ತಿರುವನಂತಪುರಂನಲ್ಲಿ ಮೂಲವೇ ಇಲ್ಲದ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ಸಮುದಾಯಕ್ಕೆ ಹರಡುವುದನ್ನು ತಡೆಯಲು ಇಂದಿನಿಂದ ಒಂದು ವಾರಗಳ ಕಾಲ ಟ್ರಿಪಲ್ ಲಾಕ್‍ಡೌನ್ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಟ್ರಿಪಲ್ ಲಾಕ್‍ಡೌನ್ ಮೂಲಕ …
Read More »ಬೆಂಗಳೂರಿನಿಂದ ಬರುವವರಿಗೆ5 ಸಾವಿರ ದಂಡ
ಮಂಡ್ಯ: ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಅನೇಕ ಗ್ರಾಮಗಳು, ಜಿಲ್ಲೆ ಸ್ವಯಂ ಲಾಕ್‍ಡೌನ್ ಘೋಷಿಸಿಕೊಂಡಿವೆ. ಇದೀಗ ಜಿಲ್ಲೆಯ ಗ್ರಾಮವೊಂದರಲ್ಲಿ ಬೆಂಗಳೂರಿನಿಂದ ಬರುವವರಿಗೆ ದಂಡ ವಿಧಿಸುವುದಾಗಿ ಡಂಗೂರದ ಮೂಲಕ ಸಾರಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬೆಂಗಳೂರಿಗರ ಭಯ ಶುರುವಾಗಿದೆ. ಹೀಗಾಗಿ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಊರಿನ ಒಳಗೆ ಬೆಂಗಳೂರಿನವರು ಬರುವಾಗಿಲ್ಲ ಎಂದು ಡಂಗೂರದ ಮೂಲಕ ಸಾರಿಸಿದ್ದಾರೆ. ಇದೀಗ ಡಂಗೂರ ಸಾರಿಸಿರುವ ವಿಡಿಯೋ ವೈರಲ್ ಆಗಿದೆ. …
Read More »ಇಂದು ಜಿಲ್ಲೆಯಲ್ಲಿ ಮತ್ತೊಂದು ಜೀವ ತೆಗೆದುಕೊಂಡ ಕೊರೋನಾ
ಬೆಳಗಾವಿ: ಮಾರಣಾಂತಿಕ ವೈರಸ್ ಕೊರೋನಾ ಇಂದು ಜಿಲ್ಲೆಯಲ್ಲಿ ಮತ್ತೊಂದು ಜೀವ ತೆಗೆದುಕೊಂಡಿದ್ದು ಒಟ್ಟು ಮೃತರ ಸಂಖ್ಯೆ 7 ಕ್ಕೇರಿದೆ. ಅಥಣಿ ತಾಲ್ಲೂಕಿನ ಗ್ರಾಮವೊಂದರ 60 ವರ್ಷದ ಸೊಂಕಿತ ಮಹಿಳೆ ಇಂದು ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮೃತರ ಸಂಖ್ಯೆ ತೀವ್ರತೆ ಪಡೆದುಕೊಳ್ಳುತ್ತಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಜಿಲ್ಲೆಯಾದ್ಯಾಂತ ಕೊರೋನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಸಮುದಾಯ ಮಟ್ಟಕ್ಕೂ ಹರಡಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಜನರು ಮಾಸ್ಕ್ ಬಳಸಿ ಅಗತ್ಯವಿದ್ದರೆ ಮಾತ್ರ ಹೊರಗೆ …
Read More »ಕಳೆದ ತಿಂಗಳು 19 ರಂದು ಸುರಪುರದ ದೀವಳಗುಡ್ಡದ ನಿವಾಸಿಯಾದ ಬಸ್ ಕಂಡಕ್ಟರ್ ಗೆ ಕೊರೋನಾ ವಕ್ಕರಿಸಿತ್ತು. ಸೋಂಕಿತ ನಿರ್ವಾಹಕ ಬಸ್ ಘಟಕ ಹಾಗೂ ಬಸ್ ನಿಲ್ದಾಣ ಮೊದಲಾದ ಕಡೆ ಓಡಾಡಿಕೊಂಡಿದ್ದರು. ಅಲ್ಲದೆ, ಸೋಂಕಿತ ವ್ಯಕ್ತಿಯ ಪತ್ನಿಗೂ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿತ್ತು. ಹೀಗಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದ ಸೋಂಕಿತ ಬಸ್ ಕಂಡಕ್ಟರ್ ಹಾಗೂ ಆತನ ಪತ್ನಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ, ಬಸ್ ಕಂಡಕ್ಟರ್ ನಿಂದ ಹರಡಿದ ಸೋಂಕಿನಿಂದ 16 ಜನರಿಗೆ ಇದೀಗ ಕೊರೋನಾ ವಕ್ಕರಿಸಿದೆ. ಬಸ್ ಘಟಕದಲ್ಲಿನ 7 ಜನರಿಗೆ ಹಾಗೂ ಪ್ರಾಥಮಿಕ ಸಂಪರ್ಕ ಹೊಂದಿದ್ದ 9 ಜನರಲ್ಲಿ ಕೊರೋನಾ ಕಾಣಿಸಿಕೊಂಡಿದೆ. ಹೀಗಾಗಿ ಮುಂಜಾಗ್ರತೆ ವಹಿಸಿ ಸುರಪುರ ಬಸ್ ಘಟಕ ಸೀಲ್ ಡೌನ್ ಮಾಡಲಾಗಿದೆ. ಸುರಪುರ ಬಸ್ ಘಟಕದಿಂದ ಯಾವುದೇ ಬಸ್ ಸಂಚಾರವಿರುವದಿಲ್ಲ ಎನ್ನಲಾಗಿದೆ. ಸುರಪುರ ಬಸ್ ಘಟಕದಲ್ಲಿ 335 ಜನ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದು ಎಲ್ಲಾ ಸಿಬ್ಬಂದಿಗಳ ಸ್ಯಾಂಪಲ್ ಸಂಗ್ರಹ ಮಾಡಲಾಗುತ್ತಿದೆ. ಇಲ್ಲಿವರಗೆ 300 ಜನರ ಸ್ಯಾಂಪಲ್ ಸಂಗ್ರಹ ಮಾಡಲಾಗಿದ್ದು ಅದರಲ್ಲಿ 60 ಜನರ ಸ್ಯಾಂಪಲ್ ವರದಿ ನೆಗೆಟಿವ್ ಬಂದಿದೆ. ಇದರಿಂದ ಸಿಬ್ಬಂದಿಗಳು ಸ್ವಲ್ಪ ನಿರಾಳರಾಗಿದ್ದಾರೆ. ಸುರಪುರ ತಾಲೂಕು ಆರೋಗ್ಯಧಿಕಾರಿ ಡಾ.ಆರ್.ವಿ.ನಾಯಕ, “ಕಂಡಕ್ಟರ್ ಮೂಲಕ 16 ಜನರಿಗೆ ಕೊರೊನಾ ಬಂದಿದ್ದು 300 ಜನರ ಸ್ಯಾಂಪಲ್ ಸಂಗ್ರಹ ಮಾಡಲಾಗಿದೆ. ಅದರಲ್ಲಿ 60 ಜನರ ವರದಿ ನೆಗೆಟಿವ್ ಬಂದಿದೆ. ಜನರು ಯಾವುದೇ ಆತಂಕ ಪಡದೆ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡರೆ ಕೊರೊನಾಗೆ ಭಯಪಡುವ ಅಗತ್ಯ ಇಲ್ಲ” ಎಂದು ತಿಳಿಸಿದ್ದಾರೆ.
ಕಳೆದ ತಿಂಗಳು 19 ರಂದು ಸುರಪುರದ ದೀವಳಗುಡ್ಡದ ನಿವಾಸಿಯಾದ ಬಸ್ ಕಂಡಕ್ಟರ್ ಗೆ ಕೊರೋನಾ ವಕ್ಕರಿಸಿತ್ತು. ಸೋಂಕಿತ ನಿರ್ವಾಹಕ ಬಸ್ ಘಟಕ ಹಾಗೂ ಬಸ್ ನಿಲ್ದಾಣ ಮೊದಲಾದ ಕಡೆ ಓಡಾಡಿಕೊಂಡಿದ್ದರು. ಅಲ್ಲದೆ, ಸೋಂಕಿತ ವ್ಯಕ್ತಿಯ ಪತ್ನಿಗೂ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿತ್ತು. ಹೀಗಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದ ಸೋಂಕಿತ ಬಸ್ ಕಂಡಕ್ಟರ್ ಹಾಗೂ ಆತನ ಪತ್ನಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ, ಬಸ್ ಕಂಡಕ್ಟರ್ ನಿಂದ ಹರಡಿದ ಸೋಂಕಿನಿಂದ …
Read More »ಚಿತ್ರದುರ್ಗದಲ್ಲಿ ನ್ಯಾಯಾಲಯದ ಟೈಪಿಸ್ಟ್ಗೆ ಕೊರೋನಾ; 23 ಜನರೊಂದಿಗೆ ಪ್ರಾಥಮಿಕ ಸಂಪರ್ಕ; ಜಿಲ್ಲೆಯ ಜನರಲ್ಲಿ ಆತಂಕ
ಚಿತ್ರದುರ್ಗ(ಜು.06): ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದೆ. ಜಿಲ್ಲೆಯ ಆರೂ ತಾಲ್ಲೂಕುಗಳಲ್ಲಿ ಒಬ್ಬೊಬ್ಬರಿಗೆ ಹರಡಿದ ಕೊರೋನಾ ಸೋಂಕು ಈಗ ಚಿತ್ರದುರ್ಗ ಜಿಲ್ಲಾ ಸೀನಿಯರ್ ಡಿವಿಷನ್ ನ್ಯಾಯಾಲಯಕ್ಕೆ ಕಾಲಿಟ್ಟಿದೆ. ನಿನ್ನೆ ಚಿತ್ರದುರ್ಗದ ಸಿಜೆಎಂ ನ್ಯಾಯಾಲಯದ ಟೈಪಿಸ್ಟ್ ಗೆ ಕೊರೋನಾ ಪಾಸಿಟಿವ್ ಬಂದಿದು ಜಿಲ್ಲೆಯ ಜನರನ್ನ ಬೆಚ್ಚಿ ಬೀಳುವಂತೆ ಮಾಡಿದೆ. ಚಿತ್ರದುರ್ಗ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯೂರು ಮೂಲದ 33 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್ …
Read More »