ಶ್ರೀನಗರ: ನೆರೆಯ ವೈರಿ ರಾಷ್ಟ್ರ ಪಾಕಿಸ್ತಾನ ಕೊರೊನಾ ಸೋಂಕಿತರನ್ನ ಭಾರತಕ್ಕೆ ರಹಸ್ಯವಾಗಿ ಕಳಿಸ್ತಿದೆಯಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಶನಿವಾರ ಸೈನಿಕರ ಗುಂಡಿಗೆ ಬಲಿಯಾದ ಇಬ್ಬರು ಉಗ್ರರಿಗೆ ಕೊರೊನಾ ಸೋಂಕು ತಗುಲಿರೋದು ಖಚಿತವಾಗಿದೆ. ಇಬ್ಬರು ಉಗ್ರರು ಸಾವನ್ನಪ್ಪಿದ ಬಳಿಕ ಮೃತದೇಹಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಬಂದ ವರದಿಯಲ್ಲಿ ಇಬ್ಬರು ಕೊರೊನಾ ಸೋಂಕಿತರು ಎಂಬ ವಿಚಾರ ಬೆಳಕಿಗೆ ಬಂದಿದೆ. ಕೊರೊನಾ ಸೋಂಕಿತರನ್ನು ಭಾರತದೊಳಗೆ ಕಳಿಸಲು ಪಾಕ್ ಪ್ರಯತ್ನಿಸುತ್ತಿದೆ ಅನ್ನೋ ಅನುಮಾನಗಳು ದಟ್ಟವಾಗುತ್ತಿವೆ. …
Read More »ಸಿ.ಟಿ.ರವಿ ಮತ್ತು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಲಾಕ್ಡೌನ್ ನಮಗಲ್ಲ ಎಂಬಂತೆ ಸ್ಥಳೀಯ ಜನ ಪ್ರತಿನಿಧಿಗಳ ಜೊತೆ ಪ್ರವಾಸಿ ತಾಣಗಳಿಗೆ ಭೇಟಿ
ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಇಡೀ ರಾಜ್ಯವೇ ಲಾಕ್ಡೌನ್ ಆಗಿದೆ. ಆದರೆ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಮತ್ತು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಲಾಕ್ಡೌನ್ ನಮಗಲ್ಲ ಎಂಬಂತೆ ಸ್ಥಳೀಯ ಜನ ಪ್ರತಿನಿಧಿಗಳ ಜೊತೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ. ಸಚಿವ ಸಿ.ಟಿ.ರವಿ, ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ಸ್ಥಳಗಳಾದ ದೇವರಮನೆಗುಡ್ಡ, ಹೇಮಾವತಿ ನದಿ ಮೂಲ, ಬಲ್ಲಾಳರಾಯನ ದುರ್ಗಕ್ಕೆ ಭೇಟಿ …
Read More »ಪೊಲೀಸರನ್ನು ಬೆಂಬಿಡದೆ ಕಾಡುತ್ತಿದೆ ಕೊರೊನಾ………
ಬೆಂಗಳೂರು: ಕೊರೊನಾ ಮಹಾಮಾರಿ ಪೊಲೀಸರನ್ನು ಬೆಂಬಿಡದೆ ಕಾಡುತ್ತಿದ್ದು, ಇಂದು ಒಟ್ಟು 8 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಹೊಡದಾಗಿ ಎರಡು ಪೊಲೀಸ್ ಠಾಣೆಗಳು ಸೀಲ್ಡೌನ್ ಆಗಿವೆ. ಸಿಲಿಕಾನ್ ಸಿಟಿಯ ಮಲ್ಲೇಶ್ವರ ಹಾಗೂ ರಾಜಾಜಿ ನಗರ ಸಂಚಾರ ಪೊಲೀಸ್ ಠಾಣೆಗಳು ಸೀಲ್ ಪಟ್ಟಿಗೆ ಸೇರ್ಪಡೆಯಾಗಿದ್ದು, ನಗರದಲ್ಲಿ ಇಂದು ಒಟ್ಟು 8 ಜನರಿಗೆ ಸೋಂಕು ತಗುಲಿದೆ. ಮಲ್ಲೇಶ್ವರಂ ಠಾಣೆಯ ಇಬ್ಬರು ಸಿಬ್ಬಂದಿಗೆ ಕರೊನಾ ಸೋಂಕು ದೃಢಪಟ್ಟಿದ್ದು, 36 ವರ್ಷದ ಓರ್ವ ಕಾನ್ಸ್ಸ್ಟೇಬಲ್ ಮತ್ತು …
Read More »ಹಾಸನದಲ್ಲಿ ಇಂದು 13 ಮಂದಿಗೆ ಕೊರೊನಾ ಸೋಂಕು, ಒಂದು ಸಾವು…….
ಹಾಸನ: ಕೊರೊನಾ ಸೋಂಕು ಹಾಸನದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದು ಕೂಡ 13 ಜನರಿಗೆ ಕೋವಿಡ್ ವೈರಸ್ ಹರಡಿದ್ದು, ಓರ್ವ ಸಾವನಪ್ಪಿದ್ದಾರೆ. ಅರಸೀಕೆರೆ ನಿವಾಸಿ 77 ವರ್ಷದ ವೃದ್ಧ ಕಳೆದ ರಾತ್ರಿ ಮೃತಪಟ್ಟಿದ್ದಾರೆ. ಸೋಂಕಿತ ನಿಮೋನಿಯಾ, ರಕ್ತದ ಒತ್ತಡ ಸೇರಿದಂತೆ ಇತರೆ ಸಮಸ್ಯೆಯಿಂದ ಬಳಲುತ್ತಿದ್ದು, ಜುಲೈ 3ರಂದು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಟಲು ದ್ರವ ಪರೀಕ್ಷೆ ಮಾಡಿದ್ದು, ಈ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಚಿಕಿತ್ಸೆ ನೀಡಲಾಗುತ್ತಿದ್ದರೂ …
Read More »ಬಿಬಿಎಂಪಿ ಎಡವಟ್ಟು- ಸೋಂಕಿತನನ್ನು ಪೊಲೀಸ್ ಠಾಣೆಗೆ ಕರೆತಂದ ಕುಟುಂಬಸ್ಥರು
ಬೆಂಗಳೂರು: ಕೊರೊನಾ ಸೋಂಕಿತನನ್ನು ಅವರ ಕುಟುಂಬಸ್ಥರೇ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿರುವ ಘಟನೆ ಸಿಲಿಕಾನ್ ಸಿಟಿಯ ಯಶವಂತಪುರದಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆಯೇ ಸೋಂಕಿತನಿಗೆ ಕರೆ ಮಾಡಿದ್ದ ಬಿಬಿಎಂಪಿಯವರು ನಿಮಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಮನೆಯಲ್ಲೇ ಇರಿ ಅಂಬುಲೆನ್ಸ್ ಬಂದು ಕರೆದುಕೊಂಡು ಬರುತ್ತದೆ ಎಂದಿದ್ದಾರೆ. ಆದರೆ ಎರಡು ದಿನ ಕಳೆದರೂ ಅಂಬುಲೆನ್ಸ್ ಬಾರದ ಕಾರಣ, ಇಂದು ಮನೆಯವರೇ ಸೋಂಕಿತನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯಶವಂತಪುರ ಬಳಿ ಇರುವ …
Read More »ಸ್ಯಾಂಡಲ್ವುಡ್ ನಲ್ಲಿ ತಾರೆಯರ ಸಾಲು ಸಾಲು ಬರ್ತ್ ಡೇ…………
ಕೆಲವು ಸಿನಿಮಾ ಪ್ರೇಮಿಗಳು ಸಿನಿಮಾಗಳನ್ನು ಮಾತ್ರವಲ್ಲದೆ ವೈಯಕ್ತಿಕವಾಗಿ ಸಿನಿಮಾ ನಟ-ನಟಿಯರನ್ನೂ ಬಹಳ ಇಷ್ಟಪಡುತ್ತಾರೆ. ತಮ್ಮ ನೆಚ್ಚಿನ ಕಲಾವಿದರ ಮನೆಯಲ್ಲಿ ನಡೆಯುವ ಸಮಾರಂಭಗಳನ್ನು ಅವರವರ ಅಭಿಮಾನಿಗಳೂ ಸಂಭ್ರಮಿಸುತ್ತಾರೆ. ಕಲಾವಿದರ ಜನ್ಮ ದಿನಾಚರಣೆಯನ್ನು ತಾವೂ ಆಚರಿಸುತ್ತಾರೆ. ದೂರದೂರುಗಳಿಂದ ತಮ್ಮ ಅಚ್ಚುಮೆಚ್ಚಿನ ಕಲಾವಿದರ ಮನೆಗೆ ಬಂದು ಶುಭ ಹಾರೈಸುವವರೂ ಇದ್ದಾರೆ. ಚಂದನವನದ ಹಲವು ನಟ-ನಟಿಯರು ಹಾಗೂ ತಂತ್ರಜ್ಞರಿಗೆ ಜುಲೈನಲ್ಲಿ ಜನ್ಮದಿನದ ಸಡಗರ. ಗೋಲ್ಡನ್ ಸ್ಟಾರ್ ಬಿರುದಾಂಕಿತರಾದ ಗಣೇಶ್ ಜನಿಸಿದ್ದು 1976ರ ಜುಲೈ 2ರಂದು ಸುಮಾರು …
Read More »ಸಂಡೆ ಲಾಕ್ಡೌನ್ಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ, ಎಲ್ಲೆಲ್ಲಿ ಏನೇನಾಯ್ತು ಇಲ್ಲಿದೆ ಡೀಟೇಲ್ಸ್
ಬೆಂಗಳೂರು ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಶನಿವಾರ ಸಂಜೆಯಿಂದ ಜಾರಿಯಾದ 36 ಗಂಟೆಗಳ ಸಂಪೂರ್ಣ ಲಾಕ್ ಡೌನ್ ಗೆ ರಾಜ್ಯಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದ್ದು ಜನಜೀವನ ಮಂಕಾಗಿದೆ. ಕರೊನಾ ಹಾಟ್ಸ್ಪಾಟ್ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬಹುತೇಕ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿದ್ದು, ನಿಯಮ ಉಲ್ಲಂಘಿಸುವವರ ಕಣ್ಗಾವಲಿಗೆ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ತರಕಾರಿ, ಮೀನು, ಮಾಂಸ ಮಾರಾಟಕ್ಕೂ ಬ್ರೇಕ್ ಮಂಗಳೂರಿನಲ್ಲಿ ಹಾಲು, ಪೇಪರ್, …
Read More »ಒಂದು ವರ್ಷದ ಮಗಳನ್ನು ಕೊಂದು ತಾಯಿ ನೇಣಿಗೆ ಶರಣು
ಚೆನ್ನೈ: ತಾಯಿಯೊಬ್ಬಳು ಒಂದು ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಪ್ರಿಯಾಂಕಾ (22) ಒಂದು ವರ್ಷದ ಮಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಪ್ರಿಯಾಂಕಾ ಮೂರು ವರ್ಷದ ಹಿಂದೆ ಬಾಲಮುರುಗನ್ ಜೊತೆ ವಿವಾಹವಾಗಿದ್ದಳು. ಈ ದಂಪತಿಗೆ ಒಂದು ವರ್ಷದ ಮಗಳಿದ್ದಳು. ಇತ್ತೀಚೆಗೆ ದಂಪತಿಯ ನಡುವೆ ಚಿಕ್ಕ-ಪುಟ್ಟ ವಿಚಾರಗಳಿಗೂ ಪದೇ ಪದೇ ಜಗಳ ನಡೆಯುತ್ತಿತ್ತು. ದಂಪತಿಯ ವಿವಾಹ ವಾರ್ಷಿಕೋತ್ಸವದೊಂದಿಗೆ ಶುಕ್ರವಾರ ಮಗಳ …
Read More »ಆಶಾ ಕಾರ್ಯ ಕರ್ತೆಯರಿಗೆ ರಕ್ಷಣೆ ಕೊಡದ ಸರ್ಕಾರ. ಸರ್ಕಾರದ ಮೇಲೆ ಕಾರ್ಯ ಕರ್ತೆಯರ ಆಕ್ರೋಶ..
ಮಂಡ್ಯ: ನಾವು ಜನರಿಗೆ ಒಳ್ಳೆಯದು ಹೇಳಿದರೂ ಅವರು ಕೇಳುವುದಕ್ಕೆ ಸಿದ್ಧರಿಲ್ಲ. ಹೀಗಾಗಿ ನಮಗೆ ರಕ್ಷಣೆ ಕೊಡಿ. ನಿಮಗೆ ರಕ್ಷಣೆ ಕೊಡಲು ಆಗಲ್ಲ ಅಂದರೆ ನಮ್ಮನ್ನ ಕೋವಿಡ್ ಕೆಲಸದಲ್ಲಿ ಬಳಸಿಕೊಳ್ಳಬೇಡಿ ಎಂದು ಆಶಾ ಕಾರ್ಯಕರ್ತೆಯರು ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಆಗ್ರಹಿಸಿದ್ದಾರೆ. ಆಶಾ ಕಾರ್ಯಕರ್ತೆಯ ಮೇಲೆ ಮತ್ತೊಂದು ಹಲ್ಲೆ ಪ್ರಕರಣ ನಡೆದಿದ್ದು, ಅಂತರ ಕಾಪಾಡಿಕೊಳ್ಳಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಲಾಗಿದೆ. ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. …
Read More »ಕೋವಿ ಡ ಆಸ್ಪತ್ರೆಗೆ ಹೋಗಲು ಕಿರಿಕ ಮಾಡಿರುವ J.D.S.ಮುಖಂಡ
ಮಂಡ್ಯ: ಕೊರೊನಾ ಸೋಂಕು ದೃಢವಾದರೂ ಜೆಡಿಎಸ್ ಮುಖಂಡರೊಬ್ಬರು ಮಂಡ್ಯದ ಕೋವಿಡ್ ಆಸ್ಪತ್ರೆಗೆ ಹೋಗಲು ಕಿರಿಕ್ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ಆಸ್ಪತ್ರೆಗೆ ಹೋಗಲು ರಂಪಾಟ ಮಾಡಿದ್ದಾರೆ. ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದ್ದರು. ಅಲ್ಲದೇ ಆರೋಗ್ಯ ಸಚಿವ ಶ್ರೀರಾಮುಲು ಅವರ ಜೊತೆ ನಾನು ಮಾತನಾಡಿದ್ದೇನೆ. ಹೀಗಾಗಿ ನಾನು ಮನೆಯಲ್ಲೇ ಇರುತ್ತೀನಿ ಎಂದು ಕಿರಿಕ್ ಮಾಡಿದ್ದಾರೆ. ಅಷ್ಟೇ …
Read More »