Breaking News

ನಾನು ಪ್ರತಿನಿತ್ಯ ಗೋಮೂತ್ರ ಸೇವಿಸುತ್ತೇನೆ: ಅಕ್ಷಯ್ ಕುಮಾರ್

ಮುಂಬೈ: ನಾನು ಪ್ರತಿ ನಿತ್ಯ ಗೋಮೂತ್ರ ಸೇವಿಸುತ್ತೇನೆ ಎಂದು ಬಾಲಿವುಡ್ ನಟ ಕಿಲಾಡಿ ಅಕ್ಷಯ್ ಕುಮಾರ್ ಹೇಳಿದ್ದಾರೆ.ವೈಲ್ಡ್ ಮ್ಯಾನ್ ಎಂದೇ ಖ್ಯಾತರಾಗಿರುವ ಬಿಯರ್ ಗ್ರಿಲ್ಸ್ ಹಾಗೂ ಹುಮಾ ಖುರೇಶಿ ನಡೆಸಿದ ಇನ್‍ಸ್ಟಾಗ್ರಾಮ್ ಲೈವ್‍ನಲ್ಲಿ ಭಾಗವಹಿಸಿದ ವೇಳೆ ಸ್ವತಃ ಅಕ್ಷಯ್ ಕುಮಾರ್ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಆಯುರ್ವೇದ ಕಾರಣಗಳಿಂದಾಗಿ ಕಾಡಿನಲ್ಲಿ ಸ್ಟಂಟ್ ಮಾಡುವುದು ನನಗೆ ಸಮಸ್ಯೆ ಆಗಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಇದೇ ವೇಳೆ ಪ್ರತಿ ನಿತ್ಯ ಗೋಮೂತ್ರವನ್ನು ಸೇವಿಸುತ್ತೇನೆ …

Read More »

ಶ್ರೀ ಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಶಿರಸಿ ಮಾರುಕಟ್ಟೆ ಪೊಲೀಸರು

ಶಿರಸಿ: ಅಕ್ರಮವಾಗಿ ಶ್ರೀ ಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಶಿರಸಿ ಮಾರುಕಟ್ಟೆ ಪೊಲೀಸರು ಈರ್ವರನ್ನು ಬಂಧಿಸಿ ಅವರಿಂದ ಸುಮಾರು ೨೬ ಸಾವಿರ ರೂಪಾಯಿ ಶ್ರೀಗಂಧವನ್ನು ಹಾಗೂ ಸಾಗಿಸಲು ಬಳಸಿದ ಬೈಕ್ ನ್ನು ವಶಪಡಿಸಿಕೊಂಡಿರುವ ಘಟನೆ ನಗರದ ಕರಿಗುಂಡಿ ರಸ್ತೆಯಲ್ಲಿ ನಡೆದಿದೆ.  ಶಿರಸಿ – ಕರಿಗುಂಡಿ ರಸ್ತೆಯ ಲಿಡ್ಕರ್ ಕಾಲೋನಿ ಕ್ರಾಸ್ ಹತ್ತಿರ ಮೊಟಾರ್ ಸೈಕಲ್ ನಂ ಕೆ.ಎ ೧೫ ಆರ್ ೧೪೯೯ ರ ಮೇಲೆ  ಇರ್ಷಾದ್ …

Read More »

ಗಾಂಜಾ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದವರ ಮೇಲೆ   ಎಸಿಪಿ ದಾಳಿ

ಬೆಳಗಾವಿ – ಬೆಳಗಾವಿ -ಬಾಗಲಕೋಟ್ ರಸ್ತೆ, ಸಿಂಧೊಳ್ಳಿ ಕ್ರಾಸ್ ಕುಬೇರ ವೈನ್ಸ್ ಮತ್ತು ಅಯ್ಯಂಗಾರ ಬೇಕರಿ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದವರ ಮೇಲೆ   ಎಸಿಪಿ ಮಾಹಾಂತೇಶ್ವರ ಜಿದ್ದಿ ಮಾರ್ಗದರ್ಶನದಲ್ಲಿ  ದಾಳಿ ಮಾಡಿ ನಾಲ್ವರನ್ನು ಬಂಧಿಸಲಾಗಿದೆ. ಸಿದ್ದಪ್ಪಾ ಬಸವಂತ ಕುರುಬರ (೩೫) (ಸಾ|| ನಡಕಿನ ಓಣಿ ಹಣ್ಣಿಕೇರಿ ತಾ: ಬೈಲಹೊಂಗಲ ಜಿ: ಬೆಳಗಾವಿ),  ಸೋಮನಾಥ ಶಿವಪ್ಪಾ ಮಾದನಶೆಟ್ಟಿ (೩೪) (ಸಾ|| ನಡಕಿನ ಓಣಿ ಹಣ್ಣಿಕೇರಿ …

Read More »

ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ೧೨.೧೨ ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶಕ್ಕೆ…

ಖಾನಾಪುರ: ಪಟ್ಟಣದ ತಹಸೀಲ್ದಾರ್ ಕಚೇರಿಯ ಆಹಾರ ಮತ್ತು ನಾಗರಿಕ ಪೂರೈಕೆ ಶಾಖೆಯ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ೧೨.೧೨ ಲಕ್ಷ ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಐವರನ್ನು ಬಂಧಿಸಿದ ಘಟನೆ ಬುಧವಾರ ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಬುಧವಾರ ತಾಲೂಕಿನ ಗೋಲಿಹಳ್ಳಿ ಗ್ರಾಮದ ಬಳಿ ಬೆಳಗಾವಿ ತಾಳಗುಪ್ಪ ಹೆದ್ದಾರಿಯಲ್ಲಿ ಹುಬ್ಬಳ್ಳಿಯಿಂದ ಅಕ್ಕಿಯ ಮೂಟೆಗಳನ್ನು ಹೊತ್ತುಕೊಂಡು ಮಹಾರಾಷ್ಟ್ರದತ್ತ ಹೊರಟಿದ್ದ ಎರಡು ಸರಕು ಸಾಗಾಣಿಕೆ ಲಾರಿಗಳನ್ನು ಪತ್ತೆ ಹಚ್ಚಿದ ಆಹಾರ ಇಲಾಖೆಯ …

Read More »

ಕಿತ್ತೂರು ಚೆನ್ನಮ್ಮನ ಮೂರ್ತಿಯ ಮುಖಕ್ಕೆ ಜೇನು ಹುಳುಗಳು……………

ಹುಬ್ಬಳ್ಳಿ: ಸೂಕ್ತ ನಿರ್ವಹಣೆ ಹಾಗೂ ಸ್ವಚ್ಛತೆ ಕಾಪಾಡದ ಹಿನ್ನೆಲೆ ಹುಬ್ಬಳಿಯ ಐಕಾನ್, ಸುಪ್ರಸಿದ್ಧ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಪುತ್ಥಳಿಗೆ ಜೇನು ಹುಳುಗಳು ಮುತ್ತಿಕೊಂಡಿವೆ. ಚೆನ್ನಮ್ಮನ ಮುಖ ಕಾಣದಂತೆ ದಟ್ಟವಾಗಿ ಹುಳುಗಳು ಮುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಗರ ವಾಸಿಗಳು ಕಿಡಿಕಾರಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಹುಬ್ಬಳ್ಳಿಯ ಜನನಿಬೀಡ ಪ್ರದೇಶವಾಗಿದ್ದು, ಎಲ್ಲರಿಗೂ ತಿಳಿದ ವಿಚಾರ. ಹುಬ್ಬಳ್ಳಿಯನ್ನು ಇದೇ ವೃತ್ತದಿಂದಲೂ ಹಲವರು ಗುರುತಿಸುತ್ತಾರೆ. ಹುಬ್ಬಳ್ಳಿಯ ಐಕಾನ್ ಎಂದೇ ಈ ವೃತ್ತವನ್ನು ಕರೆಯಲಾಗುತ್ತದೆ. …

Read More »

ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಸಿಗುತ್ತಾ,,,,,,?

ಮುಂಬೈ: ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಸಿಗುತ್ತಾ ಅನ್ನೋದುತಿಳಿಯಲಿದೆ. ಇಂದು ನ್ಯಾಯಾಲಯ ವಾದ-ಪ್ರತಿವಾದ ಆಲಿಸಿದ್ದು, ಶುಕ್ರವಾರ ತೀರ್ಪನ್ನ ನ್ಯಾಯಾಲಯ ಕಾಯ್ದಿರಿಸಿದೆ. ಹಾಗಾಗಿ ಇಂದು ಸಹ ರಿಯಾ ಬೈಖಲಾ ಜೈಲೂಟ ಸವಿಯಬೇಕಿದೆ.ಎನ್‍ಸಿಬಿ ಪರ ವಕೀಲರ ವಾದ: ಜಾಮೀನು ನೀಡದಂತೆ ಎನ್‍ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ಪರ ವಕೀಲರೂ ಕೊನೆಯವರೆಗೂ ವಾದ ಮಂಡಿಸಿದ್ದರು. ಪ್ರಕರಣ ತನಿಖಾ ಹಂತದಲ್ಲಿದ್ದು, ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನದಲ್ಲಿರೋದು ಒಳ್ಳೆಯದು. ಕಳೆದ ನಾಲ್ಕೈದು ದಿನಗಳಿಂದ …

Read More »

ಮೈಸೂರಿನ ಪ್ರತಿಷ್ಠಿತ ಶಾಲಾ, ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತೆ: ಮುತಾಲಿಕ್

ಮೈಸೂರು: ಜಿಲ್ಲೆಯ ಪ್ರತಿಷ್ಠಿತ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ-ಕಾಲೇಜುಗಳ ಆವರಣದಲ್ಲಿ ಡ್ರಗ್ಸ್ ಸಿಗುತ್ತದೆ. ಮೈಸೂರಿನ ಪ್ರತಿಷ್ಠಿತ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತೆ. ಇದು ಪೋಷಕರು, ಪಾಲಕರು, ಶಿಕ್ಷಕರಿಗೆ ಗೊತ್ತಿದೆ. ಆದ್ರೆ ಯಾರೊಬ್ಬರೂ ಮಾತನಾಡುತ್ತಿಲ್ಲ ಎಂದು ಹೇಳಿದರು. ಹೊರ ದೇಶದ ವಿದ್ಯಾರ್ಥಿಗಳು ಲಕ್ಷಾಂತರ ರೂ. ಖರ್ಚು ಮಾಡಿಕೊಂಡು ಕಾಲೇಜು ಸೇರುತ್ತಾರೆ. ಈಗಲೂ ಹಾಸ್ಟೆಲ್‍ಗಳ …

Read More »

ಇಡಿ ಅಧಿಕಾರಿಗಳ ಶಾಕ್ಆನಂದ್ ಅಪ್ಪುಗೋಳಆಸ್ತಿ ವಶಕ್ಕೆ

ನವದೆಹಲಿ: ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ನಿರ್ಮಾಪಕ ಆನಂದ್ ಅಪ್ಪುಗೋಳಗೆ  ನೀಡಿದ್ದಾರೆ. ಬ್ಯಾಂಕ್ ಖಾತೆಯಲ್ಲಿದ್ದ ಹಣ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 31.35 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯಲ್ಲಿ ಆನಂದ್ ಅಪ್ಪುಗೋಳ ಒಡೆತನದಲ್ಲಿರುವ ಹನುಮಾನ್ ನಗರದ ಬಂಗಲೆ, ಬಾಕ್ಸೈಟ್ ರಸ್ತೆಯಲ್ಲಿರುವ ಖಾಲಿ ನಿವೇಶನ, ಬಿ.ಕೆ ಬಾಳೆಕುಂದ್ರಿಯಲ್ಲಿನ ಮನೆ ಹಾಗೂ ನೆಹರು ನಗರದಲ್ಲಿರುವ ಕಚೇರಿ, ಬ್ಯಾಂಕ್ ಖಾತೆಯಲ್ಲಿದ್ದ ಹಣ ಸೇರಿ ಒಟ್ಟು 31.35 …

Read More »

ಉಮೇಶ ಕತ್ತಿ ಅವರು ನಮ್ಮ ಹಳೆಯ ಸ್ನೇಹಿತರು. ಅವರು ಮಂತ್ರಿಯಾಗಲಿ :ಲಕ್ಷ್ಮಣ ಸವದಿ

ಬೆಳಗಾವಿ:  ಸಚಿವ ಸಂಪುಟದಲ್ಲಿ  ಹಿರಿಯ ಶಾಸಕ ಉಮೇಶ ಕತ್ತಿ ಸೇರ್ಪಡೆಯಾದರೆ ಸ್ವಾಗತಿಸುವುದಾಗಿ  ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ  ಮಾದ್ಯಮದವರೊಂದಿಹೆ ಮಾತನಾಡಿದ ಅವರು, ಉಮೇಶ ಕತ್ತಿ ಅವರು ನಮ್ಮ ಹಳೆಯ ಸ್ನೇಹಿತರು. ಅವರು ಮಂತ್ರಿಯಾಗಲಿ  ಎಂಬುವುದು ನಮ್ಮ ಅಪೇಕ್ಷೆ . ಸಚಿವ ಸಂಪುಟ ಯಾವಾಗ ವಿಸ್ತರಣೆ ಆಗುತ್ತದೆ ಎಂಬ ಮಾಹಿತಿ ಇಲ್ಲ.  ಮುಖ್ಯಮಂತ್ರಿಗಳನ್ನು ಕೇಳಿ  ಹೇಳುವುದಾಗಿ ತಿಳಿಸಿದರು. ಡಿಸಿಸಿ ಬ್ಯಾಂಕ್ ವಿಚಾರವಾಗಿ  ಪ್ರತಿಕ್ರಿಯಿಸಿ, ಡಿಸಿಸಿ ಬ್ಯಾಂಕ್ …

Read More »

ಶಾಸಕಿಯಾದ್ರೆ ಒಳ್ಳೆಯದಾಗುತ್ತದೆ ಎಂದುಕೊಂಡಿದ್ದೆ, ಆದರೆ ಈಗಲೇ ಅನೇಕ ಸವಾಲು, ಸಂಘರ್ಷ ಎದುರಿಸುವಂತಾಗಿದೆ.

ಬೆಳಗಾವಿ : ನನಗೆ ಕೆಲವರು ತುಂಬಾ ಕಷ್ಟ ಕೊಡುತ್ತಿದ್ದಾರೆ. ಎಷ್ಟೇ ವಿರೋಧಿಸಿದರು ನಾನು ಜಗ್ಗುವುದಿಲ್ಲ ಎಂದು ಗ್ರಾಮೀಣ ಕ್ಷೇತ್ರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜನರ ಮುಂದೆ ತಮ್ಮ ಅಳಲು ತೋಡಿಕೊಂಡು ಜಿಲ್ಲಾಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ. ಇಲ್ಲಿನ ಸುಳೇಬಾವಿಯಲ್ಲಿ  ಮಾತನಾಡಿದ ಅವರು, ‘ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ವಿರೋಧಿಗಳು ಅಡ್ಡಿಯಾಗುತ್ತಿದ್ದಾರೆ. ಶಾಸಕರಾದ ಬಳಿಕ ಒಂದಲ್ಲಾಂದು  ಕಷ್ಟಗಳ ಕಾಡುತ್ತಿವೆ. ಶಾಸಕಿಯಾದ್ರೆ ಒಳ್ಳೆಯದಾಗುತ್ತದೆ ಎಂದುಕೊಂಡಿದ್ದೆ, ಆದರೆ ಈಗಲೇ ಅನೇಕ …

Read More »