ಬೆಂಗಳೂರು: ಪ್ರಸಕ್ತ ವರ್ಷದ ಮೂರನೇ ಚಂದ್ರಗ್ರಹಣ ಅಂದ್ರೆ ಗುರು ಪೂರ್ಣಿಮೆ ದಿನವೇ ಸಂಭವಿಸಲಿದೆ. ಅರೆನೆರಳಿನ ಚಂದ್ರಗ್ರಹಣ ಬೆಳಗ್ಗೆ 8.37ಕ್ಕೆ ಆರಂಭವಾಗಿ, ಬೆಳಗ್ಗೆ 9.59ಕ್ಕೆ ಪೂರ್ಣ ಗೋಚರ ಕಂಡು, ಬೆಳಗ್ಗೆ 11.37ಕ್ಕೆ ಗ್ರಹಣ ಮೋಕ್ಷ ಕಾಣಲಿದೆ. ಒಟ್ಟು 2 ಗಂಟೆ 45 ನಿಮಿಷಗಳ ಕಾಲ ಚಂದ್ರನಿಗೆ ಗ್ರಹಣ ಹಿಡಿಯಲಿದೆ. ಆದರೆ ಭಾರತದಲ್ಲಿ ಈ ಚಂದ್ರಗ್ರಹಣ ಗೋಚರಿಸುವುದಿಲ್ಲ. ಇದು ಆಫ್ರಿಕಾ, ಉತ್ತರ ಅಮೆರಿಕಾ, ಫೆಸಿಫಿಕ್, ಅಟ್ಲಾಂಟಿಕ್, ಅಂಟಾರ್ಟಿಕಾದಲ್ಲಿ ಹೆಚ್ಚು ಗೋಚರವಾಗಲಿದೆ. ಜೋತಿಷ್ಯ ಶಾಸ್ತ್ರದ …
Read More »ಮಾನವೀಯತೆ ಮೆರೆದ ಶಾಸಕ ಯು.ಟಿ ಖಾದರ್
ಮಂಗಳೂರು: ಅಂಬುಲೆನ್ಸ್ ನಲ್ಲಿ ಅರ್ಧ ಗಂಟೆ ಕಾದು ಕೂತಿದ್ದ ಕೊರೊನಾ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಶಾಸಕ ಯು.ಟಿ ಖಾದರ್ ಮಾನವೀಯತೆ ಮೆರೆದಿದ್ದಾರೆ. ಮಂಗಳೂರು ಹೊರವಲಯದ ದೇರಳಕಟ್ಟೆ ಎಂಬಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆ ತಂದು ನಂತರ ಜಿಲ್ಲಾಡಳಿತ ಅನುಮತಿ ಇರದ ಕಾರಣ ಪ್ರವೇಶ ನಿರಾಕರಣೆ ಮಾಡಲಾಗಿತ್ತು. ಹೀಗಾಗಿ ಕೋವಿಡ್-19 ಸೋಂಕಿತ ಕರೆತಂದ ಆಂಬ್ಯುಲೆನ್ಸ್‍ನಲ್ಲೇ ಅರ್ಧ ಗಂಟೆಯಿಂದ ಬಾಕಿಯಾಗಿದ್ದ. ಈ ವೇಳೆ ಇದೇ ಮಾರ್ಗವಾಗಿ ಬರುತ್ತಿದ್ದ ಮಾಜಿ …
Read More »ಭಾನುವಾರ ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ
ನವದೆಹಲಿ: ಭಾನುವಾರ ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ ನೀಡಲಿದ್ದಾರೆ. ಭಾರತದಲ್ಲಿ ಸುಮಾರು 50 ಕೋಟಿಗಿಂತ ಹೆಚ್ಚಿನ ಜನರು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ. ಆದ್ರೆ ಬಳಕೆ ಮಾಡುವ ಬಹುತೇಕ ಆ್ಯಪ್ ಗಳು ವಿದೇಶಿಯ ಮೂಲದ್ದು ಆಗಿರುತ್ತವೆ. ವಿದೇಶಿ ಆ್ಯಪ್ ಬಳಕೆಯಿಂದಾಗಿ ಬಳಕೆದಾರರ ಮಾಹಿತಿಯನ್ನು ಕದಿಯಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ನಾಳೆ ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿ ದೇಶಿಯ ಆ್ಯಪ್‍ಗೆ …
Read More »ಬೆಳಗಾವಿ :ಕೋವಿಡ್ ಔಷಧ ಪ್ರಯೋಗಕ್ಕೆ ಜೀವನರೇಖಾ ಆಸ್ಪತ್ರೆ ಆಯ್ಕೆ
ಬೆಳಗಾವಿ: ಕೋವಿಡ್ ಮಹಾಮಾರಿ ದೇಶದ ಎಲ್ಲ ಕಡೆ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದಿರುವ ಕೋವ್ಯಾಕ್ಸಿನ್ ಔಷಧಿ ಈಗ ಪ್ರಯೋಗಕ್ಕೆ ಸಿದ್ಧವಾಗಿದ್ದು, ಎಲ್ಲ ಅಂದುಕೊಂಡಂತೆ ಯಶಸ್ವಿಯಾದರೆ ಮುಂದಿನ ತಿಂಗಳು ಸಾರ್ವಜನಿಕರಿಗೆ ಲಭ್ಯವಾಗುವ ನಿರೀಕ್ಷೆ ಇದೆ. ಇದರ ಮಧ್ಯೆ ದೇಶದ 13 ಕಡೆಗಳಲ್ಲಿ ಜನರ ಮೇಲೆ ಇದರ ಪ್ರಯೋಗ ನಡೆಯಲಿದ್ದು, ಈ 13 ನಗರಗಳಲ್ಲಿ ಬೆಳಗಾವಿ ಸಹ ಆಯ್ಕೆಯಾಗಿರುವುದು ಹೊಸ ಬೆಳವಣಿಗೆಯಾಗಿದೆ. ಬೆಳಗಾವಿಯಲ್ಲಿ ಮುಂದಿನ ವಾರದಿಂದ …
Read More »ರಾಜ್ಯದಲ್ಲಿ ಇಂದು 1839 ಜನರಿಗೆ ಕೊರೋನಾ
ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು 1839 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 21549ಕ್ಕೆ ಏರಿಕೆಯಾಗಿದೆ. ಇವರಲ್ಲಿ 9244 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 11966 ಆಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …
Read More »ಬೆಳಗಾವಿ ಜಿಲ್ಲಾಡಳಿತಕ್ಕೆ ತಲೆನೋವಾಯ್ತು ಸೋಂಕಿತ ಮಹಿಳೆಯ ಟ್ರಾವೆಲ್ ಹಿಸ್ಟರಿ
ಬೆಳಗಾವಿ:ರಾಜ್ಯಾದ್ಯಂತ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಮಹಾಮಾರಿ ವೈರಸ್ ಯಾರಿಗೆ, ಹೇಗೆ, ಯಾವಾಗ ತಲುಪುತ್ತದೆ ಎನ್ನುವುದೇ ತಿಳಿಯುವುದಿಲ್ಲ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಬಳಿಕ ವ್ಯಾಪಕವಾಗಿ ಸೋಂಕು ಹೆಚ್ಚಳವಾಗುತ್ತಿದ್ದು, ಇದರ ತಡೆಗೆ ಸರ್ಕಾರ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ. ಏತನ್ಮಧ್ಯೆ ಬೆಳಗಾವಿಯಲ್ಲಿ ಬಳೆ ಮಾರುವ ಹೆಂಗಸಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಹೌದು, ಜಿಲ್ಲೆಯಲ್ಲಿ ಪ್ರತಿ ದಿನ …
Read More »ಚೀನಾ ಜೊತೆಗಿನ 900 ಕೋಟಿ ಒಪ್ಪಂದ ರದ್ದುಗೊಳಿಸಿದ ‘ಹೀರೋ’ಸೈಕಲ್
ನವದೆಹಲಿ: ಗಾಲ್ವಾನ ಕಣಿವೆ ಪ್ರದೇಶದಲ್ಲಿ ನಡೆದ ಭಾರತ ಮತ್ತು ಚೀನಾದ ನಡುವೆ ಸಂಘರ್ಷದ ಬಳಿಕ ದೇಶದಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಕೇಂದ್ರ ಸರ್ಕಾರ 59 ಚೀನಾ ಆ್ಯಪ್‍ಗಳನ್ನು ನಿಷೇಧಿಸಿದ ಬೆನ್ನಲ್ಲೆ ಉದ್ಯಮಿದಾರರು ಸಹ ವೈರಿ ರಾಷ್ಟ್ರದ ಜೊತೆಗಿನ ವ್ಯವಹಾರಿಕ ಸಂಬಂಧವನ್ನು ಕಡಿತಗೊಳಿಸಿಕೊಳ್ಳುತ್ತಿದ್ದಾರೆ. ಇದೀಗ ಹೀರೋ ಸೈಕಲ್ ಕಂಪನಿ ಚೀನಾ ಜೊತೆಗಿನ 900 ಕೋಟಿ ವ್ಯವಹಾರವನ್ನ ರದ್ದುಗೊಳಿಸಿದೆ. ಸೈಕಲ್ ತಯಾರಿಕೆಗಾಗಿ ಹೀರೋ ಕಂಪನಿ ಬಿಡಿ ಭಾಗಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿತ್ತು. ಈಗ …
Read More »ಕೊರೋನಾ ವಾರಿಯರ್ ತುಂಬು ಗರ್ಭಿಣಿ ಪತ್ನಿ ಬಿಚ್ಚಿಟ್ಟ ಕರಾಳ ಸತ್ಯ!
ಒಂಬತ್ತು ತಿಂಗಳ ಹೆಂಡತಿ ಹಾಗೂ ಆಕೆಯ ಗರ್ಭದಲ್ಲಿರುವ ದಿನ ತುಂಬಿದ ಮಗುವಿನ ಮೇಲೆ ಪ್ರಾಣವನ್ನೇ ಇಟ್ಟುಕೊಂಡ ಡಾಕ್ಟರ್ ಕೋವಿಡ್ ರೋಗಿಗಳನ್ನು ನೋಡುವ ಡ್ಯೂಟಿಯಲ್ಲಿರುವುದರಿಂದ 15 ದಿನಗಳಿಂದ ಮನೆಯತ್ತ ಮುಖ ಮಾಡಿಲ್ಲ. ಲಾಕ್‌ಡೌನ್ ಕಾರಣಕ್ಕೆ ಅತ್ತೆಮಾವರಾಗಲೀ, ಅಪ್ಪಅಮ್ಮರಾಗಲೀ ಗರ್ಭಿಣಿ ಮಿಸಸ್ ಕುಲಕರ್ಣಿಯ ಜೊತೆಗಿರಲು ಬರಲು ಸಾಧ್ಯವಾಗಿಲ್ಲ. ಮನೆಯಲ್ಲೊಬ್ಬಳೇ ಇರುವ ಮಿಸಸ್ ಕುಲಕರ್ಣಿ ತನ್ನ ಹೊಟ್ಟೆಯಲ್ಲಿರುವ ಕಂದನೊಡನೆ ಮಾತಾಡುತ್ತಾ ಪತಿ ಹಾಗೂ ಮಗುವಿನ ಕುರಿತ ತನ್ನ ನೆನಪು ಹಾಗೂ ಕನಸುಗಳನ್ನು ಬಿಚ್ಚಿಡುತ್ತಾ ಹೋಗುತ್ತಾಳೆ. …
Read More »ಲಾಕ್ ಡೌನ್ : ಎಣ್ಣೆಗಾಗಿ ಮಗುಬಿದ್ದ ಮದ್ಯಪ್ರಿಯರು..
ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದರೇ, ಜನರು ಮಾತ್ರ ಯಾವುದೇ ಭಯವಿಲ್ಲದೇ ಓಡಾಡುತ್ತಿದ್ದಾರೆ. ಭಾನುವಾರದ ದಿನವಾದ ನಾಳೆ ಸಂಪೂರ್ಣ ಲಾಕ್ ಡೌನ್ ಇರುವ ಕಾರಣದಿಂದಾಗಿ, ಮದ್ಯಪ್ರಿಯರು ಮಾತ್ರ ನಾಳೆ ಎಲ್ಲಿ ಎಣ್ಣೆ ಸಿಗೋದಿಲ್ಲವೋ ಎನ್ನುವಂತೆ ಬಾರ್, ವೈನ್ ಶಾಪ್ ಗಳ ಮುಂದೆ ಕ್ಯೂ ನಿಂತು ಮದ್ಯ ಖರೀದಿಸಲು ಮುಗಿ ಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದೆಡೆ ಆದ್ರೇ.. ಸೋಂಕಿನ ಭೀತಿಯಿಂದ ತಮ್ಮ ಊರುಗಳತ್ತ ಗುಳೇ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು…
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು ಪಕ್ಷದ ಪದಾಧಿಕಾರಿಗಳು, ಬೆಂಬಲಿಗರು ಅದ್ದೂರಿಯಾಗಿ ಬರ ಮಾಡಿಕೊಂಡು, ಸತ್ಕರಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಿಂದ ನೇವರಾಗಿ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಮಾಜಿ ಶಾಸಕ ರಾಜುಗೌಡ ಕಾಗೆ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ, ರಾಜು ಸೇಠ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ …
Read More »