ಮೈಸೂರು: ರಾಜ್ಯದಲ್ಲಿರೋದು ಬಿಜೆಪಿ ಸರ್ಕಾರ ಅಲ್ಲ. ಅದು ನ್ಯಾಷನಲ್ ಸರ್ಕಾರ. ಸಿದ್ದರಾಮಯ್ಯರನ್ನ ಕುಮಾರಸ್ವಾಮಿ ರಕ್ಷಣೆ ಮಾಡ್ತಾರೆ, ಕುಮಾರಸ್ವಾಮಿರವನ್ನ ಸಿದ್ದರಾಮಯ್ಯ ರಕ್ಷಣೆ ಮಾಡ್ತಾರೆ, ಇಬ್ಬರೂ ಸೇರಿ ಯಡಿಯೂರಪ್ಪರನ್ನ ರಕ್ಷಿಸುತ್ತಿದ್ದಾರೆ. ಇದು ಒಬ್ಬೊರಿಗೊಬ್ಬರು ಅಡ್ಜಸ್ಟ್ಮೆಂಟ್ ರಾಜಕಾರಣ. ಇದರಲ್ಲಿ ಯಡಿಯೂರಪ್ಪ ನ್ಯಾಷನಲ್ ಗೌರ್ನ್ಮೆಂಟ್ ಚೀಫ್ ಮಿನಿಸ್ಟರ್. ಅವರು ಬುದ್ದಿ ಚಾತುರ್ಯದಿಂದ ಎಲ್ಲರನ್ನು ಅಡ್ಜಸ್ಟ್ ಮಾಡಿಕೊಂಡಿದ್ದಾರೆ. ಅವರವರ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈ ರೀತಿ ಅಡ್ಜಸ್ಟ್ಮೆಂಟ್ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಎಂಎಲ್‌ಸಿ, ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ತಮ್ಮ …
Read More »ಇವರು ಸದನದಲ್ಲಿ ಮಾತಾಡೋಕೆ ನಿಂತರೆ ಸಿಎಂ ಯಡಿಯೂರಪ್ಪ ಕೂಡ ಸುಮ್ಮನಾಗ್ತಾರೆ -ಶಾಸಕರನ್ನು ಕೊಂಡಾಡಿದ ಶ್ರೀರಾಮುಲು
ಹಾಸನ: ರಾಜಕೀಯದಲ್ಲಿ ಆ ಜಾತಿ ಈ ಜಾತಿ ಎಂದು ಹೇಳುತ್ತೇವೆ. ಆದ್ರೆ ಮಕ್ಕಳಲ್ಲಿ ಸರ್ವಧರ್ಮತ್ವವನ್ನ ಶಿಕ್ಷಕರು ಬೆಳೆಸುತ್ತಾರೆ ಎಂದು ರಾಮನಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆ ಉದ್ಘಾಟನೆ ವೇಳೆ ಸಚಿವ ಶ್ರೀರಾಮುಲು ಮಾತನಾಡಿದರು. ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಮನಹಳ್ಳಿಯಲ್ಲಿ ಸಚಿವ ಶ್ರೀರಾಮುಲು ವಸತಿ ಶಾಲೆ ಉದ್ಘಾಟನೆ ಮಾಡಿದರು. ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಸದನದಲ್ಲಿ ಮಾತನಾಡುತ್ತ ನಿಂತರೆ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಸುಮ್ಮನಾಗ್ತಾರೆ ಎಂದು ಶ್ರೀರಾಮುಲು ಹೇಳಿದರು. ರೈತರ ವಿಚಾರ, ನೀರಾವರಿ …
Read More »ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ
ಕೊಪ್ಪಳ: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರಿನ ಚಾಲಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿದ್ದಾರೆ. ಚಾಲಕ ಅವಾಚ್ಯ ಶಬ್ದ ಉಪಯೋಗಿಸಿದ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ಮಹಿಳೆ ಸುಜಾತಾ ಗೋರ್ಲೆಕೊಪ್ಪ ಕೊಪ್ಪಳದ ಕುಕನೂರು ಪಟ್ಟಣ ನಿವಾಸಿ. ಕಾರು ಚಾಲಕ ವಿಜಯ್ ನನ್ನನ್ನು ನಿಂದಿಸಿದ್ದಾನೆಂದು ಆರೋಪಿಸಿ, ಕೊಪ್ಪಳ ಜಿಲ್ಲಾಡಳಿತದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲೇ ಚಪ್ಪಲಿಯಿಂದ ಹೊಡೆದಿದ್ದಾರೆ. ಈ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Read More »ಪಕ್ಷಕ್ಕೆ ಮುಜುಗರ; ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಕಮಾಂಡ್ಗೆ ಲಿಖಿತ ದೂರು ನೀಡಲು ಬಿಜೆಪಿ ಶಾಸಕರ ನಿರ್ಧಾರ
ಬೆಂಗಳೂರು: ಮುಖ್ಯಮಂತ್ರಿ ಅಧಿಕೃತ ನಿವಾಸದಲ್ಲಿ ಬಿ.ಎಸ್. ಯಡಿಯೂರಪ್ಪ ಜೊತೆ 40 ಶಾಸಕರು ಇಂದು (ಮಾರ್ಚ್ 22) ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ 6-7 ಸಚಿವರ ಕಾರ್ಯವೈಖರಿ ಬಗ್ಗೆ ದೂರು ನೀಡಿದ್ದಾರೆ. ಸಚಿವರು, ಅಧಿಕಾರಿಗಳನ್ನೊಳಗೊಂಡಂತೆ ಶಾಸಕರ ಜತೆ ಮಾತುಕತೆಯಲ್ಲಿ ಮಾರ್ಚ್ 25ರಂದು ಮತ್ತೊಮ್ಮೆ ಸಭೆ ನಡೆಸುವುದಾಗಿ ಭರವಸೆ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಜೊತೆ ನಡೆದ ಸಭೆಯಲ್ಲಿ ಮುಖ್ಯವಾಗಿ, ಪಕ್ಷಕ್ಕೆ ಮುಜುಗರ ತರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ …
Read More »ಬೆಳಗಾವಿ ಜಿಲ್ಲಾ ಉಸ್ತುವಾರಿಗೆ ಲಕ್ಷ್ಮಣ್ ಸವದಿ- ಉಮೇಶ್ ಕತ್ತಿ ಪೈಪೋಟಿ
ಬೆಳಗಾವಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟಕ್ಕಾಗಿ ಜಟಾಪಟಿ ಶುರುವಾಗಿದೆ. ಬೆಳಗಾವಿಯ ಇಬ್ಬರು ಸಚಿವರಿಂದ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ದೊಡ್ಡ ಮಟ್ಟದಲ್ಲಿ ಲಾಬಿ ನಡೆದಿದ್ದು, ಬೆಳಗಾವಿ ಜಿಲ್ಲೆಯನ್ನು ತಮ್ಮ ಕಂಟ್ರೋಲ್ಗೆ ತೆಗೆದುಕೊಳ್ಳಲು ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಉಮೇಶ್ ಕತ್ತಿಯಿಂದ ದೆಹಲಿ ಮಟ್ಟದಲ್ಲೂ ಲಾಬಿ ನಡೆದಿದೆ. ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ …
Read More »15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್ 1ರ ಬಳಿಕ ಸಾಧ್ಯವಾಗುವುದಿಲ್ಲ…?
ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿರುವ ಪ್ರಸ್ತಾವನೆಯು ಅಂತಿಮಗೊಂಡರೆ, 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್ 1ರ ಬಳಿಕ ಸಾಧ್ಯವಾಗುವುದಿಲ್ಲ. ಸರ್ಕಾರದ ಎಲ್ಲಾ ವಾಹನಗಳಿಗೆ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರೋದ್ಯಮಗಳು, ಮಹಾನಗರ ಪಾಲಿಕೆ ಮತ್ತು ಸ್ವಾಯತ್ತ ಸಂಸ್ಥೆಗಳ ಎಲ್ಲಾ ವಾಹನಗಳಿಗೂ ಇದು ಅನ್ವಯವಾಗಲಿದೆ. ಈ ಕುರಿತು ಸಚಿವಾಲಯವು ಶನಿವಾರ ಟ್ವೀಟ್ ಮಾಡಿದೆ. ಕರಡು ನಿಯಮಗಳ ಕುರಿತು ಪ್ರತಿಕ್ರಿಯೆ, ಸಲಹೆ, …
Read More »ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಕಣ್ಣಿನ ಮೇಲೆ ಪರಿಣಾಮ ಬೀರುತ್ತಿರುವ ವಿಷಯ ಗಮನಕ್ಕೆ ಬಂದಿದೆ: ಸುರೇಶ್ ಕುಮಾರ್
ಬೆಂಗಳೂರು: ‘ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಕಣ್ಣಿನ ಮೇಲೆ ಪರಿಣಾಮ ಬೀರುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಈ ಬಗ್ಗೆ ಆರೋಗ್ಯ ಸಚಿವರ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ಸಿನ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಖಾಸಗಿ ಶಾಲೆಗಳು ಎಲ್‌ಕೆಜಿ, ಯುಕೆಜಿ ಮಕ್ಕಳಿಗೂ ಆನ್‌ಲೈನ್ ಶಿಕ್ಷಣ ಆರಂಭಿಸಿವೆ. ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಬಗ್ಗೆ …
Read More »ರಾಜ್ಯದ ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿ : ಶೀಘ್ರದಲ್ಲೇ ಪಿಂಚಣಿ ಸೌಲಭ್ಯ
ಬೆಂಗಳೂರು : ರಾಜ್ಯ ಸರ್ಕಾರವು ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯದಲ್ಲಿರುವ ವಿಶೇಷ ಮಕ್ಕಳ ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ …
Read More »ಬೆಳಗಾವಿ ಲೋಕಸಭಾ ಉಪ ಚುನಾವಣೆ ಕ್ಷೇತ್ರದಲ್ಲಿ ಒಟ್ಟು 18.07 ಲಕ್ಷ ಮತದಾರರು:
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 30 ಕಡೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದರು. ಲೋಕಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ (ಮಾ.22) ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ನಾಮಪತ್ರಗಳ ಪರಿಶೀಲನೆ ಮಾರ್ಚ್ 31 ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಏಪ್ರಿಲ್ 3 ಕಡೆಯ ದಿನವಾಗಿದೆ. ಏಪ್ರಿಲ್ 17, 2021 ರಂದು ಮತದಾನ ನಡೆಯಲಿದ್ದು, …
Read More »ಕೂಡ್ಲಿಗಿ:ಪಪಂ ಚುನಾವಣೆ ಮತಯಾಚಿಸಿದ,ಶಾಸಕ ಎನ್.ವೈ.ಗೋಪಾಲಕೃಷ್ಣ
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಶಾಸಕ ಎನ್.ವೈ.ಗೋಪಾಲಕೃಷ್ಣ ರವರು,ಪಪಂನ 1ಮತ್ತು 12ನೇ ವಾರ್ಡ್ ಗಳ ಚುನಾವಣಾ ಪ್ರಯುಕ್ತ.ಅಭ್ಯರ್ಥಿಗಳಾದ ಪ್ರಕಾಶ ನಾಯ್ಕ ಹಾಗೂ ಶ್ರೀಮತಿ ಮಲ್ಲಮ್ಮ ಪರ ಮತಯಾಚನೆ ಮಾಡಿ ಮಾತನಾಡಿದರು,12ನೇವಾರ್ಡ್ ನಲ್ಲಿ ಶ್ರೀಸೊಲ್ಲಮ್ಮ ದೇವಿ ದೇವಸ್ಥಾನದ ಆವರಣದಲ್ಲಿ,ಮತದಾರರನ್ನು ಉದ್ದೇಶಿಸಿ ಮಾತನಾಡಿ ಮತಯಾಚನೆ ಮಾಡಿದರು. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇವೆ.ಪಟ್ಟಣದ ಹಿತಕ್ಕಾಗಿ ಹಾಗೂ ನಾಗರೀಕರ ಸಮಸ್ಥ ಶ್ರೇಯೋಭಿವೃದ್ಧಿಗಾಗಿ, ಬಿ.ಜೆ.ಪಿ ಶ್ರಮಿಸುತ್ತಿದೆ ಕಾರಣ ಬಿಜೆಪಿ ಅಭ್ಯರ್ಥಿಗಳನ್ನ ಆರಿಸಿ ಎಂದರು.ಬಿಜೆಪಿ ಜಿಲ್ಲಾ …
Read More »
Laxmi News 24×7