ಬೆಂಗಳೂರು : ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಕಾರಣ ಈಗ ಸರ್ಕಾರವೇ ಮುಂದೆ ಬಂದು ಮಾರ್ಗೋಪಾಯಗಳನ್ನು ಕಂಡು ಹಿಡಿಯುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ ಈಗ ಕರೋನಾ ಚಿಕಿತ್ಸೆ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕೇಂದ್ರದಲ್ಲಿ ಮಕ್ಕಳು ಹಾಗೂ ಅಗತ್ಯವುಳ್ಳವರಿಗೆ ತುರ್ತು ಚಿಕಿತ್ಸೆ ನೀಡಲು ಇದನ್ನು ಬಳಸಲಾಗುತ್ತಿದೆ ಮತ್ತು ಚಿಕಿತ್ಸೆ ನೀಡುವ ವೈದ್ಯರು ಹಾಗೂ …
Read More »ಕೇರಳದಲ್ಲಿ ಕೊರೋನಾ ಕಂಟ್ರೋಲ್‌ಗೆ ಸ್ಟ್ರಿಕ್ಟ್ ರೂಲ್ಸ್
ಕಾಸರಗೋಡು: ಕೇರಳ ಸರಕಾರ ಕೊರೋನಾ ವಿರುದ್ದ ಹೋರಾಟದಲ್ಲಿ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ತಂದಿದ್ದು, ಇದೀಗ ರಾಜ್ಯದಲ್ಲಿ ಕೊರೊನಾ ಪ್ರಕರಗಳ ಹೆಚ್ಚಾಗುತ್ತಿರುವ ಹಿನ್ನಲೆ ಕೇರಳ ಸರಕಾರ ಸಾರ್ವಜನಿಕ ಮತ್ತು ಕೆಲಸದ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದು, ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ 10,000 ರೂ.ವರೆಗೆ ದಂಡ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಸುಗ್ರೀವಾಜ್ಞೆ ಹೊರಡಿಸಿದೆ. ಕೊರೋನಾ ರೋಗದ ವಿರುದ್ಧ ಹೋರಾಡಲು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಈ ಸುಗ್ರೀವಾಜ್ಞೆಯನ್ನು …
Read More »ವಿಧಾನಸೌಧ ಸ್ಯಾನಿಟೈಸ್, ಅಧಿಕಾರಿ-ನೌಕರರಿಗೆ ತಡವಾಗಿ ಕಚೇರಿಗೆ ಬರಲು ಸೂಚನೆ
ಬೆಂಗಳೂರು, ಜು.6-ವಿಧಾನಸೌಧ ಮೊದಲನೇ ಮಹಡಿಯಲ್ಲಿರುವ ವಿಧಾನಸಭಾ ಕಾವಲುಗಾರರ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಯೊಬ್ಬರಿಗೆ ಕೊರೋನ ಪಾಸಿಟಿವ್ ಬಂದಿದೆ. ಆದುದರಿಂದ ವಿಧಾನಸೌಧದಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ವಿಧಾನ ಸೌಧದಲ್ಲಿರುವ ವಿಧಾನಸಭೆ ಸಚಿವಾಲಯದ ಪ್ರತಿ ಶಾಖೆಯಲ್ಲಿ ಒಬ್ಬರು ಮಾತ್ರ ಬಂದು ಶಾಖೆಯ ಒಳಗೆ ಸ್ಯಾನಿಟೈಸ್ ಮಾಡುವಾಗ ನೋಡಿಕೊಳ್ಳಬೇಕು. 55ವರ್ಷ ದಾಟಿದ ಅಧಿಕಾರಿ ಹಾಗೂ ನೌಕರರುಗಳು ಮಾತ್ರ ನಾಳೆ ಒಂದು ದಿನ ಮಾತ್ರ ವಿಧಾನ ಸಭಾಧ್ಯಕ್ಷರ ಆದೇಶಾನುಸಾರ ರಜೆಯನ್ನು ಘೋಷಿಸಲಾಗಿದೆ. ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ …
Read More »ಜ್ಯೂಸಿನಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿನಟಿ ಮೇಲೆ ಅತ್ಯಾಚಾರ
ಬೆಂಗಳೂರು: ಜ್ಯೂಸಿನಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿ ಕುಡಿಸಿ ಸ್ಯಾಂಡಲ್‍ವುಡ್ ನಟಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಆರೋಪಿಯನ್ನು ಮೋಹಿತ್ ಎಂದು ಗುರುತಿಸಲಾಗಿದೆ. ಈತ ಖಾಸಗಿ ಕಂಪನಿಯಲ್ಲಿ ಸಿಇಒ ಆಗಿ ಕೆಲಸ ಮಾಡುತ್ತಿದ್ದು, ಅತ್ಯಾಚಾರ ಎಸಗಿದ್ದಾನೆ ಎಂದು ನಟಿ ಆರೋಪ ಮಾಡುತ್ತಿದ್ದಾರೆ. ಏನಿದು ಪ್ರಕರಣ? ಮೋಹಿತ್ ಮತ್ತು ನಟಿ ಕಳೆದ ವರ್ಷ ರೆಸ್ಟೋರೆಂಟ್‍ನಲ್ಲಿ ಪರಿಚಯವಾಗಿದ್ದರು. ಆರೋಪಿ ಮೋಹಿತ್ ತನ್ನ ಕಂಪನಿ ಬ್ರಾಂಡ್ ಅಂಬಾಸಿಡರ್ ಮಾಡುವುದಾಗಿ …
Read More »ಕೊರೊನಾ ತಡೆಗೆ ಸೀನಿಯರ್ ಸಿಟಿಜನ್ಸ್ ಲಾಕ್- ರಾಜ್ಯದಲ್ಲಿ ಶೀಘ್ರವೇ ಬರಲಿದೆ ಹೊಸ ಕಾನೂನು!
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಇನ್ನಿಲ್ಲದ ಪ್ರಯತ್ನಕ್ಕೆ ಮುಂದಾಗಿದೆ. ಸೀನಿಯರ್ ಸಿಟಿಜನ್‍ಗಳನ್ನ ಲಾಕ್ ಮಾಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 23 ಸಾವಿರ ಗಡಿ ದಾಟಿದೆ. ಅದರಲ್ಲೂ ಮಹಾನಗರಿ ಬೆಂಗಳೂರಲ್ಲಿ ಪ್ರತಿದಿನ ಸಾವಿರಕ್ಕೂ ಅಧಿಕ ಕೇಸ್‍ಗಳು ಬರ್ತಿವೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ನಾನಾ ಕಸರತ್ತು ಮಾಡ್ತಿದೆ. ರಾಜ್ಯದಲ್ಲಿ ಹಿರಿಯ ನಾಗರೀಕರನ್ನ ಮನೆಯಿಂದ ಹೊರ ಬರದಂತೆ ತಡೆಯಲು ಹೊಸ ಕಾನೂನು ರೂಪಿಸಲು ಸರ್ಕಾರ ಮುಂದಾಗಿದೆ. ಹೌದು. ಕೊರೊನಾ …
Read More »ಗುಡ್ಡ ಕುಸಿತ- ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು: ಮಂಗಳೂರಿನ ಗುರುಪುರದ ಬಳಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದು, ಮಕ್ಕಳ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿಗಳು ಸಂತಾಪ ಸೂಚಿಸಿ ಇಬ್ಬರು ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ದುಃಖಕರ. ರಕ್ಷಣಾ ಕಾರ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, …
Read More »‘ಸ್ಟ್ರೈಕರ್’ ಚಿತ್ರ ಅಮೆಜಾನ್ ಪ್ರೈಮ್‍ನಲ್ಲಿ…..
ಕೊರೊನಾ ಕಾಟದಿಂದ ಚಿತ್ರಮಂದಿರಗಳು ಮುಚ್ಚಿಕೊಂಡಿರೋದರ ಬಗ್ಗೆ ಚಿತ್ರ ಪ್ರೇಮಿಗಳಲ್ಲೊಂದು ಕೊರಗಿದೆ. ಅದನ್ನು ಕೊಂಚ ನೀಗಿಸಿ ಮನೆಯೊಳಗೆ ಬಣ್ಣದ ಜಗತ್ತು ಕಣ್ತೆಯುವಂತೆ ಮಾಡುವಲ್ಲಿ ಅಮೆಜಾನ್ ಪ್ರೈಮ್‍ನ ಪಾತ್ರ ದೊಡ್ಡದು. ಈಗಾಗಲೇ ಕನ್ನಡದ ಒಂದಷ್ಟು ಸಿನಿಮಾಗಳು ಅಮೆಜಾನ್ ಪ್ರೈಮ್ ಮೂಲಕ ಲಾಕ್‍ಡೌನ್ ಕಾಲವನ್ನು ಸಹನೀಯವಾಗಿಸಿವೆ. ಅದರಲ್ಲಿಯೇ ಕೆಲ ಚಿತ್ರಗಳು ದೊಡ್ಡ ಮಟ್ಟದಲ್ಲಿ ಗೆದ್ದು ಬೀಗಿವೆ. ಅಂಥಾದ್ದೇ ಆವೇಗದೊಂದಿಗೆ ಇದೀಗ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರೋ ‘ಸ್ಟ್ರೈಕರ್’ ಚಿತ್ರ ಅಮೆಜಾನ್ ಪ್ರೈಮ್‍ನಲ್ಲಿ ಆಟ ಶುರುವಿಟ್ಟಿದೆ. …
Read More »60 ವರ್ಷ ಮೇಲ್ಪಟ್ಟವರಿಗೆ ಹೋಂ ಐಸೋಲೇಷನ್ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟು ಬೇರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಕಡ್ಡಾಯವಾಗಿ ಹೋಂ ಐಸೋಲೆಷನ್ ಮಾಡಲಾಗುವುದು. ಈ ಸಂಬಂಧ ಕಾನೂನು ಜಾರಿಗೆ ಚಿಂತನೆ ನಡೆದಿದೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ. 60 ವರ್ಷ ಮೇಲ್ಪಟ್ಟವರು ಮನೆಯಿಂದ ಹೊರ ಬರಬಾರದು. ವಾಕಿಂಗ್‍ಗೂ ಬರುವಂತಿಲ್ಲ. ಅವರನ್ನ ಮನೆ ಒಳಗೆ ಇರಿಸುವುದಕ್ಕೆ ಶೀಘ್ರವಾಗಿ ಕಾನೂನು ರೂಪಿಸ್ತೇವೆ. ಜೊತೆಗೆ ಟೆಸ್ಟಿಂಗ್ ಹೆಚ್ಚಿಸ್ತೇವೆ. ಕೋವಿಡ್ ಟೆಸ್ಟ್ ಮಾಡಿಸಿದ 24 ಗಂಟೆಯೊಳಗೆ ರಿಪೋರ್ಟ್ ನೀಡಬೇಕು ಅಂತ …
Read More »ಬಳ್ಳಾರಿ: ಜಿಲ್ಲೆಯಲ್ಲಿ ಒಂದೇ ದಿನ 139 ಮಂದಿಗೆ ಮಹಾಮಾರಿ ಕೊರೊನಾ ಸೋಂಕು..
ಬಳ್ಳಾರಿ: ಜಿಲ್ಲೆಯಲ್ಲಿ ಹೊಸದಾಗಿ 139 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ 139 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಕೇವಲ ಜಿಂದಾಲ್ ಒಂದರಲ್ಲೇ ಈವರೆಗೆ ಅಂದಾಜು 479 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ನೌಕರರಿಗೆ ಕೊರೊನಾ ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದ್ದು, 580 ಮಂದಿ …
Read More »ಅಂಧನಿಗೆ ದಾರಿ ಮಾಡಿಕೊಟ್ಟ ನಾಯಿ…………
ಮುಂಬೈ: ಹಲವು ಬಾರಿ ವಿಕಲಚೇತನರಿಗೆ ಯಾರೂ ಸಹಾಯ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ಅಂಧ ವ್ಯಕ್ತಿಗೆ ನಾಯಿ ಸಹಾಯ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ನೆಟ್ಟಿಗರು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಾಯಿ ಅಂಧನಿಗೆ ಸಹಾಯ ಮಾಡುವ ವಿಡಿಯೋವನ್ನು ಪುಣೆಯ ಪೊಲೀಸ್ ಆಯಕ್ತರು ಟ್ವೀಟ್ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ. ಅಂಧ ವ್ಯಕ್ತಿಯೊಬ್ಬರು ನಡೆದು ಹೋಗುತ್ತಿರುವಾಗ ದಾರಿಯಲ್ಲಿ ಅಡ್ಡಲಾಗಿ ದೊಡ್ಡ ಕೋಲು ಬಿದ್ದಿರುತ್ತದೆ. ಇದನ್ನು …
Read More »