Breaking News

ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ.

ಬೆಂಗಳೂರು: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ. ಇಂದು ನಾಮಕರಣದ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪನವರು ಉದ್ಘಾಟನೆ ಮಾಡಿದ್ದಾರೆ. ಯಲಹಂಕದ ಡೈರಿ ಸರ್ಕಲ್ ಬಳಿ ಇರುವ ಮೇಲ್ಸೇತುವೆಗೆ ವೀರ ಸಾವರ್ಕರ್ ಅವರ ಹೆಸರನ್ನು ಇಡಲಾಗಿದೆ. 388.35 ಮೀಟರ್ ಉದ್ದದ ಈ ಮೇಲ್ಸೇತುವೆಯನ್ನು ಬಿಬಿಎಂಪಿಯಿಂದ 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.   ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಕಾಂಗ್ರೆಸ್, ಜೆಡಿಎಸ್ ವಿರೋಧಿಸಿತ್ತು. ಹೀಗಾಗಿ …

Read More »

ಬರೋಬ್ಬರಿ 24 ಮಂದಿಯ ಹೆಸರನ್ನು ರಿಲೀವ್ ಮಾಡಿದ್ದಾರೆ:ಸಂಜನಾ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ಮಾಡುತ್ತಿದ್ದು, ಈ ವೇಳೆ ಸಂಜನಾ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ಸಂಜನಾರನ್ನು ಅಧಿಕಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ. ವಿಚಾರಣೆ ವೇಳೆ ಸಂಜನಾ ಬರೋಬ್ಬರಿ 24 ಮಂದಿಯ ಹೆಸರನ್ನು ರಿಲೀವ್ ಮಾಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಮೊದಲಿಗೆ ಸಂಜನಾ ಯಾವ ಪ್ರಶ್ನೆಗಳಿಗೂ ಸರಿಯಾಗಿ ಉತ್ತರ ಕೊಡುತ್ತಿರಲಿಲ್ಲ. ನಂತರ ಸಿಸಿಬಿ ಅಧಿಕಾರಿಗಳು …

Read More »

ಹೊಳೆನರಸೀಪುರದ ಒಂಟಿ ಮನೆಯಲ್ಲಿ ಹುಕ್ಕಾಬಾರ್ – ಏಳು ಮಂದಿ ಬಂಧನ

ಹಾಸನ: ಒಂಟಿ ಮನೆಯೊಂದರಲ್ಲಿ ನಡೆಯುತ್ತಿದ್ದ ಹುಕ್ಕಾಬಾರ್ ಪಾರ್ಟಿ ಮೇಲೆ ದಾಳಿ ನಡೆಸಿದ ಹೊಳೆನರಸೀಪುರ ಪೊಲೀಸರು, ಏಳು ಮಂದಿ ಯುವಕರನ್ನು ಬಂಧಿಸಿದ್ದಾರೆ. ಜೊತೆಗೆ ಗಾಂಜಾ ಹಾಗೂ ಹುಕ್ಕಾ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಅಡಿಕೆರೆ ಗ್ರಾಮದಲ್ಲಿ, ಚನ್ನರಾಯಪಟ್ಟಣ ತಾಲೂಕು ಮೂಲದ ಎಚ್.ವಿ.ಸುಹಾಸ್ ನೇತೃತ್ವದಲ್ಲಿ ಹುಕ್ಕಾಬಾರ್ ನಡೆಯುತ್ತಿತ್ತು. ಸುಹಾಸ್ ಸೇರಿ ಆರು ಜನರ ಬಂಧನವಾಗಿದೆ. ಒಂಟಿ ಮನೆಯನ್ನು ಬಾಡಿಗೆ ಪಡೆದು ಅಲ್ಲಿ ಹುಕ್ಕಾಬಾರ್ ನಡೆಸುತ್ತಿದ್ದ ಸುಹಾಸ್ ತನ್ನದೇ ಗ್ರಾಹಕರನ್ನು …

Read More »

ನಟಿ ರಾಗಿಣಿಗೆ ರಾಜಕೀಯ ಬೆಂಬಲ ಇದ್ದಿದ್ದರೆ ಅವರು ಅರೆಸ್ಟ್ ಆಗ್ತಿರಲಿಲ್

ಮಂಡ್ಯ: ನಟಿ ರಾಗಿಣಿಗೆ ರಾಜಕೀಯ ಬೆಂಬಲ ಇದ್ದಿದ್ದರೆ ಅವರು ಅರೆಸ್ಟ್ ಆಗ್ತಿರಲಿಲ್ಲ. ನಮ್ಮ ಯಾವುದೇ ಒಬ್ಬ ಮುಖಂಡ ಡ್ರಗ್ಸ್ ಮಾಫಿಯಾದಲ್ಲಿದ್ದರೆ ಅವರಿಗೆ ನಮ್ಮ ಸಹಕಾರ ಇಲ್ಲ. ಈ ವಿಚಾರದಲ್ಲಿ ಸರ್ಕಾರ ಹಿಟ್ ರನ್ ಮಾಡಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಯಾವುದೇ ಮುಖಂಡ ಡ್ರಗ್ ಮಾಫಿಯಾದಲ್ಲಿದ್ದರೆ ಅವರಿಗೆ ನಮ್ಮ ಸಹಕಾರ ಇಲ್ಲ. ಡ್ರಗ್ಸ್ ದಂಧೆಯನ್ನ ಬುಡಸಮೇತ ಕೀಳುವವರೆಗೆ …

Read More »

ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಅರೆಸ್ಟ್…………….

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರೇಯಸಿ ನಟಿ ರಿಯಾ ಚಕ್ರವರ್ತಿಯ ಬಂಧನವಾಗಿದೆ. ಇಂದು ಮೂರನೇ ದಿನ ಎನ್‍ಸಿಬಿ ಅಧಿಕಾರಿಗಳ ಮುಂದೆ ರಿಯಾ ಚಕ್ರವರ್ತಿ ವಿಚಾರಣೆಗೆ ಹಾಜರಾಗಿದ್ದರು. ಹೆಚ್ಚಿನ ವಿಚಾರ ಹಿನ್ನೆಲೆ ರಿಯಾರನ್ನ ಎನ್‍ಸಿಬಿ ಬಂಧಿಸಿದೆ. ಸುಶಾಂತ್ ಸಿಂಗ್ ರಜಪೂತ್ ನಿಧನ ಪ್ರಕರಣ ಡ್ರಗ್ಸ್ ತಿರುವು ಪಡೆದುಕೊಂಡಿತ್ತು. ರಿಯಾ ಚಕ್ರವರ್ತಿ ವಾಟ್ಸಪ್ ಸ್ಕ್ರೀನ್‍ಶಾಟ್ ಆಧರಿಸಿ ಎನ್‍ಸಿಬಿ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣ ಕೈಗೆತ್ತಿಕೊಂಡ ಎನ್‍ಸಿಬಿ ಈಗಾಗಲೇ ರಿಯಾ ಸೋದರ ಶೌವಿಕ್ …

Read More »

ಸುಶಾಂತ್ ಪ್ರಕರಣಕ್ಕೆ ಟ್ವಿಸ್ಟ್‌; ಸಾವಿಗೆ ಕಾರಣ ನಟನ ಸಹೋದರಿ ಪ್ರಿಯಾಂಕ, ನಟಿ ರಿಯಾ ದೂರಿನ ಅನ್ವಯ ಕೇಸ್ ದಾಖಲು

ಮುಂಬೈ   ; ದಿವಂಗತ ನಟ ಸುಶಾಂತ್ ಸಿಂಗ್ ಅವರಿಗೆ ದೆಹಲಿ ಮೂಲದ ವೈದ್ಯ ತರುಣ್ ಕುಮಾರ್ ಹಾಗೂ ಆತನ ಅಹೋದರಿ ಪ್ರಿಯಾಂಕಾ ಸಿಂಗ್ ಪ್ರಿಸ್ಕ್ರಿಪ್ಶನ್ ಇಲ್ಲದೆ ನಕಲಿ ಔಷಧಿ ನೀಡಿದ್ದಾರೆ ಎಂದು ನಟಿ ರಿಯಾ ಸಿಂಗ್ ನೀಡಿದ ಮಾಹಿತಿ ಆಧರಿಸಿ ಮುಂಬೈ ಪೊಲೀಸರು ಇಬ್ಬರ ಮೇಲೂ ಇದೀಗ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಮೋಸ, ವಂಚನೆ, ಆತ್ಮಹತ್ಯೆಗೆ ಪ್ರಚೋದನೆ, ಕ್ರಿಮಿನಲ್ ಪಿತೂರಿ, ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ಸೇರಿದಂತೆ ವಿವಿಧ ಸೆಕ್ಷನ್ …

Read More »

ಬೀಕರ ಕಾಡ್ಗಿಚ್ಚಿನಿಂದ 20 ಲಕ್ಷ ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ..!

ಶವರ್ ಲೇಕ್ (ಅಮೆರಿಕ) ಕ್ಯಾಲಿಫೋರ್ನಿಯಾದಲ್ಲ ಬೀಕರ ಕಾಡ್ಬಿಚ್ಚಿನಿಂದ ದಾಖಲೆ ಪ್ರಮಾಣದ 20 ಲಕ್ಷ ಎಕರೆಗಳಷ್ಟು ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಕಾಡಿನ ಬೆಂಕಿಯ ರೌದ್ರಾವತಾರ ಮತ್ತಷ್ಟು ಉಗ್ರ ಸ್ವರೂಪದ ಅಪಾಯ ಇರುವ ಕಾರಣ ಕ್ಯಾಲಿಫೋರ್ನಿಯಾ ಪ್ರಾಂತ್ಯದ ಎಲ್ಲ ಎಂಟು ರಾಷ್ಟ್ರೀಯ ಅರಣ್ಯಗಳನ್ನು ಬಂದ್ ಮಾಡಲಾಗಿದೆ ಎಂದು ಅಮೆರಿಕದ ಅರಣ್ಯ ಸೇವೆಗಳ ಇಲಾಖೆ ತಿಳಿಸಿದೆ. ಕ್ಯಾಲಿಫೋರ್ನಿಯಾ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಈ ವರ್ಷ ಕಾಡ್ಗಿಚ್ಚಿನ ರೌದ್ರಾವತಾರ ಅತ್ಯಂತ ಭೀಕರವಾಗಿದ್ದು, ಎರಡು ದಶಲಕ್ಷ ಎಕರೆ …

Read More »

ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ : ಜಂಬೂ ಸವಾರಿಗೆ ಬ್ರೇಕ್!

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಈ ಬಾರಿ ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಸಚಿವ ಸಿ.ಟಿ. ರವಿ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ. ದಸರಾದಲ್ಲಿ ಜಂಬೂ ಸವಾರಿ ಇರಲ್ಲ, ಕೇವಲ ಅರಮನೆ ಒಳಗಡೆ ಮಾತ್ರ …

Read More »

ಬೆಳಗಾವಿ: ‘ಬೃಹತ್‌ ಇ- ಲೋಕ ಅದಾಲತ್‌’ 19ರಂದು

ಬೆಳಗಾವಿ: ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸೆ. 19ರಂದು ‘ಬೃಹತ್‌ ಇ-ಲೋಕ ಅದಾಲತ್‌’ ಹಮ್ಮಿಕೊಳ್ಳಲಾಗಿದೆ.   ‘ಕಲಂ 138 (ಎನ್‌ಐ ಆಕ್ಟ್) ಅಡಿ ನೋಂದಾಯಿಸಿದವು, ಮೋಟಾರು ವಾಹನ ಅಪಘಾತ ಪರಿಹಾರ, ಸಾಲ ವಸೂಲಾತಿ ಮತ್ತು ವ್ಯಾಜ್ಯ ಪೂರ್ವ, ಕೌಟುಂಬಿಕ ಹಾಗೂ ಜೀವನಾಂಶ ಮತ್ತು ಸಿವಿಲ್ ಹಾಗೂ ಎಲ್ಲ ರೀತಿಯ ಪ್ರಕರಣಗಳನ್ನು ಆನ್‌ಲೈನ್‌ ಮೂಲಕ ರಾಜಿ ಮಾಡಿ ಇತ್ಯರ್ಥಗೊಳಿಸಲಾಗುವುದು. ಅದಾಲತ್‌ಗೆ ಸಂಬಂಧಿಸಿದಂತೆ ಎಲ್ಲ ನ್ಯಾಯಾಲಯಗಳಲ್ಲೂ ಪೂರ್ವಭಾವಿ ಕಾರ್ಯಕ್ರಮಗಳು ನಡೆಯುತ್ತಿವೆ. …

Read More »

ಉತ್ತರ ಒಳನಾಡಿನಲ್ಲಿ ಉತ್ತಮ ಮಳೆ

ಶಿವಮೊಗ್ಗ: ಜಿಲ್ಲೆಯ ಹಲವೆಡೆ ಸೋಮವಾರ ಉತ್ತಮ ಮಳೆಯಾಗಿದೆ. ತೀರ್ಥಹಳ್ಳಿಯಲ್ಲಿ 1.2 ಸೆಂ.ಮೀ, ಆಗುಂಬೆಯಲ್ಲಿ 3.8 ಮಿ.ಮೀ ಮಳೆಯಾಗಿದೆ. ಭಾನುವಾರ ತಡರಾತ್ರಿ ಜಿಲ್ಲೆಯ ಹಲವೆಡೆ ಜೋರು ಮಳೆಯಾಗಿದೆ. ಗಾಳಿ, ಮಳೆಗೆ ಸೊರಬದಲ್ಲಿ ಕೆಲ ಮನೆಗಳು ಹಾನಿಗೀಡಾಗಿವೆ. ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಶಿಕಾರಿಪುರ, ಸಾಗರ, ಹೊಸನಗರದಲ್ಲಿ 4 ಸೆಂ.ಮೀಗೂ ಅಧಿಕ ಮಳೆಯಾಗಿದೆ. ಧಾರಾಕಾರ ಮಳೆ- ಸೇತುವೆ ಮುಳುಗಡೆ: ಭಾನುವಾರ ತಡ ರಾತ್ರಿ ಹಾಗೂ ಸೋಮವಾರ ಮುಂಜಾನೆ ಹುಬ್ಬಳ್ಳಿ, ವಿಜಯಪುರ, …

Read More »