ಬೆಂಗಳೂರು : ನಾವು ಸಚಿವರಾಗಲು 14 ತಿಂಗಳು ಕಾದಿದ್ದೆವು. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಹ ಸ್ವಲ್ಪ ದಿನ ಸಹನೆಯಿಂದ ಕಾಯಬೇಕು. ಹೀಗೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಲಹೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ವರಿಷ್ಠರು ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 14 ತಿಂಗಳ ಕಾಲ ಕಾನೂನು ಹೋರಾಟ ನಡೆಸಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು …
Read More »ತಾಲ್ಲೂಕ ಪಂಚಾಯತಿಯಲ್ಲಿ ಜಿಲ್ಲಾ ಪಂಚಾಯತ ಬೆಳಗಾವಿ ಸಾಮಾನ್ಯ ಸಭೆಯನ್ನು ನಡೆಸಲಾಗಿತ್ತು.
ಗೋಕಾಕ ತಾಲ್ಲೂಕ ಪಂಚಾಯತಿಯಲ್ಲಿ ಇಂದು ಗೋಕಾಕ ಹಾಗು ಮೂಡಲಗಿ ತಾಲ್ಲೂಕ ಅಧಿಕಾರಿಗಳ ಪುರಭಾವಿ ಸಭೆಯನ್ನು ನಡೆಸಲಾಯಿತ್ತು. ಮಾನ್ಯ ಯೋಜನಾ ನಿರ್ದೇಶಕರು (ಡಿ ಆರ್ ಡಿ )ಕೋಶ ಜಿಲ್ಲಾ ಪಂಚಾಯತ ಬೆಳಗಾವಿ ಇವರು ಗೋಕಾಕ ತಾಲ್ಲೂಕಿನ ಪ್ರಗತಿ ಪರಿಶೀಲನೆ ನಡೆಸಿದರು. ಸದರಿ ಸಭೆಗೆ ಗೋಕಾಕ ತಾಲ್ಲೂಕಿನ ಮಾನ್ಯ ಜಿಲ್ಲಾ ಪಂಚಾಯತ ಸದಸ್ಯರುಗಳು ಹಾಜರಾಗಿದ್ದರು. ಆರೋಗ್ಯ ಅಧಿಕಾರಿಗಳು ಕ್ವಾರೆಂಟೈನ ತಾಲ್ಲೂಕಿನಲ್ಲಿ 9 ಕೇಂದ್ರಗಳು ಇದ್ದು ಸರಿಯಾದ ಸೂಕ್ತ ಕ್ರಮಗಳನ್ನು ಕೈಕೊಳ್ಳಲಾಗಿದ್ದು. ಹಾಗು …
Read More »ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ, ಅನುದಾನ ಹಂಚಿಕೆ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಳೆದೆರಡು ದಿನದಿಂದ ಬೆಂಗಳೂರಿನಲ್ಲಿ ಸಾಕಷ್ಟು ಮಳೆ ಆಗುತ್ತಿದೆ. ಪಕ್ಷದ ಶಾಸಕ ಮಂಜುನಾಥ್ ದಾಸರಹಳ್ಳಿ ಅವರ ಕ್ಷೇತ್ರದಲ್ಲಿಯೂ ಸಾಕಷ್ಟು ಹಾನಿ ಆಗಿದೆ. ತಾವು ಮುಖ್ಯಮಂತ್ರಿಯಾಗಿದ್ದಾಗ …
Read More »ರಾಜ್ಯ ಸರ್ಕಾರಕ್ಕೆ ಬಂಪರ್ ಆಫರ್ ಕೊಟ್ಟ ಶಾಸಕ ಜಮೀರ್
ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ತನ್ನ ಹೆಸರನ್ನು ಪ್ರಸ್ತಾಪಿಸಿರುವ ಪ್ರಶಾಂತ್ ಸಂಬರಗಿ ಯಾರೆಂದು ನನಗೆ ಗೊತ್ತೇ ಇಲ್ಲ ಎಂದಿರುವ ಶಾಸಕ ಜಮೀರ್ ಅಹ್ಮದ್, ಡ್ರಗ್ಸ್ ಕೇಸ್ನಲ್ಲಿ ನನ್ನ ಕೈವಾಡ ಇರುವುದು ಸಾಬೀತು ಮಾಡಲಿ. ಒಂದು ವೇಳೆ ಆರೋಪ ಸಾಬೀತಾದ್ರೆ ರಾಜ್ಯದಲ್ಲಿರುವ ನನ್ನ ಎಲ್ಲ ಆಸ್ತಿಯನ್ನೂ ಸರ್ಕಾರಕ್ಕೇ ಬರೆದುಕೊಡುವೆ ಎಂದು ಸವಾಲು ಹಾಕಿದ್ದಾರೆ. ಶೇಖ್ ಫಾಸಿಲ್ ಫಜೀಲ್ ನನಗೆ ಗೊತ್ತು. ಆತ ನಾಲ್ಕು ವರ್ಷಗಳಿಂದ ನನ್ನ ಜತೆ ಇಲ್ಲ. ಯಾರೋ ಒಬ್ಬರು ನನ್ನ ಜತೆ …
Read More »ಪಠಾಣ್ ಕೋಟ್ ದಾಳಿ ರೂವಾರಿ ವಿರುದ್ಧ ಕ್ರಮ ತೆಗೆದುಕೊಳ್ಳಿ: ಪಾಕ್ ಗೆ ಭಾರತ, ಅಮೆರಿಕ
ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿ ಹಾಗೂ ಪಠಾಣ್ ಕೋಟ್ ಉಗ್ರ ದಾಳಿಯ ಹಿಂದಿನ ರೂವಾರಿಗಳ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳಬೇಕೆಂದು ಭಾರತ ಮತ್ತು ಅಮೆರಿಕ ಸ್ಪಷ್ಟ ಸಂದೇಶ ರವಾನಿಸುವ ಮೂಲಕ ತಮ್ಮ ನೆಲದಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಅವಕಾಶ ಇಲ್ಲ ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದೆ. ಭಾರತ, ಅಮೆರಿಕ ಭಯೋತ್ಪಾದಕ ನಿಗ್ರಹ ಕಾರ್ಯಪಡೆ ಜಂಟಿಯಾಗಿ ನೀಡಿರುವ ಪ್ರಕಟಣೆಯಲ್ಲಿ, ತಮ್ಮ ನೆಲದಲ್ಲಿ ಭಯೋತ್ಪಾದಕರಿಗೆ ಯಾವುದೇ ಅವಕಾಶ ಇಲ್ಲ ಎಂಬುದನ್‌ಉ ಸಾಬೀತುಪಡಿಸಲು …
Read More »ಅಂಕಪಟ್ಟಿಯ ಒತ್ತಡವನ್ನು ತೆಗೆದುಹಾಕುವುದೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಗುರಿ:ಪ್ರಧಾನಿ ಮೋದಿ
ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ-2020 ನವ ಭಾರತದ ಹೊಸ ಆಕಾಂಕ್ಷೆಗಳು ಮತ್ತು ಹೊಸ ಆಶಯಗಳನ್ನು ಈಡೇರಿಸಲು ಇರುವ ಮಾರ್ಗವಾಗಿದೆ. ದೇಶಾದ್ಯಂತ ಎಲ್ಲರೂ ಒಟ್ಟಾಗಿ ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಶಿಕ್ಷಣ ನೀತಿಗೆ ಸಂಬಂಧಪಟ್ಟವರ ಸತತ ಪರಿಶ್ರಮ, ಅವಿರತ ಕಠಿಣ ಕೆಲಸದ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗುತ್ತಿದೆ. ಇನ್ನೂ ಇದರ ಕೆಲಸ ಮುಗಿದಿಲ್ಲ. ಇದು ಕೇವಲ ಆರಂಭವಷ್ಟೆ. …
Read More »ಸುವ್ಯೆವಸ್ಥೆ ವಿಭಾಗದ ಡಿಸಿಪಿ ಯನ್ನಾಗಿ ವಿಕ್ರಂ ಆಮಟೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ- ಬೆಳಗಾವಿಯ ಕಾನೂನು ಮತ್ತು ಸುವ್ಯೆವಸ್ಥೆ ವಿಭಾಗದ ಡಿಸಿಪಿ ಯನ್ನಾಗಿ ವಿಕ್ರಂ ಆಮಟೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ವಿಕ್ರಂ ಆಮಟೆ ಅವರನ್ನು ಡಿಸಿಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಬೆಳಗಾವಿಯ ಪೋಲೀಸ್ ಇಲಾಖೆಯಲ್ಲಿ ವರ್ಗಾವಣೆಯ ಪರ್ವ ಆರಂಭವಾಗಿದ್ದು, ಇತ್ತೀಚಿಗಷ್ಟೆ ಡಿಸಿಪಿ,ಸೀಮಾ ಲಾಟ್ಕರ್, ಮತ್ತು ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆ ಆಗಿತ್ತು ವಿಕ್ರಂ ಆಮಟೆ …
Read More »ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ
ಶಿವಮೊಗ್ಗ :ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು ಗ್ರಾ.ಪಂಚಾಯತ್ ನ ಶಿವಪ್ಪ ಎಸಿಬಿ ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಶಿವಪ್ಪ ಅವರು ನರೇಗಾದ 2.10 ಲಕ್ಷ ಹಣ ಬಿಡುಗಡೆಗೆ 8 ಸಾವಿರ ರೂಪಾಯಿ ಲಂಚ ನೀಡುವಂತೆ ಗುತ್ತಿಗೆದಾರ ಮಂಜುನಾಥ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಈ ಕುರಿತು …
Read More »ಸ್ಮಶಾನಕ್ಕೆ ತೆರಳಲು ದಾರಿ ನೀಡಲು ಆಗ್ರಹ
ಹುಬ್ಬಳ್ಳಿ :ಶವ ಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದೇ ತೊಂದರೆ ಅನುಭವಿಸುತ್ತಿರುವ ತಾಲೂಕಿನ ಸೊಟಕನಾಳ ಗ್ರಾಮಸ್ಥರು ಸೂಕ್ತ ದಾರಿ ಕಲ್ಪಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ಸೊಟಕನಾಳ ಗ್ರಾಮದ ಮುಖಂಡ ಚನ್ನಪ್ಪ ಹಾಲವಾರ ಮಾತನಾಡಿ, ಸೊಟಕನಾಳದಲ್ಲಿ 1997ರಲ್ಲಿ ಅಂದಿನ ತಹಸೀಲ್ದಾರ್ರು ರಿಸನಂ 2ರಲ್ಲಿ 20 ಗುಂಟೆ ಜಾಗವನ್ನು ಸ್ಮಶಾನಕ್ಕೆ ನೀಡಿದ್ದರು. ಆದರೆ, ಸ್ಮಶಾನಕ್ಕೆ ತೆರಳಲು ಜಾಗ ಇಲ್ಲದ್ದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತ ಬಂದಿದ್ದಾರೆ. …
Read More »ದೇವಸ್ಥಾನದಲ್ಲಿ ಅರ್ಚಕರ ಹತ್ಯೆ; ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ
ಮಂಡ್ಯ: ಜಿಲ್ಲೆಯಲ್ಲಿ 3 ಕೊಲೆ ಮಾಡಿ, ದೇವಸ್ಥಾನ ದೋಚಿರುವ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಅರ್ಕೇಶ್ವರ ದೇವಸ್ಥಾನ ದೋಚಿದ ಕದೀಮರು, ಇಬ್ಬರು ಕಾವಲುಗಾರರು ಹಾಗೂ ಒಬ್ಬ ಆರ್ಚಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. …
Read More »